Breaking News

Monthly Archives: ಜುಲೈ 2021

ಮತ್ತೆ ಪೆಟ್ರೋಲ್ ಬೆಲೆ ಏರಿಕೆ : ದೇಶದಲ್ಲಿ ಇಂದು ತೈಲ ಬೆಲೆ ಎಲ್ಲೆಲ್ಲಿ, ಎಷ್ಟಿದೆ ನೋಡಿ

ನವದೆಹಲಿ : ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದು ಮತ್ತೊಮ್ಮೆ ಏರಿಕೆಯಾಗಿದ್ದು ಪೆಟ್ರೋಲ್ ಮತ್ತು ಡೀಸೆಲ್‌ನ ಬೆಲೆಯನ್ನು ಜುಲೈ 9 ರಂದು ಸರ್ಕಾರಿ ತೈಲ ಕಂಪನಿಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಕೊಂಡೊಯ್ದಿವೆ. ರಾಜಸ್ಥಾನದ ಗಂಗಾನಗರದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್ ಬೆಲೆ 112 ರೂ.ಗೆ ಏರಿಕೆಯಾಗಿದೆ. ಚೆನ್ನೈ, ದೆಹಲಿ, ಕೋಲ್ಕತಾ, ಮುಂಬೈ ಮತ್ತು ಬೆಂಗಳೂರಿನ ನಾಲ್ಕು ಪ್ರಮುಖ ಮೆಟ್ರೋ ನಗರಗಳಲ್ಲಿ ಈಗಾಗಲೇ ಪೆಟ್ರೋಲ್‌ 100ರ ಗಡಿ ದಾಟಿದೆ. …

Read More »

ಶ್ರೀ ಲಕ್ಷ್ಮಣ ರಾವ್ ಹಾಗೂ ಶ್ರೀಮತಿ ಭೀಮವ್ವ ಜಾರಕಿಹೊಳಿ ದಂಪತಿಗಳ 10ನೆಯ ಪುಣ್ಯ ಸ್ಮರಣೆ : ಸದಾ ಸ್ಮರಣೆಯಲ್ಲಿ ಕುಟುಂಬ..

ಇಂದು ಗೋಕಾಕ ನಗರದ ಜನತೆಗೆ ಒಂದು ವಿಶೇಷ ವಾದ ದಿನ ಇಂದು ಗೋಕಾಕ ಸಾಹುಕಾರರ ತಂದೆ ತಾಯಿಯ ಪುಣ್ಯ ಸ್ಮರಣೆಯ ದಿನ ಇಂದಿಗೆ ಹತ್ತು ವರ್ಷಗಳು ಕಳೆದರೂ ನಿಮ್ಮ ನೆನಪು ,ಮಾತ್ರ ಸದಾ ಸ್ಮರಣೀಯ ಎನ್ನುತೆ ಕುಟುಂಬ. ಹೌದು ಜಾರಕಿಹೊಳಿ ಕುಟುಂಬದ ಹಿರಿಯ ಜೀವಿಗಳ ಪುಣ್ಯ ಸ್ಮರಣೆಯ ದಿನವಿದು ಹತ್ತು ವರ್ಷಗಳು ಕಳೆದರೂ ನೀವು ನಿಮ್ಮ ನೆನಪು ಮಾತ್ರ ನಮ್ಮೆಲ್ಲರ ಹೃದಯದಲ್ಲಿ ಶಾಶ್ವತ ಅಂತಾರೆ ಕುಟುಂಬದ ಜನ. ನಿಮ್ಮ ಆದರ್ಶ …

Read More »

ಕ್ರಷರ್ ಘಟಕದಲ್ಲಿ ಹಗಲಿನಲ್ಲೇ ಬ್ಲಾಸ್ಟ್: ಕಲ್ಲುಬಡಿದು ಓರ್ವ ಸಾವು, ಇಬ್ಬರ ಸ್ಥಿತಿ ಚಿಂತಾಜನಕ

ವಿಜಯಪುರ: ಜಲ್ಲಿ ಕಲ್ಲು ಹಾಗೂ ಕ್ರಷರ್ ಘಟಕದಲ್ಲಿ ಬ್ಲಾಸ್ಟ್ ನಡೆಸಿದ ಪರಿಣಾಮ ಕಲ್ಲು ಸಿಡಿದು ರಸ್ತೆ ಬದಿ ನಿಂತಿದ್ದ ಮೂವರು ಗಾಯಗೊಂಡು ಆಸ್ಪತ್ರೆಯಲ್ಲಿ ಮೂವರ ಪೈಕಿ ಓರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ. ವಿಜಯಪುರ ತಾಲೂಕಿನ ಅಲಿಯಾಬಾದ್ ಕಲ್ಲು ಕ್ರಷರ್ ಘಟಕದ ಬಳಿ ಘಟನೆ ನಡೆದಿದ್ದು ಸಾವಳಗಿ ಕಲ್ಲು ಕ್ರಷರ್ ಘಟಕದಲ್ಲಿನ ಕಲ್ಲಿನ ಕಣಿಯಲ್ಲಿ ಬ್ಲಾಸ್ಟ್ ಮಾಡಲಾಗಿದೆ. ಮೂವರು ಗಾಯಾಳುಗಳನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.. ಈ …

Read More »

ಮೊಸರಲ್ಲಿ ಕಲ್ಲು ಹುಡುಕಬೇಡಿ- ಸಿದ್ದರಾಮಯ್ಯಗೆ ಕಾರಜೋಳ ತಿರುಗೇಟು

ಬೆಳಗಾವಿ: ಹಣಕಾಸು ಸೇರಿ ಪ್ರಮುಖ ಇಲಾಖೆಗಳು ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಸಚಿವರ ಕೈಯಲ್ಲಿವೆ. ಕಾಂಗ್ರೆಸ್ ಆಡಳಿತದಲ್ಲಿ ಎಷ್ಟು ಜನರಿಗೆ ಸಚಿವ ಸ್ಥಾನ ಸಿಕ್ಕಿತ್ತು. ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ತಿರುಗೇಟು ನೀಡಿದರು. ಸುವರ್ಣಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ನಾಲ್ವರು ಸಂಸದರಿಗೆ ಸ್ಥಾನ ನೀಡಿರುವುದು ಕರ್ನಾಟಕಕ್ಕೆ ಊಟದಲ್ಲಿ ಉಪ್ಪಿನಕಾಯಿ ಸಿಕ್ಕಂತಾಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ …

Read More »

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬದಲಾಗಿ ಕಿತ್ತೂರು ಕರ್ನಾಟಕವೆಂದು ನಾಮಕರಣ ಮಾಡಿ: ಕೋರೆ ಆಗ್ರಹ

ಬೆಳಗಾವಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಕಲ್ಯಾಣಕರ್ನಾಟಕ ಸಾರಿಗೆ ನಿಗಮವೆಂದು ರಾಜ್ಯ ಸರ್ಕಾರವು ಮರು ನಾಮಕರಣ ಮಾಡಿ ಆದೇಶ ಹೊರಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ ಹರ್ಷವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತ, ಹೈದ್ರಾಬಾದ್-ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕವೆಂದು ಮರುನಾಮಕರಣವಾದ ಮೇಲೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆಯ ಹೆಸರನ್ನು ಬದಲಾಯಿಸಿ ಕಲ್ಯಾಣಕರ್ನಾಟಕ ಸಾರಿಗೆ ನಿಗಮವೆಂದು ಮರುನಾಮಕರಣ ಮಾಡಿರುವುದು ಅತ್ಯಂತ ಸೂಕ್ತವೆನಿಸಿದೆ. ಈ ಭಾಗದ ಜನತೆಯ …

Read More »

ಪ್ರಧಾನಿ ಮೋದಿಯೇ ವಿಫಲವಾಗಿರುವಾಗ ಹೊಸ ಸಚಿವರೇನು ಮಾಡಿಯಾರು?: ಸತೀಶ್ ಜಾರಕಿಹೊಳಿ

ಬೆಳಗಾವಿ: ‘ಜನಪರ ಆಡಳಿತ ನೀಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ವಿಫಲವಾಗಿರುವಾಗ ಸಚಿವರು ಏನು ಮಾಡಿಯಾರು?’. ಕೇಂದ್ರ ಸಚಿವ ಸಂಪುಟ ಪುನರ್‌ರಚನೆ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದ್ದು ಹೀಗೆ. ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಗಂಟೆಗೆ 50 ಕಿ.ಮೀ. ವೇಗದಲ್ಲಿ ಓಡುತ್ತಿತ್ತು. ಈಗ ಹೊಸಬರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಇನ್ಮುಂದೆ ಗಂಟೆಗೆ 30 ಕಿ.ಮೀ. ವೇಗದಲ್ಲಿ ಹೋಗಲಿದೆ. ಮೀರಜ್‌ನಿಂದ ಪಂಢರಪುರಕ್ಕೆ ಮೆರವಣಿಗೆ …

Read More »

ಅಕ್ರಮ ಕಲ್ಲು ಗಣಿಗಾರಿಕೆಗೆ ಕುಮಾರಸ್ವಾಮಿಯೇ ಪ್ರಮುಖ ರೂವಾರಿ: ಎಎಪಿ ಆರೋಪ

ಬೆಂಗಳೂರು: ರಾಜ್ಯದ ಹಳೇ ಮೈಸೂರು ಭಾಗದ ವಿವಿಧೆಡೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಆಪ್ತರಿಂದ ಭಾರೀ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ರಾಜ್ಯ ಬಿಜೆಪಿ ಸರ್ಕಾರವು ಇದಕ್ಕೆ ಬೆಂಬಲವಾಗಿ ನಿಂತಿದೆ ಎಂದು ಇಂದಿಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆರೋಪಿಸಿದರು. ಕೃಷ್ಣರಾಜ ಸಾಗರ ಅಣೆಕಟ್ಟಿನ ನಿರ್ಮಾಣದ ಹಿಂದೆ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್‌, ಸರ್‌ ಎಂ. ವಿಶ್ವೇಶ್ವರಯ್ಯ ಮುಂತಾದ …

Read More »

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಖಾಸಗಿ ದೂರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ. ಖಾಸಗಿ‌ ಕಂಪನಿಯೊಂದರಿಂದ ₹12 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಯಡಿಯೂರಪ್ಪ, ಪುತ್ರ ವಿಜಯೇಂದ್ರ, ಅಳಿಯ ಸಂಜಯ್ ಸೇರಿ 9 ಜನರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.‌ಅಬ್ರಾಹಂ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಯಂತ್ ಕುಮಾರ್ ಅವರು ಕಾಯ್ದಿರಿಸಿದ್ದ ಆದೇಶವನ್ನು ಗುರುವಾರ ಪ್ರಕಟಿಸಿದರು‌. ಅಶ್ವಿನಿ ವೈಷ್ಣವ್ ಪ್ರತಿಭಾನ್ವಿತರಾಗಿದ್ದರು: ನೂತನ ರೈಲ್ವೆ ಸಚಿವರ ಕಾಲೇಜು ಸಹಪಾಠಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೂ ಅಬ್ರಾಹಂ ಮನವಿ ಸಲ್ಲಿಸಿದ್ದರು. ಅನುಮತಿ ನೀಡಲು ರಾಜ್ಯಪಾಲರು ನಿರಾಕರಿಸಿದ್ದರು‌. ಬಳಿಕ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಸಲ್ಲಿಸಲಾಗಿದ್ದ ಖಾಸಗಿ ದೂರನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ದೂರನ್ನು ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಮೂಲಗಳ ಪ್ರಕಾರ ಪ್ರಾಸಿಕ್ಯೂಷನ್​ಗೆ ಗವರ್ನರ್ ಪೂರ್ವಾನುಮತಿ ನೀಡದ ಹಿನ್ನೆಲೆಯಲ್ಲಿ ಖಾಸಗಿ ದೂರನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸಿಎಂ ಬಿಎಸ್ ವೈ ಮತ್ತು ಇತರರು ನಡೆಸಿದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು …

Read More »

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ದಮ್ ಇಲ್ಲ : ಸಿದ್ದರಾಮಯ್ಯ

ಬೆಂಗಳೂರು: 15ನೇ ಹಣಕಾಸು ಆಯೋಗ 5,495 ಕೋಟಿ ರೂ ವಿಶೇಷ ಅನುದಾನ ಕೊಡಬೇಕು. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇದನ್ನು ತಡೆಹಿಡಿದಿದ್ದಾರೆ. ಇದರ ಬಗ್ಗೆ ಕೇಳೋಕೆ ಸಿಎಂ ಯಡಿಯೂರಪ್ಪಗೆ ದಮ್ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಉಚಿತ ದಿನಸಿ ಕಿಟ್ ವಿತರಿಸಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯಕ್ಕೆ ಬರಬೇಕಿದ್ದ 5,495 …

Read More »

ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ : ಕಾಂಗ್ರೆಸ್ ಸೈಕಲ್ ರ‍್ಯಾಲಿ

ಬೆಳಗಾವಿ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ಸೈಕಲ್ ರ‍್ಯಾಲಿ  ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ  ಸತೀಶ ಜಾರಕಿಹೊಳಿ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದರು. ಬಳಿಕ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಈ ಮೊದಲು ದಿನ ಬಳಕೆ ವಸ್ತುಗಳ ಬೆಲೆ  ಹಾಗೂ ಇಂಧನ ಬೆಲೆ ಏರಿಕೆ ಕೂಡಲೇ ಕಡಿಮೆ ಮಾಡಬೇಕೆಂದು ಆಗ್ರಹಿಸಿ, …

Read More »