Breaking News

Daily Archives: ಆಗಷ್ಟ್ 9, 2021

ಪೈಪ್​ಗೆ ಬಳಸುವ ಸಲ್ಯೂಷನ್ ಇಟ್ಟಿದ್ದ ಮನೆಯಲ್ಲಿ ಬೆಂಕಿ; ಓರ್ವನ ಸ್ಥಿತಿ ಗಂಭೀರ

ಬೆಂಗಳೂರು: ಪಿವಿಸಿ ಪೈಪ್​ಗೆ ಬಳಸುವ ಸಲ್ಯೂಷನ್ ಇಟ್ಟಿದ್ದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ಲಗ್ಗೆರೆ ಬಳಿಯ ಮನೆಯಲ್ಲಿ ಪೈಪ್​ಗಳನ್ನು ಇಟ್ಟು ರೀಫಿಲಿಂಗ್ ಮಾಡಲಾಗುತ್ತಿತ್ತು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ (Fire) ನಂದಿಸಿದ್ದು, ಈ ಸಂಬಂಧ ರಾಜಗೋಪಾಲ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನೊಯ್ಡಾ: ಹೊತ್ತಿ ಉರಿದ ಬ್ಯಾಗ್​ ತಯಾರಿಕಾ ಕಾರ್ಖಾನೆ ನೊಯ್ಡಾದ ಸೆಕ್ಟರ್​ 63 ಪ್ರದೇಶದಲ್ಲಿ …

Read More »

ಗೋಕರ್ಣ: ಸಮುದ್ರದಲ್ಲಿ ಈಜಲು ಹೋದ ಯುವಕ ನಾಪತ್ತೆ

ಕಾರವಾರ: ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಸಮುದ್ರದಲ್ಲಿ ಈಜಲು ಹೋಗಿದ್ದ ಯುವಕ ನಾಪತ್ತೆಯಾಗಿದ್ದಾನೆ. ಬೆಂಗಳೂರು ನಗರದ ಬಿಟಿಎಂ ಲೇಔಟ್ ನಿವಾಸಿ ಅರುಣ ಲಕ್ಕಪ್ಪ (22) ನೀರಿನಲ್ಲಿ ಮುಳಗಿ ನಾಪತ್ತೆಯಾದ ಯುವಕ. ಒಟ್ಟು ಎಂಟು ಜನ ಸ್ನೇಹಿತರೊಂದಿಗೆ ಈತ ಪ್ರವಾಸಕ್ಕಾಗಿ ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದಿದ್ದ. ಸ್ಥಳೀಯ ಜನರ ಎಚ್ಚರಿಕೆ ನಡುವೆಯೂ ಎಂಟು ಜನ ಈಜಲು ಸಮುದ್ರಕ್ಕೆ ಇಳಿದಿದ್ದರು.ಅಲೆಯ ಅಬ್ಬರಕ್ಕೆ ಇಬ್ಬರು ಕೊಚ್ಚಿಹೋಗಿದ್ದರು. ಈ ವೇಳೆ ಓರ್ವನನ್ನು ಲೈಫ್ ಗಾರ್ಡ ಹಾಗೂ ಸ್ಥಳೀಯರ …

Read More »

ವ್ಯಕ್ತಿಯ ಸಾವಿನ ನಂತರ ಆಧಾರ್ ಸಂಖ್ಯೆಯನ್ನ ಸರ್ಕಾರ ಏನು ಮಾಡುತ್ತೆ…? ಇಲ್ಲಿದೆ ಮಾಹಿತಿ

ಆಧಾರ್ ಕಾರ್ಡ್ ಅಗತ್ಯ ದಾಖಲೆಯಾಗಿದೆ. ಸರ್ಕಾರಿ ಯೋಜನೆ ಲಾಭ ಸೇರಿದಂತೆ ಖಾಸಗಿಯ ಕೆಲ ಸೇವೆಗಳಿಗೆ ಈಗ ಆಧಾರ್ ಕಡ್ಡಾಯವಾಗಿದೆ. ಕೊರೊನಾ ಲಸಿಕೆಯನ್ನು ಪಡೆಯುವ ಸಂದರ್ಭದಲ್ಲಿ ಆಧಾರ್​ ಕಾರ್ಡ್​ ಅತ್ಯಗತ್ಯ. ಆಧಾರ್ ಕಾರ್ಡ್ ಪಡೆದ ವ್ಯಕ್ತಿ ಸಾವನ್ನಪ್ಪಿದ್ರೆ ಆತನ ಆಧಾರ್ ಏನಾಗುತ್ತದೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುವುದು ಸಹಜ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಲೋಕಸಭೆಯಲ್ಲಿ ಇತ್ತಿಚೆಗೆ ಸವಿಸ್ತಾರವಾಗಿ ಹೇಳಿದ್ದಾರೆ. ಅವರು ಹೇಳುವ ಪ್ರಕಾರ, ವ್ಯಕ್ತಿಯ …

Read More »

ತೋಟಗಾರಿಕೆ ಖಾತೆ ತೃಪ್ತಿ ತಂದಿದೆ : ಸಚಿವ ಮುನಿರತ್ನ

ತುಮಕೂರು,ಆ.9-ನನಗೆ ಕೊಟ್ಟಿರಿವ ತೋಟಗಾರಿಕೆ ಖಾತೆ ತೃಪ್ತಿ ತಂದಿದೆ, ಬೇರೆ ಪಕ್ಷದಿಂದ ಬಿಜೆಪಿಗೆ ಬಂದು ಸಚಿವನಾಗಿದ್ದೇನೆ ಎಂದು ಮುನಿರತ್ನ ತಿಳಿಸಿದ್ದಾರೆ. ಸಿದ್ಧಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಸಿದ್ದಲಿಂಗ ಸ್ವಾಮೀಜಿಗಳ ಆಶಿರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅನ್ಯ ಪಕ್ಷದಿಂದ ಬಿಜೆಪಿಗೆ ಬಂದು ನಂತರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದೇನೆ.   ಪಕ್ಷದ ವರಿಷ್ಠರು ನಮಗೆ ಜವಾಬ್ದಾರಿ ನೀಡಿದ್ದಾ. ಅದನ್ನು …

Read More »

ಬೊಮ್ಮಾಯಿ, ಯಡಿಯೂರಪ್ಪನವರ ರಬ್ಬರ್ ಸ್ಟ್ಯಾಂಪ್​-ಸಿದ್ದರಾಮಯ್ಯ

ಬೆಂಗಳೂರು: ಯಡಿಯೂರಪ್ಪ ಒಬ್ಬ ಭ್ರಷ್ಟ ಮುಖ್ಯಮಂತ್ರಿ. ಈಗ ಅವರು‌ ಹೋಗಿ ಬೊಮ್ಮಾಯಿ ಬಂದಿದ್ದಾರೆ. ಇವರು ಯಡಿಯೂರಪ್ಪನವರ ರಬ್ಬರ್ ಸ್ಟ್ಯಾಂಪ್​. ಇವರಿಂದ ಇನ್ನೇನು ‌ನಿರೀಕ್ಷೆ ಮಾಡಲು ಸಾಧ್ಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಯಡಿಯೂರಪ್ಪನವರ ಪ್ರಾಕ್ಸಿ ಇದ್ದಂಗೆ. ಈಗ ಕಾಲ ಕೂಡಿ ಬಂದಿದೆ. ಹೀಗಾಗಿ ನಾವೆಲ್ಲರೂ ಹೋರಾಟ ಮನೋಭಾವದಿಂದ ಒಟ್ಟಾಗಿ ಕೆಲಸ ಮಾಡಬೇಕು. ಹಾಗಾದಾಗ ಮಾತ್ರ ಬಿಜೆಪಿಯನ್ನು …

Read More »

ಇಡಿ ದಾಳಿ: ನಂಗೆ ಎಚ್‌ಡಿಕೆ ಮೇಲೆಯೇ ಡೌಟ್; ಜಮೀರ್ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.​ಡಿ ಕುಮಾರಸ್ವಾಮಿ ಯಾಕೆ ಹಾಗೆ ಹೇಳಿದರು. ಎಲ್ಲೋ ಒಂದು ಕಡೆ ಅವರೇ ಜಾರಿ ನಿರ್ದೇಶನಾಲಯ (ಇಡಿ)ಗೆ ಮಾಹಿತಿ ಕೊಟ್ಟಿರಬಹುದು ಅಂತ ಡೌಟ್​ ಶುರುವಾಗಿದೆ ಎಂದು ಕಾಂಗ್ರೆಸ್​ ಶಾಸಕ ಜಮೀರ್ ಅಹಮ್ಮದ್ ಹೇಳಿದ್ದಾರೆ. ತಮ್ಮ ನಿವಾಸದ ಮೇಲೆ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಬೆಳವಣಿಗೆ ಸಹಿಸಲಾಗದೆ ದಾಳಿ ಮಾಡಿಸಿದ್ದಾರೆ. ನಾನು ಈ ಹಿಂದೆ ಇದ್ದ …

Read More »

ಮಾಜಿ ಮುಖ್ಯ ಮಂತ್ರಿ ಅವರ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ

ಹುಬ್ಬಳ್ಳಿ: ನಗರದ ಕೇಶ್ವಾಪುರದ ಬಾದಾಮಿ ನಗರದಲ್ಲಿ‌ನ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನಿವಾಸಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶನಿವಾರ ಸಂಜೆ ಭೇಟಿ ನೀಡಿಗುಪ್ತ ಗುಪ್ತ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರ ಸಂಪುಟದಿಂದ ದೂರ ಉಳಿಯುವ ಮೂಲಕ ಮಾಜಿ ಮುಖ್ಯಮಂತ್ರಿಗಳು ಶಾಸಕರಾದ ಜಗದೀಶ್ ಶೆಟ್ಟರ್ ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದರು. ನಂತರದ ದಿನಗಳಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆ ನಡೆಯುತಿದ್ದು ಒಂದು …

Read More »

ಸೋತ ವ್ಯಕ್ತಿಯನ್ನ ಡಿಸಿಎಂ ಮಾಡಿದರು, ಈಗ ಯಾವುದೇ ಬೇಸರ ಇಲ್ಲ: ಲಕ್ಷ್ಮಣ ಸವದಿ

ಚಿಕ್ಕೋಡಿ: ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಲಕ್ಷ್ಮಣ ಸವದಿಯನ್ನ ಕೈ ಬಿಟ್ಟಿದ್ದಾರೆ. ಇದೇ ವಿಚಾರವಾಗಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಸಂಪುಟದಿಂದ ತನ್ನನ್ನ ಕೈ ಬಿಟ್ಟಿದ್ದಕ್ಕೆ ಯಾವುದೇ ಬೇಸರ ಇಲ್ಲ ಎಂದಿದ್ದಾರೆ. ಸೋತಂತಹ ವ್ಯಕ್ತಿಯನ್ನು ಡಿಸಿಎಮ್ ಮಾಡಿದ್ದಾರೆ, ಸಚಿವನನ್ನಾಗಿ ಮಾಡಿ ನನಗೆ ಒಳ್ಳೆಯ ಸ್ಥಾನಮಾನವನ್ನ ಪಕ್ಷ ನೀಡಿದೆ. ಈಗ ಬೇಸರ ಮಾಡಿಕೊಳ್ಳುವ ಪ್ರಶ್ನೆಯೇ ಬರಲ್ಲ ಎಂದಿದ್ದಾರೆ. ಕೆಲವೊಮ್ಮೆ ಮತ್ತೊಬ್ಬರಿಗೆ ಅವಕಾಶ ಕೊಡುವುದಕ್ಕಾಗಿ ಅವಧಿ …

Read More »

ಮತ್ತೂಂದು ಸುತ್ತಿನ ಒತ್ತಡ ತಂತ್ರಗಾರಿಕೆಗೆ ಮುಂದಾದರೇ ರಮೇಶ ಜಾರಕಿಹೊಳಿ?

ಹುಬ್ಬಳ್ಳಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಮತ್ತೂಂದು ಸುತ್ತಿನ ಒತ್ತಡ ತಂತ್ರಕ್ಕೆ ಮುಂದಾಗಿದ್ದಾರೆಯೇ? ಅವರ ಚಲನವಲನ ಗಮನಿಸಿದರೆ ಅಂತಹ ಅನುಮಾನ ಮೂಡುತ್ತದೆ. ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಂದಿನ ಇಡೀ ವಿದ್ಯಮಾನ ತಮ್ಮ ಸುತ್ತಲೇ ಸುತ್ತುವಂತೆ ಮಾಡಿಕೊಂಡಿದ್ದ ರಮೇಶ ಜಾರಕಿಹೊಳಿ, ಪ್ರಕರಣವೊಂದರಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರದಲ್ಲಿ ಕೆಲ ದಿನಗಳವರೆಗೆ ಮೌನವಾಗಿದ್ದರು. ಬಳಿಕ ಒಂದಿಷ್ಟು ಚಟುವಟಿಕೆಗಳಿಗೆ ಮುಂದಾಗಿದ್ದರು. ಸಚಿವ …

Read More »

ಬಿಜೆಪಿ ಭಿನ್ನಮತ ನಿಲ್ಲುವ ಲಕ್ಷಣ ಕಾಣುತ್ತಿಲ್ಲ

ಬೆಂಗಳೂರು,ಆ.9- ಮಳೆ ನಿಂತರೂ ಮರದ ಹನಿ ನಿಲ್ಲಲಿಲ್ಲ ಎಂಬಂತೆ ಸಂಪುಟ ವಿಸ್ತರಣೆಯಾಗಿ ಖಾತೆಗಳು ಹಂಚಿಕೆಯಾಗಿದ್ದರೂ ಆಡಳಿತಾರೂಢ ಬಿಜೆಪಿಯಲ್ಲಿ ಭಿನ್ನಮತ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ನಿರೀಕ್ಷಿತ ಖಾತೆ ಸಿಗದಿರುವುದು ಒಂದು ಕಡೆಯಾದರೆ ಮತ್ತೊಂದು ಕಡೆ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರನ್ನು ಸಂಬಾಳಿಸುವುದೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ತಲೆ ನೋವಾಗಿ ಪರಿಣಮಿಸಿದೆ. ಅಸಮಾಧಾನಗೊಂಡಿರುವ ಸಚಿವರಾದ ಆನಂದ್ ಸಿಂಗ್, ಎಂಟಿಬಿ ನಾಗರಾಜ್, ವಿ.ಸೋಮಣ್ಣ, ಶ್ರೀರಾಮುಲು ಮತ್ತಿತರರು ಎಲ್ಲವೂ ಸರಿ ಹೋಗಿದೆ ಎಂದು …

Read More »