Breaking News

Daily Archives: ಆಗಷ್ಟ್ 10, 2021

ಚಿತ್ರೀಕರಣದ ವೇಳೆ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಕೂದಲೆಳೆ ಅಂತರದಲ್ಲಿ ದೊಡ್ಡ ಅಪಾಯದಿಂದ ಪಾರಾಗಿದ್ದಾರೆ ಪ್ರಕಾಶ್ ರೈ

ಹೈದರಾಬಾದ್: ನಟ ಪ್ರಕಾಶ್ ರೈ ಚಿತ್ರೀಕರಣದ ವೇಳೆ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಕೂದಲೆಳೆ ಅಂತರದಲ್ಲಿ ದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಶಸ್ತ್ರಚಿಕಿತ್ಸೆಗಾಗಿ ಹೈದರಾಬಾದ್‍ಗೆ ತೆರಳುತ್ತಿದ್ದಾರೆ. ತಮಿಳು ನಟ ಧನುಷ್ ಅಭಿನಯದ ಚಿತ್ರದಲ್ಲಿ ಪ್ರಕಾಶ್ ರೈ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ತಿರುಚಿತ್ರಾಂಬಲಂ’ ಚಿತ್ರದ ಶೂಟಿಂಗ್ ಚೆನ್ನೈನಲ್ಲಿ ನಡೆಯುತ್ತಿದೆ. ಕಳೆದ ವಾರದಿಂದ ಚಿತ್ರೀಕರಣದಲ್ಲಿ ಪ್ರಕಾಶ್ ರೈ ಪಾಲ್ಗೊಂಡಿದ್ದಾರೆ. ಇಂದು ಚಿತ್ರೀಕರಣದ ವೇಳೆ ಆಯಾತಪ್ಪಿ ಬಿದ್ದ ಪ್ರಕಾಶ್ ರೈ ಗಾಯಗೊಂಡರು. ಕೂಡಲೆ ಚೆನ್ನೈನ ಆಸ್ಪತ್ರೆಯಲ್ಲಿ …

Read More »

ಮರೆಯದೆ ಕ್ಷಮಿಸು” ಚಿತ್ರದ ಹಾಡುಗಳ ಮೆರವಣಿಗೆ ಆರಂಭ!

ಕೆಂಡಸಂಪಿಗೆ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ರಚಿಸಿದ್ದ, “ಮರೆಯದೆ ಕ್ಷಮಿಸು” ಹಾಡು ಜನಪ್ರಿಯ ವಾಗಿದೆ. ಈಗ ಆ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿದ್ದು, ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ಕಲಾವಿದರ ಸಂಘದಲ್ಲಿ ನೆರವೇರಿತು. ನಟ ಶ್ರೀನಗರ ಕಿಟ್ಟಿ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಆಡಿಯೋ ರಿಲೀಸ್ ಮಾಡಿದರು. ಚಿತ್ರತಂಡಕ್ಕೆ ಶುಭ ಕೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್, ಡಿಸಿಪಿ ಮಂಜುನಾಥ್ …

Read More »

ಕಲರ್ಸ್ ಕನ್ನಡದಲ್ಲಿ ಆ.14ರಿಂದ ‘ಎದೆ ತುಂಬಿ ಹಾಡುವೆನು’ ಪ್ರಸಾರ

ಬೆಂಗಳೂರು: ಹಲವಾರು ವರ್ಷಗಳಿಂದ ಈಟಿವಿಯಲ್ಲಿ ಪ್ರಸಾರ ಆಗುತ್ತಿದ್ದ ಜನಪ್ರಿಯ ಸಂಗೀತ ಸ್ಪರ್ಧಾ ಸರಣಿ ‘ಎದೆತುಂಬಿ ಹಾಡುವೆನು’ ಕಲರ್ಸ್ ಕನ್ನಡದಲ್ಲಿ ಆಗಸ್ಟ್ 14ರಿಂದ ಪ್ರಸಾರ ಆಗಲಿದೆ. ಈಟಿವಿಯಲ್ಲಿ ಅಂದು ಎಸ್.ಪಿ. ಬಾಲಸುಬ್ರಮಣ್ಯಂ ಅವರು ನಡೆಸಿಕೊಡುತ್ತಿದ್ದ ಕಾರ್ಯಕ್ರಮ ಇದು. ಈಗ ದಿವಂಗತ ಎಸ್.ಪಿ.ಬಿ. ಅವರ ಜಾಗದಲ್ಲಿ ರಾಜೇಶ್ ಕೃಷ್ಣನ್, ವಿ.ಹರಿಕೃಷ್ಣ ಹಾಗೂ ರಘು ದೀಕ್ಷಿತ್ ಈ ಕಾರ್ಯಕ್ರಮದ ತೀರ್ಪುಗಾರರಾಗಿ ಇರುತ್ತಾರೆ. ವಿಶೇಷ ತೀರ್ಪುಗಾರರಾಗಿ ಎಸ್‌ಪಿಬಿ ಅವರ ಪುತ್ರ ಎಸ್.ಪಿ. ಚರಣ್ ಇರುತ್ತಾರೆ. ಈಗಾಗಲೇ …

Read More »

ಕ್ಯಾಸಿನೊ ಆರಂಭಿಸುವ ಬಗ್ಗೆ ಸರ್ಕಾರ ಯೋಚಿಸಿಲ್ಲ : ಗೋವಾ ಸಿಎಂ ಸಾವಂತ್

ಪಣಜಿ : ಗೋವಾದಲ್ಲಿ ಕೊವಿಡ್ ಎರಡನೇಯ ಅಲೆಯ ವೇಗ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಆದರೆ ರಾಜ್ಯದಲ್ಲಿ ಕ್ಯಾಸಿನೊ ಆರಂಭಿಸುವ ಕುರಿತಂತೆ ಸರ್ಕಾರ ಇದುವರೆಗೂ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕ್ಯಾಸಿನೊ ಆರಂಭಿಸುವ ಬಗ್ಗೆ ಸರ್ಕಾರ ಇದುವರೆಗೂ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಕೋವಿಡ್ ಎರಡನೇಯ ಅಲೆ ನಿಯಂತ್ರಿಸುವಲ್ಲಿ ಸರ್ಕಾರಕ್ಕೆ ಯಶಸ್ವಿಯಾಗುವ ಮಾರ್ಗದಲ್ಲಿದೆ. ರಾಜ್ಯದಲ್ಲಿ …

Read More »

ಕತ್ತಿಗೆ ಕೈಹಾಕಿ ಸರಗಳ್ಳತನ; ವೃದ್ಧೆಯ 2 ಲಕ್ಷ ರೂ. ಬೆಲೆಬಾಳುವ ಮಾಂಗಲ್ಯ ಸರ ಎಗರಿಸಿದ ಸರಗಳ್ಳರು

ಬೆಂಗಳೂರು: ಮನೆ ಬಳಿ ನಿಂತಿದ್ದ ವೃದ್ಧೆಯ ಮಾಂಗಲ್ಯ ಸರ ಎಗರಿಸಿದ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಸಾಸುವೆಘಟ್ಟದ ಬಳಿ ನಡೆದಿದೆ. 2 ಲಕ್ಷ ರೂಪಾಯಿ ಬೆಲೆಬಾಳುವ ಗಂಗಮ್ಮ(60) ನವರ ಮಾಂಗಲ್ಯ ಸರವನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಡಿಯೋ ಬೈಕ್​ನಲ್ಲಿ ಬಂದಿದ್ದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ …

Read More »

ಅಂತಾರಾಜ್ಯ ಡ್ರಗ್ಸ್‌ ಪೆಡ್ಲರ್‌ ಗಳ ಬಂಧನ

ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರಿಗೆ ಗಾಂಜಾ, ಎಂಡಿಎಂಎ ಸೇರಿ ವಿವಿಧ ಮಾದರಿಯ ಡ್ರಗ್ಸ್‌ಗಳನ್ನು ತಂದು ನಗರದಲ್ಲಿ ವಿದ್ಯಾರ್ಥಿಗಳು,ಟೆಕ್ಕಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಪೆಡ್ಲರ್‌ ಗಳನ್ನು ಪಶ್ಚಿಮ ವಿಭಾಗದ ಸಿ.ಟಿ.ಮಾರು ಕಟ್ಟೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಪಪ್ಪುರಾಮ್‌ ಅಲಿಯಾಸ್‌ ಪಪ್ಪು (20), ಚುನ್ನಿಲಾಲ್‌ ಅಲಿಯಾಸ್‌ ಸುನೀಲ್‌ (20) ಬಂಧಿತರು. ಇಬ್ಬರು ಅತ್ತಿಬೆಲೆಯಲ್ಲಿ ವಾಸವಾಗಿದ್ದರು. ಆರೋಪಿಗಳಿಂದ ಎರಡು ಕೋಟಿ ರೂ. ಮೌಲ್ಯದ ಒಂದುಕೆ.ಜಿ.820 ಗ್ರಾಂ ಬ್ರೌನ್‌ ಶುಗರ್‌, 859 ಗ್ರಾಂ ಎಂಡಿಎಂಎ, …

Read More »

ರಾಜ್ಯದ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಕೇಂದ್ರ ಸಚಿವರಿಗೆ ಬಿ.ಸಿ.ಪಾಟೀಲ್ ಮನವಿ

ನವದೆಹಲಿ/ಬೆಂಗಳೂರು: ಕೃಷಿ ಸಚಿವಬಿ.ಸಿ.ಪಾಟೀಲ್ ನವದೆಹಲಿಯಲ್ಲಿ ಮಂಗಳವಾರ ಕೇಂದ್ರದ ರಾಜ್ಯ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಕೇಂದ್ರದ ರಾಜ್ಯ ರಾಸಾಯನಿಕ ಸಚಿವ ಭಗವಂತ್ ಖೂಬಾ ಅವರನ್ನು ಭೇಟಿ ಮಾಡಿ, ರಾಜ್ಯದ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಮಾಡಿದರು. ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆ ಮೀರಿ ಸುಮಾರು 77 ಲಕ್ಷ ಹೆಕ್ಟೇರ್ ದಾಖಲೆಯ ಪ್ರಮಾಣದಷ್ಟು ಬಿತ್ತನೆ ಆಗಿತ್ತು. ಈ ಬಾರಿಯೂ ಕೂಡ ಬೇಗನೇ ಬಿತ್ತನೆಯಾಗಿದ್ದು,ಕೃಷಿ ಚಟುವಟಿಕೆ ಚುರುಕು ಪಡೆದಿದೆ. …

Read More »

ನನಗೆ ವಯಸ್ಸಾದ ಕಾರಣ ರಾಜಕೀಯ ಬಿಟ್ಟಿರುವೆ: ಮಾಜಿ ಸಿಎಂ ಎಸ್.ಎಂ ಕೃಷ್ಣ

ಮದ್ದೂರು : ನನಗೆ ವಯಸ್ಸಾಗಿದೆ ಆದ ಕಾರಣ ರಾಜಕಾರಣವನ್ನು ಬಿಟ್ಟಿದ್ದೇನೆ ಹಾಗೂ ರಾಜಕಾರಣದಿಂದ ದೂರವಿದ್ದು, ಬಹಳ ವರ್ಷವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್ ಎಂ ಕೃಷ್ಣ ರವರು ತಿಳಿಸಿದರು. ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಉಗ್ರನರಸಿಂಹಸ್ವಾಮಿ ದೇವಸ್ಥಾನ ಹಾಗೂ ತಾಲ್ಲೂಕಿನ ಶ್ರೀ ವೈಧ್ಯನಾಥೇಶ್ವರ ದೇವಸ್ಥಾನಗಳಿಗೆ ಬೇಟಿ ನೀಡಿ ದೇವರ ದರ್ಶನ ಪಡೆದ 89 ವರ್ಷ ವಯಸ್ಸಿನ ಎಸ್‌ಎಂ ಕೃಣ್ಣ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸುಮಾರು …

Read More »

ಲೋಳಸೂರ ಕೆಳಗಿನ ಸೇತುವೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ನಿರಂತರ ಮಳೆ ಹಾಗೂ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಜತ್ತ-ಜಾಂಬೋಟಿ (ರಾಹೆ-31) ರಸ್ತೆಯ ಲೋಳಸೂರ ಸೇತುವೆ ಮಾರ್ಗದ ಬದಲಿ ರಸ್ತೆಯನ್ನು ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಲೋಳಸೂರ ಸೇತುವೆಯ ಪಕ್ಕದಲ್ಲಿರುವ ಹಳೆಯ ಸೇತುವೆ ಮಾರ್ಗದಲ್ಲಿ ಅನುಕೂಲ ಕಲ್ಪಿಸಿಕೊಡಲಾಗಿದ್ದು, ಕಾರು, ಬೈಕ್‍ಗಳ ಸಂಚಾರಕ್ಕೆ ಮಾತ್ರ ರಸ್ತೆ ಸಂಚಾರವನ್ನು ಆರಂಭಿಸಲಾಗಿದೆ ಎಂದು ಹೇಳಿದರು. …

Read More »

ಗೃಹ ಇಲಾಖೆ ಬಲವರ್ಧನೆಗೆ ಪ್ರಯತ್ನ: ಆರಗ ಜ್ಞಾನೇಂದ್ರ

ಬೆಂಗಳೂರು: ಸಿಬ್ಬಂದಿ ಕೊರತೆಯನ್ನು ಪರಿಹರಿಸಿ, ಆಧುನೀಕರಣಕ್ಕೆ ಒತ್ತು ನೀಡುವ ಮೂಲಕ ಗೃಹ ಇಲಾಖೆಯ ಬಲವರ್ಧನೆಗೆ ಪ್ರಯತ್ನಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಗೃಹ ಸಚಿವರಾದ ಬಳಿಕ ಸೋಮವಾರ ವಿಕಾಸಸೌಧದಲ್ಲಿ ಮೊದಲ ಬಾರಿಗೆ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಐಪಿಎಸ್‌ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮೊದಲ ಬಾರಿಗೆ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಪೊಲೀಸರನ್ನು ನಂಬಿ ಜನರು ನೆಮ್ಮದಿಯಿಂದ …

Read More »