ಚಿಕ್ಕಮಗಳೂರು: ಕಂದಾಯ ಸಚಿವ ಆರ್.ಅಶೋಕ್ ಪಿಎ ವಿರುದ್ಧ ಲಂಚ ಕೇಳಿದ್ದ ಆರೋಪ ಮಾಡಿದ್ದ ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ. 2005-06 ರಲ್ಲಿ ಮಂಡ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚೆಲುವರಾಜ್ ಕರ್ತವ್ಯ ಲೋಪ ಮಾಡಿದ್ದರು ಎಂಬ ಕಾರಣಕ್ಕಾಗಿ ಅಮಾನತು ಮಾಡಲಾಗಿದೆ. ಚೆಲುವರಾಜ್ ಸೇರಿ 7 ಜನರು ಸೇವೆಯಿಂದ ವಜಾ ಮಾಡಲಾಗಿದೆ. ಮಂಡ್ಯದಲ್ಲಿ ಕೆಲಸ ಮಾಡುತ್ತದ್ದಾಗ ಸರ್ಕಾರಕ್ಕೆ ಸೇರಬೇಕಿದ್ದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದರು ಎನ್ನಲಾಗಿದೆ. …
Read More »Monthly Archives: ಜುಲೈ 2021
ನಟ ರಕ್ಷಿತ್ ಶೆಟ್ಟಿ ಬಗ್ಗೆ ಅವಹೇಳನಕಾರಿ ಮಾತು ಖಂಡಿಸಿ ಕಾಪು ಬಂಟರ ಸಂಘದ ವತಿಯಿಂದ ದೂರು
ಕಾಪು : ಪ್ರತಿಭಾನ್ವಿತ ನಟ ಮತ್ತು ನಿರ್ದೇಶಕ, ತುಳುನಾಡಿನ ಹೆಮ್ಮೆಯ ಕಲಾವಿದ ರಕ್ಷಿತ್ ಶೆಟ್ಟಿ ಅಲೆವೂರು ಅವರ ಕುರಿತಾಗಿ ಖಾಸಗಿ ಟಿವಿ ಮಾಧ್ಯಮದಲ್ಲಿ ಅವಹೇಳನಕಾರಿ ಮತ್ತು ಹೀನಾಯವಾಗಿ ನಿಂದಿಸಿರುವ ಘಟನೆಯನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕಾಪು ಬಂಟರ ಸಂಘದ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಕಾಪು ಬಂಟರ ಸಂಘದ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾತನಾಡಿ, ತಳುನಾಡಿನ ಅದ್ಭುತ ಪ್ರತಿಭೆಯಾಗಿರುವ …
Read More »ಸಿಎಂ ಸ್ಥಾನ ಅಲ್ಲ ಕಾಂಗ್ರೆಸ್ ಗೆ ವಿಪಕ್ಷ ಸ್ಥಾನವೂ ಸಿಗಲ್ಲ : ಈಶ್ವರಪ್ಪ
ಮೈಸೂರು,ಜು.9- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷದ ಸ್ಥಾನಕ್ಕೂ ಅರ್ಹವಾಗುವುದಿಲ್ಲ. ಇನ್ನು ಸಿಎಂ ಸ್ಥಾನ ಕನಸಿನ ಮಾತು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‍ನಲ್ಲಿ ಐದು ಮಂದಿ ಮುಖ್ಯಮಂತ್ರಿಗಳಾಗುತ್ತೇವೆಂದು ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ. ಅವರು ಪಂಚ ಕೌರವರಿದ್ದಂತೆ ಎಂದು ಟೀಕಿಸಿದರು. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ತನ್ವೀರ್‍ಸೇಠ್, ಪರಮೇಶ್ವರ್ ಹಾಗೂ ಎಂ.ಬಿ. ಪಾಟೀಲ್ ಮುಖ್ಯಮಂತ್ರಿಯಾಗುವುದಾಗಿ ಸ್ವಯಂ ಘೋಷಿಸಿಕೊಂಡಿದ್ದಾರೆ. ನಾವು ಬಿಜೆಪಿಯವರು ಪಾಂಡವರಿದ್ದಂತೆ, …
Read More »ದಾರಿಯಲ್ಲಿ ಹೋಗುವ ದಾಸಪ್ಪ ಸಿಎಂ ಆಗಿದ್ದರನೂ ಇಂತಹ ಕೆಲಸಗಳನ್ನ ಮಾಡಿಯೇ ಮಾಡುತ್ತಾರೆ : ಕಿಡಿಕಾರಿದ ನಿರ್ಮಾಪಕ ರಾಕ್ಲೈನ್ ವೆಂಕಟೇಶ್
ಬೆಂಗಳೂರು: ದಿವಂಗತ ರೆಬಲ್ ಸ್ಟಾರ್ ಅಂಬರೀಶ್ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗಳಿಗೆ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಅಂಬರೀಶ್ ಅಣ್ಣನ ಬಗ್ಗೆ ಯಾರು ಮಾತನಾಡಿಲ್ಲ ಹೇಳಿ? ದಾರಿಯಲ್ಲಿ ಹೋಗುವ ದಾಸಪ್ಪ ಸಿಎಂ ಆಗಿದ್ದರನೂ ಇಂತಹ ಕೆಲಸಗಳನ್ನ ಮಾಡಿಯೇ ಮಾಡುತ್ತಾರೆ. ಸರ್ಕಾರದ ಗೌರವದೊಂದಿಗೆ ಕಳುಹಿಸಿಕೊಟ್ಟಿದ್ದೀರಿ ಎಂದು ಹೇಳ್ತೀರಿ. ಮೊನ್ನೆ ಸಂಚಾರಿ ವಿಜಯ್ ಮೃತಪಟ್ಟಾಗಲೂ ಸರ್ಕಾರಿ ಗೌರವದಿಂದ ಅಂತ್ಯಕ್ರಿಯೆ ಮಾಡಲಾಗಿದೆ. ನೀವು ಸ್ವಂತವಾಗಿ ಏನು …
Read More »ಯೋಗೇಶ್ವರ್ ಜಗದ್ಗುರುಗಳಿದ್ದ ಹಾಗೆ,3ನೇ ಕಣ್ಣು ಬಿಟ್ಟರೆ ಭಸ್ಮವಾಗುತ್ತೇವೆ:ರೇಣುಕಾಚಾರ್ಯ ಟೀಕೆ
ಬೆಂಗಳೂರು: ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನ, 7 ಮಿನಿಸ್ಟರ್ ಮನೆ ಪಡೆಯಲು ಮತ್ತು ಕಾರಿನಲ್ಲಿ ಒಡಾಡಲು ನನ್ನ ಕೊಡುಗೆಯಿದೆ ಎಂದು ರೇಣುಕಾಚಾರ್ಯ ವಿರುದ್ಧ ಹೇಳಿಕೆ ನೀಡಿದ್ದ ಯೋಗೇಶ್ವರ್ ಗೆ ವ್ಯಂಗ್ಯವಾಗಿ ರೇಣುಕಾಚಾರ್ಯ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ನಮಗೆ ಜಗದ್ಗುರುಗಳಿದ್ದ ಹಾಗೇ. ನಮ್ಮ ಕ್ಷೇತ್ರದ ಅಭಿವೃದ್ಧಿಯಾಗಿದೆ ಅಂದರೆ, ನಾನು ಶಾಸಕನಾಗಿದ್ದೇನೆ ಅಂದರೆ, ಹಿಂದೆ ಅಬಕಾರಿ ಸಚಿವನಾಗಿದ್ದೇನೆ ಅಂದ್ರೆ, ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ ಅಂದ್ರೆ ಅದಕ್ಕೆಲ್ಲ ಆ ಜಗದ್ಗುರುಗಳೇ …
Read More »ಕೋವಿಡ್: ಮೃತ ಪತ್ರಕರ್ತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ
ಬೆಂಗಳೂರು: ಕೋವಿಡ್ 19 ಸೋಂಕಿಗೆ ಸಿಲುಕಿ ಸಾವನ್ನಪ್ಪಿದ ಇಬ್ಬರು ಪತ್ರಕರ್ತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಿತ್ತು. ಇದೀಗ ಮನವಿ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪರಿಹಾರವನ್ನು ಮಂಜೂರು ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆಯ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ ಮತ್ತು ಕೊಡಗು …
Read More »ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’
ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕೇಂದ್ರಗಳನ್ನು ಆರಂಭಿಸಲು ತೀರ್ಮಾನಿಸಲಾಗಿದ್ದು, ಈ ಕುರಿತು ಈಗಾಗಲೇ ಆದೇಶ ಹೊರಬಿದ್ದಿದೆ. ಆಧಾರ್ ಇಂದು ಬಹುತೇಕ ಎಲ್ಲ ಸೇವೆಗಳಿಗೆ ಅನಿವಾರ್ಯವಾಗಿದ್ದು, ಕೊರೊನಾ ಲಸಿಕೆ ಪಡೆಯಲು ಸಹ ಆಧಾರ್ ಸಂಖ್ಯೆ ಬೇಕಾಗುತ್ತದೆ. ಆದರೆ ಗ್ರಾಮಾಂತರ ಪ್ರದೇಶದಲ್ಲಿ ಕೆಲವರು ಇನ್ನೂ ಸಹ ಆಧಾರ್ ನೋಂದಣಿ ಮಾಡದ ಕಾರಣ ಅನಾನುಕೂಲವಾಗಿದೆ. ಆಧಾರ್ ನೋಂದಣಿ ಮಾಡಿಸಲು ಅಥವಾ …
Read More »ಬೀದರ್, ಕಲಬುರ್ಗಿಯಲ್ಲಿ ಮಳೆ; ಕಬ್ಬಿಗೆ ಹಾನಿ
ಕಲಬುರ್ಗಿ: ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಬುಧವಾರ ತಡರಾತ್ರಿ ಉತ್ತಮ ಮಳೆಯಾಗಿದ್ದು, ಮಳೆಯ ರಭಸಕ್ಕೆ ಹಲವು ಕಡೆ ಕಬ್ಬಿನ ಬೆಳೆಗೆ ಹಾನಿಯಾಗಿದೆ. ಬೀದರ್ ತಾಲ್ಲೂಕಿನ ಶ್ರೀಕಟನಳ್ಳಿ ಗ್ರಾಮದಲ್ಲಿ ಮಳೆಯ ಅಬ್ಬರಕ್ಕೆ ಹೊಲದಲ್ಲಿನ ಕಬ್ಬು ನೆಲಕ್ಕೆ ಉರುಳಿದೆ. ಭಾಲ್ಕಿ ಹಾಗೂ ಔರಾದ್ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ. ಜಿಲ್ಲೆಯಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು. ಸಂಜೆ ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮಳೆಯಾಯಿತು. ಕಲಬುರ್ಗಿ ನಗರ ಸೇರಿದಂತೆ ಜಿಲ್ಲೆಯ ಚಿಂಚೋಳಿ, ಆಳಂದ, ಕಮಲಾಪುರ …
Read More »ಬಾಗಲಕೋಟೆಯಲ್ಲಿ ಭಾರೀ ಮಳೆ.. ರಾತ್ರಿಯೆಲ್ಲಾ ನಿದ್ದೆಯಿಲ್ಲದೇ ಕಳೆದ ಜನ
ಬಾಗಲಕೋಟೆ: ಜಿಲ್ಲೆಯ ಬದಾಮಿ ತಾಲ್ಲೂಕಿನ ವಿವಿಧ ಕಡೆ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ನೀರು ಕುಳಗೇರಿ ಕ್ರಾಸ್ನಲ್ಲಿರುವ ನಾಲ್ಕೈದು ಮನೆಗಳಿಗೆ ನುಗ್ಗಿದೆ. ಅಸ್ಲಮ್ ದಾಸ್ಯಾಳ ಎಂಬುವವರ ಮನೆ ಸೇರಿದಂತೆ ಐದು ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪಾತ್ರೆ-ಪಗಡೆ, ಮನೆಯಲ್ಲಿರುವ ವಿವಿಧ ವಸ್ತುಗಳು ಜಲಾವೃತಗೊಂಡಿದ್ದವು. ಹೀಗಾಗಿ ಬುಟ್ಟಿ, ಬಕೆಟ್ ನಿಂದ ನಿವಾಸಿಗಳು ನೀರನ್ನು ರಾತ್ರಿಯಿಂದ ಬೆಳಗ್ಗೆವರೆಗೂ ಹೊರ ಹಾಕಿದ ಪ್ರಸಂಗ ಕೂಡ ನಡೆದಿದೆ. ಮಳೆ ಬಂದಾಗೆಲ್ಲಾ …
Read More »ಇಂದು ಕೊರೊನಾ ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಳ
ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಕೊರೊನಾ ಸೋಂಕಿತರಾದ 28.64 ಲಕ್ಷ ಮಂದಿಯಲ್ಲಿ 27.90 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. ಹೊಸದಾಗಿ 2,530 ಮಂದಿ ಕೋವಿಡ್ ಪೀಡಿತರಾಗಿರುವುದು ಹಾಗೂ ಸೋಂಕಿತರಲ್ಲಿ 3,344 ಮಂದಿ ಗುಣಮುಖರಾಗಿರುವುದು ಗುರುವಾರ ದೃಢಪಟ್ಟಿದೆ. ಒಂದು ದಿನದ ಅವಧಿಯಲ್ಲಿ 1.57 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದ್ದು, ಶೇ 1.60ರಷ್ಟು ಸೋಂಕು ದೃಢ ಪ್ರಮಾಣ ವರದಿಯಾಗಿದೆ. ಬೆಂಗಳೂರಿನಲ್ಲಿ 514 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 500ರ ಗಡಿಯೊಳಗೆ ವರದಿಯಾಗಿವೆ. …
Read More »