ಬೆಂಗಳೂರು: ಯಾವುದೇ ಆಣೆಕಟ್ಟು ಸುತ್ತಮುತ್ತ ಸುರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯಬಾರದು. ಕೆಆರ್ ಎಸ್ ಪುರಾತನ ಜಲಾಶಯ. ಜಲಾಶಯದ ಸುರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಸುದ್ದಗಾರರೊಂದಿಗೆ ಅವರು ಮಾತನಾಡಿದರು. ಅಂಬರೀಶ್ ಕಾಲದಲ್ಲೇ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು ಎಂಬ ಜೆಡಿಎಸ್ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಂಬರೀಶ್ ನನ್ನ …
Read More »Monthly Archives: ಜುಲೈ 2021
ಅಮಾಯಕರಿಂದ ಹಣ ವಸೂಲಿ ಮಾಡುತ್ತಿದ್ದ ಪೊಲೀಸ್ ಠಾಣೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ
ಬೆಳಗಾವಿ: ಅಮಾಯಕರಿಂದ ಹಣ ವಸೂಲಿ ಮಾಡುತ್ತಿದ್ದ ಪೊಲೀಸ್ ಠಾಣೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪಿಎಸ್ ಐ ಹಾಗೂ ಇಬ್ಬರು ಪಿಸಿಗಳನ್ನು ಬಂಧಿಸಿರುವ ಘಟನೆ ಸದಲಗಾ ಠಾಣೆಯಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ಸದಲಗಾ ಠಾಣೆಯಲ್ಲಿ ಪೊಲೀಸರು ಅಮಾಯಕರ ಬಳಿ ಹಣ ವಸೂಲಿ ಮಾಡುತ್ತಿದ್ದರು. ಅನಧಿಕೃತ ಪಾನ್ ಮಸಾಲಾ ಕಾರ್ಖಾನೆ ನಡೆಸುತ್ತಿದ್ದೀರಿ ಎಂದು ಹೆದರಿಸಿ ಕಾರ್ಖಾನೆ ಮಾಲೀಕ ರಾಜು ಪಾಶ್ಚಾಪುರೆ ಬಳಿ 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ನೊಂದ …
Read More »ಯೋಗೇಶಗೌಡ ಹತ್ಯೆ: ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್
ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಿ ಹೊರಡಿಸಲಾದ ಆದೇಶದ ಸಿಂಧುತ್ವ ಪ್ರಶ್ನಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ಪ್ರಕರಣ ಕುರಿತು ಎರಡನೇ ಎಫ್‌ಐಆರ್ ದಾಖಲಿಸಿರುವ ಸಿಬಿಐ ಕ್ರಮವನ್ನು ಪ್ರಶ್ನಿಸಿ ಚಂದ್ರಶೇಖರ ಇಂಡಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು, ಎರಡೂ ಅರ್ಜಿಗಳಿಗೆ ಸಂಬಂಧಿಸಿದಂತೆ ಜುಲೈ 24ರೊಳಗೆ ಪ್ರತಿಕ್ರಿಯೆ ನೀಡಬೇಕು …
Read More »ಬೆಂಬಲ ಬೆಲೆ ಬಾಕಿ ಹಣ ಬಿಡುಗಡೆ
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆ ಯಡಿ ರೈತರಿಂದ ಆಹಾರ ಧಾನ್ಯ ಖರೀದಿಸಿದ ಬಾಕಿ ಇರುವ 721 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಗುರುವಾರ ನಡೆದ ಸಂಪುಟ ಉಪ ಸಮಿತಿ ತೀರ್ಮಾನಿಸಿದ್ದು, 2-3 ದಿನಗಳಲ್ಲಿ ರೈತರ ಖಾತೆಗಳಿಗೆ ಜಮೆಯಾಗಲಿದೆ ಎಂದು ಸಮಿತಿ ಅಧ್ಯಕ್ಷರೂ ಆಗಿರುವ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಸಭೆಯ ಅನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾಲ್ಕೈದು ತಿಂಗಳ ಹಿಂದೆಯೇ ರಾಗಿ, ಭತ್ತ, ಗೋಧಿಯನ್ನು ಕನಿಷ್ಠ ಬೆಂಬಲ …
Read More »ಎಪಿಎಂಸಿಗಳಿಗೆ ₹ 1 ಲಕ್ಷ ಕೋಟಿ ವರೆಗೆ ಆರ್ಥಿಕ ನೆರವು: ತೋಮರ್
ನವದೆಹಲಿ: ನಿಯಂತ್ರಿತ ಮಾರುಕಟ್ಟೆಗಳ ಸಾಮರ್ಥ್ಯ ವೃದ್ಧಿ ಮತ್ತು ರೈತರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವುದಕ್ಕಾಗಿ ಕೃಷಿ ಮೂಲಸೌಕರ್ಯ ನಿಧಿಯಿಂದ (ಎಐಎಫ್) ₹ 1 ಲಕ್ಷ ಕೋಟಿ ವರೆಗೆ ಆರ್ಥಿಕ ನೆರವು ನೀಡಲಾಗುವುದು. ಕೃಷಿ ಉತ್ಪಾದನಾ ಮಾರುಕಟ್ಟೆ ಸಮಿತಿ (ಎಪಿಎಂಸಿ) ಮಾರುಕಟ್ಟೆಗಳು ನೆರವು ಪಡೆಯಲು ಅರ್ಹವಾಗಲಿವೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರದ ಯೋಜನೆಗೆ ಅನುಮೋದನೆ …
Read More »ಮನೆಯಲ್ಲಿ ಯಾರಿಗೂ ಹೇಳದೆ ಹೋಗಿ ಕಾಣೆಯಾಗಿದ್ದಾಳೆ ದಿವ್ಯಶ್ರೀ
ಬೆಳಗಾವಿ : ದತ್ತ ರಾಮ್ ಹರಿಶ್ಚಂದ್ರ ಅನ್ವೇಕರ್ ಅವರ ಮಗಳು ದಿವ್ಯಶ್ರೀ ರಾಜೇಂದ್ರ (ವಯಸ್ಸು ೨೭) ಜೂನ್ ೨೯ ರಂದು ಮಧ್ಯಾಹ್ನ ೧ ಗಂಟೆ ಸುಮಾರಿಗೆ ಮನೆಯಲ್ಲಿ ಯಾರಿಗೂ ಹೇಳದೆ ಹೋಗಿ ಕಾಣೆಯಾಗಿದ್ದಾಳೆ ಎಂದು ಜುಲೈ ೮ರಂದು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿವ್ಯಶ್ರೀ ಪಾವುಸ್ಕರ (೨೭) ೪ ಅಡಿ ೮ ಇಂಚು ಎತ್ತರವಾಗಿದ್ದು ದುಂಡುಮುಖ, ಗೋಧಿ ಮೈಬಣ್ಣ ಉದ್ದ ಮೂಗು, ಎತ್ತರವಾದ ಹಣೆ, ಮೈಯಿಂದ ಸದೃಢವಾಗಿರುತ್ತಾಳೆ, ಹಾಗೂ …
Read More »ಇನ್ನು 10 ದಿನಗಳ ನಂತರ ಮತ್ತೊಮ್ಮೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿಮಾಡುವ ಅನಿವಾರ್ಯತೆ ಬರಬಹುದೇ?
ಬೆಂಗಳೂರು – ರಾಜ್ಯದಲ್ಲಿ ಜುಲೈ 19ರಿಂದ ಮತ್ತೆ ಲಾಕ್ ಡೌನ್ ಜಾರಿಯಾಗುತ್ತಾ? ಕರ್ನಾಟಕ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಮತ್ತೆ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ನೀಡಿರುವ ಹೇಳಿಕೆಗಳು ಮತ್ತೊಮ್ಮೆ ಲಾಕ್ ಡೌನ್ ಆತಂಕವನ್ನು ತಂದಿಟ್ಟಿದೆ. ಕರ್ನಾಟಕದಲ್ಲಿ 1500ಕ್ಕಿಳಿದಿದ್ದ ನಿತ್ಯದ ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ 2500 – 3000ಕ್ಕೇರಿದೆ. ಕೇರಳದಲ್ಲಿ ಪ್ರತಿ ದಿನ 8 ಸಾವಿರಕ್ಕಿಳಿದಿದ್ದ ಸೋಂಕಿತರ ಸಂಖ್ಯ ಈಗ 15 ಸಾವಿರಕ್ಕೇರಿದೆ. ಮಹಾರಾಷ್ಟ್ರದಲ್ಲಿ …
Read More »ನೌಕರರ ವರ್ಗಾವಣೆ ಅಧಿಕಾರ ಸಚಿವರಿಗೆ
ಬೆಂಗಳೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ಸರಕಾರಿ ನೌಕರರ ವರ್ಗಾ ವಣೆಯನ್ನು ಮುಂದೂಡಿದ್ದ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊನೆಗೂ ಸಚಿವರ ಒತ್ತಡಕ್ಕೆ ಮಣಿದಿದ್ದಾರೆ. ಸಚಿವರಿಗೇ ನೌಕರರ ವರ್ಗಾ ವಣೆಗೆ ಅವಕಾಶ ಕಲ್ಪಿಸಿದ್ದು, ಜುಲೈ 22ರೊಳಗೆ ಆಯಾ ಇಲಾಖೆಯ ಸಚಿ ವರು ಶೇ. 6ರಷ್ಟು ಮೀರದಂತೆ ವರ್ಗಾ ವಣೆ ಮಾಡುವಂತೆ ಸೂಚಿಸಿದ್ದಾರೆ. ಪ್ರತೀ ಮೇ, ಜೂನ್‌ನಲ್ಲಿ ಸಾಮಾನ್ಯ ವರ್ಗ ನಡೆ ಯುತ್ತದೆ. 15 ದಿನಗಳಿಂದ 1 ತಿಂಗಳ ಅವಧಿಯಲ್ಲಿ ಸಚಿವರು ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಗರಿಷ್ಠ ಶೇ. 5ರಿಂದ 6ರಷ್ಟು ಸಿಬಂದಿಯನ್ನು …
Read More »ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್: ವಿಟಿಯು ಸಿದ್ಧತೆ
ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕನ್ನಡ ಮಾಧ್ಯಮ ಮತ್ತು ಇಂಗ್ಲಿಷ್ ಮಾಧ್ಯಮಗಳು ಪ್ರತ್ಯೇಕವಿರುವಂತೆ 2021-22ನೇ ಸಾಲಿನಿಂದ ಎಂಜಿನಿಯರಿಂಗ್ ಕಾಲೇಜುಗಳಲ್ಲೂ ಕನ್ನಡ ಹಾಗೂ ಆಂಗ್ಲ ಮಾಧ್ಯಮ ವಿಭಾಗಗಳು ಪ್ರತ್ಯೇಕವಾಗಿರಲಿವೆ. ವಿದ್ಯಾರ್ಥಿಗಳಿಗೆ ಆಯ್ಕೆ ಮಾಡಿಕೊಳ್ಳಲು ಮುಕ್ತ ಅವಕಾಶವಿರಲಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಹಿನ್ನೆಲೆ ಯಲ್ಲಿ ಅಖೀಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಪ್ರಾದೇಶಿಕ ಭಾಷೆಗಳಲ್ಲಿ ತಾಂತ್ರಿಕ ಶಿಕ್ಷಣ ನೀಡಲು ನಿರ್ಧರಿಸಿದ್ದು, ರಾಜ್ಯದಲ್ಲೂ ಕನ್ನಡದಲ್ಲಿ ಎಂಜಿನಿಯರಿಂಗ್ ಬೋಧನೆ, ಕಲಿಕೆ ಹಾಗೂ ಪರೀಕ್ಷೆಗೆ ಬೇಕಾದ …
Read More »ಕೋವಿಡ್ 3ನೇ ಅಲೆ ಆತಂಕದ ನಡುವೆ ಸಿಹಿಸುದ್ದಿ; ಜೂನ್ ನಲ್ಲಿ ನೇಮಕಾತಿ ಚಟುವಟಿಕೆಯಲ್ಲಿ ಶೇ.15ರಷ್ಟು ಏರಿಕೆ!
ನವದೆಹಲಿ: ಕೋವಿಡ್ 3ನೇ ಅಲೆ ಆತಂಕದ ನಡುವೆಯೇ ಕೊಂಚ ಸಮಾಧಾನಕರ ಸುದ್ದಿ ಬಂದಿದ್ದು, ಜೂನ್ ತಿಂಗಳಲ್ಲಿ ದೇಶದ ನೇಮಕಾತಿ ಚಟುವಟಿಕೆಯಲ್ಲಿ ಶೇ.15ರಷ್ಟು ಏರಿಕೆ ಕಂಡುಬಂದಿದೆ ಎಂದು ಹೇಳಲಾಗಿದೆ. ಈ ಕುರಿತಂತೆ ಖ್ಯಾತ ಔದೋಗಿಕ ಶೋಧ ತಾಲತಾಣ ನೌಕ್ರಿ.ಡಾಮ್ ‘ನೌಕ್ರಿ ಜಾಬ್‌ಸ್ಪೀಕ್’ ವರದಿ ಬಿಡುಗಡೆ ಮಾಡಿದ್ದು, ಭಾರತದ ನೇಮಕಾತಿ ಪ್ರವೃತ್ತಿಗಳು ಜೂನ್‌ನಲ್ಲಿ ಶೇಕಡಾ 15 ರಷ್ಟು ಏರಿಕೆಯಾಗಿದ್ದು, 2,359 ಪೋಸ್ಟಿಂಗ್ ಗಳಿಗೆ ಏರಿಕೆಯಾಗಿದೆ. ಈ ಪ್ರಮಾಣ ಮೇ ತಿಂಗಳಿನಲ್ಲಿ 2,047ರಷ್ಟಿತ್ತು ಎಂದು …
Read More »