Breaking News
Home / 2021 / ಆಗಷ್ಟ್ / 03 (page 2)

Daily Archives: ಆಗಷ್ಟ್ 3, 2021

ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ದೇವನಹಳ್ಳಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2020ನೇ ಸಾಲಿನ ಏಕಲವ್ಯ ಪ್ರಶಸ್ತಿ ಮತ್ತು ನಗದು ಪುರಸ್ಕಾರಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಏಕಲವ್ಯ ಪ್ರಶಸ್ತಿಗೆ ಕಳೆದ 5 ವರ್ಷದಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆ ಮಾಡಿರುವ ಜಿಲ್ಲೆಯ ಕ್ರೀಡಾಪಟುಗಳು ಹಾಗೂ 2020ನೇ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ರಾಜ್ಯ ಪ್ರತಿನಿಧಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳು, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ …

Read More »

ಯಾವ ಸ್ಥಾನ ನೀಡಿದ್ರೂ ನಿಭಾಯಿಸುವೆ-ಮಹೇಶ್​ ಕುಮಟಳ್ಳಿ

ಬೆಳಗಾವಿ: ಯಾವುದೇ ಸ್ಥಾನ ನೀಡಿದರೂ ನಾನು ನಿಭಾಯಿಸುವೆ. ಮಂತ್ರಿಗಿರಿಗಾಗಿ ಯಾವುದೇ ಲಾಭಿ ಮಾಡಲ್ಲ. ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾನು ಬದ್ಧ ಎಂದು ಅಥಣಿ ಶಾಸಕ ಮಹೇಶ್​ ಕುಮಟಳ್ಳಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೇ ಅಥಣಿ ತಾಲೂಕಿನ ಪ್ರವಾಹ ಸಂತ್ರಸ್ತರ ಎಲ್ಲ ಸಮಸ್ಯೆಗಳನ್ನೂ ಬಗೆಹರಿಸಲಾಗುವುದು. ಗ್ರಾಮಗಳ ಸ್ಥಳಾಂತರಕ್ಕೆ ಜಮೀನಿನ ಕೊರತೆ ಇದೆ. ಅದಕ್ಕಾಗಿ ಪುನರ್ವಸತಿ ಕಾರ್ಯ ವಿಳಂಬವಾಗುತ್ತಿದೆ. ಶೀಘ್ರದಲ್ಲೇ ವಿಶೇಷ ಪ್ರಕರಣದಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು …

Read More »

ಬೀದಿಯಲ್ಲಿ ಫೋಟೋ ಹಾಕಿ ಪೋಸ್ ಕೊಡುವ ಮೋದಿಗೆ ಲಸಿಕೆ ಪೂರೈಸುವ ಜ್ಞಾನವಿಲ್ಲವೆ : ಗುಂಡೂರಾವ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಭೀತಿ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿಯೇ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಟ್ವಿಟ್ಟರ್ ನಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ. ರಾಜ್ಯದ ಬಹುತೇಕ ಕಡೆ ಕೋವಿಡ್ ಲಸಿಕೆಯ ಅಭಾವವಿದೆ. ರಾಜ್ಯಗಳಿಗೆ ಅಗತ್ಯ ಪ್ರಮಾಣದ ಲಸಿಕೆ ಒದಗಿಸುವುದು ಕೇಂದ್ರದ ಜವಬ್ಧಾರಿ. ಆದರೆ ಕೇಂದ್ರ ಲಸಿಕೆ ಪೂರೈಸುವಲ್ಲಿ ವಿಫಲವಾಗಿದೆ‌ ಎಂದು ಕೇಂದ್ರದ ವಿರುದ್ಧ ಗುಡುಗಿದ್ದಾರೆ. ಲಸಿಕಾ ಅಭಿಯಾನದ ಬಗ್ಗೆ ಹಾದಿ ಬೀದಿಯಲ್ಲಿ ಫೋಟೋ ಹಾಕಿಕೊಂಡು ಪೋಸ್ ಕೊಡುವ …

Read More »

ಭೀಕರ ಅಪಘಾತ; ದುರ್ಘಟನೆ ಬಳಿಕ ಹೊತ್ತಿಕೊಂಡ ಬೆಂಕಿಯಿಂದ ಇಬ್ಬರು ಪಾರಾಗಿದ್ದೇ ಪವಾಡ

ತುಮಕೂರು: ಬೆಳ್ಳಂಬೆಳಗ್ಗೆ ಎರಡು ಲಾರಿಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪೊಲೀಸರ ಸಮಯ ಪ್ರಜ್ಞೆಯಿಂದ ಲಾರಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾದ ಘಟನೆ ಶಿರಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಳ್ಳಂಬೆಳ್ಳ ಬಳಿ ನಡೆದಿದೆ. ಬೆಂಗಳೂರು ಕಡೆ ತೆರಳುತ್ತಿದ್ದ ಸಿಮೆಂಟ್ ಪೈಪ್‌ಗಳನ್ನು ಹೊತ್ತಿದ್ದ ಲಾರಿ ಮತ್ತು ಕಟ್ಟಿಗೆ ತುಂಬಿದ ಲಾರಿ ಪರಸ್ಪರ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಪರಿಣಾಮ ಕಟ್ಟಿಗೆ ತುಂಬಿದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ …

Read More »

ಮೃತ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ನೆರವು ನೀಡಿದ ಬಿಎಸ್‌ವೈ

ಗುಂಡ್ಲುಪೇಟೆ: ಸಿಎಂ ಸ್ಥಾನಕ್ಕೆ ತಾವು ರಾಜೀನಾಮೆ ನೀಡಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಬೊಮ್ಮಲಾಪುರ ರವಿ ಅವರ ಕುಟುಂಬದವರಿಗೆ ಯಡಿಯೂರಪ್ಪ ಅವರು ಶುಕ್ರವಾರ ಸಾಂತ್ವನ ಹೇಳಿ ವೈಯಕ್ತಿಕವಾಗಿ 5 ಲಕ್ಷ ರೂ. ನೆರವು ನೀಡಿದರು. ರವಿ ಮನೆಗೆ ಶುಕ್ರವಾರ ಭೇಟಿ ನೀಡಿ ಕುಟುಂಬದವರಿಗೆ ಯಡಿಯೂರಪ್ಪ ಸಾಂತ್ವನ ಹೇಳಿದರು. ಮನೆಯವರು ಸಂಕಷ್ಟದಲ್ಲಿರುವುದನ್ನು ಅರಿತು ಮನೆ ನಿರ್ಮಾಣಕ್ಕೂ ಮುಂದೆ 5 ಲಕ್ಷ ರೂ. ನೆರವು ನೀಡುವುದಾಗಿ ಭರವಸೆ ನೀಡಿದರು. ಗುಂಡ್ಲುಪೇಟೆಗೆ ಹೆಲಿಕಾಪ್ಟರ್ ಮುಖಾಂತರ ಆಗಮಿಸಿದ್ದ …

Read More »

ಐ ಲವ್​ ಯೂ, ಯೂ ಮಸ್ಟ್​ ಲವ್​ ಮೀ ಅಂತ ಯುವತಿ ಮೇಲೆ ಹಲ್ಲೆ ಮಾಡಿದ ಮ್ಯಾನೇಜರ್​

ಬೆಂಗಳೂರ: ಪಿಜ್ಜಾಹಟ್​ನಲ್ಲಿ ಯುವತಿ ಮೇಲೆ ಹಲ್ಲೆ ನಡೆಸಿರೋ ಘಟನೆ ಬಸವನಗುಡಿಯ ರಾಮಕೃಷ್ಣ ಆಶ್ರಮದ ಬಳಿ ನಡೆದಿದೆ. ರಾಮಕೃಷ್ಣ ಆಶ್ರಮದ ರಸ್ತೆಯಲ್ಲಿರೋ ಪಿಜ್ಜಾ ಹಟ್ನಲ್ಲಿ ಮ್ಯಾನೇಜರ್​ ಯುವತಿಯ ಕಪಾಳಕ್ಕೆ ಮನಸೋ ಇಚ್ಚೆ ಥಳಿಸಿದ್ದಾನೆ ಅನ್ನೋ ಆರೋಪ ಕೇಳಿ ಬಂದಿದೆ. ಸಂತ್ರಸ್ತೆಯನ್ನ ಲವ್ ಮಾಡುವಂತೆ ಮ್ಯಾನೇಜರ್ ಪೀಡಿಸ್ತಿದ್ದ, ಆದ್ರೆ ಯುವತಿ ನಿರಾಕರಿಸಿ ಮತ್ತೊಬ್ಬ ಯುವಕನನ್ನ ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಷಯ ತಿಳಿದು ಯುವತಿ ಮೇಲೆ ಮ್ಯಾನೇಜರ್ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಅಲ್ಲದೇ, ಯುವತಿಗೆ …

Read More »

ರಸ್ತೆ ಅಪಘಾತ: ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಸಾವು

ಮಡಿಕೇರಿ : ಕಾರು ಅಪಘಾತದಲ್ಲಿ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರವೀಂದ್ರನ್ ಮೃತಪಟ್ಟಿರುವ ಘಟನೆ ಹುಣಸೂರು ಸಮೀಪದ ಚಿಲ್ಕುಂದ ಗ್ರಾಮದ ಸಮೀಪ ನಡೆದಿದೆ. ಕರ್ತವ್ಯಕ್ಕಾಗಿ ತಮ್ಮ ಕಾರಿನಲ್ಲಿ ಮೈಸೂರಿನಿಂದ ಸೋಮವಾರಪೇಟೆಗೆ ತೆರಳುತ್ತಿದ್ದ ಸಂದರ್ಭ ಚಿಲ್ಕುಂದ ಗ್ರಾಮದ ಸಮೀಪ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಪರಿಣಾಮ ತೀವ್ರಗಾಯ ಗೊಂಡಿದ್ದರು. ತಕ್ಷಣವೇ ಮೈಸೂರಿನ ಅಪಲೋ ಆಸ್ಪತ್ರೆಗೆ ಸಾಗಿಸಲಾಯಿತಾದರು ದಾರಿ ಮಧ್ಯೆ ಮೃತಪಟ್ಟಿದ್ದರು. ಜೊತೆಯಲ್ಲಿ ಪ್ರಯಾಣಿಸುತ್ತಿದ್ದ ತಂಗಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪತ್ನಿ …

Read More »

ಬೆಳಗಾವಿಯಲ್ಲೊಂದು ಡೆಡ್ಲಿ ಮರ್ಡರ್​.. ಕೇವಲ 2000 ರೂಪಾಯಿಗೇ ವೃದ್ಧನ ಹೆಣ

ಬೆಳಗಾವಿ: ದುಡಿದ 2000 ರೂಪಾಯಿಯನ್ನು ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಬ್ಲೇಡ್​ ನಿಂದ ಕುಯ್ದು ಕೊಲೆ ಮಾಡಿದ ಘಟನೆ ಜಿಲ್ಲೆಯಲ್ಲಿ ವರದಿಯಾಗಿದೆ. ಕೊಲೆಯಾದ ವ್ಯಕ್ತಿಯ ಹೆಸರು ಮಹಾದೇವ್ ಜಾಧವ. ವಯಸ್ಸು 55ವರ್ಷ. ಬೆಳಗಾವಿಯ ವಡಗಾಂವ ನಿವಾಸಿ. ಕಳೆದ ಹಲವು ವರ್ಷಗಳಿಂದ‌ ಗಾರೆ ಕೆಲಸ ಮಾಡಿಕೊಂಡಿದ್ದ ಇತ. ಇವತ್ತು ವಡಗಾಂವನ ಯಳ್ಳೂರು ರಸ್ತೆಯಲ್ಲಿ ಹೆಣವಾಗಿ ಬಿದ್ದಿದ್ದಾನೆ. ಹಾಡು ಹಗಲೇ ಜನ ಓಡಾಡುತ್ತಿರುವ ರಸ್ತೆಯಲ್ಲಿಯೇ ಕತ್ತು ಕೊಯ್ದು ಮಹಾದೇವ್​ನನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. …

Read More »

ಪದವಿ ಕಾಲೇಜುಗಳ ಪ್ರವೇಶಾತಿ ಹೆಚ್ಚಳ ನಿರೀಕ್ಷೆ

ಭದ್ರಾವತಿ: ಇಲ್ಲಿನ ಸರ್ಕಾರಿ ಪದವಿ ಕಾಲೇಜುಗಳು ವಿದ್ಯಾರ್ಥಿಗಳ ಪ್ರವೇಶಾತಿ ಕೊರತೆ ಎದುರಿಸುತ್ತಿದ್ದವು. ಆದರೆ, ಈ ಬಾರಿಯ ಪಿಯು ಫಲಿತಾಂಶ ಆ ಕೊರತೆಯನ್ನು ನೀಗಿಸುತ್ತಿದ್ದು, ಸದ್ಯ 400 ಪ್ರವೇಶಾತಿ ಅರ್ಜಿಗಳು ಖಾಲಿಯಾಗಿವೆ. ಈ ಬೆಳವಣಿಗೆ ಪ್ರವೇಶ ಹೆಚ್ಚಳದ ನಿರೀಕ್ಷೆ ಹುಟ್ಟಿಸಿದೆ. ತಾಲ್ಲೂಕಿನ ಸರ್ಕಾರಿ ಪದವಿ ಕಾಲೇಜುಗಳು ಸುಸಜ್ಜಿತ ಕಟ್ಟಡ, ಮೂಲ ಸೌಲಭ್ಯ, ಲೈಬ್ರರಿ, ಲ್ಯಾಬ್ ಸೇರಿ ಉತ್ತಮ ಅಧ್ಯಾಪಕ ವೃಂದ ಹಾಗೂ ಸ್ನಾತಕೋತ್ತರ ಪದವಿ ಕಾಲೇಜು ಹೊಂದಿದ್ದರೂ ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿದ್ದವು. …

Read More »

ಪ್ರವಾಸಿಗರಿಗೆ ಸುರಕ್ಷತೆಯ ಕೊರತೆ

ರಬಕವಿ ಬನಹಟ್ಟಿ: ತಾಲ್ಲೂಕಿನ ಹಿಪ್ಪರಗಿ ಜಲಾಶಯ ಈಗ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಪ್ರತಿನಿತ್ಯ ರಬಕವಿ ಬನಹಟ್ಟಿ, ಜಮಖಂಡಿ ಹಾಗೂ ಅಥಣಿ ತಾಲ್ಲೂಕಿನ ನೂರಾರು ಜನರು ವೀಕ್ಷಣೆ ಮಾಡಲು ಬರುತ್ತಿದ್ದಾರೆ. ಆದರೆ ಜಲಾಶಯದ ಸುತ್ತಮುತ್ತ ಯಾವುದೇ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದೆ ಇರುವುದರಿಂದ ಅಪಾಯಕ್ಕೆ ಆಹ್ವಾನ ನೀಡಿದಂತಾಗಿದೆ. ವೀಕ್ಷಣೆ ಮಾಡಲು ಬಂದ ಜನರು ಜಲಾಶಯದ ಎಲ್ಲ ಕಡೆಗೂ ಓಡಾಡುತ್ತಾರೆ. ಇಲ್ಲಿ ಹಾಕಲಾದ ಕಬ್ಬಿಣ …

Read More »