ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಳಿಕ ಮತ್ತೆ ನಾಲ್ವರು ಕಾಂಗ್ರೆಸ್ ನಾಯಕರ ಟ್ವೀಟರ್ ಖಾತೆ ಲಾಕ್ ಮಾಡಲಾಗಿದೆ. ರಾಹುಲ್ ಗಾಂಧಿ ಅವರ ಟ್ವಿಟರ್ ಲಾಕ್ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ನ ರಣದೀಪ್ ಸುರ್ಜೇವಾಲಾ, ಅಜಯ್ ಮಾಕೆನ್, ಸುಶ್ಮಿತಾ ದೇವ್ ಮತ್ತು ಮಾಣಿಕ್ ಕಮ್ ಠಾಗೋರ್ ಅವರ ಖಾತೆಗಳನ್ನು ‘ತಾತ್ಕಾಲಿಕವಾಗಿ ಲಾಕ್ ಮಾಡಲಾಗಿದೆ’ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ. ಆಗಸ್ಟ್ 4 ರಂದು ಮಾಡಿದ ಟ್ವೀಟ್ …
Read More »Monthly Archives: ಆಗಷ್ಟ್ 2021
ರಾಜ್ಯಸಭೆ ಸಚೇತಕರಾಗಿ ಕರ್ನಾಟಕದ ಕಾಂಗ್ರೆಸ್ ಸಂಸದ ನಾಸೀರ್ ಹುಸೇನ್ ಸೈಯ್ಯದ್ ನೇಮಕ
ಕರ್ನಾಟಕ ಸಂಸದ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ವಾರಗಳ ನಂತರ, ರಾಜ್ಯದ ಮತ್ತೊಬ್ಬ ಸಂಸದ ಡಾ. ಸೈಯದ್ ನಸೀರ್ ಹುಸೇನ್ ಅವರನ್ನು ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸಚೇತಕರಾಗಿ ನೇಮಕ ಮಾಡಲಾಗಿದೆ. ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಅವರು ಕರ್ನಾಟಕದ ಸಂಸದರಾಗಿದ್ದು, ಪಕ್ಷದ ಮುಖ್ಯ ಸಚೇತಕರಾಗಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ 38 ಸದಸ್ಯರನ್ನು ಹೊಂದಿದೆ. ಮುಖ್ಯ ಸಚೇತಕ ಮತ್ತು ಸಚೇತಕ ಈ ಇಬ್ಬರೂ ಕಾಂಗ್ರೆಸ್ ಸದಸ್ಯರು ಮತ್ತು …
Read More »ಗಂಡನ ಬಿಟ್ಟು ಮತ್ತೊಬ್ಬನ ಜೊತೆ ಜೀವನ ರೂಪಿಸಿಕೊಳ್ಳೋ ಕನಸು ಕಂಡಿದ್ದ ಅಂಗನವಾಡಿ ಶಿಕ್ಷಕಿಯ ಪ್ರೇಮಿ ಹತ್ಯೆ; ಮಾಜಿ ಪತಿ ಸೇರಿ 3 ಅರೆಸ್ಟ್
ರಾಯಚೂರು: ಜಿಲ್ಲೆಯ ಅಂಗನವಾಡಿ ಶಿಕ್ಷಕಿಯ ಲವ್ವಿ ಡವ್ವಿ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ. ಗುಂಡಪ್ಪ, ಮೌನೇಶ ಮತ್ತು ಕನಕಪ್ಪರ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಡಿವೋರ್ಸ್ ನೀಡಿದ್ದ ಪತ್ನಿಯ ಜೊತೆ ಸಂಬಂಧ ಇಟ್ಟುಕೊಂಡಿದ್ದ ಎಂಬ ಕಾರಣಕ್ಕೆ ಗುಂಡಪ್ಪ ಮೌನೇಶನಾಯಕನನ್ನು ಕೊಲೆ ಮಾಡಿದ್ದು ಸದ್ಯ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಘಟನೆ ಹಿನ್ನೆಲೆ 7 ವರ್ಷಗಳ ಹಿಂದೆ ಗುಂಡಪ್ಪ ವಿಜಯಲಕ್ಷ್ಮೀಯನ್ನ ಮದ್ವೆಯಾಗಿದ್ದ. ಆದ್ರೆ ಸಂಸಾರದಲ್ಲಿ ಸಾಮರಸ್ಯ ಇಲ್ಲದೆ ಗುಂಡಪ್ಪ ಪತ್ನಿಗೆ ಡಿವೋರ್ಸ್ ಕೊಟ್ಟಿದ್ದ. …
Read More »DGIGP & CM ಆದೇಶಕ್ಕೂ ಇಲ್ಲ ಕಿಮ್ಮತ್ತು? ಪೊಲೀಸರಿಂದಲೇ ಆದೇಶ ಉಲ್ಲಂಘಿಸಿ ಬರ್ತ್ಡೇ
ಹಾವೇರಿ: ಒಂದೆಡೆ ಮೂರನೇ ಕೊರೊನಾ ಅಲೆಯ ಭೀತಿ ಶುರುವಾಗಿದೆ.. ಈಗಾಗಲೇ ಕೊರೊನಾದಿಂದ ಬಳಲಿ ಬೆಂಡಾಗಿರುವ ರಾಜ್ಯದಲ್ಲಿ ಮತ್ತೆ ದೊಡ್ಡಮಟ್ಟದ ಅನಾಹುತ ಸೃಷ್ಟಿಯಾಗದಿರಲೆಂದು ಮುಂಜಾಗ್ರತಾ ಕ್ರಮವಾಗಿ ಕಾರ್ಯಕ್ರಮಗಳನ್ನ ನಡೆಸದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಡಿಜಿಐಜಿಪಿ ಆದೇಶ ಹೊರಡಿಸಿದ್ದರು. ದುರಂತ ಅಂದ್ರೆ ಸಿಎಂ ತವರು ಕ್ಷೇತ್ರದಲ್ಲೇ ಸಿಎಂ ಆದೇಶಕ್ಕೆ ಕ್ಯಾರೆ ಎನ್ನುತ್ತಿಲ್ಲ.. ಪೊಲೀಸ್ ಇಲಾಖೆಯೇ ಡಿಜಿಐಜಿಪಿ ಆದೇಶಕ್ಕೆ ಕಿಮ್ಮತ್ತು ನೀಡುತ್ತಿಲ್ಲ. ನಿನ್ನೆಯಷ್ಟೇ ಸಿಎಂ ಬಸವರಾಜ್ ಬೊಮ್ಮಾಯಿ ಕಾರ್ಯಕ್ರಮಗಳನ್ನು ನಡೆಸದಂತೆ ಆದೇಶ ನೀಡಿದ್ದರು.. …
Read More »ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಚೆಕ್ ಹಸ್ತಾಂತರ
ಬೆಂಗಳೂರು: ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವರಾದ ಹಾಲಪ್ಪ ಆಚಾರ್ ಮತ್ತು ನಿಗಮದ ಅಧ್ಯಕ್ಷರಾದ ಲಿಂಗಮೂರ್ತಿ ಕರ್ನಾಟಕ ರಾಜ್ಯ ಖನಿಜ ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಐದು ಕೋಟಿ ರೂಪಾಯಿಗಳ ಚೆಕ್ ಅನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪಡೆದ ಮೊದಲ ಚೆಕ್ ಇದು ಎಂದು ಸಿಎಂ ಬಸವರಾಜ …
Read More »ಶೇ 100ರಷ್ಟು ಪ್ರೇಕ್ಷಕರಿಗೆ ಚಿತ್ರಮಂದಿರದಲ್ಲಿ ಅವಕಾಶ; ತಜ್ಞರ ಅಭಿಪ್ರಾಯ ಪಡೆದು ನಿರ್ಧಾರ: ಸಿಎಂ ಬೊಮ್ಮಾಯಿ
ಬೆಂಗಳೂರು: ಇಂದು ಫಿಲ್ಮ್ ಚೇಂಬರ್ನವರು ಭೇಟಿಯಾಗಿ ಚಿತ್ರಮಂದಿರದಲ್ಲಿ ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಅವಕಾಶಕ್ಕೆ ಮನವಿ ಮಾಡಿದ್ದಾರೆ. ತಜ್ಞರ ಅಭಿಪ್ರಾಯ ಪಡೆದು ನಿರ್ಧರಿಸುವುದಾಗಿ ಹೇಳಿದ್ದೇನೆ. ಶೂಟಿಂಗ್ ವೇಳೆ ಆದ ದುರ್ಘಟನೆಗಳ ಬಗ್ಗೆ ಚರ್ಚಿಸಿದ್ದೇನೆ. ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳುವುದಕ್ಕೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಿನಿಮಾ ಥಿಯೇಟರ್ನಲ್ಲಿ ಶೇಕಡಾ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಮನವಿ ಮಾಡಿದ್ದೇವೆ. ಕೊರೊನಾದಿಂದ ಸಿನಿಮಾ ಕ್ಷೇತ್ರ ಭಾರಿ ನಷ್ಟದಲ್ಲಿದೆ. …
Read More »ಹುದಲಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯಿಂದಾದ ಹಾನಿ ಪರಿಶೀಲಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಹುದಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಧರನಟ್ಟಿ, ಬರಮ್ಯಾನಟ್ಟಿ, ಹಳ್ಳೂರ, ಕರುವಿನಕುಂಪಿ, ಕಾರಾವಿ ಬುಡ್ರ್ಯಾನೂರ ಹಾಗೂ ಹುಲ್ಯಾನೂರ ಗ್ರಾಮಗಳಿಗೆ ಭೇಟಿ ನೀಡಿ ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಈ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲನೆ ಮಾಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಹೊಲ-ಗದ್ದೆಗಳು ಜಲಾವೃತವಾಗಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿ, ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ …
Read More »ಐದು ವರ್ಷಗಳ ಪದವೀಧರರ ಮಾಹಿತಿ ಸಂಗ್ರಹಿಸಲು ಜಿಲ್ಲಾಧಿಕಾರಿ ಸೂಚನೆ
ಕಾರವಾರ: ಜಿಲ್ಲೆಯಲ್ಲಿರುವ ವಿವಿಧ ಔದ್ಯೋಗಿಕ ಅವಕಾಶಗಳು ಮತ್ತು ಅವುಗಳಿಗೆ ಅನುಗುಣವಾಗಿ ಸ್ಥಳೀಯ ಯುವಕರ ಕೌಶಲದ ಮಟ್ಟವನ್ನು ಹೆಚ್ಚಿಸಲು ಕೈಗೊಳ್ಳಬಹುದಾದ ಕ್ರಮಗಳನ್ನು ಜಾರಿ ಮಾಡಲು ಜಿಲ್ಲಾಡಳಿತ ಮಹತ್ವದ ಹೆಜ್ಜೆಯಿಟ್ಟಿದೆ. ಈ ಸಂಬಂಧ ಜಿಲ್ಲಾ ಕೌಶಲಾಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ವಿವಿಧ ಅಧಿಕಾರಿಗಳ ಜೊತೆ ಒಂದು ಸುತ್ತಿನ ಸಭೆಯನ್ನೂ ನಡೆಸಿದ್ದಾರೆ. ಜಿಲ್ಲೆಯಲ್ಲಿರುವ ಬೃಹತ್ ಯೋಜನೆಗಳಾದ ಕೈಗಾ ಅಣು ವಿದ್ಯುತ್ ಸ್ಥಾವರ, ಕೊಂಕಣ ರೈಲ್ವೆ, ಭಾರತೀಯ ನೌಕಾನೆಲೆಗಳಲ್ಲಿ ಸ್ಥಳೀಯರಿಗೆ …
Read More »ಕೆಜಿಎಪ್ ನಲ್ಲಿ ಟೌನ್‍ಶಿಪ್ ನಿರ್ಮಿಸಲು ಮನವಿ
ನವದೆಹಲಿ : ಕೋಲಾರ ಜಿಲ್ಲೆ ಕೆಜಿಎಫ್ ನ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ವ್ಯಾಪ್ತಿಯಲ್ಲಿ ಬಳಕೆಯಾಗದೆ ಇರುವ ಜಮೀನಿನಲ್ಲಿ ಕೈಗಾರಿಕಾ ಟೌನ್‍ಶಿಪ್ ( ಇಂಡಸ್ಟ್ರಿಯಲ್ ಟೌನ್‍ಶಿಪ್) ಪ್ರಾರಂಭಿಸಲು ಅನುಮತಿ ನೀಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ಬುಧವಾರ ನವದೆಹಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡಿ ಮನವಿ …
Read More »2 ನಾಡ ಪಿಸ್ತೂಲು, 5 ಜೀವಂತ ಗುಂಡು ವಶ : ನಾಲ್ವರ ಬಂಧನ
ಬೆಂಗಳೂರು,ಆ.11-ಬಿಹಾರ ರಾಜ್ಯದಿಂದ ಅಕ್ರಮವಾಗಿ ನಾಡಪಿಸ್ತೂಲುಗಳನ್ನು ಖರೀದಿ ಮಾಡಿಕೊಂಡು ಬಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿರುವ ಅಶೋಕನಗರ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿ ಎರಡು ನಾಡಪಿಸ್ತೂಲು, 5 ಜೀವಂತ ಗುಂಡುಗಳು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಸೋನುಕುಮಾರ್(32), ಸುನೀಲ್‍ಕುಮಾರ್(32), ಇರ್ಫಾನ್(26) ಮತ್ತು ಆಂಧ್ರ ಪ್ರದೇಶದ ಮುರುಳಿ ವಿನೋದ್(47) ಬಂಧಿತ ಆರೋಪಿಗಳು. ಆಗಸ್ಟ್ 7ರಂದು ಹೊಸೂರು ರಸ್ತೆಯ ಸಿಮೆಂಟ್ರಿ ರಸ್ತೆಯಲ್ಲಿರುವ ಹಿಂದೂ ಸಿಮೆಂಟ್ರಿ ಬಳಿ ಮೂವರು ಯಾವುದೇ ಪರವಾನಗಿ ಇಲ್ಲದೆ ನಾಡಪಿಸ್ತೂಲಗಳನ್ನಿಟ್ಟುಕೊಂಡು …
Read More »