Breaking News

Monthly Archives: ಜುಲೈ 2021

ಸಿಎಮ್ ಕುಟುಂಬದ ಭ್ರಷ್ಟಾಚಾರ ವಿರುದ್ಧ ಕಾಂಗ್ರೆಸ್ ಧ್ವನಿ ಎತ್ತುತ್ತಿಲ್ಲ : ಯತ್ನಾಳ್

ಸಿಎಮ್ ಕುಟುಂಬದ ಭ್ರಷ್ಟಾಚಾರ ವಿರುದ್ಧ ಕಾಂಗ್ರೆಸ್ ಧ್ವನಿ ಎತ್ತುತ್ತಿಲ್ಲ ಎಂಬ ಯತ್ನಾಳ್ ಆರೋಪಕ್ಕೆ ಗದಗದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಎಸ್ ಆರ್ ಪಾಟೀಲ ಸಿಡಿಮಿಡಿ ವ್ಯಕ್ತಪಡಿಸಿದರು. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಬೇಕೆಂದು ಹುಟ್ಟಿದ ಪಕ್ಷ ಕಾಂಗ್ರೆಸ್ ವಾಗಿದೆ. ವಿಶ್ವಕ್ಕೆ ಶ್ರೇಷ್ಠ ಸಂವಿಧಾನ ನೀಡಿದವರು. ನಮಗೆ ಧ್ವನಿ ಎತ್ತುವಿದು ಗೊತ್ತಿಲ್ಲವೆ. ನಾನು ಭಾರತೀಯ ಅಂತಾ ಹೆಮ್ಮೆಯಿಂದ ಹೇಳುವಂತೆ ಮಾಡಿದ ಪಕ್ಷ ನಮ್ಮದು. 60 ವರ್ಷದಲ್ಲಿ ನಿರ್ಮಾಣ ಮಾಡಿದ ಶಕ್ತಿಶಾಲಿ ರಾಷ್ಟ್ರವನ್ನ ಬಿಜೆಪಿ …

Read More »

ಕೇಂದ್ರ ಸಚಿವ ಸಂಪುಟ ಪುನರಚನೆಗೆ ಕ್ಷಣಗಣನೆ: ಘಟಾನುಘಟಿ ಸಚಿವರುಗಳೇ ಸಂಪುಟದಿಂದ ಔಟ್​

ನವದೆಹಲಿ: ಕೇಂದ್ರ ಸಚಿವ ಸಂಪುಟದ ಪುನರಚನೆಗೆ ಕ್ಷಣಗಣನೆಗೆ ಆರಂಭವಾಗಿದ್ದು, ಅದಕ್ಕೂ ಮುನ್ನವೇ ಘಟಾನುಘಟಿ ಸಚಿವರುಗಳೇ ಸಂಪುಟದಿಂದ ಔಟ್​ ಆಗಿದ್ದಾರೆ. ಆರೋಗ್ಯ ಸಚಿವ ಹರ್ಷವರ್ಧನ್​ ಹಾಗೂ ಶಿಕ್ಷಣ ಸಚಿವ ರಮೇಶ್​ ಫೋಖ್ರಿಯಾಲ್​ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರೊನಾ ಎರಡನೇ ತರಂಗವನ್ನು ನಿಭಾಯಿಸುವಲ್ಲಿ ಸರ್ಕಾರ ಎಡವಿದೆ ಎಂದು ವ್ಯಾಪಕ ಟೀಕೆ ವ್ಯಕ್ತವಾಗಿರುವ ಬೆನ್ನಲ್ಲೇ ಇಬ್ಬರು ಆರೋಗ್ಯ ಮಂತ್ರಿಗಳ ರಾಜೀನಾಮೆ, ಅವರ ತಲೆದಂಡ ಎಂಬ ಮಾತುಗಳು ಕೇಳಿಬರುತ್ತಿವೆ. ಸಂಪುಟ ಪುನರಚನೆಯಲ್ಲಿ ನೂತನ …

Read More »

ಪ್ರಜ್ವಲ್ ಕೂಡ ದೇವೇಗೌಡರ ಪ್ರಾಡಕ್ಟೆ. ಸುಮಲತಾ ವಿರುದ್ಧ ಭುಗಿಲೆದ್ದ ಆಕ್ರೋಶ

ಮಂಡ್ಯ: ಮಾಜಿ ಪ್ರಧಾನಿ ದೇವೇಗೌಡರ ಕುಟುಂಬವನ್ನ ಡಿವೈಡಂಡ್ ರೂಲ್ ಮಾಡುವ ಪ್ರಯತ್ನವನ್ನ ಸಂಸದೆ ಸುಮಲತಾ ಮಾಡ್ತಿದ್ದಾರೆ. ಇಂತಹ ನೀಚ ರಾಜಕಾರಣವನ್ನು ಈ ಹಿಂದೆ ಬ್ರಿಟಿಷರು ಮಾಡಿದ್ದರು. ಅದೇ ಕೆಲಸವನ್ನು ನೀವೀಗ ಮಾಡ್ತಿದ್ದೀರಾ. ಪ್ರಜ್ವಲ್ ರೇವಣ್ಣರನ್ನು ನೋಡಿ ಕಲಿಯಿರಿ ಎನ್ನುತ್ತೀರಲ್ಲಾ… ಪ್ರಜ್ವಲ್ ಕೂಡ ದೇವೇಗೌಡರ ಪ್ರಾಡಕ್ಟೆ ಎಂದು ಸುಮಲತಾ ವಿರುದ್ಧ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಕಿಡಿಕಾರಿದ್ದಾರೆ. ಸುಮಲತಾ ಮತ್ತು ಎಚ್​.ಡಿ.ಕುಮಾರಸ್ವಾಮಿ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಇದೀಗ ಎಚ್​ಡಿಕೆ ಪರ ರವೀಂದ್ರ …

Read More »

ಕಾಂಗ್ರೆಸ್ ನಲ್ಲಿ ಮುಂದುವರಿದ ಸಿಎಂ ಫೈಟ್; ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಎಂದ ನಲಪಾಡ್

ಉಡುಪಿ: ಕಾಂಗ್ರೆಸ್ ಪಾಳಯದಲ್ಲಿ ಸ್ವಲ್ಪ ತಣ್ಣಗಾಗಿದ್ದ ಸಿಎಂ ಅಭ್ಯರ್ಥಿ ವಿಚಾರ ಇದೀಗ ಮತ್ತೆ ತಾರಕಕ್ಕೇರಿದೆ. ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಯೂತ್ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಹೇಳಿಕೆ ನೀಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ನಲಪಾಡ್, ಕೋವಿಡ್ ನಂತಹ ಸಂಕಷ್ಟದ ಸಂದರ್ಭದಲ್ಲಿ ನಿಮಗೆ ಯಾರೂ ಸಹಾಯ ಮಾಡಿಲ್ಲ ಕಾಂಗ್ರೆಸ್ ಮಾತ್ರ ನಿಮ್ಮ ಕಷ್ಟಕ್ಕೆ ಸ್ಪಂದಿಸಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ …

Read More »

80 ಲಕ್ಷ ರೂ. ವೆಚ್ಚದ ಹೈಸ್ಕೂಲ್ ರಸ್ತೆ ನಿರ್ಮಾಣಕ್ಕಾಗಿ ಚಾಲನೆ ನೀಡಿದ ಅಮರನಾಥ ಜಾರಕಿಹೊಳಿ

ಗೋಕಾಕ: ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ಮತಕ್ಷೇತ್ರದಲ್ಲಿ ಬುಧವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಮರನಾಥ ಜಾರಕಿಹೊಳಿ ಅವರು ಶಿಂದಿಕುರಬೇಟ ಗ್ರಾಮದ ಹೈಸ್ಕೂಲ್ ರಸ್ತೆ ನಿರ್ಮಾಣಕ್ಕಾಗಿ 80 ಲಕ್ಷ ರೂ. ವೆಚ್ಚದ ಕಾಮಗಾರಿ ಹಾಗೂ ಜೆಎಲ್ ಬಿಸಿ ಯೋಜನೆಯಡಿ 25 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಪಾಮಲದಿನ್ನಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ 1.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ …

Read More »

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನವದೆಹಲಿ: ಇಂದು ಸಂಜೆ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುತ್ತಿರುವ ಬೆನ್ನಲ್ಲೇ ಹಲವು ಹಿರಿಯ ಸಚಿವರಿಗೆ ಕೊಕ್ ನೀಡಲಾಗಿದ್ದು, ಇದೀಗ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸ್ಥಾನಕ್ಕೆ ಸದಾನಂದಗೌಡರು ರಾಜೀನಾಮೆ ನೀಡಿದ್ದಾರೆ. ಸದಾನಂದಗೌಡರಿಗೆ ರಾಜ್ಯ ರಾಜಕರಣದತ್ತ ಗಮನ ಹರಿಸಲು ಸೂಚಿಸಲಾಗಿದೆ ಎನ್ನಲಾಗಿದೆ.   ಇನ್ನು ಸದಾನಂದಗೌಡರಿಂದ ತೆರವಾದ ಸ್ಥಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಆಯ್ಕೆ …

Read More »

ಸುಗಮವಾಗಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪೂರ್ಣಗೊಳಿಸುವ ವಿಶ್ವಾಸವಿದೆ: ಶಶಿಕಲಾ ಜೊಲ್ಲೆ

ಚಿಕ್ಕೋಡಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹಿನ್ನೆಲೆ ಅಧಿಕಾರಿಗಳು, ಶಿಕ್ಷಕರು ಮತ್ತು ಇತರೆ ಸಿಬ್ಬಂದಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಿ ಸುಗಮವಾಗಿ ಪರೀಕ್ಷೆ ಪೂರ್ಣಗೊಳಿಸುವ ವಿಶ್ವಾಸ ಇದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕಾರ್ಯದಲ್ಲಿ ತೊಡಗುವ ಶಿಕ್ಷಕರು …

Read More »

ಕೇಂದ್ರ ಸಚಿವ ಸ್ಥಾನಕ್ಕೆ `ರಮೇಶ್ ಪೋಕ್ರಿಯಾಲ್ ನಿಶಾಂಕ್’ ರಾಜೀನಾಮೆ

ನವದೆಹಲಿ : ಇಂದು (ಬುಧವಾರ) ಸಂಜೆ ಕೇಂದ್ರ ಸಚಿವರ ಪರಿಷತ್ತಿನ ಪುನರ್ರಚನೆ ಮತ್ತು ವಿಸ್ತರಣೆಯ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವ್ರು ತಮ್ಮ ಅಧಿಕೃತ ನಿವಾಸದಲ್ಲಿ ಸಚಿವ ಹುದ್ದೆಯ ಸಂಭಾವ್ಯರನ್ನ ಭೇಟಿಯಾದರು. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಧಾನಿ ನಿವಾಸದಲ್ಲಿ ಉಪಸ್ಥಿತರಿದ್ದರು.   …

Read More »

ಬಳ್ಳಾರಿ: ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿಹೋದ ದಂಪತಿ

ವಿಜಯನಗರ: ನಿನ್ನೆ ಸುರಿದ ಭಾರೀ ಮಳೆಗೆ ಗಂಡ ಹೆಂಡತಿಯಿಬ್ಬರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಹೂವಿನಹಡಗಲಿಯಲ್ಲಿ ನಡೆದಿದೆ. ಹಗರಿ ಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಮೊತ್ಕೂರು ಗ್ರಾಮದ ನಿವಾಸಿಗಳಾದ ಮಲ್ಲಿಕಾರ್ಜುನ (55) ಹಾಗೂ ಅವರ ಪತ್ನಿ ಗದಗ ಜಿಲ್ಲೆಯಿಂದ ವಾಪಸಾಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೂವಿನಹಡಗಲಿ ತಾಲೂಕಿನ ಪೂರ್ವ ಮತ್ತು ಪಶ್ಚಿಮ ಕಾಲ್ವಿ ಗ್ರಾಮಗಳ ಬಳಿ ಇರುವ ಹಳ್ಳದಲ್ಲಿ ನಿನ್ನೆ ದಂಪತಿ ಕೊಚ್ಚಿಹೋಗಿದ್ದು, ಮಲ್ಲಿಕಾರ್ಜುನ ಇಂದು …

Read More »

ಕಾರು-ಆಟೋ ಮಧ್ಯೆ ಭೀಕರ ಅಪಘಾತ; ಓರ್ವ ಮಹಿಳೆ ಸ್ಥಳದಲ್ಲೇ ಸಾವು

ಹಾವೇರಿ: ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕೌದಿಕಲ್ಲಾಪುರ ಕ್ರಾಸ್​ ಬಳಿ ನಡೆದಿದೆ. ಲಕ್ಷ್ಮವ್ವ ಕಲ್ಲೇಡಿ 55 ಮೃತ ದುರ್ದೈವಿಯಾಗಿದ್ದು ಇನ್ನುಳಿದ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ಮಾರ್ಗವಾಗಿ ಕಾಗಿನೆಲೆಗೆ ಹೋಗುತ್ತಿದ್ದ ಕಾರು ಮತ್ತು ಹಾವೇರಿಗೆ ಬರುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದೆ. ಹಾವೇರಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ …

Read More »