Breaking News

Monthly Archives: ಜುಲೈ 2021

ಕರ್ನಾಟಕದ 2, 3 ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಪಕ್ಕಾ; ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು: ರಾಜ್ಯದ ಎರಡು, ಮೂರು ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಸಿಗುವುದು ಪಕ್ಕಾ ಎಂದು ಗಣಿ ಸಚಿವ ಮುರುಗೇಶ್ ನಿರಾಣಿ ಹೇಳಿದರು. ಕೆಐಎ-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಚಿವರು, ಜಾತಿವಾರು ಲೆಕ್ಕಾಚಾರ ಪ್ರಕಾರ ಲಿಂಗಾಯತರಿಗೆ ಒಂದು, ಪರಿಶಿಷ್ಟ ಜಾತಿಗೆ ಒಂದು ಪಕ್ಕಾ ಆಗಿದೆ. ಮತ್ತೊಂದು ಯಾರಿಗೆ ಕೊಡ್ತಾರೋ ನೋಡಬೇಕು ಎಂದು ಅಭಿಪ್ರಾಯಪಟ್ಟರು. ರಾಜ್ಯ ರೈಲ್ವೆ ಖಾತೆ ರಾಜ್ಯಕ್ಕೆ ನೀಡಲಿದ್ದಾರೆ ಎಂಬ ವಿಶ್ವಾಸವಿದೆ. ರಮೇಶ್ ಜಿಗಜಿಣಗಿ, ನಾರಾಯಣಸ್ವಾಮಿ, ಉಮೇಶ್ ಜಾಧವ್ …

Read More »

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತನಿಖೆ ಮುಕ್ತಾಯ, ಅಂತಿಮ ತನಿಖಾ ವರದಿ ಸಿದ್ಧಪಡಿಸಿದ ಎಸ್‌ಐಟಿ

ಬೆಂಗಳೂರು: ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಅಂತಿಮ ತನಿಖಾ ವರದಿ ಸಿದ್ಧವಿದೆ ಎಂದು ಹೈಕೋರ್ಟ್​ಗೆ ಎಸ್‌ಐಟಿ ಮಂಗಳವಾರ ಮಾಹಿತಿ ನೀಡಿದೆ. ಯುವತಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ದಾಖಲೆಗಳ ಇಂಗ್ಲಿಷ್ ಅನುವಾದ ಸಲ್ಲಿಸದ ಹಿನ್ನೆಲೆಯಲ್ಲಿ ಇಂಗ್ಲಿಷ್ ಅನುವಾದ ಸಲ್ಲಿಸಲು ಯುವತಿ ಪರ ವಕೀಲರಿಗೆ ಸೂಚನೆ ನೀಡಿದೆ. ಜತೆಗೆ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿದೆ. ಈ ಬೆಳವಣಿಗೆ ನಡುವಲ್ಲೇ ಜಾರಕಿಹೊಳಿ ಹಾಗೂ ಗೋಕಾಕ್ …

Read More »

ಇಂದು ಕೇಂದ್ರ ಸಂಪುಟ ಪುನರ್ ರಚನೆ; ದೆಹಲಿಯತ್ತ ಬಿಜೆಪಿ ಸಂಸದರು, ಯಾರಿಗಿದೆ ಲಕ್​​?

ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವ ಸಂಪುಟ ಪುನರ್ ರಚನೆಯಾಗಲಿದೆ. ಸಂಜೆ 5.30ಕ್ಕೆ ಸಂಪುಟ ಪುನರ್ ರಚನೆ ಪ್ರಕ್ರಿಯೆ ಆರಂಭವಾಗಲಿದೆ. ಬಳಿಕ ಆಯ್ಕೆಯಾದ ನೂತನ ಸಂಸದರು 6 ಗಂಟೆ ವೇಳೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಸಂಪುಟ ರಚನೆಯಲ್ಲಿ ಹಿಂದುಳಿದ ವರ್ಗ ಮತ್ತು ಎಸ್ಸಿ, ಎಸ್ಟಿ ಸಂಸದರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಹೇಗಾದರೂ ಸರಿ ಸಣ್ಣಸಣ್ಣ ಸಮುದಾಯಗಳಿಗೂ ಪ್ರಾತಿನಿಧ್ಯ ನೀಡುವ ಯೋಚನೆ ಬಿಜೆಪಿ …

Read More »

2023ರ ವಿಧಾನಸಭಾ ಚುನಾವಣೆಗೆ ಈಗಲೇ ಸಿದ್ದತೆ ಮಾಡಿಕೊಳ್ಳಿ: ಡಿ.ಕೆ ಅರುಣಾ

ಕಲಬುರಗಿ: ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ಕಾರ್ಯಕರ್ತರು ಈಗಲೇ ಸಿದ್ದತೆಗಳನ್ನು ಮಾಡಿಕೊಳ್ಳಲು ಮುಂದಾಗುವಂತೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ರಾಜ್ಯದ ಸಹ ಉಸ್ತುವಾರಿ ಡಿ.ಕೆ. ಅರುಣಾ ಕರೆ ನೀಡಿದರು. ನಗರದ ನೀಲಾಂಬಿಕಾ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದರು. ಕೇಂದ್ರದ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಪ್ರತಿ ಮನೆ- ಮನೆಗೆ ಮುಟ್ಟಿಸುವ ಕಾರ್ಯದಲ್ಲಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಬಹು ಮುಖ್ಯವಾಗಿ ರಾಜ್ಯದ ಲ್ಲಿ ಮತ್ತೆ …

Read More »

ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್‌ ನಿರಾಣಿ ದಿಢೀರ್‌ ದೆಹಲಿಗೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಿರಂತರ ಚರ್ಚೆಗೆ ಗ್ರಾಸವಾಗಿರುವ ನಾಯಕತ್ವ ಬದಲಾವಣೆಯ ವಿಚಾರಕ್ಕೆ ತೆರೆ ಬಿದ್ದಿದೆ ಎನ್ನುವಷ್ಟಲ್ಲಿ ಮತ್ತೆ ಬೆಳವಣಿಗೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್‌ ನಿರಾಣಿ ದಿಢೀರ್‌ ದೆಹಲಿಗೆ ತೆರಳಿರುವುದು ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಕರೆಯ ಮೇರೆಗೆ ದೆಹಲಿಗೆ ಭೇಟಿ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಮಂಗಳವಾರ ಸಂಜೆ …

Read More »

ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ: ಬಿಜೆಪಿ ಶಾಸಕ ಯತ್ನಾಳ್

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯದಲ್ಲಿ ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ಮುಖ್ಯಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಚಾಮರಾಜನಗರ ತಾಲೂಕಿನ ಮರಿಯಾಲ ಗ್ರಾಮದಲ್ಲಿ ಮಾಜಿ ಕೇಂದ್ರ ಸಚಿವ ದಿ.ಎಂ. ರಾಜಶೇಖರ ಮೂರ್ತಿರವರ ಸಮಾಧಿಗೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ದಿಲ್ಲಿಯಲ್ಲಿರುವ ಬಿಜೆಪಿ ಹೈಕಮಾಂಡ್ ವೀಕ್ಷಿಸುತ್ತಿದೆ. ರಾಜ್ಯದಲ್ಲಿ ಎಷ್ಟು ಬೇಗ ಮುಖ್ಯಮಂತ್ರಿ ಬದಲಾಗುತ್ತಾರೋ …

Read More »

ಶಾಸಕ ಬಸವರಾಜು ಪಾಟೀಲ್ ಯತ್ನಾಳ್ ವಿರುದ್ಧ ಘೋಷಣೆ

ಚಾಮರಾಜನಗರ: ಮಂಗಳವಾರ ನಗರಕ್ಕೆ ಆಗಮಿಸಿದ್ದ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ವಿರುದ್ಧಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಶಾಖೆಯ ಕಾರ್ಯಕರ್ತರು ಹಾಗೂ ಬಿಎಸ್‌ವೈ ಅಭಿಮಾನಿಗಳು ಘೋಷಣೆ ಕೂಗಿ, ಘೇರಾವ್ ಹಾಕುವ ಯತ್ನ ಮಾಡಿದರು. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಮಂಗಳವಾರ ನಗರಕ್ಕೆ ಆಗಮಿಸಿದ್ದ ಶಾಸಕ ಬಸವರಾಜ ಪಾಟೀಲ ಯತ್ನಾಳ ಅವರು ಹರಳುಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅಲ್ಲಿ ದೇವರ ದರ್ಶನ ಮಾಡಿ, ದೇವಾಲಯದಿಂದ ಹೊರಬಂದು ಕಾರು ಹತ್ತುವಾಗ, 50ಕ್ಕೂ ಹೆಚ್ಚು …

Read More »

ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಇನ್ನಿಲ್ಲ

ಮುಂಬೈ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ (98) ಇಂದು ಮುಂಬೈ ನಲ್ಲಿ ನಿಧನರಾಗಿದ್ದಾರೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಆರೋಗ್ಯ ಕಳೆದ 5 ದಿನಗಳಿಂದ ಬಿಗುಡಾಯಿಸಿತ್ತು. ಜೂನ್ 30ರಂದು ಮುಂಬೈ ನ ಹಿಂದೂಜಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಮುಂಜಾನೆ (ಜುಲೈ 7) 7:30 ರ ಸಮಯದಲ್ಲಿ ದಿಲೀಪ್ ಕುಮಾರ್ ವಿಧಿವಾಶರಾಗಿದ್ದಾರೆ ಎಂದು ಹಿಂದೂಜಾ ಆಸ್ಪತ್ರೆಯ ವೈದ್ಯ ಡಾ. ಜಲೀಲ್ ಪಾರ್ಕರ್ …

Read More »

ಯೆಸ್‌ ಬ್ಯಾಂಕ್‌ಗೆ ಬರೋಬ್ಬರಿ 712 ಕೋಟಿ ರೂ ವಂಚನೆ; 11 ಮಂದಿ ವಿರುದ್ಧ ಎಫ್‌ಐಆರ್

ಬೆಂಗಳೂರು, ಜುಲೈ 06: ಯೆಸ್‌ ಬ್ಯಾಂಕ್‌ಗೆ 712 ಕೋಟಿ ರೂಪಾಯಿ ವಂಚನೆ ಎಸಗಿರುವ ಪ್ರಕರಣದಲ್ಲಿ ಹನ್ನೊಂದು ಮಂದಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಯೆಸ್‌ ಬ್ಯಾಂಕ್‌ನಿಂದ ಬರೋಬ್ಬರಿ 712 ಕೋಟಿ ರೂಪಾಯಿ ಸಾಲ ಪಡೆದ ಆರೋಪಿಗಳು ಸಾಲ ಹಿಂತಿರುಗಿಸಿರಲಿಲ್ಲ. ಕಳೆದೆರೆಡು ವರ್ಷದಿಂದ ಇಎಂಐ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ಯಸ್ ಬ್ಯಾಂಕ್ ಮ್ಯಾನೇಜರ್ ಆಶೀಶ್ ವಿನೋದ್ ಜೋಶಿ ಮಂಗಳವಾರ ಕಬ್ಬನ್ ಪಾರ್ಕ್ ಠಾಣೆಗೆ ತೆರಳಿ …

Read More »

Cyber Crime ಕೇಂದ್ರ ಸರ್ಕಾರಿ ಯೋಜನೆ ಹೆಸರಲ್ಲಿ ಹಾಕಿದ್ರು ನಾಮ.. ಹುಬ್ಬಳ್ಳಿ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ದೋಖಾ

ನಾವು ಬ್ಯಾಂಕ್​ನಿಂದ ಕರೆ ಮಾಡ್ತಿದ್ದೇವೆ.. ನಿಮಗೆ ಓಟಿಪಿ ಬಂದಿದ್ಯಾ.. ಓಟಿಪಿ ಬಂದಿದ್ರೆ ಹೇಳಿ.. ನಿಮಗೆ ಸ್ಪೆಷಲ್ ಆಫರ್ ಇದೆ.. ಬೇಕಾದ್ರೆ ತಗೊಳ್ಳಿ.. ಹಾಗೆ ಹೀಗೆ ಅಂತಾ ಪೂಸಿ ಹೊಡೆದು ನಿಮ್ಮ ಅಕೌಂಟ್ಗೆ ಕನ್ನ ಹಾಕ್ತಿದ್ದ ಸೈಬರ್ ಖದೀಮರು ಈಗ ಹೊಸ ಹಾದಿ ಹಿಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಸೈಬರ್ ವಂಚಕರು ಫುಲ್ ಆಯಕ್ಟಿವ್ ಆಗಿದ್ದು ಕೇಂದ್ರ ಸರ್ಕಾರ ಪುನರ್ಬಳಕೆ ಇಂಧನ ಸಚಿವಾಲಯದ ಹೆಸರಲ್ಲಿ ಧೋಖಾ ಎಸಗಿದ್ದಾರೆ. ಸೋಲಾರ್ ಪ್ಯಾನಲ್ ಚೈನ್ ಲಿಂಕ್ ಅನ್ನೋ …

Read More »