ಬೆಂಗಳೂರು: ನಗರದಲ್ಲಿ ದಿನೇ ದಿನೇ ರೂಪಾಂತರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗ್ತಿದೆ. ಲ್ಯಾಬ್ಗೆ ಕಳುಹಿಸಿದ ಬಹುತೇಕ ಸ್ಯಾಂಪಲ್‌ಗಳೆಲ್ಲವೂ ರೂಪಾಂತರಿ ವೈರಸ್ ಅಂತ ದೃಢಪಟ್ಟಿದೆ. ನಗರದ ಶೇಕಡಾ 70ರಷ್ಟು ಸೋಂಕಿತರಿಗೆ ರೂಪಂತರಿ ವೈರಸ್ ತಗುಲಿರೋದು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಸಾಂಕ್ರಾಮಿಕ ನಿಯಂತ್ರಣಕ್ಕೆ ಬೆಂಗಳೂರು ಮಹಾನಗರ ಪಾಲಿಕೆ ಫುಲ್ ಆಯಕ್ಟೀವ್ ಆಗಿದ್ದು, ಜಿನೋಮಿಕ್ ಸೀಕ್ವೆನ್ಸಿಂಗ್ ಟೆಸ್ಟ್ ಹೆಚ್ಚಳ ಮಾಡಲು ನಿರ್ಧರಿಸಿದೆ. ಈ ಹಿಂದೆ ಪಾಸಿಟಿವ್ ಬಂದ ಶೇಕಡಾ 5ರಷ್ಟು ಸ್ಯಾಂಪಲ್ಸ್ ಮಾತ್ರ …
Read More »Monthly Archives: ಜುಲೈ 2021
ಶಿಕ್ಷಣ ಹಕ್ಕು ಕಾಯ್ದೆಯಡಿ ಮೊದಲ ಸುತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
ಕಳೆದ ವರ್ಷದ ಆರಂಭದಲ್ಲಿ ದೇಶದಲ್ಲಿ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಶೈಕ್ಷಣಿಕ ವ್ಯವಸ್ಥೆಯನ್ನೇ ಅಲ್ಲೋಲ ಕಲ್ಲೋಲ ಮಾಡಿದೆ. ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿದ್ದು, ಇದರ ಮಧ್ಯೆಯೂ ಈ ಹಿಂದಿನಂತೆ ಪ್ರವೇಶ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ. ಶಿಕ್ಷಣ ಹಕ್ಕು ಕಾಯ್ದೆ ಅಡಿ ಈಗಾಗಲೇ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಈ ವಿದ್ಯಾರ್ಥಿಗಳ ಶಾಲಾ ದಾಖಲಾತಿ ಅವಧಿಯನ್ನು ಜುಲೈ 16ರ …
Read More »ಬೆಳಗಾವಿ: “ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದು ಹೋದ ಅಧ್ಯಾಯ” ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಬೆಳಗಾವಿ: “ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದು ಹೋದ ಅಧ್ಯಾಯ” ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮಾಡಿದ್ದು ನಿಜ. ಆದರೆ ನನ್ನ ಹಿತೈಷಿಗಳು, ಸ್ವಾಮೀಜಿಗಳು ರಾಜೀನಾಮೆ ನೀಡದಂತೆ ಸಲಹೆ ನೀಡಿದ ಹಿನ್ನೆಲೆ ರಾಜೀನಾಮೆ ವಿಚಾರ ಕೈಬಿಟ್ಟಿದ್ದೇನೆ” ಎಂದರು. ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ …
Read More »ಆಗಸ್ಟ್ 2ನೇ ವಾರ ಶಾಲೆ? ವಿಕೇಂದ್ರೀಕೃತ ವ್ಯವಸ್ಥೆಯಲ್ಲಿ ಆರಂಭಕ್ಕೆ ಸಿದ್ಧತೆ
ಬೆಂಗಳೂರು : ಮಕ್ಕಳ ನಿರಂತರ ಕಲಿಕೆ ಮುಂದುವರಿಯಲು ಗ್ರಾಮ ಮಟ್ಟದ ಪರಿಸ್ಥಿತಿಗೆ ಅನುಗುಣವಾಗಿ ಶಾಲೆಗಳಲ್ಲಿ ಭೌತಿಕ ತರಗತಿ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದ್ದು, ಆಗಸ್ಟ್ ಎರಡನೇ ವಾರದ ಅನಂತರ ತರಗತಿಗಳು ಪ್ರಾರಂಭವಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ವಿದ್ಯಾರ್ಥಿಗಳ ದಾಖಲಾತಿ ನಡೆಯುತ್ತಿದೆ. ಸರಕಾರಿ ಶಾಲಾ ಮಕ್ಕಳಿಗೆ ದೂರದರ್ಶನದ ಸಂವೇದ ಪಾಠ ಮತ್ತು ಖಾಸಗಿ ಶಾಲಾ ಮಕ್ಕಳಿಗೆ ಆನ್‌ಲೈನ್ ತರಗತಿ ನಡೆಯುತ್ತಿದೆ. ಈ ಮಧ್ಯೆ ಗ್ರಾಮ ಮಟ್ಟದ ಪರಿಸ್ಥಿತಿಗೆ ಅನುಗುಣವಾಗಿ ಯಾವ ರೀತಿ ಶಾಲೆ ಆರಂಭಿಸಲು …
Read More »ಬೈಕ್ ಅಪಘಾತ : ಸ್ಥಳದಲ್ಲಿಯೇ ಇಬ್ಬರ ಸಾವು.
ಚಿಕ್ಕೋಡಿ : ಬೈಕ್ ಸವಾರರಿಬ್ಬರು ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಾಗರಮುನ್ನೊಳ್ಳಿ ಟೋಲ್ ಗೆಟ್ ಹತ್ತಿರ ನಡೆದಿದೆ. ಮೃತರನ್ನು ಸಿದ್ದಾರ್ಥ ಅಶೋಕ ಖೇಮಲಾಪೊರೆ(24) ಮತ್ತು ಪ್ರಮೋದ ಕರೇಪ್ಪ ನಾಯ್ಕ(24) ಅಂತಾ ತಿಳಿದು ಬಂದಿದೆ. ನಿಪ್ಪಾಣಿ ಸಮೀಪದ ಸ್ತವನಿಧಿಗೆ ದೇವರಿಗೆಂದು ಹೋಗಿ ವಾಪಸ್ಸು ತಮ್ಮೂರಾದ ಬೆಲ್ಲದ-ಬಾಗೇವಾಡಿಗೆ ಬರುವಾಗ ನಾಗರಮುನ್ನೊಳ್ಳಿ ಟೋಲ್ ಗೇಟ್ ಹತ್ತಿರ ಮಳೆಯಾದ ಕಾರಣ …
Read More »ಕಾಂಗ್ರೆಸ್ ಸೇರಲು ಸಾ.ರಾ. ಗೋವಿಂದು ಒಲವು?
ಬೆಂಗಳೂರು: ಚಿತ್ರ ನಿರ್ಮಾಪಕ ಸಾ.ರಾ. ಗೋವಿಂದು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದು, ಪಕ್ಷದ ಮುಖಂಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಶುಕ್ರವಾರ ಭೇಟಿ ಮಾಡಿ ಕೆಲಕಾಲ ಚರ್ಚೆ ನಡೆಸಿದ್ದಾರೆ. ಇದೇ 17ರಂದು ಬಸವೇಶ್ವರನಗರದಲ್ಲಿ ಪಡಿತರ ಕಿಟ್ ವಿತರಣೆ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದಾರೆ. ಅದರಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲು ತೆರಳಿದ್ದ ಗೋವಿಂದು, ಪಕ್ಷ ಸೇರ್ಪಡೆ ಕುರಿತೂ ಪೂರ್ವಭಾವಿ ಚರ್ಚೆ ನಡೆಸಿದ್ದಾರೆ. ಶೀಘ್ರದಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ …
Read More »ಜಯಂತ ಕಾಯ್ಕಿಣಿ, ಆರತಿಗೆ ‘ಕಸಾಪ ದತ್ತಿ ಪ್ರಶಸ್ತಿ’
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಮನೋಹರ ಪಾರ್ಥಸಾರಥಿ ಮನುಶ್ರೀ ದತ್ತಿ ಪ್ರಶಸ್ತಿ’ಗೆ ಸಾಹಿತಿ ಜಯಂತ ಕಾಯ್ಕಿಣಿ ಹಾಗೂ ‘ಎ. ಪಂಕಜ ಸಾಹಿತ್ಯ ಪ್ರಶಸ್ತಿ’ಗೆ ಲೇಖಕಿ ಎಚ್.ಎನ್. ಆರತಿ ಆಯ್ಕೆಯಾಗಿದ್ದಾರೆ. ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಶುಕ್ರವಾರ ಈ ಆಯ್ಕೆಗಳು ನಡೆದಿವೆ. ಈ ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು ಬಹುಮಾನ ಹಾಗೂ ಫಲಕವನ್ನು ಒಳಗೊಂಡಿವೆ ಎಂದು ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »ಕೋವಿಡ್: ಬಾಗಲಕೋಟೆಯಲ್ಲಿ ಶೂನ್ಯ ಪ್ರಕರಣ; ರಾಜ್ಯದಲ್ಲಿಂದು 3045 ಸೋಂಕಿತರು ಗುಣಮುಖ
ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿ ( ದಿನಾಂಕ:08.07.2021,00:00 ರಿಂದ 23:59 ರವರೆಗೆ) ಯಲ್ಲಿ 2290 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ ಹಾಗೂ 68 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಜುಲೈ 09) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ 3045 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಸೋಂಕಿನಿಂದ ಗುಣಮುಖರಾದವರ …
Read More »ವಿಜಯಪುರ ಕಲ್ಲು ಗಣಿಗಾರಿಕೆ ಸ್ಫೋಟಕ ಪ್ರಕರಣ ತನಿಖೆ ನಡೆಯುತ್ತಿದೆ : ನಿರಾಣಿ
ವಿಜಯಪುರ : ಗುರುವಾರ ಸಂಜೆ ವಿಜಯಪುರ ನಗರದ ಹೊರ ವಲಯದಲ್ಲಿನ ಕಲ್ಲು ಗಣಿಗಾರಿಕೆ ಯಲ್ಲಿ ನಡೆದ ಸ್ಫೋಟದ ದುರಂತದ ಕುರಿತು ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಸತ್ಯಾಸತ್ಯತೆ ಹೊರ ಬರಲಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಗಣಿ- ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ. ಶುಕ್ರವಾರ ದುರಂತ ನಡೆದ ಕಲ್ಲು ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಅಲಿಯಾಬಾದ್, ಐನಾಪುರ …
Read More »ಪ್ರಿಯಕರನ ಮನೆಯಲ್ಲೇ ವಿವಾಹಿತ ಯುವತಿ ಸಾವು : ಯುವತಿ ಪೋಷಕರಿಂದ ಪ್ರಿಯಕರನ ಮನೆಗೆ ಬೆಂಕಿ
ಬಾಗಲಕೋಟೆ: ವಿವಾಹಿತ ಯುವತಿಯ ಸಾವಿಗೆ ಆಕೆಯ ಪ್ರಿಯಕರನೇ ಕಾರಣ ಎಂದು ಆರೋಪಿಸಿದ ಯುವತಿಯ ಪೋಷಕರು ಪ್ರಿಯಕರನ ಮನೆಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಇಳಕಲ್ ತಾಲೂಕಿನ ಕೆಲೂರ ಗ್ರಾಮದಲ್ಲಿ ನಡೆದಿದೆ. ಕೆಲೂರ ಗ್ರಾಮದ ವಿವಾಹಿತ ಯುವತಿ ಬಸಮ್ಮ ಪ್ರಿಯಕರನ ಮನೆಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಇದನ್ನು ಕಂಡು ಆಕ್ರೋಷಗೊಂಡ ಯುವತಿಯ ಪೋಷಕರು ಯುವತಿಯ ಸಾವಿಗೆ ಪ್ರೀಯಕರ ರಂಜೀತ್ ಕಾರಣ ಎಂದು ಪ್ರಿಯಕರನ ಮನೆಗೆ ಬೆಂಕಿಹಚ್ಚಿ ಆಕ್ರೋಷ ವ್ಯಕ್ತಪಡಿಸಿದ್ದಾರೆ. ರಂಜೀತ್ …
Read More »