Home / 2021 / ಆಗಷ್ಟ್ (page 61)

Monthly Archives: ಆಗಷ್ಟ್ 2021

ನನಗೆ ವಯಸ್ಸಾದ ಕಾರಣ ರಾಜಕೀಯ ಬಿಟ್ಟಿರುವೆ: ಮಾಜಿ ಸಿಎಂ ಎಸ್.ಎಂ ಕೃಷ್ಣ

ಮದ್ದೂರು : ನನಗೆ ವಯಸ್ಸಾಗಿದೆ ಆದ ಕಾರಣ ರಾಜಕಾರಣವನ್ನು ಬಿಟ್ಟಿದ್ದೇನೆ ಹಾಗೂ ರಾಜಕಾರಣದಿಂದ ದೂರವಿದ್ದು, ಬಹಳ ವರ್ಷವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್ ಎಂ ಕೃಷ್ಣ ರವರು ತಿಳಿಸಿದರು. ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಉಗ್ರನರಸಿಂಹಸ್ವಾಮಿ ದೇವಸ್ಥಾನ ಹಾಗೂ ತಾಲ್ಲೂಕಿನ ಶ್ರೀ ವೈಧ್ಯನಾಥೇಶ್ವರ ದೇವಸ್ಥಾನಗಳಿಗೆ ಬೇಟಿ ನೀಡಿ ದೇವರ ದರ್ಶನ ಪಡೆದ 89 ವರ್ಷ ವಯಸ್ಸಿನ ಎಸ್‌ಎಂ ಕೃಣ್ಣ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸುಮಾರು …

Read More »

ಲೋಳಸೂರ ಕೆಳಗಿನ ಸೇತುವೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ನಿರಂತರ ಮಳೆ ಹಾಗೂ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಜತ್ತ-ಜಾಂಬೋಟಿ (ರಾಹೆ-31) ರಸ್ತೆಯ ಲೋಳಸೂರ ಸೇತುವೆ ಮಾರ್ಗದ ಬದಲಿ ರಸ್ತೆಯನ್ನು ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಲೋಳಸೂರ ಸೇತುವೆಯ ಪಕ್ಕದಲ್ಲಿರುವ ಹಳೆಯ ಸೇತುವೆ ಮಾರ್ಗದಲ್ಲಿ ಅನುಕೂಲ ಕಲ್ಪಿಸಿಕೊಡಲಾಗಿದ್ದು, ಕಾರು, ಬೈಕ್‍ಗಳ ಸಂಚಾರಕ್ಕೆ ಮಾತ್ರ ರಸ್ತೆ ಸಂಚಾರವನ್ನು ಆರಂಭಿಸಲಾಗಿದೆ ಎಂದು ಹೇಳಿದರು. …

Read More »

ಗೃಹ ಇಲಾಖೆ ಬಲವರ್ಧನೆಗೆ ಪ್ರಯತ್ನ: ಆರಗ ಜ್ಞಾನೇಂದ್ರ

ಬೆಂಗಳೂರು: ಸಿಬ್ಬಂದಿ ಕೊರತೆಯನ್ನು ಪರಿಹರಿಸಿ, ಆಧುನೀಕರಣಕ್ಕೆ ಒತ್ತು ನೀಡುವ ಮೂಲಕ ಗೃಹ ಇಲಾಖೆಯ ಬಲವರ್ಧನೆಗೆ ಪ್ರಯತ್ನಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಗೃಹ ಸಚಿವರಾದ ಬಳಿಕ ಸೋಮವಾರ ವಿಕಾಸಸೌಧದಲ್ಲಿ ಮೊದಲ ಬಾರಿಗೆ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಐಪಿಎಸ್‌ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮೊದಲ ಬಾರಿಗೆ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಪೊಲೀಸರನ್ನು ನಂಬಿ ಜನರು ನೆಮ್ಮದಿಯಿಂದ …

Read More »

ಅಪರಾಧ ವೈರಸ್ ಇದ್ದ ಹಾಗೆ, ಸದೆಬಡಿಯಬೇಕು: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು, ಆ.10: ಅಪರಾಧ ಪ್ರಕರಣಗಳನ್ನು ಹತೋಟಿಗೆ ತರಬೇಕು. ಅಪರಾಧ ವೈರಸ್ ಇದ್ದ ಹಾಗೆ. ಇದನ್ನು ಸಶಕ್ತವಾಗಿ ಸದೆಬಡಿಯಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಅವರು ಇಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು. ಜೂಜು, ಡಾರ್ಕ್ ವೆಬ್ ಮತ್ತಿತರ …

Read More »

ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಪಟ್ಟಿ ಬಿಡುಗಡೆ

ಮೈಸೂರು: ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಪಟ್ಟಿಯನ್ನು ಕೃಷ್ಣರಾಜ ಕ್ಷೇತ್ರದ ಕಾಂಗ್ರೆಸ್‌ ಮುಖಂಡ ಎನ್.ಎಂ.ನವೀನ್‌ ಕುಮಾರ್‌ ಬಿಡುಗಡೆ ಮಾಡಿದರು. ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಅಭಿವೃದ್ಧಿ ಕಾರ್ಯಗಳ ಪಟ್ಟಿ ಬಿಡುಗಡೆ ಮಾಡಲಾಯಿತು. ಈ ವೇಳೆ ನವೀನ್‌ ಕುಮಾರ್‌ ಮಾತನಾಡಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕದಲ್ಲಿ ನಡೆದಂತಹ ಅಭಿವೃದ್ಧಿ ಪರ್ವ ನ ಭೂತೋ ನ ಭವಿಷ್ಯತಿ ಎಂಬಂತಿದೆ ಎಂದು ಸ್ಮರಿಸಿದರು. ಬಿಜೆಪಿ ಸರ್ಕಾರದವರು ಯಾವುದೇ ಅಭಿವೃದ್ಧಿ ಕಾರ್ಯ …

Read More »

ಸನ್ಮಾನ ಮಾಡಿಸಿಕೊಳ್ಳುವುದರಲ್ಲೇ ಸಚಿವರು ಬ್ಯುಸಿಯಾಗಿದ್ದಾರೆ : ಡಿಕೆಶಿ

ಬೆಂಗಳೂರು, ಆ.10- ರೈತರು ತಾವು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ರಸ್ತೆಗೆ ಚೆಲ್ಲುತ್ತಿದ್ದಾರೆ. ಬಿಜೆಪಿ ಸರ್ಕಾರ ಪರಿಹಾರ ನೀಡದೆ ಅವರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆತುರಕ್ಕೆ ಬಿದ್ದು ತಾವು ಟೀಕೆ ಮಾಡುವುದಿಲ್ಲ. ಹೊಸ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು. …

Read More »

ಹೆಸರು ಬದಲಾವಣೆಯೇ ಬಿಜೆಪಿ ಸರ್ಕಾರಗಳ ಸಾಧನೆ : ಕಾಂಗ್ರೆಸ್ ಟೀಕೆ

ಬೆಂಗಳೂರು, ಆ.10- ರಿಯಾಯಿತಿ ದರದಲ್ಲಿ ಜನಸಾಮಾನ್ಯರಿಗೆ ಆಹಾರ ಪೂರೈಸುವ ಕ್ಯಾಂಟಿನ್‍ಗೆ ಇಡಲಾಗಿರುವ ಇಂದಿರಾ ಹೆಸರನ್ನು ಬದಲಾವಣೆ ಮಾಡಿದರೆ ಮುಂದಿನ ದಿನಗಳಲ್ಲಿ ಹಲವು ರಸ್ತೆ, ಸೇತುವೆಗಳಿಗಿರುವ ಬಿಜೆಪಿ ನಾಯಕರ ಹೆಸರುಗಳನ್ನು ಬದಲಾವಣೆ ಮಾಡಬೇಕಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಬಿಜೆಪಿಯವರು ದ್ವೇಷದ ರಾಜಕಾರಣ ಬಿಟ್ಟು ಪ್ರಜಾಸತ್ತಾತ್ಮಕವಾಗಿ ನಡೆದುಕೊಳ್ಳಬೇಕು. ಯೋಜನೆಗಳಿಗೆ ಮರುನಾಮಕರಣ ಮಾಡಿದಾಕ್ಷಣ ಅವರ ಸಾಧನೆಗಳನ್ನು ಜನರ ಮನಸ್ಸಿನಿಂದ ಮರೆ ಮಾಚಲು ಸಾಧ್ಯವಿಲ್ಲ.ಕಾಂಗ್ರೆಸ್ ತನ್ನ ಅಕಾರವಯಲ್ಲಿ ಎಂದಿಗೂ …

Read More »

ಇಂತಹ ಸರಕಾರ ಇದ್ದರೆಷ್ಟು? ಬಿಟ್ಟರೆಷ್ಟು?: ರಾಜ್ಯ ಸರಕಾರದ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ

ಬೆಂಗಳೂರು, ಆ. 9: `ಅಸಮಾಧಾನ ಮತ್ತು ಭಿನ್ನಮತದ ಮೂಟೆಯಾಗಿರುವ ಸರಕಾರ ಯಾವ ಕ್ಷಣದಲ್ಲೂ ಬೀಳಬಹುದು. ಬಂಡಾಯದ ಬಿಸಿ ಎದುರಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸ್ಥಿತಿ ನೋಡಿದರೆ ಮರುಕ ಹುಟ್ಟುತ್ತಿದೆ’ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, `ಬೊಮ್ಮಾಯಿ ನೇತೃತ್ವದ ನೂತನ ಸರಕಾರ ತೂತು ಬಿದ್ದ ದೋಣಿಯಂತಾಗಿದೆ. ಸಂಪುಟ ರಚನೆಯಾಗಿ ಸಚಿವರಿಗೆ ಖಾತೆ ಹಂಚಿಕೆಯಾಗಿದ್ದರೂ, ಸರಕಾರದಲ್ಲಿ ಬಂಡಾಯ ನಿಂತಿಲ್ಲ. ಸದ್ಯ ರಾಜ್ಯ …

Read More »

ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿಲ್ಲ: ಅಶೋಕ್

ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ವಾಜಪೇಯಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಇದು ಬಿಜೆಪಿ ಸರ್ಕಾರ ಯಾವುದೇ ಸರ್ಕಾರ ಬಂದರೂ ವ್ಯಕ್ತಿಯ ಹೆಸರಿಡುವ ಪದ್ಧತಿಯನ್ನು ಬಿಟ್ಟು ಮುಖ್ಯಮಂತ್ರಿ ಅಥವಾ ಪ್ರಧಾನ ಮಂತ್ರಿ ಯೋಜನೆ ಅಂತ ಹೆಸರಿಟ್ಟರೆ ಯಾವುದೇ ಸರ್ಕಾರ ಸಿಎಂ ಬಂದರೂ ಅದು ಮುಂದುವರೆಯುತ್ತದೆ ಎಂದರು. ಹಿಂದುಗಳಿಗೆ ಶ್ರಾವಣ …

Read More »

Covid-19 Karnataka Update: ರಾಜ್ಯದಲ್ಲಿ 1,186 ಹೊಸ ಪ್ರಕರಣಗಳು

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 24 ಗಂಟೆಗಳ ಅಂತರದಲ್ಲಿ 1,186 ಮಂದಿ ಕೊರೊನಾ ಸೋಂಕಿತರಾಗಿರುವುದು ದೃಢಪಟ್ಟಿದೆ. ಇದೇ ಅವಧಿಯಲ್ಲಿ ಸೋಂಕಿತರಲ್ಲಿ 1,776 ಮಂದಿ ಚೇತರಿಸಿಕೊಂಡಿದ್ದು, 24 ಮಂದಿ ಸಾವಿಗೀಡಾಗಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ. ಈವರೆಗೆ ವರದಿಯಾದ ಕೋವಿಡ್‌ ಪ್ರಕರಣಗಳ ಒಟ್ಟು ಸಂಖ್ಯೆ 29.19 ಲಕ್ಷ ದಾಟಿದೆ. ಕೋವಿಡ್‌ನಿಂದ ಮೃತಪಟ್ಟವರ ಪ್ರಮಾಣ ಶೇ 2.02 ರಷ್ಟು ವರದಿಯಾಗಿದೆ. ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 36,817ಕ್ಕೆ ಏರಿದೆ. ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ …

Read More »