Breaking News
Home / 2021 / ಆಗಷ್ಟ್ (page 80)

Monthly Archives: ಆಗಷ್ಟ್ 2021

ಹೊಸ ಸಂಪುಟದಲ್ಲಿ ಬೆಂಗಳೂರಿಗೆ ಬಂಪರ್..! , 13 ಜಿಲ್ಲೆಗಳಿಗೆ ಯಾವುದೇ ಸಚಿವ ಸ್ಥಾನ ದೊರೆತಿಲ್ಲ.

ಬೆಂಗಳೂರು, ಆ.4- ಬೊಮ್ಮಾಯಿ ಸಂಪುಟದಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ಸಿಕ್ಕಿದೆ. ಸಂಪುಟದಲ್ಲಿ ಏಳು ಮಂದಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ರಾಜ್ಯದ ಆರು ಜಿಲ್ಲೆಗಳಿಗೆ ತಲಾ ಎರಡು ಸಚಿವ ಸ್ಥಾನಗಳನ್ನು ನೀಡಿದರೆ ಬೆಂಗಳೂರು ನಗರ ಜಿಲ್ಲೆಗೆ 7 ಸಚಿವ ಸ್ಥಾನ ನೀಡಲಾಗಿದೆ. ಮುಂಬರುವ ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು 7 ಶಾಸಕರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಆರ್.ಅಶೋಕ್, ಬೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್, ಮುನಿರತ್ನ, ವಿ.ಸೋಮಣ್ಣ, ಗೋಪಾಲಯ್ಯ , ಅಶ್ವತ್ಥನಾರಾಯಣ್ ಅವರನ್ನು ಮತ್ತೆ …

Read More »

ಬಿಎಸ್ವೈ ನಾಯಕತ್ವದ ವಿರುದ್ಧ ಸಡ್ಡು ಹೊಡೆದವರಿಗೆ ಕೈತಪ್ಪಿದ ಮಂತ್ರಿ ಸ್ಥಾನ..!

ಬೆಂಗಳೂರು,ಆ.4- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವದ ವಿರುದ್ಧ ಸಡ್ಡು ಹೊಡೆದಿದ್ದ ಪ್ರಮುಖ ಮೂವರಿಗೆ ಮಂತ್ರಿ ಸ್ಥಾನ ಕೈ ತಪ್ಪಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಅವರಿಗೆ ಸಚಿವ ಸ್ಥಾನ ತಪ್ಪಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಈ ಮೂವರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಳಾಗುತ್ತಾರೆ ಎಂಬ ನಿರೀಕ್ಷೆ ಮಾಡಲಾಗಿತ್ತು. ಅದರಲ್ಲೂ ಒಕ್ಕಲಿಗ ಸಮುದಾಯದಿಂದ ಸಿ.ಪಿ.ಯೋಗೇಶ್ವರ್, ವೀರಶೈವ ಲಿಂಗಾಯಿತ ಪಂಚಮಸಾಲಿ ಸಮುದಾಯದಿಂದ ಅರವಿಂದ ಬೆಲ್ಲದ್ …

Read More »

29 ನೂತನ ಸಚಿವರ ಪಟ್ಟಿ ರಿಲೀಸ್, ಡಿಸಿಎಂ ಹುದ್ದೆ ರದ್ದು..!

ಬೆಂಗಳೂರು,ಆ.4-ಕೊನೆ ಕ್ಷಣದವರೆಗೂ ತೀವ್ರ ಕುತೂಹಲ ಕೆರಳಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟಕ್ಕೆ ಇಂದು 29 ಪಟ್ಟಿ ಬಿಡುಗಡೆಯಾಗುವ ಮೂಲಕ ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ತೆರೆಬಿದ್ದಿತು.ಮಧ್ಯಾಹ್ನ 2.15ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿ ಬೋಧಿಸುವರು. ಪ್ರಾದೇಶಿಕತೆ, ಸಾಮಾಜಿಕ ನ್ಯಾಯ, ಹಳಬರು ಹಾಗೂ ಹಿರಿಯರನ್ನು ಒಳಗೊಂಡ ಸಮತೋಲನದ ಸಂಪುಟ ರಚನೆಯಾಗಿದೆ. ಮಹತ್ವದ ಬೆಳವಣಿಗೆಯಲ್ಲಿ ಗಟ್ಟಿ ನಿರ್ಧಾರ ಕೈಗೊಂಡಿರುವ …

Read More »

9 ರ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಮನುಕುಲವೇ ತಲೆ ತಗ್ಗಿಸುವಂತಿದೆ. ದುಷ್ಕರ್ಮಿಗಳು 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ ಮಾಡಿ, ಬಳಿಕ ಬಲವಂತವಾಗಿ ಸುಟ್ಟು ಹಾಕಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ಜೊತೆಗೆ ಆಕೆ ವಿದ್ಯುತ್​ ಶಾಕ್​ನಿಂದ ಸಾವನ್ನಪ್ಪಿದ್ದಾಳೆ ಎಂದು ಆರೋಪಿಗಳು ಬಾಲಕಿಯ ಪೋಷಕರಿಗೆ ಹೇಳಿದ್ದಾರೆ. ಇಷ್ಟೇ ಅಲ್ಲದೇ, ಪೊಲೀಸರಿಗೆ ಈ ವಿಷಯ ತಿಳಿಸದಂತೆಯೂ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಈ ಪೈಶಾಚಿಕ …

Read More »

ಮೋದಿ ಭಕ್ತರಿಗೆ ಮೋದಿಯಿಂದಲೇ ಪಂಗನಾಮ ; ಸಿದ್ದರಾಮಯ್ಯ

ಬೆಂಗಳೂರು, ; ದೇಶದಲ್ಲಿ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಯುವಕರಿಗೆ ಉದ್ಯೋಗ ಇಲ್ಲ, ಬಡತನ ಪ್ರಮಾಣ ಮಿತಿಮೀರಿದೆ, ಹಸಿವಿನಿಂದ ಸತ್ತವರ ಬಗ್ಗೆ, ದೇಶದ ಜಿಡಿಪಿ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾತನಾಡುವುದಿಲ್ಲ , ಅದನ್ನು ಬಿಟ್ಟು ಪಾಕಿಸ್ತಾನ, ರಾಮಮಂದಿರ ಮುಂತಾದ ಭಾವನಾತ್ಮಕ ವಿಚಾರಗಳ ಬಗ್ಗೆಯಷ್ಟೇ ಜನರ ಗಮನ ಸೆಳೆಯುತ್ತಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಪದ್ಮನಾಭ ನಗರದಲ್ಲಿ ಆಯೋಜಿಸಿದ್ದ ದಿನಸಿ ಕಿಟ್ ಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ …

Read More »

ಸಿಎಂ ಸ್ವಗೃಹದ ಬಳಿ ಅಪಘಾತ; ಎರಡು ಕಾರುಗಳ ನಡುವೆ ಡಿಕ್ಕಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಸ್ವಗೃಹದ ಬಳಿ ಲಘು ಅಪಘಾತ ಸಂಭವಿಸಿದೆ. ಯಾವುದೇ ಅನಾಹುತು ಸಂಭವಿಸಿಲ್ಲ. ಆರ್. ಟಿ. ನಗರದ ಮುಖ್ಯಮಂತ್ರಿ (Chief Minister) ನಿವಾಸದ ಬಳಿ ಘಟನೆ ನಡೆದಿದೆ. ಓನ್ ವೇ(one way) ಮಾಡಿರುವ ಹಿನ್ನಲೆ ವಾಹನ ಸವಾರರಿಗೆ ಗೊಂದಲವಾಗಿದ್ದು, ಅಪಘಾತಕ್ಕೆ( Accident) ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಆಂಧ್ರ ಮುಖ್ಯಮಂತ್ರಿ ಜಗನ್​ರೆಡ್ಡಿ ಚಿಕ್ಕಪ್ಪ ಹತ್ಯೆಯಾಗಿ 2ವರ್ಷದ ಬಳಿಕ ಸಿಕ್ಕಿಬಿದ್ದ ಆರೋಪಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್​.ರಾಜಶೇಖರ್​ ರೆಡ್ಡಿ …

Read More »

ಬೊಮ್ಮಾಯಿ ಸಚಿವ ಸಂಪುಟ; ಡಿಸಿಎಂ ಇಲ್ಲ, ವಿಜಯೇಂದ್ರ ಹೆಸರೂ ಇಲ್ಲ

ಭಾನುವಾರ ರಾತ್ರಿಯಿಂದಲೇ ನಡೆದಿರುವ ಕರ್ನಾಟಕ ಬಿಜೆಪಿ ಸರ್ಕಾರದ ಸಂಪುಟ ರಚನೆಯ ಕಸರತ್ತು ಮಂಗಳವಾರ ತಡರಾತ್ರಿ ವೇಳೆಗೆ ಪೂರ್ಣಗೊಂಡಿದೆ. ಇವತ್ತೇ ಹೊಸ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವುದು ಖಾತರಿಯಾಗಿದೆ. ಇಂದು ಮಧ್ಯಾಹ್ನದ ನಂತರ 29 ಜನ ಸಚಿವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಕಿರಿಯ ಮಗ ಬಿ.ವೈ. ವಿಜಯೇಂದ್ರಗೆ ಉಪ ಮುಖ್ಯಮಂತ್ರಿ ಸ್ಥಾನ ಹಾಗೂ ಆಯಕಟ್ಟಿನ ಖಾತೆಯೇ ಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ …

Read More »

ಅಂತಿಮವಾಗಿ ಬೆಳಗಾವಿಯಿಂದ ಇಬ್ಬರಿಗೆ ಮಾತ್ರ ಸ್ಥಾನ ನೀಡಿದಂತಾಗಿದೆ.

ಬೆಳಗಾವಿ – ಯಡಿಯೂರಪ್ಪ ಸಚಿವಸಂಪುಟದಲ್ಲಿ ಉಪಮುಖ್ಯಮಂತ್ರಿ ಸೇರಿ ನಾಲ್ಕು ಸಚಿವಸ್ಥಾನ ಪಡೆದಿದ್ದ ಬೆಳಗಾವಿ ಬೊಮ್ಮಾಯಿ ಸಂಪುಟದಲ್ಲಿ ಕೇವಲ 2 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಯಡಿಯೂರಪ್ಪ ಸಂಪುಟದಲ್ಲಿ ಕೊನೆಯ ಕ್ಷಣದಲ್ಲಿ ಸ್ಥಾನ ಪಡೆದಿದ್ದ ಉಮೇಶ ಕತ್ತಿ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ಯಡಿಯೂರಪ್ಪ ಸಂಪುಟದಲ್ಲಿ ಆರಂಭದಿಂದಲೂ ಸ್ಥಾನ ಪಡೆದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಹಲವು ಕ್ರಾಂತಿಕಾರಕ ಯೋಜನೆಗಳನ್ನು ರೂಪಿಸಿದ್ದ ಶಶಿಕಲಾ ಜೊಲ್ಲೆ ಕೂಡ ಮತ್ತೆ ಸ್ಥಾನ ಪಡೆದಿದ್ದಾರೆ. ಜೊಲ್ಲೆ ದಂಪತಿ …

Read More »

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ ರಾಜಭವನದಲ್ಲಿ ನಡೆಯಲಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 29 ನೂತನ ಸಚಿವರಿಗೆ ಪ್ರಮಾಣವಚನ ಭೋದಿಸಲಿದ್ದು, ಕಾರ್ಯಕ್ರಮಕ್ಕೆ ಕ್ಷಣಗಣೆ ಆರಂಭವಾಗಿದೆ. ಪ್ರಮಾಣ ವಚನ ಸ್ವೀಕರಿಸಲಿರುವವರು – 1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ 2.ಆರ್.ಅಶೋಕ್- ಪದ್ಮನಾಭ ನಗರ 3.ಬಿಸಿ ಪಾಟೀಲ್ – ಹಿರೇಕೇರೂರು 4.ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ 5.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು 6.ಉಮೇಶ್ ಕತ್ತಿ- ಹುಕ್ಕೇರಿ 7.ಎಸ್.ಟಿ.ಸೋಮಶೇಖರ್- …

Read More »

ಖಾನಾಪೂರ ಪಟ್ಟಣದ ಮುಖ್ಯ ರಸ್ತೆಯನ್ನು ಸಿ ಸಿ ರಸ್ತೆ ಮಾಡಬೇಕೆಂದು ಹಾಗೂ ಸೇತುವೆಯ ಎತ್ತರವನ್ನು ಹೆಚ್ಚಿಸುವ ಸಲುವಾಗಿ ಖಾನಾಪೂರದ ಕಾರ್ಯಸಾಮ್ರಾಜ್ಞಿ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಶ್ರೀ ನೀತಿನ್ ಗಡ್ಕರಿ ರವರನ್ನು ಭೇಟಿ

ಲೋಂಡಾ-ರಾಮನಗರ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ದುರಸ್ತಿ ಹಾಗೂ ಖಾನಾಪೂರ ಪಟ್ಟಣದ ಮುಖ್ಯ ರಸ್ತೆಯನ್ನು ಸಿ ಸಿ ರಸ್ತೆ ಮಾಡಬೇಕೆಂದು ಹಾಗೂ ಸೇತುವೆಯ ಎತ್ತರವನ್ನು ಹೆಚ್ಚಿಸುವ ಸಲುವಾಗಿ ಖಾನಾಪೂರದ ಕಾರ್ಯಸಾಮ್ರಾಜ್ಞಿ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಶ್ರೀ ನೀತಿನ್ ಗಡ್ಕರಿ ರವರನ್ನು ಭೇಟಿಯಾದರು.* ಇಂದು ಸಂಜೆ 5 ಗಂಟೆಗೆ ದೆಹಲಿಯಲ್ಲಿ ಮಾನ್ಯ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ …

Read More »