Breaking News

Daily Archives: ಆಗಷ್ಟ್ 24, 2021

ದುರಹಂಕಾರದಿಂದ ಸಿಎಂ ಸ್ಥಾನ ಕಳೆದುಕೊಂಡ ಎಚ್‌ಡಿಕೆ: ಕೃಷಿ ಸಚಿವ ಬಿ.ಸಿ.ಪಾಟೀಲ

ಹಾವೇರಿ: ‘ಎಚ್‌.ಡಿ.ಕುಮಾರಸ್ವಾಮಿ ತಮ್ಮ ದುರಹಂಕಾರ ಮತ್ತು ಸ್ವೇಚ್ಛಾಚಾರದಿಂದ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆಯೇ ಹೊರತು ಬೇರೆ ಯಾರೂ ಕಳೆದಿಲ್ಲ. ಸಿ.ಎಂ ಸ್ಥಾನ ಕಳೆದುಕೊಂಡ ನಂತರ ನೀರಿನಿಂದ ಹೊರಬಿದ್ದ ಮೀನಿನಂತಾಗಿದ್ದಾರೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿರುಗೇಟು ನೀಡಿದರು. ರಟ್ಟೀಹಳ್ಳಿ ತಾಲ್ಲೂಕಿನ ಮದಗ ಮಾಸೂರು ಕೆರೆಗೆ ಮಂಗಳವಾರ ಬಾಗಿನ ಅರ್ಪಿಸಿದ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಸ್ವಾರ್ಥ ಭಾವನೆಯಿಂದ ಎರಡು ಮೂರು ಜಿಲ್ಲೆಗಳಿಗೆ ಸೀಮಿತವಾದ ಆಡಳಿತ ನೀಡಿ, ಇಡೀ ಕರ್ನಾಟಕಕ್ಕೆ ಅನ್ಯಾಯ ಮಾಡಿದರು. …

Read More »

ಲಿಂಗಾಯತ ಧರ್ಮ ಹೋರಾಟದಿಂದ ಕಾಂಗ್ರೆಸ್ ಸೋತಿಲ್ಲ: ಎಂ.ಬಿ.ಪಾಟೀಲ್

ವಿಜಯಪುರ: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಿಂದ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿಲ್ಲ. ಈ ಹೋರಾಟವೂ ನನ್ನಿಂದ ಆರಂಭಗೊಂಡಿಲ್ಲ.‌ ವೀರಶೈವ ಮಹಾಸಭೆ ಆರಂಭಿಸಿದ್ದ ಹೋರಾಟವನ್ನು ನಾವು ಮುಂದುವರೆಸಿದ್ದು ಎಂದು ಮಾಜಿ ಸಚಿವ, ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ನಮ್ಮದೇ ಪಕ್ಷದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ನಾನು ಮಾಡಿದ ನೀರಾವರಿ ಯೋಜನೆ ಸಾಧನೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ಹೊಟ್ಟೆಕಿಚ್ಚಿನಿಂದ ಅನಗತ್ಯವಾಗಿ ನನ್ನ …

Read More »

ಎಫ್​ಎಸ್​ಎಲ್​ ವರದಿ ನೋಡಿ ಸಮಾಧಾನವಾಗಿದೆ: ಇಂದ್ರಜಿತ್ ಲಂಕೇಶ್

ಬೆಂಗಳೂರು: ಎಫ್​ಎಸ್​ಎಲ್ ಪರೀಕ್ಷೆಯಲ್ಲಿ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸೇರಿದಂತೆ ಹಲವರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟ ಬೆನ್ನಲ್ಲೇ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ ನಡೆಸಿ, ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಇವತ್ತಿನ ಎಫ್​ಎಸ್​ಎಲ್​ ವರದಿ ನೋಡಿ ಸಮಾಧಾನವಾಗಿದೆ. ನನಗೆ ಯಾರ ಮೇಲೂ ವೈಯಕ್ತಿಕ ದ್ವೇಷವಿಲ್ಲ. ಈ ಪ್ರಕರಣದಲ್ಲಿ ಇನ್ನೂ ದೊಡ್ಡದೊಡ್ಡ ತಿಮಿಂಗಿಲಗಳಿವೆ. ಅವರನ್ನು ಹಿಡಿಯುವುದು ಇನ್ನೂ ಬಾಕಿ ಇದೆ. ಈ ಬಗ್ಗೆ ಕೋರ್ಟ್​ನಲ್ಲಿ ತನಿಖೆ ನಡೆಯುತ್ತಿದೆ. ಹಾಗಾಗಿ, ನಾನು …

Read More »

ವಿಜಯಪುರ ಜನರಿಗೆ ಸಿಹಿಸುದ್ದಿ ಕೊಟ್ಟ ರೈಲ್ವೆ ಇಲಾಖೆ

ವಿಜಯಪುರ, ಆಗಸ್ಟ್ 24; ನೈಋತ್ಯ ರೈಲ್ವೆ ವಿಜಯಪುರ ಮತ್ತು ಮಂಗಳೂರಿನ ಜನರಿಗೆ ಸಿಹಿಸುದ್ದಿ ಕೊಟ್ಟಿದೆ. ಕೋವಿಡ್ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಮಂಗಳೂರು-ವಿಜಯಪುರ ರೈಲು ಸಂಚಾರ ಪುನಃ ಆರಂಭವಾಗಲಿದೆ. ಶೀಘ್ರದಲ್ಲೇ ರೈಲಿನ ವೇಳಾಪಟ್ಟಿ ಅಂತಿಮಗೊಳ್ಳಲಿದೆ. ರೈಲು ಪುನಃ ಆರಂಭಿಸಲು ನೈಋತ್ಯ ರೈಲ್ವೆ ಈಗಾಗಲೇ ಸಿದ್ಧತೆ ಆರಂಭಿಸಿದೆ. ಆದರೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರೈಲು ವೇಳಾಪಟ್ಟಿ ಪರಿಷ್ಕರಣೆ ಮಾಡುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವಗೆ ಮನವಿ ಮಾಡಿದ್ದಾರೆ.   …

Read More »

ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ; 577 ನಾಮಪತ್ರ ಸಲ್ಲಿಕೆ

ಧಾರವಾಡ, ಆಗಸ್ಟ್ 24; ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಒಟ್ಟು 577 ನಾಮಪತ್ರಗಳು ಸಲ್ಲಿಕೆಯಾಗಿವೆ. 82 ವಾರ್ಡ್‌ಗಳಿಂದ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದ್ದು, ಸೆಪ್ಟೆಂಬರ್ 6ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಸೋಮವಾರ ಕೊನೆಯ ದಿನವಾಗಿತ್ತು. ಸೋಮವಾರ 478 ನಾಮಪತ್ರಗಳು ಸಲ್ಲಿಕೆಯಾಗಿದ್ದು, 82 ವಾರ್ಡ್‌ಗಳಿಗೆ ಒಟ್ಟು 577 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಪ್ರಕಟಣೆಯಲ್ಲಿ ಹೇಳಿದ್ದಾರೆ.   …

Read More »

ಅಂತರರಾಜ್ಯ ಜಲವಿವಾದ: ದೆಹಲಿಯಲ್ಲಿ ಕಾನೂನು ತಜ್ಞರೊಂದಿಗೆ ಸಭೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಅಂತರರಾಜ್ಯ ಜಲ ವಿವಾದಗಳ ಬಗ್ಗೆ ನವದೆಹಲಿಯಲ್ಲಿ ಕಾನೂನು ತಜ್ಞರ ಜತೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಬೆಂಗಳೂರಿನ ತಮ್ಮ ನಿವಾಸದ ಬಳಿ ಅವರು ಮಾದ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್, ರಾಜ್ಯದ ಹಿರಿಯ ವಕೀಲರು, ಕಾನೂನು ತಜ್ಞರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ನೀರಾವರಿ ವಿವಾದದ ಬಗ್ಗೆ ರಾಜ್ಯದ ಮುಂದಿನ ನಡೆಯ ಬಗ್ಗೆ ಈ ಸಭೆಯಲ್ಲಿ ತೀರ್ಮಾನಿಸಲಾಗುವುದು. …

Read More »

58 ವಾರ್ಡಗಳಿಗೆ ಚುನಾವಣೆ ,ಮತದಾನದ ಅವಧಿ ಒಂದು ಗಂಟೆ ವಿಸ್ತರಣೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ 2021 ರ ಕುರಿತು 58 ವಾರ್ಡಗಳಿಗೆ ಚುನಾವಣೆ ವೇಳಾ ಪಟ್ಟಿ ಪ್ರಕಟಿಸಲಾಗಿದ್ದು, ಅದರಂತೆ ಸೆಪ್ಟೆಂಬರ್ 3 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ವೀಕ್ಷಕರನ್ನು ನಿಯೋಜಿಸಿಲಾಗಿದೆ. ಭೂ ಸ್ವಾಧೀನ (ಪು.ವ.ಮತ್ತು ಪುನಿ) ಬೃಹತ್ ನೀರಾವರಿ ಯೋಜನೆಗಳ ವಿಶೇಷ ಜಿಲ್ಲಾಧಿಕಾರಿಗಳಾದ ಗೀತಾ ಕೌಲಗಿ (ಮೊ. ಸಂಖ್ಯೆ-9448933533) ಅವರನ್ನು ವಾರ್ಡ ಸಂಖ್ಯೆ 1 ರಿಂದ 29 ರವರೆಗೆ ಚುನಾವಣಾ ವೀಕ್ಷಕರನ್ನಾಗಿ ನಿಯೋಜಿಸಿಲಾಗಿದೆ. ಅದೇ ರೀತಿ, ಕೃಷಿ ಇಲಾಖೆಯ …

Read More »

ಇನ್ಮುಂದೆ ವಾಟ್ಸ್ಯಾಪ್ ಮೂಲಕವೂ ಲಸಿಕೆಯ ಸ್ಲಾಟ್ ಬುಕ್ ಮಾಡಬಹುದು : ಕೇಂದ್ರ

ನವ ದೆಹಲಿ : ದೇಶದಾದಯಂತ ನಡೆಯುತ್ತಿರುವ ಲಸಿಕಾ ಅಭಿಯಾನಕ್ಕೆ ವೇಗ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿತ್ಯ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಹಾಗೂ ಮೈ ಗವರ್ನಮೆಂಟ್ ನೊಂದಿಗೆ ಸಾಮಾಜಿಕ ಜಾಲತಾಣಗಳ ದೈತ್ಯ ಸಂಸ್ಥೆಗಳಲ್ಲಿ ಒಂದಾದ ವಾಟ್ಸ್ಯಾಪ್ ಲಸಿಕಾ ಅಭಿಯಾನಕ್ಕೆ ಕೈ ಜೋಡಿಸಿದೆ. ಇನ್ಮುಂದೆ ಯಾವುದೇ ವಾಟ್ಸ್ಯಾಪ್ ಬಳಕೆದಾರರು ಲಸಿಕೆ ಪಡೆಯಲು ತಮ್ಮ ಸ್ಲಾಟ್ ಗಳನ್ನು ವಾಟ್ಸ್ಯಾಪ್ ನಲ್ಲಿಯೇ ಬುಕ್ ಮಾಡಬಹುದಾಗದೆ. ಈ ಬಗ್ಗೆ ತಮ್ಮ ಅಧಿಕೃತ …

Read More »

ಕಾಂಗ್ರೆಸ್‍ನಲ್ಲಿ ಪ್ರಮೋಷನ್ ಸಿಗಬೇಕೆಂದರೆ ಜೈಲಿಗೆ ಹೋಗಬೇಕು: ಸಿ.ಟಿ.ರವಿ ವ್ಯಂಗ್ಯ

ಚಿಕ್ಕಮಗಳೂರು: ಕಾಂಗ್ರೆಸ್‍ನ ಲ್ಲಿ ಪ್ರಮೋಷನ್ ಸಿಗಬೇಕೆಂದರೆ ಭ್ರಷ್ಟಾಚಾರ ಮಾಡಬೇಕು, ಜೈಲಿಗೆ ಹೋಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಈಗ ನಿರಪರಾಧಿಯೂ ಅಲ್ಲ, ಅಪರಾಧಿಯೂ ಅಲ್ಲ, ಅವರು ಆಪಾದಿತ. ಭ್ರಷ್ಟಾಚಾರದ ಕಾಂಗ್ರೆಸ್‍ನ ರಾಜಕೀಯ ವ್ಯವಸ್ಥೆಯ ಒಂದು ಭಾಗ. ಅಲ್ಲಿ ಗುಂಡಾಗಿರಿ ಪ್ರಮೋಷನ್‍ಗೆ ಇರುವ ಒಂದು ಮಾದರಿ ಎಂದರು. ಡಿಕೆ ಶಿವಕುಮಾರ್ ಅವರು ಬೆಳೆದ ಬಂದ …

Read More »

ಆಕ್ಷನ್ ಪ್ರಿನ್ಸ್’ಗೆ ಜೋಗಿ `ಪ್ರೇಮ್ ಆಕ್ಷನ್ ಕಟ್’..!

  ಸ್ಯಾಂಡಲ್ ವುಡ್ ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ನಿರ್ದೇಶಕ ಜೋಗಿ ಪ್ರೇಮ್ ಆಕ್ಷನ್ ಕಟ್ ಹೇಳೋದು ಪಕ್ಕಾ ಆಗಿದೆ. ಧ್ರುವ ಸರ್ಜಾ ಜೊತೆ ಪ್ರೇಮ್ ಸಿನಿಮಾ ಮಾಡಲಿದ್ದಾರೆ ಎಂದು ಗಾಂಧಿನಗರದ ಗಲ್ಲಿಗಳಲ್ಲಿ ಹರಿದಾಡುತ್ತಿದ್ದ ಗಾಳಿ ಸುದ್ದಿ ಇದೀಗ ಅಧಿಕೃತವಾಗಿದೆ. ಹೌದು..! ನಿನ್ನೆ ಮೊನ್ನೆಯಷ್ಟೆ ಪ್ಯಾನ್ ಇಂಡಿಯಾ ಸಿನಿಮಾ ಮಾರ್ಟಿನ್ ಘೋಷಣೆ ಮಾಡಿದ ಧ್ರುವ ಇದೀಗ, ಪ್ರೇಮ್ ಜೊತೆ ಸಿನಿಮಾ ಮಾಡುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಮ್ ನಲ್ಲಿ ಮಾಹಿತಿ …

Read More »