Breaking News
Home / 2021 / ಆಗಷ್ಟ್ / 01 (page 2)

Daily Archives: ಆಗಷ್ಟ್ 1, 2021

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಮಾಜಿ ಪ್ರಧಾನಿ ಕಾಲಿಗೆ ನಮಸ್ಕರಿಸಿ ಆಶಿರ್ವಾದ ಪಡೆದರು. ಈ ವೇಳೆ ದೇವೇಗೌಡರು ನೂತನ ಸಿಎಂಗೆ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದರು. ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಹೆಚ್.ಡಿ.ರೇವಣ್ಣ ಸಾಥ್ …

Read More »

ಮುಖ್ಯಮಂತ್ರಿ ಕಚೇರಿಯಿಂದ ಯಡಿಯೂರಪ್ಪ ತಂಡ ಹೊರಕ್ಕೆ: ವಿಶೇಷ ಅಧಿಕಾರಿಗಳ ಕಾರ್ಯಮುಕ್ತಿ ಆದೇಶ ಪ್ರಕಟ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರದ ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಕಚೇರಿಯಲ್ಲಿ (ಮುಖ್ಯಮಂತ್ರಿಗಳ ಸಚಿವಾಲಯ) ನಿಯೋಜನೆ, ಒಪ್ಪಂದ ಹಾಗೂ ಗುತ್ತಿಗೆ ಆಧಾರದ ಮೆಲೆ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ಕಾರ್ಯಮುಕ್ತಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್​ ಆದೇಶ ಹೊರಡಿಸಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಎಂ.ಲಕ್ಷ್ಮೀನಾರಾಯಣ ಸೇರಿದಂತೆ ಒಟ್ಟು 19 ಅಧಿಕಾರಿಗಳನ್ನು ಕರ್ತವ್ಯಮುಕ್ತಗೊಳಿಸಲಾಗಿದೆ. ನಿಯೋಜನೆ / ಒಪ್ಪಂದದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ತಮ್ಮ …

Read More »

ಸಂಪುಟ ರಚನೆ: ಸಂಭವನೀಯ ಸಚಿವರ ಪಟ್ಟಿಯೊಂದಿಗೆ ದೆಹಲಿಗೆ ಹೊರಟ ಸಿಎಂ ಬೊಮ್ಮಾಯಿ

ಬೆಂಗಳೂರು: ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಸಚಿವ ಸಂಪುಟ ರಚನೆ ನಿಟ್ಟಿನಲ್ಲಿ ವರಿಷ್ಠರ ಸಮ್ಮತಿ ಪಡೆದು ವಾಪಸ್ ಆಗಲಿದ್ದಾರೆ. ನೂತನ ಸಚಿವರ ಲಿಸ್ಟ್ ನೊಂದಿಗೆ ಸಂಜೆ 5:40ಕ್ಕೆ ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಒಪ್ಪಿಗೆ ಪಡೆದು ಸಚಿವರ ಪಟ್ಟಿ ಅಂತಿಮಗೊಳಿಸಲಿದ್ದಾರೆ. ನಾಳೆಯೇ ಸಂಪುಟ ರಚನೆಗೆ ಮುಹೂರ್ತ ಫೈನಲ್ ಆಗಲಿದ್ದು, ಮಂಗಳವಾರ ಅಥವಾ ಬುಧವಾರ ನೂತನ ಸಚಿವರು ಪ್ರಮಾಣವಚನ …

Read More »

ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ

ನವದೆಹಲಿ, ಜುಲೈ 31: ಮುಂದಿನ ವಾರ ವಿಪಕ್ಷಗಳು ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಾರಿ ಸಂಸತ್ ಮುಂಗಾರು ಅಧಿವೇಶನವು ಲೋಕಸಭೆ ಹಾಗೂ ರಾಜ್ಯಸಭೆ ಎರಡರಲ್ಲೂ ಪೆಗಾಸಸ್‌ನಿಂದಲೇ ಆರಂಭವಾಗಿತ್ತು. ಆಮೇಲೆ ಕೃಷಿ ಕಾಯ್ದೆ ಸೇರಿದಂತೆ ಬೇರೆ ವಿಚಾರಗಳಿಗೆ ತಿರುಗಿತು. ಅಧಿವೇಶನ ಆರಂಭವಾಗಿ ಎರಡು ವಾರಗಳೇ ಕಳೆದರೂ ಇದುವರೆಗೂ ಸರಿಯಾಗಿ ಅಧಿವೇಶನವನ್ನು ನಡೆಸಲು ಸಾಧ್ಯವಾಗಿಲ್ಲ. ಇಡೀ ದೇಶದಲ್ಲಿ ಸಂಚಲನ ಮೂಡಿಸಿರುವ …

Read More »

ಕುರಿ, ಕೋಳಿ ಮಾಂಸಕ್ಕಿಂತ ಗೋಮಾಂಸ ಹೆಚ್ಚು ಸೇವಿಸಿ ಎಂದ ಬಿಜೆಪಿ ಸಚಿವ!

ಶಿಲ್ಲಾಂಗ್ : ಕುರಿ, ಕೋಳಿ ಮತ್ತು ಮೀನಿನ ಮಾಂಸಕ್ಕಿಂತ ಹೆಚ್ಚು ಗೋವಿನ ಮಾಂಸವನ್ನು ಸೇವಿಸುವಂತೆ ಬಿಜೆಪಿ ಹಿರಿಯ ನಾಯಕ ಹಾಗೂ ಮೇಘಾಲಯದ ನೂತನ ಪಶು ಸಂಗೋಪನೆ ಮತ್ತು ಪಶುವೈದ್ಯ ಖಾತೆ ಸಚಿವ ಸಣ್ಬೂರ್‌ ಶುಲ್ಲೈ ಕರೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಗೋಮಾಂಸ ಸೇವಿಸಲು ಉತ್ತೇಜಿಸುವ ಮೂಲಕ, ತಮ್ಮ ಸರ್ಕಾರ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರುತ್ತದೆ ಎಂಬ ಜನರಲ್ಲಿರುವ ಆತಂಕವನ್ನು ದೂರ ಮಾಡಲು ಮುಂದಾಗಿದ್ದಾರೆ. ಕಳೆದವಾರವಷ್ಟೇ ಸಚಿವರಾಗಿ …

Read More »

ಶೀಘ್ರವೇ ಈ ಸ್ಮಾರ್ಟ್ ಫೋನ್ ಗಳಲ್ಲಿ ಯೂಟ್ಯೂಬ್, ಇಮೇಲ್ ಸೇರಿ ಇತರೆ ಆಯಪ್ ಗಳ ಕಾರ್ಯ ಸ್ಥಗಿತ

ನವದೆಹಲಿ : ಸ್ಮಾರ್ಟ್ ಫೋನ್ ಬಳಕೆದಾರರಿಗೆ ಗೂಗಲ್ ಶಾಕಿಂಗ್ ನ್ಯೂಸ್ ವೊಂದನ್ನು ನೀಡಿದ್ದು, ಶೀಘ್ರವೇ ಸ್ಮಾರ್ಟ್ ಫೋನ್ 2.3.7 ಮತ್ತು ಕಡಿಮೆ ವರ್ಷನ್ ಆಯಂಡ್ರಾಯ್ಡ್ ಮೊಬೈಲ್ ಗಳಲ್ಲಿ ಯೂಟ್ಯೂಬ್, ಇಮೇಲ್ ಸೇರಿ ಇತರೆ ಆಯಪ್ ಗಳ ಕಾರ್ಯ ಸ್ಥಗಿತವಾಗಲಿದೆ.   ಸೆಪ್ಟೆಂಬರ್​ 27ರ ಆರಂಭದಿಂದ ಆಯಂಡ್ರಾಯ್ಡ್​ 2.3.7 ಮತ್ತು ಅದಕ್ಕಿಂತ ಕಡಿಮೆ ವರ್ಸನ್​ ಸ್ಮಾರ್ಟ್​ ಫೋನ್​ಗಳಲ್ಲಿ ಯಾವುದೇ ಗೂಗಲ್​ ಆಯಪ್ಸ್​ ಗಳು ಕಾರ್ಯನಿರ್ವಹಿಸುವುದಿಲ್ಲ ಎನ್ನಲಾಗಿದ್ದು, ಸೆಪ್ಟೆಂಬರ್ ನಂತರವೂ ಗೂಗಗಲ್ ಆಯಪ್ …

Read More »

ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಕಾರ್ಡ್ ಗೆ *ಇ-ಕೆವೈಸಿ* ಮಾಡಲಾಗುವುದು.  

*ದಿನಾಂಕ 01:08:21 ರಿಂದ 10:08:21 ರ ವರೆಗೆ* ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಕಾರ್ಡ್ ಗೆ *ಇ-ಕೆವೈಸಿ* ಮಾಡಲಾಗುವುದು.   *ಇ-ಕೆವೈಸಿ ಎಂದರೇನು?* ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಪ್ರತಿಯೊಬ್ಬ ಸದಸ್ಯರ ಆಧಾರ್ ಕಾರ್ಡ್ ನ ಜೋಡಣೆಯ ಉದ್ದೇಶದಿಂದ ಪಡೆಯುವ ಬೆರಳಚ್ಚು ಆಗಿದೆ.   *ಇ-ಕೆವೈಸಿ ಏಕೆ ಮಾಡಿಕೊಳ್ಳಬೇಕು?* ಒಂದು ವೇಳೆ ಇ-ಕೆವೈಸಿ ಆಗದ ಸದಸ್ಯರ ಹೆಸರುಗಳನ್ನು ರೇಷನ್ ಕಾರ್ಡ್ ನಿಂದ ತೆಗೆದು ಹಾಕುವ ಅಥವಾ ಪಡಿತರ ನಿಲ್ಲಿಸುವ ಸಂಭವವಿರುವುದರಿಂದ …

Read More »