ಚಿತ್ರದುರ್ಗ: ಕತ್ತೆ ಮದುವೆ ಮಾಡಿದರೆ ಮಳೆ ಬರುತ್ತದೆ ಎಂಬ ನಂಬಿಕೆಯಿಂದ ಕೋಟೆ ನಾಡಿನಲ್ಲಿ ಕತ್ತೆ ಮದುವೆಯನ್ನು ಮಾಡಿ ಮಳೆಗಾಗಿ ಗ್ರಾಮಸ್ಥರು ಪ್ರಾರ್ಥಿಸಿದ್ದಾರೆ. ಜಿಲ್ಲೆಯ ಈಚಲನಾಗೇನಹಳ್ಳಿಯಲ್ಲಿ ಸಮೃದ್ಧ ಮಳೆ ಬೆಳೆಗಾಗಿ ಕತ್ತೆ ಮದುವೆ ಮಾಡಿ ವರುಣನಿಗೆ ಪ್ರಾರ್ಥನೆ ಸಲ್ಲಿಸಲಾಗಿದೆ. ತುಂತುರು ಮಳೆಯ ಸಂದರ್ಭದಲ್ಲಿ ಮಳೆಯಾಗದಿದ್ದರೆ ಮಳೆಗಾಗಿ ಮೊರೆಯಿಟ್ಟು ಸಾಂಪ್ರದಾಯಿಕವಾಗಿ ಕತ್ತೆಗಳ ಮದುವೆ ಮಾಡಿಸಿ, ಊರಿನ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಮಾಡಿ ದೇವರಲ್ಲಿ ಮಳೆಯಾಗುವಂತೆ ಬೇಡಿಕೊಳ್ಳುವ ಈ ವಿಶೇಷ …
Read More »Monthly Archives: ಜುಲೈ 2021
ಭ್ರಷ್ಟಾಚಾರ ಆರೋಪ: ಸಿಎಂ ಯಡಿಯೂರಪ್ಪ, ಇತರರ ವಿರುದ್ಧ ದೂರು ದಾಖಲು
ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಹುದ್ದೆ ನೀಡಲು ತಮ್ಮ ಬಳಿ ರೂ.16 ಕೋಟಿ ಲಂಚಕ್ಕೆ ಬೇಡಿಕೆ ಇರಿಸಿ, ರೂ.9.75 ಕೋಟಿ ಪಡೆದಿದ್ದರು ಎಂದು ಮಂಡಳಿಯ ಮಾಜಿ ಅಧ್ಯಕ್ಷ ಡಾ.ಎಂ. ಸುಧೀಂದ್ರ ರಾವ್ ಮಾಡಿರುವ ಆರೋಪದ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಇತರರ ವಿರುದ್ಧ ತನಿಖೆ ನಡೆಸುವಂತೆ ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ಸಲ್ಲಿಸಿದ್ದಾರೆ. ಸುದ್ದಿ ವಾಹಿನಿಯೊಂದಕ್ಕೆ ನೀಡಿದ್ದ …
Read More »ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ 9 ಅಧಿಕಾರಿಗಳಿಗೆ ಬ್ರಷ್ಟಾಚಾರ ನಿಗ್ರಹ ದಳ ಬೆಳ್ಳಂಬೆಳಗ್ಗೆಯೇ ಶಾಕ್
ಬೆಂಗಳೂರು: ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ 9 ಅಧಿಕಾರಿಗಳಿಗೆ ಬ್ರಷ್ಟಾಚಾರ ನಿಗ್ರಹ ದಳ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದೆ. ಬರೋಬ್ಬರಿ 300ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು 40ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಯಾವೆಲ್ಲಾ ಜಿಲ್ಲೆಯಲ್ಲಿ ದಾಳಿ? ಬೆಂಗಳೂರು ಮೈಸೂರು ಮಂಡ್ಯ ವಿಜಯಪುರ ಮಂಗಳೂರು ಉಡುಪಿ ಕೋಲಾರ ಚಿತ್ರದುರ್ಗ ಬಳ್ಳಾರಿ ಯಾರೆಲ್ಲಾ ನಿವಾಸ ಹಾಗೂ ಮನೆಗಳ ಮೇಲೆ ದಾಳಿ? ಜಿ. ಶ್ರೀಧರ್ -ಮಂಗಳೂರು ನಗರಾಭಿವೃದ್ಧಿ ಘಟಕ -ಡಿಸಿ ಕಚೇರಿ ಕೃಷ್ಣ.ಎಸ್ …
Read More »ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಯುವಮೋರ್ಚಾ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ನವದೆಹಲಿ – ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಯುವಮೋರ್ಚಾ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಈ ಆದೇಶ ಹೊರಡಿಸಿದ್ದಾರೆ. 7 ಜನ ಉಪಾಧ್ಯಕ್ಷರು, 3 ಪ್ರಧಾನ ಕಾರ್ಯದರ್ಶಿ, 7 ಕಾರ್ಯದರ್ಶಿ ಸೇರಿದಂತೆ ಒಟ್ಟೂ 22 ಜನರು ಪಟ್ಟಿಯಲ್ಲಿದ್ದಾರೆ.
Read More »ಮುಂದಿನ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ : ಶೈಕ್ಷಣಿಕ ಚಟುವಟಿಕೆ ಇನ್ನಷ್ಟು ಚುರುಕು
ಬೆಂಗಳೂರು : ಮುಂದಿನ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿರುವುದರಿಂದ ಪದವಿ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಸೇರಿದಂತೆ ಶೈಕ್ಷಣಿಕ ಚಟುವಟಿಕೆ ಇನ್ನಷ್ಟು ಚುರುಕುಗೊಳ್ಳಲಿದೆ. ಜುಲೈ 20ರಂದು ದ್ವಿತೀಯ ಪಿಯುಸಿ ಫಲತಾಂಶ ಪ್ರಕಟಿಸುವ ಸಾಧ್ಯತೆಯಿದೆ. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳ ಆಧಾರದಲ್ಲಿ ಫಲಿತಾಂಶಗಳನ್ನು ಸಿದ್ಧಪಡಿಸುವ ಕಾರ್ಯವೂ ಅಂತಿಮ ಹಂತಕ್ಕೆ ತಲುಪಿದೆ. ಈಗಾಗಲೇ ವಿದ್ಯಾರ್ಥಿಗಳಿಗೆ ತಮ್ಮ ಎಸ್ಸೆಸ್ಸೆಲ್ಸಿ ಹಾಗೂ ಪ್ರಥಮ ಪಿಯುಸಿ ಅಂಕ ಪರಿಶೀಲಿಸಿ, ತಿದ್ದುಪಡಿಯಿದ್ದಲ್ಲಿ, ಇಲಾಖೆಗೆ …
Read More »ನಾಡ ಪಿಸ್ತೂಲು ಮಾರಾಟ ಮಾಡುತ್ತಿದ್ದ ಮೂವರು ರೌಡಿ ಶೀಟರ್ ಸೆರೆ
ಬೆಂಗಳೂರು, ಜು. 14: ಮಹಾರಾಷ್ಟ್ರದ ಶಿರಡಿಯಿಂದ ನಾಡ ಪಿಸ್ತೂಲು ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಮೂವರು ರೌಡಿ ಶೀಟರ್‌ಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಮೂರು ನಾಡ ಪಿಸ್ತೂಲು ಹಾಗೂ 24 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಗ್ಗಡೆ ನಗರದ ನಿವಾಸಿಗಳಾದ ಫಯಾಜ್ ಉಲ್ಲಾ, ಮಹಮದ್ ಆಲಿ, ಸಯ್ಯದ್ ಸಿರಾಜ್ ಅಹಮದ್ ಬಂಧಿತ ಆರೋಪಿಗಳು. ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಫಯಾಜ್ ವುಲ್ಲಾ ವಿರುದ್ಧ ಈಗಾಗಲೇ ಆರು ಪ್ರಕರಣ ದಾಖಲಾಗಿವೆ. …
Read More »ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ಕರೆಯುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು: ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ಕರೆಯುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿಗಳು ಹಾಗೂ ವಿಧಾನಸಭೆಯ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ರಾಜ್ಯ ವಿಧಾನಮಂಡಲದ ಸರ್ಕಾರಿ ಕಾರ್ಯಕಲಾಪಗಳ ನಿರ್ವಹಣೆ ಅಧಿನಿಯಮ 2005ರ ಸೆಕ್ಷನ್ 3 ಮತ್ತು 4 ರಂತೆ ಜುಲೈ ತಿಂಗಳಲ್ಲಿ ವಿಧಾನಸಭೆಯ ಅಧಿವೇಶನ ನಡೆಸಬೇಕಾಗಿತ್ತು. ಆದರೆ ಸರ್ಕಾರವು ಇದುವರೆಗೂ ಕೂಡ ಅಧಿವೇಶನ ನಡೆಸಲು ಯಾವುದೆ ಕ್ರಮಗಳನ್ನು ಕೈಗೊಳ್ಳದಿರುವುದು …
Read More »ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತ: ಗುಡುಗಿದ ಸಿದ್ದರಾಮಯ್ಯ
ಬೆಂಗಳೂರು : ಲಸಿಕೆ ಕೊರತೆಯಿಂದಾಗಿ ರಾಜ್ಯದ ಶೇಕಡಾ 50ರಷ್ಟು ಲಸಿಕೆ ಕೇಂದ್ರಗಳು ಸ್ಥಗಿತಗೊಂಡಿವೆ ಕಳೆದ 14 ದಿನಗಳಲ್ಲಿ ಸರಾಸರಿ 2.56 ಲಕ್ಷ ಲಸಿಕೆಗಳನ್ನು ಮಾತ್ರ ನೀಡಲಾಗುತ್ತಿದೆ ಎಂಬ ವರದಿ ಕಳವಳಕಾರಿಯಾದುದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಪ್ರಧಾನಿ ನರೇಂದ್ರಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ? ಎಂದು ಅವರು ಪ್ರಶ್ನಿಸಿದ್ದಾರೆ. ರಾಜ್ಯದ ಲಸಿಕಾ ಕೇಂದ್ರಕ್ಕೆ ಬರುತ್ತಿರುವ ನೂರು ಮಂದಿಯಲ್ಲಿ20 ಮಂದಿಗೆ …
Read More »ಕೋವಿಡ್ ನಿಂದ ಮೃತಪಟ್ಟ ರೈತರ ಸಾಲ ಮನ್ನಾ.!
ಬೆಂಗಳೂರು: ಕೊರೊನಾ ಸೋಂಕಿನಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ನೆರವು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಕೋವಿಡ್ ಗೆ ಬಲಿಯಾದ ರೈತರ ಸಾಲ ಮನ್ನಾ ಮಾಡಲು ಚಿಂತನೆ ನಡೆಸಿದೆ. ಈ ಕುರಿತು ಸಚಿವ ಎಸ್.ಟಿ.ಸೋಮಶೇಖರ ಮಾಹಿತಿ ನೀಡಿದ್ದು, ಕೊರೋನಾದಿಂದ ಮೃತಪಟ್ಟ 10187 ರೈತರ 79.47 ಕೋಟಿ ರೂ. ಸಾಲ ಮನ್ನಾ ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ 3-4 ದಿನಗಳಲ್ಲಿ ಅಪೆಕ್ಸ್, ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಸಭೆ …
Read More »ಪುಟಾಣಿ ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಂದೆ
ಬೆಳಗಾವಿ; ಇಬ್ಬರು ಹೆಣ್ಣುಮಕ್ಕಳಿಗೆ ವಿಷ ಉಣಿಸಿ ಕೊಂದ ತಂದೆಯೊಬ್ಬ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆ ಕಂಗ್ರಾಳಿ ಕೆ.ಹೆಚ್. ಗ್ರಾಮದಲ್ಲಿ ನಡೆದಿದೆ. 45 ವರ್ಷದ ಅನಿಲ್ ಚಂದ್ರಕಾಂತ್ ತನ್ನ ಇಬ್ಬರು ಮಕ್ಕಳಿಗೆ ವಿಷ ನೀಡಿ, ಬಳಿಕ ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಕ್ಕಳಾದ 8 ವರ್ಷದ ಅಂಜಲಿ ಹಾಗೂ 4 ವರ್ಷದ ಅನನ್ಯಾ ಮೃತಪಟ್ಟಿದ್ದು, ತಂದೆ ಅನಿಲ್ ಸ್ಥಿತಿ ಗಂಭೀರವಾಗಿದೆ. ಕೃತ್ಯಕ್ಕೆ ನಿಖರ ಕಾರಣ ತಿಳಿದು …
Read More »