Daily Archives: ಸೆಪ್ಟೆಂಬರ್ 2, 2021

ಸಾಮಾಜಿಕ ಮಾಧ್ಯಮ, ಕೆಲ ವಾಹಿನಿಗಳಲ್ಲಿ ಸುಳ್ಳು, ಸೌಹಾರ್ದ ಕದಡುವ ಸುದ್ದಿ: ಸುಪ್ರೀಂ

ನವದೆಹಲಿ: ಸಾಮಾಜಿಕ ಮಾಧ್ಯಮಗಳು ಹಾಗೂ ವೆಬ್‌ಪೋರ್ಟಲ್‌ಗಳಲ್ಲಿ ಸುಳ್ಳು ಹಾಗೂ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂಥ ಸುದ್ದಿಗಳನ್ನು ಹರಡಲಾಗುತ್ತಿದೆ. ಕೆಲವು ಚಾನೆಲ್‌ಗಳು ತಾವು ಬಿತ್ತರಿಸುವ ಸುದ್ದಿಗಳಿಗೂ ಕೋಮು ಬಣ್ಣ ಬಳಿಯುತ್ತಿವೆ ಎಂದು ಸುಪ್ರೀಂಕೋರ್ಟ್‌ ಗುರುವಾರ ಕಳವಳ ವ್ಯಕ್ತಪಡಿಸಿದೆ. ಜಮಿಯಾತ್‌ ಉಲೇಮಾ-ಐ-ಹಿಂದ್‌ ಸಂಘಟನೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ ಹಾಗೂ ಎ.ಎಸ್‌.ಬೋಪಣ್ಣ ಅವರಿರುವ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು. ದೆಹಲಿಯ ಮರ್ಕಜ್‌ ನಿಜಾಮುದ್ದೀನ್‌ನಲ್ಲಿ ನಡೆದಿದ್ದ ಧಾರ್ಮಿಕ ಸಮಾವೇಶಕ್ಕೆ ಸಂಬಂಧಿಸಿದಂತೆ …

Read More »

ಎತ್ತಿನಬಂಡಿ ಓಟ ಸ್ಪರ್ಧೆ: ಷರತ್ತುಗಳೊಂದಿಗೆ ಹೈಕೋರ್ಟ್ ಹಸಿರು ನಿಶಾನೆ

ಬೆಂಗಳೂರು: ಸುಪ್ರೀಂ ಕೋರ್ಟ್‌ ವಿಧಿಸಿರುವ ಷರತ್ತುಗಳಿಗೆ ಒಳಪಟ್ಟು ರಾಜ್ಯದಲ್ಲಿ ಎತ್ತಿನ ಬಂಡಿ ಓಟದ ಸ್ಪರ್ಧೆ ಆಯೋಜನೆ ಮಾಡಲು ಹೈಕೋರ್ಟ್‌ ಬುಧವಾರ ಹಸಿರು ನಿಶಾನೆ ತೋರಿದೆ. ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹಬ್ಬಗಳ ಸಂದರ್ಭಗಳಲ್ಲಿ ಎತ್ತಿನ ಬಂಡಿ ಓಟದ ಸ್ಪರ್ಧೆ ಆಯೋಜಿಸುವುದನ್ನು ಪ್ರಶ್ನಿಸಿ ಮೈಸೂರಿನ ಪೀಪಲ್‌ ಫಾರ್‌ ಅನಿಮಲ್ಸ್‌. ವೆಲ್ಫೇರ್‌ ಆರ್ಗನೈಸೇಷನ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ …

Read More »

ಎತ್ತಿನ ಬಂಡಿ ಓಟ: ‘ಸುಪ್ರೀಂ’ ಆದೇಶ ಪಾಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಸುಪ್ರೀಂಕೋರ್ಟ್‌ ವಿಧಿಸಿರುವ ಷರತ್ತುಗಳ ಪಾಲನೆಯನ್ನು ಖಾತರಿಪಡಿಸಿಕೊಂಡ ಬಳಿಕವೇ ಎತ್ತಿನ ಬಂಡಿಗಳ ಓಟದ ಸ್ಪರ್ಧೆಗೆ ಅನುಮತಿ ನೀಡುವಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮೈಸೂರಿನ ಪೀಪಲ್‌ ಫಾರ್‌ ಅನಿಮಲ್‌ ಎಂಬ ಸರ್ಕಾರೇತರ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಗೊಳಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ‘ಪ್ರಾಣಿಗಳ ಹಿಂಸೆ ತಡೆ ಕಾಯ್ದೆ-2017 (ಎರಡನೇ ತಿದ್ದುಪಡಿ ಕಾಯ್ದೆ)ಯ ಪ್ರಕಾರ, ಎತ್ತಿನ ಬಂಡಿ ಓಟದ ಸ್ಪರ್ಧೆಗೆ …

Read More »

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪುತ್ರಿಯ ಅದ್ಧೂರಿ ವಿವಾಹ: ಗಣ್ಯರ ದಂಡು

ಹುಬ್ಬಳ್ಳಿ: ಇಲ್ಲಿನ ಡೆನಿಸನ್ಸ್ ಹೋಟೆಲ್‌ನಲ್ಲಿ ಬುಧವಾರ ಅದ್ಧೂರಿಯಾಗಿ ನಡೆದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪುತ್ರಿ ಅರ್ಪಿತಾ ಮದುವೆ ಸಮಾರಂಭದಲ್ಲಿ ರಾಷ್ಟ್ರ, ರಾಜ್ಯ ನಾಯಕರ ದಂಡೇ ಭಾಗವಹಿಸಿದೆ. ರಾಜ್ಯಪಾಲ ಥಾವರಚಂದ್‌ ಗೆಹಲೋತ್, ಕೇಂದ್ರ ಸಚಿವರಾದ ಡಿ.ರಾವ್‌ಸಾಹೇಬ್ ದಾದಾರಾವ್‌, ಅರ್ಜುನ್‌ ರಾಮಪಾಲ್‌ ಮೇಘ್ವಾಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್‌. ಅಶೋಕ್, ಹಾಲಪ್ಪ ಆಚಾರ್‌, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಮತ್ತಿತರರು ಪಾಲ್ಗೊಂಡಿದ್ದರು. ಗುರವಾರ …

Read More »

ಕೇಂದ್ರದ ಅನ್ಯಾಯ ಪ್ರಶ್ನಿಸುವ ತಾಕತ್ತು ಬಿಜೆಪಿ ನಾಯಕರಿಗಿದೆಯೇ? ಕಾಂಗ್ರೆಸ್‌ ಪ್ರಶ್ನೆ

ಬೆಂಗಳೂರು: ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುದಾನ ಕೊಡದಿರುವ ಕುರಿತ ಚರ್ಚೆಗೆ ಬಿಜೆಪಿ ತಯಾರಿದೆಯೇ ಎಂದು ಕಾಂಗ್ರೆಸ್‌ ಪ್ರಶ್ನೆ ಮಾಡಿದೆ. ಕೇಂದ್ರ ಪುರಸ್ಕೃತ ಹತ್ತು ಪ್ರಮುಖ ಯೋಜನೆಗಳಿಗೆ ಕೇಂದ್ರ ಸರ್ಕಾರ ಪ್ರಸಕ್ತ ಆರ್ಥಿಕ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಹಣ ನೀಡಿಲ್ಲ. ರಾಜ್ಯ ಸರ್ಕಾರ ಕೂಡ ಹೊಂದಾಣಿಕೆ ಅನುದಾನ ಬಿಡುಗಡೆ ಮಾಡದೇ ಇರುವುದರಿಂದ ಬಹುತೇಕ ಯೋಜನೆಗಳ ಅನುಷ್ಠಾನ ಕುಂಠಿತಗೊಂಡಿದೆ. ಈ ಬಗ್ಗೆ ‘ಕೈಕೊಟ್ಟ ಕೇಂದ್ರ: ಯೋಜನೆ ಸ್ಥಗಿತ’ ಎಂಬ ಶೀರ್ಷಿಕೆಯ ಅಡಿಯಲ್ಲಿ ಪ್ರಜಾವಾಣಿಯ ಗುರುವಾರದ …

Read More »

ರೈತರ ತಲೆ ಒಡೆಯಿರಿ ಎಂದ ಅಧಿಕಾರಿ ವರ್ಗಾವಣೆ

ಪ್ರತಿಭಟನಾನಿರತ ರೈತರ ಮೇಲೆ ದಾಳಿ ಮಾಡಲು ಆದೇಶಿಸುತ್ತಾ ಕ್ಯಾಮೆರಾದಲ್ಲಿ ಸಿಕ್ಕಿಹಾಕಿಕೊಂಡ ಹರಿಯಾಣಾ ಸರ್ಕಾರದ ಉನ್ನತ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲಾಗಿದೆ. ‘ರೈತರ ತಲೆಗಳನ್ನು ಒಡೆಯಿರಿ’ ಎಂದು ಪೊಲೀಸ್ ಸಿಬ್ಬಂದಿಗೆ ಆದೇಶ ಕೊಟ್ಟ ಕರ್ನಲ್ ಜಿಲ್ಲೆಯ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ಆಯುಶ್ ಸಿನ್ಹಾರನ್ನು ಹರಿಯಾಣಾ ಸರ್ಕಾರದ ನಾಗರಿಕ ಸಂಪನ್ಮೂಲ ಮಾಹಿತಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. “ಅದೇನೇ ಆಗಲಿ, ಯಾರೊಬ್ಬರೂ ಈ ಬ್ಯಾರಿಕೇಡ್‌ಗಳನ್ನು ದಾಟಕೂಡದು. ಸ್ಪಷ್ಟವಾಗಿ ಹೇಳುತ್ತೇನೆ, ಈ ಗೆರೆ ದಾಟಲು …

Read More »

ಸೈಟ್, ಮನೆ, ಜಮೀನು, ಫ್ಲ್ಯಾಟ್ ಖರೀದಿಸುವವರಿಗೆ ಸಿಹಿ ಸುದ್ದಿ: ಮಾರ್ಗಸೂಚಿ ದರ ಕಡಿತ ಸಾಧ್ಯತೆ

ಬೆಂಗಳೂರು: ನಿವೇಶನ, ಜಮೀನು, ಫ್ಲಾಟ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ರಾಜ್ಯ ಸರ್ಕಾರ ಭೂಮಿ ಮಾರ್ಗಸೂಚಿ ದರ ಕಡಿತಗೊಳಿಸಲು ಮುಂದಾಗಿದೆ. ಕೃಷಿ ಜಮೀನು, ಕೃಷಿಯೇತರ ಜಮೀನು, ಮನೆ, ಅಪಾರ್ಟ್ಮೆಂಟ್, ವಾಣಿಜ್ಯ ಮಳಿಗೆಗಳ ಮಾರಾಟ ಮತ್ತು ಖರೀದಿಸುವಾಗ ಮಾರ್ಗಸೂಚಿ ದರ ಹೆಚ್ಚಾಗಿರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ನೋಂದಣಿ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮಾರ್ಗಸೂಚಿ ದರ ಕಡಿತಗೊಳಿಸಿ ರಿಯಲ್ ಎಸ್ಟೇಟ್ ಉದ್ಯಮ ಚೇತರಿಕೆಗೆ ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಕೊರೋನಾದಿಂದಾಗಿ ನೆಲಕಚ್ಚಿರುವ ರಿಯಲ್ ಎಸ್ಟೇಟ್ …

Read More »

E-KYC : ಪಡಿತರ ಚೀಟಿದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕಲಬುರಗಿ : ಸರ್ಕಾರದ ನಿರ್ದೇಶನದಂತೆ ಎಲ್ಲಾ ಪಡಿತರ ಚೀಟಿದಾರರು ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ಬಯೋಮೆಟ್ರಿಕ್ ನೀಡಿ ಇ-ಕೆವೈಸಿ (ಜೀವ ಮಾಪಕ/ಹೆಬ್ಬಟ್ಟು ಗುರುತಿನ ದೃಢೀಕರಣ) ಮಾಡಿಕೊಳ್ಳಬೇಕಾಗಿದೆ. ಆದ್ದರಿಂದ ಜಿಲ್ಲೆಯ ಇನ್ನುಳಿದ ಪಡಿತರ ಚೀಟಿದಾರರು 2021ರ ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ರೊಳಗಾಗಿ ಇ-ಕೆವೈಸಿ ಮಾಡಿಕೊಳ್ಳಬೇಕೆಂದು ಕಲಬುರಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.   ಕಲಬುರಗಿ ಜಿಲ್ಲೆಯ 983 ನ್ಯಾಯಬೆಲೆ …

Read More »

ವಿಜಯಪುರ: ನಿಗೂಢ ಭಾರಿ ಶಬ್ದಕ್ಕೆ ನಿದ್ದೆಗೆಟ್ಟು ಜಾಗರಣೆ ಮಾಡಿದ ಜನ.!

ವಿಜಯಪುರ: ಜಿಲ್ಲೆಯ ಹಲವೆಡೆ ಬುಧವಾರ ರಾತ್ರಿ ಮತ್ತೆ ನಿಗೂಢ ಶಬ್ಧ ಕೇಳಿ ಬಂದಿದೆ. ಪರಿಣಾಮ ಭೂಕಂಪನದ ಅನುಭವ ಎಂದುಕೊಂಡ ಜನರು ಭಯದಿಂದ ಇಡೀ ರಾತ್ರಿ ಮನೆಯಿಂದ ಹೊರಗೆ ಓಡಿಬಂದು ನಿದ್ದೆ ಇಲ್ಲದೇ ಜಾಗರಣೆ ಮಾಡಿದ್ದಾರೆ. ಬಸವನಬಾಗೇವಾಡಿ ತಾಲೂಕಿನ ಕರಿಭಂಟನಾಳ, ಪಿ.ಬಿ‌.ಹುಣಶ್ಯಾಳ ಗ್ರಾಮದಲ್ಲಿ ಬುಧವಾರ ರಾತ್ರಿ ಭೂಕಂಪದ ಮಾದರಿಯಲ್ಲಿ ಭಾರಿ ಸದ್ದು ಕೇಳಿಬಂದಿದೆ. ಮನೆಯಲ್ಲಿ ಪಾತ್ರೆಗಳು, ಇತರೆ ವಸ್ತುಗಳು ಅಲುಗಾಡಿ ಕೆಳಗೆ ಬಿದ್ದಿವೆ. ಇದರಿಂದ ಭಯಗೊಂಡ ಗ್ರಾಮದ ಜನರು ಮನೆಯಿಂದ ಹೊರಗೆ ಓಡಿ …

Read More »

ಮೋದಿ ಸರ್ಕಾರವು ಬಂಡವಾಳಶಾಯಿ ಕೈಗೊಂಬೆ: ಸಿದ್ದರಾಮಯ್ಯ ಆರೋಪ

ಬೆಂಗಳೂರು: ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಉದ್ಯಮಿಗಳ 7 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ. ಆ ಪೈಕಿ ಅದಾನಿ ಅವರದ್ದೇ 4.50 ಲಕ್ಷ ಕೋಟಿ ರೂ. ಎನ್ ಪಿಎ ಇದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಜಗತ್ತಿನ ಅಭಿವೃದ್ದಿ ಹೊಂದುವ ವೇಗದ ದೇಶಗಳಲ್ಲಿ ಭಾರತ 5ನೇ ಸ್ಥಾನದಲ್ಲಿತ್ತು. ಈಗ 193 ದೇಶಗಳ …

Read More »