Breaking News
Home / 2021 / ಆಗಷ್ಟ್ / 13 (page 2)

Daily Archives: ಆಗಷ್ಟ್ 13, 2021

ರಾಜ್ಯದಲ್ಲಿ ಶಾಲೆ ಆರಂಭಕ್ಕೂ ಮುನ್ನವೇ ಪೋಷಕರಿಗೆ ಬಿಗ್ ಶಾಕ್ : ಬೆಂಗಳೂರಿನಲ್ಲಿ 500 ಕ್ಕೂ ಹೆಚ್ಚು ಮಕ್ಕಳಲ್ಲಿ ಕೊರೊನಾ ಸೋಂಕು

ಬೆಂಗಳೂರು : ಶಾಲಾ ಆರಂಭದ ನಿರೀಕ್ಷೆಯಲ್ಲಿ ಶಾಲಾ ಮಕ್ಕಳ ಪೋಷಕರಿಗೆ ಬಿಗ್ ಶಾಕ್ ವೊಂದು ಎದುರಾಗಿದ್ದು, ಬೆಂಗಳೂರಿನಲ್ಲಿ ಮಕ್ಕಳಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಆಗಸ್ಟ್ ಮೊದಲ ಎರಡು ವಾರಗಳಲ್ಲಿ ಸುಮಾರು 500 ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.   ಆಗಸ್ಟ್ 23 ರಿಂದ 9-12 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಮತ್ತೆ ತೆರೆಯಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.ಈ ಹೊತ್ತಲ್ಲೇ ಮಕ್ಕಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿರುವುದು ಆತಂಕ …

Read More »

ಮದುವೆಯಾದ ಬಳಿಕ ಬಲವಂತದ ಸೆಕ್ಸ್ : ಇದನ್ನು ಕಾನೂನು ಬಾಹಿರ ಎನ್ನಲಾಗುವುದಿಲ್ಲ ಎಂದ ಮುಂಬೈ ಕೋರ್ಟ್

ಮುಂಬೈ : ಮುಂಬೈ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಸಂಜಾಶ್ರೀ ಜೆ ಘರಾತ್ ಅವರು ‘ ಪತಿ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಸಂಭೋಗ ಮಾಡಿದ್ದಾರೆ ಎಂದು ಆರೋಪಿಸಿದ ಮಹಿಳೆಯ ದೂರು ಕಾನೂನು ಪರಿಶೀಲನೆಗೆ ನಿಲ್ಲುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ನ್ಯಾಯಾಧೀಶರು ಆರೋಪಿಯು ‘ಪತಿಯಾಗಿರುವುದರಿಂದ ಅವನು ಯಾವುದೇ ಕಾನೂನುಬಾಹಿರ ಕೆಲಸವನ್ನು ಮಾಡಿದ್ದಾನೆ ಎಂದು ಹೇಳಲಾಗುವುದಿಲ್ಲ’ ಎಂದು ಹೇಳಿದರು. ಪ್ರಾಸಿಕ್ಯೂಷನ್ ಪ್ರಕಾರ, ಮಹಿಳೆ ಕಳೆದ ವರ್ಷ ನವೆಂಬರ್ ೨೨ ರಂದು ವಿವಾಹವಾದರು. ಮದುವೆಯ ನಂತರ, ತನ್ನ …

Read More »

ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ನಿರ್ವಾಹಕರೇ ಗಾಂಜಾ ಮಾರಾಟ ಮಾಡುತಿದ್ದ ಪ್ರಕರಣ ಪತ್ತೆ ; ಇಬ್ಬರ ಬಂಧನ

ಬೆಂಗಳೂರು: ಕೆಎಸ್‌ಆರ್​ಟಿಸಿ ಬಸ್ಸುಗಳಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಎಂಬುವವರೇ ಬಂಧಿತರು ಬಂಧಿತರಿಂದ 9.800 ಕೆಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕಳೆದ ಮೂರು ವರ್ಷಗಳಿಂದ ಕೆಂಗೇರಿ ಬಳಿ ತುರಹಳ್ಳಿ ಅರಣ್ಯ ಪ್ರದೇಶದಲ್ಲಿಯೂ ಗಾಂಜಾ ಮಾರಾಟ ಮಾಡುತ್ತಿದ್ದರು. ಬಂಧಿತರು ವಿಜಯಪುರ, ಕಲಬುರಗಿಯಿಂದ ಗಾಂಜಾ ತಂದು ಮಾರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಿಎಂಟಿಸಿ …

Read More »

ಸಿ. ಟಿ. ರವಿಯವರ ಹುಚ್ಚು ಅಂತಿಮ ಹಂತ ತಲುಪಿದೆ : ದಿನೇಶ್ ಗುಂಡೂರಾವ್

ಬೆಂಗಳೂರು : ಇಂದಿರಾ ಗಾಂಧಿಯವರ ಬಗ್ಗೆ ವಿವಾದತ್ಮಕ ಹೇಳಿಕೆ ಶಾಸಕ ಸಿ.ಟಿ ರವಿ ವಿರುದ್ಧ ಕಾಂಗ್ರೆಸ್‌ ನಾಯಕರು ಸಿಡಿದೆದ್ದಿದ್ದಾರೆ. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಸಿ.ಟಿ.ರವಿ ಒಣ ಪೌರುಷ ತೋರಿಸುತ್ತಿದ್ದಾರೆ. ಬಿಜೆಪಿಯವಗೆ ಜನರಿಗೆ ಅನುಕೂಲವಾಗುವ ಒಂದೇ ಒಂದು ಯೋಜನೆ ತರುವ ಯೋಗ್ಯತೆಯಿಲ್ಲ. ಸಿ.ಟಿ.ರವಿಯವರಿಗೆ ತಾಕತ್ತಿದ್ದರೆ ಇಂದಿರಾ ಕ್ಯಾಂಟೀನ್ ಮಾದರಿಯಲ್ಲೇ ಇನ್ನೊಂದು ಯೋಜನೆ ಜಾರಿ ಮಾಡಿಸಲಿ. ಆ ಯೋಜನೆಗೆ ‘ಗೋಡ್ಸೆ’ ಹೆಸರನ್ನು ಬೇಕಾದರೂ ಇಟ್ಟುಕೊಳ್ಳಲಿ. ಬೇಡ ಎನ್ನುವವರು ಯಾರು.? ಎಂದು …

Read More »

ಈಗಲೂ ವಿಜಯೇಂದ್ರ ಹಸ್ತಕ್ಷೇಪ: ಯತ್ನಾಳ್‌

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ನೆರಳು ಆಗವುದಿಲ್ಲ ಎಂಬ ವಿಶ್ವಾಸವಿದೆ. ಅವರು ನೆರಳಾಗಿದ್ದರೆ ಯಡಿ ಯೂರಪ್ಪ ಅವರು ನೇಮಕ ಮಾಡಿದ ಸಿಬಂದಿಯೇ ಮುಂದುವರಿಯುತ್ತಿದ್ದರು. ಆದರೆ ವಿಜಯೇಂದ್ರ ಅವರು ಈಗಲೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಳಿಕ ಯಡಿಯೂರಪ್ಪ ಒತ್ತಡದಿಂದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ …

Read More »

ಸರಕಾರದ ವಿರುದ್ಧ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಧರಣಿ

ಬೆಂಗಳೂರು: ರಾಜ್ಯ ಸರಕಾರದ ವಿರುದ್ಧ ಬಿಜೆಪಿಯ ಮೂಡಿಗೆರೆಯ ಶಾಸಕ ಎಂ.ಪಿ. ಕುಮಾರಸ್ವಾಮಿ ವಿಧಾನಸೌಧ ಆವರಣದಲ್ಲಿ ಗುರುವಾರ ಧರಣಿ ನಡೆಸಿದರು. ಕುಮಾರಸ್ವಾಮಿ ಮಾತನಾಡಿ, ನಮ್ಮ ಧ್ವನಿಗೆ ನಮ್ಮದೇ ಸರಕಾರದಲ್ಲಿ ಯಾಕೋ ಬೆಲೆ ಸಿಗುತ್ತಿಲ್ಲ. ಮೀಸಲು ಕ್ಷೇತ್ರ ಅನ್ನೋ ಕಾರಣಕ್ಕೋ ಏನೋ ಕಡೆಗಣಿಸಲಾಗುತ್ತಿದೆ. ಉಸ್ತುವಾರಿ ಸಚಿವರು ಬರುತ್ತಾರೆ, ಆದರೆ ಏನೂ ಮಾಡುವುದಿಲ್ಲ. ಇವರಿಗೆ ಮಾತಲ್ಲಿ ಹೇಳಿದರೆ ಅರ್ಥವಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಶೋಕ್‌ ಭರವಸೆ : ಸ್ಥಳಕ್ಕೆ ಆಗಮಿಸಿದ ಅಶೋಕ್‌ ಅವರು, ಅನುದಾನ …

Read More »

ತಮ್ಮ ಹಾಟ್ ಫೋಟೋಗಳನ್ನು ಹಂಚಿಕೊಂಡ ನಟಿ ಶುಭ್ರ ಅಯ್ಯಪ್ಪ

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಟಿ ಶುಭ್ರ ಅಯ್ಯಪ್ಪ ಹಾಟ್ ಆಯಂಡ್ ಸ್ಪೈಸಿ ಲುಕ್ ನಲ್ಲಿ ಪೋಟೋಗೇ ಫೋಸ್ ನೀಡಿದ್ದಾರೆ. ಇತ್ತೀಚೆಗೆ ಫೋಟೋಶೂಟ್ ಮಾಡಿಸಿರುವ ಈ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಳ್ಳುವ ಮೂಲಕ ಯುವಕರ ನಿದ್ದೆಗೆಡಸಿದ್ದಾರೆ. ಈ ಫೋಟೋಗಳಿಗೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವಜ್ರಕಾಯ’ ಚಿತ್ರದಲ್ಲಿ ಅಭಿನಯಿಸಿದ್ದ ಶುಭ್ರ ಅಯ್ಯಪ್ಪ ನಂತರ ಯಾವ ಸಿನಿಮಾಗಳಲ್ಲೂ ಕಾಣಿಸಿಕೊಂಡಿಲ್ಲ, …

Read More »

ರಾಜ್ಯದ ಆರು ಪೊಲೀಸರಿಗೆ ರಾಷ್ಟ್ರೀಯ ‘ಶ್ರೇಷ್ಠ ತನಿಖಾ ಪದಕ’

ಬೆಂಗಳೂರು : ರಾಷ್ಟ್ರದಲ್ಲಿ ಅಪರಾಧ ಪ್ರಕರಣಗಳ ತನಿಖೆ ವೇಳೆ ಉತ್ತಮ ಸೇವೆ ಸಲ್ಲಿಸುವ ತನಿಖಾಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ನೀಡುವ ಶ್ರೇಷ್ಠ ತನಿಖಾ ಪದಕಕ್ಕೆ ರಾಜ್ಯದ 6 ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ. ಸಿಸಿಬಿ ಎಸಿಪಿ ಎಚ್.ಎನ್.ಧರ್ಮೇಂದ್ರ, ಮಂಗಳೂರು ಉಪವಿಭಾಗದ ಡಿವೈಎಸ್ಪಿ ಪರಮೇಶ್ವರ ಹೆಗಡೆ, ಬಿಡಿಎ ಡಿವೈಎಸ್ಪಿ ಸಿ.ಬಾಲಕೃಷ್ಣ, ಕೆಐಎ ಎಸ್‌ಐಟಿ ಮನೋಜ್ ಎನ್.ಹೂವಳೆ, ದಾವಣಗೆರೆ ಜಿಲ್ಲೆ ಹೊನ್ನಾಳಿ ಇನ್‌ಸ್ಪೆಕ್ಟರ್ ಟಿ.ವಿ.ದೇವರಾಜ್ ಹಾಗೂ ಹಳೇ ಹುಬ್ಬಳ್ಳಿ ಠಾಣೆ ಇನ್‌ಸ್ಪೆಕ್ಟರ್ ಶಿವಪ್ಪ ಶೆಟ್ಟಿಪ್ಪ …

Read More »

ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಭೇಟಿ ಮಾಡಿದ ಸಲ್ಮಾನ್ ಖಾನ್

ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ವೇಟ್‌ಲಿಫ್ಟರ್‌ ಮೀರಾಬಾಯ್ ಚಾನುರನ್ನು ಭೇಟಿ ಮಾಡಿದ ನಟ ಆಕೆಯೊಂದಿಗೆ ಫೋಟೋ ತೆಗೆದುಕೊಂಡು ಇನ್‌ಸ್ಟಾಗ್ರಾಂನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ವೇಟ್‌ಲಿಫ್ಟಿಂಗ್ ಶಿಸ್ತಿನ ಮಹಿಳೆಯರ ವಿಭಾಗದ 49 ಕೆಜಿ ಕೆಟಗರಿಯಲ್ಲಿ ಮೀರಾಬಾಯ್ ಬೆಳ್ಳಿ ಪದಕ ಜಯಿಸಿದ್ದರು. “ಬೆಳ್ಳಿ ಪದಕ ವಿಜೇತೆ ನಿಮ್ಮನ್ನು ಭೇಟಿಯಾಗಿದ್ದು ಬಹಳ ಸಂತಸವಾಗಿದೆ.. ನನ್ನ ಹಾರೈಕೆಗಳು ನಿಮ್ಮಂದಿಗೆ ಸದಾ ಇರಲಿವೆ!” ಎಂದು ಸಲ್ಮಾನ್ ಪೋಸ್ಟ್‌ ಮಾಡಿದ್ದಾರೆ.

Read More »