Daily Archives: ಸೆಪ್ಟೆಂಬರ್ 2, 2021

ʼಬಿಗ್‌ ಬಾಸ್‌ 13ʼ ರ ವಿಜೇತ ಸಿದ್ದಾರ್ಥ್‌ ಶುಕ್ಲಾ ಇನ್ನಿಲ್ಲ

ಜನಪ್ರಿಯ ರಿಯಾಲಿಟಿ ಶೋ ʼಬಿಗ್‌ ಬಾಸ್‌ 13ʼ ರ ವಿಜೇತರಾಗಿದ್ದ ಸಿದ್ದಾರ್ಥ್‌ ಶುಕ್ಲಾ ವಿಧಿವಶರಾಗಿದ್ದಾರೆ. 40 ವರ್ಷದ ಸಿದ್ದಾರ್ಥ್‌ ಶುಕ್ಲಾ ಸೋಮವಾರ ರಾತ್ರಿ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. ಡ್ಯಾನ್ಸ್‌ ದಿವಾನೆ 3 ರಲ್ಲೂ ತಮ್ಮ ಗೆಳತಿ ಶೆಹನಾಜ್‌ ಗಿಲ್‌ ಜೊತೆ ಸಿದ್ದಾರ್ಥ್‌ ಶುಕ್ಲಾ ಕಾಣಿಸಿಕೊಂಡಿದ್ದರು. ಸಣ್ಣ ವಯಸ್ಸಿನಲ್ಲಿಯೇ ಸಿದ್ದಾರ್ಥ್‌ ಶುಕ್ಲಾ ಇಹಲೋಕ ತ್ಯಜಿಸಿರುವುದು ಚಿತ್ರರಂಗದವರನ್ನು ದಿಗ್ಬ್ರಮೆಗೊಳಿಸಿದೆ. ಡಿಸೆಂಬರ್‌ 12, 1980 ರಂದು ಮುಂಬೈನಲ್ಲಿ ಸಿದ್ದಾರ್ಥ್‌ ಶುಕ್ಲಾ ಜನಿಸಿದ್ದು, ಮೂಲತಃ ಉತ್ತರ …

Read More »

ಜೆಡಿಎಸ್‌ದ್ದು ಹಣದ ಮೇಲೆ ರಾಜಕಾರಣ ಮಾಡುವ ಸಂಸ್ಕೃತಿ: ನಳಿನ್‌ ಕುಮಾರ್‌ ಕಟೀಲ್‌

ಮೈಸೂರು: ಜೆಡಿಎಸ್ ಪಕ್ಷದ್ದು ಹಣದ ಮೇಲೆ ರಾಜಕಾರಣ ಮಾಡುವ ಸಂಸ್ಕೃತಿ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಬುಧವಾರ ಇಲ್ಲಿ ತಿರುಗೇಟು ನೀಡಿದರು. ‘ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಹಣ ವಸೂಲಿಗಾಗಿ ಆಗಾಗ್ಗೆ ರಾಜ್ಯಕ್ಕೆ ಬರುತ್ತಿರುತ್ತಾರೆ’ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ ಅವರು ತಿರುಗೇಟು ನೀಡಿದ್ದಾರೆ. ‘ತಮ್ಮ ಅನುಭವವನ್ನು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ. ಕಾಮಾಲೆ ಕಣ್ಣಿಗೆ ಎಲ್ಲವೂ ಹಳದಿಯಾಗಿ ಕಾಣುತ್ತದೆ. ರಾಜ್ಯ, ದೇಶ ಆಳಿದ ಇವರ ನಾಲಿಗೆ ಸರಿಯಾಗಿದ್ದಿದ್ದರೆ …

Read More »

ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ: ಶ್ರೀಮಂತ ಪಾಟೀಲ್

ಬೆಳಗಾವಿ: ಸರ್ಕಾರ ನೆರೆ ಪರಿಹಾರ ನೀಡದೇ ಇದ್ದರೆ ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೆಂಪವಾಡ ಗ್ರಾಮದ ನೆರೆ ಪರಿಹಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದೆ. ಈ ಕುರಿತು ನಾನು ಸಿಎಂ ಬಸವರಾಜ ಬೊಮ್ಮಾಯಿ ಅವರ ಬಳಿ ಮಾತನಾಡಿದ್ದೇನೆ. …

Read More »

ಬೆಲೆ ಏರಿಕೆ ವಿರುದ್ಧ ಸದನದ ಹೊರಗೆ, ಒಳಗೆ ಹೋರಾಟಕ್ಕೆ ಕಾಂಗ್ರೆಸ್ ಸಿದ್ದತೆ: ಡಿಕೆಶಿ

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಆಗುತ್ತಿದೆ. ಗ್ಯಾಸ್, ಆಟೋ ಗ್ಯಾಸ್ ದರ ಸಹಾ ಹೆಚ್ಚಳವಾಗುತ್ತಿರುವುದರ ವಿರುದ್ಧ ಕಾಂಗ್ರೆಸ್ ಹೋರಾಟ ರೂಪಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ಸಂಬಂಧ ಸೆಪ್ಟಂಬರ್ 5 ಹಾಗೂ 6 ರಂದು ಪಕ್ಷದ ಮುಖಂಡರ ಸಭೆ ನಡೆಸಿ ತೀರ್ಮಾನ ಮಾಡುತ್ತೇವೆ. ಸದನದಲ್ಲೂ ಈ ವಿಚಾರ ಇಟ್ಟುಕೊಂಡು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ. ಚಾಮರಾಜನಗರದಲ್ಲಿ ನೋ ವ್ಯಾಕ್ಸಿನ್ …

Read More »

ಪಿಎಚ್‍ಡಿ ವ್ಯಾಸಂಗ ಬೇಡ ಎಂದ ಪಾಲಕರು- ಯುವತಿ ಆತ್ಮಹತ್ಯೆ

ಬಳ್ಳಾರಿ: ಪಿಎಚ್‍ಡಿ ವ್ಯಾಸಂಗ ಮಾಡುವುದು ಬೇಡ ಎಂದು ಪೋಷಕರು ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಿನಿ ಗ್ರಾಮದಲ್ಲಿ ನಡೆದಿದೆ. ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಯು.ಎನ್. ಪೂಜಾ(24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಪೂಜಾ ಎಂ.ಎಸ್ಸಿ ಮುಗಿಸಿಕೊಂಡು ಬಿ.ಎಡ್ ಮಾಡುತ್ತಿದ್ದರು. ಈಗ ಪಿಎಚ್‍ಡಿ ಮಾಡುವುದದಾಗಿ ತಂದೆಯೊಂದಿಗೆ ತನ್ನ ಅಭಿಪ್ರಾಯ ತಿಳಿಸಿದ್ದಾರೆ. ಅದಕ್ಕೆ ತಂದೆ ನಾಗರಾಜ್, ಪಿಎಚ್‍ಡಿ ಮಾಡುವುದು ಬೇಡ ಎಂದು ಹೇಳಿದ್ದಾರೆ.ತಂದೆ ಪಿಎಚ್‍ಡಿ ಮಾಡುವುದು …

Read More »

ಬೆಳಗಾವಿಯಲ್ಲಿ ಒಟ್ಟು ಮೌಲ್ಯ ರೂ. 6.83 ಲಕ್ಷ ರೂ ಮದ್ಯ ವಶ

ಬೆಳಗಾವಿ – ಮಹಾನಗರ ಪಾಲಿಕೆ ಚುನಾವಣೆಗೆ ಕೆಲವೇ ಗಂಟೆ ಬಾಕಿ ಇರುವಾಗ ಬೆಳಗಾವಿಯಲ್ಲಿ ಅಪಾರ ಪ್ರಮಾಣದಲ್ಲಿ ಗೋವಾ ಮದ್ಯ ವಶಪಡಿಸಿಕೊಳ್ಳಲಾಗಿದೆ. ಬುಧವಾರ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಅಬಕಾರಿ ನಿರೀಕ್ಷಕರು ಹಾಗೂ ಅವರ ಸಿಬ್ಬಂದಿ ಸೇರಿ ಮಜಗಾಂವ ಕ್ರಾಸ್ ಹತ್ತಿರ ರಸ್ತೆಯಲ್ಲಿ ಖಚಿತ ಮಾಹಿತಿ ಮೇರೆಗೆ ರಸ್ತೆಗಾವಲು ಹಾಗೂ ವಾಹನ ತಪಾಸಣೆ ಮಾಡುತ್ತಿರುವಾಗ ಒಂದು ಹುಂಡೈ ಐ-೨೦ ಕಾರ್ (ಸಂಖ್ಯೆ ಜಿಎ-೦೩ ಎಚ್-೮೬೪೪)    ತಪಾಸಣೆ ಮಾಡಿದಾಗ ವಾಹನದಲ್ಲಿ ಅಪಾರ …

Read More »

ಬೆಂಗಳೂರಿನ ಕಾರು ಅಪಘಾತ ಪ್ರಕರಣ: ಬಾರ್‌ನಲ್ಲಿ ಮದ್ಯ ಖರೀದಿ, ಕಾರಿನಲ್ಲೇ ಪಾರ್ಟಿ

ಬೆಂಗಳೂರು: ಕೋರಮಂಗಲದ 80 ಅಡಿ ರಸ್ತೆಯಲ್ಲಿ ಔಡಿ ಕ್ಯೂ3 ಕಾರು ಅಪಘಾತ ಸಂಭವಿಸಿ ಏಳು ಮಂದಿ ಮೃತಪಟ್ಟ ಪ್ರಕರಣದ ಕುರಿತು ಆಗ್ನೇಯ ವಿಭಾಗದ (ಸಂಚಾರ) ಎಸಿಪಿ ನೇತೃತ್ವದ ತಂಡ ತನಿಖೆ ಚುರುಕುಗೊಳಿಸಿದೆ. ಮೃತರು ಓಡಾಡಿದ್ದ ಸ್ಥಳಗಳ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸುತ್ತಿದೆ. ‘ಕಾರು ಚಾಲಕನ ಅತಿವೇಗದ ಚಾಲನೆ ಹಾಗೂ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಚಾಲಕನ ವಿರುದ್ಧವೇ ಪ್ರಕರಣ ದಾಖಲಾಗಿದೆ. ಕಾರಿನಲ್ಲಿದ್ದ ಏಳು ಮಂದಿಯೂ ಮೃತಪಟ್ಟಿದ್ದಾರೆ. ಹೀಗಾಗಿ, ಅಪಘಾತ …

Read More »

ಬೈಕ್​-ಗೂಡ್ಸ್​ ವಾಹನ ಮಧ್ಯೆ ಭೀಕರ ಅಪಘಾತ; ಇಬ್ಬರು ದುರ್ಮರಣ

ಧಾರವಾಡ: ಬೈಕ್ ಮತ್ತು ಗೂಡ್ಸ್​ ವಾಹನದ ಮಧ್ಯೆ ಭೀಕರ ಡಿಕ್ಕಿ ಸಂಭವಿಸಿದ ಘಟನೆ ತಾಲೂಕಿನ ಶಿಂಗನಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಡಿವಾಳೆಪ್ಪ ಬಸಪ್ಪ ಪೂಜಾರ, ಮಹದೇವ ಸಹದೇವಪ್ಪ ಲಕ್ಕಣ್ಣನವರ ಸಾವನ್ನಪ್ಪಿದ ದುರ್ದೈವಿಗಳು. ಇವರೆಲ್ಲ ಧಾರವಾಡ ತಾಲೂಕಿನ ಬೇಲೂರ ಗ್ರಾಮದವರು ಅಂತಾ ತಿಳಿದು ಬಂದಿದೆ. ಗರಗ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

Read More »

ಸೆ.20ಕ್ಕೆ ಸಿಇಟಿ ಫ‌ಲಿತಾಂಶ ಸಾಧ್ಯತೆ?

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫ‌ಲಿತಾಂಶ ಸೆ.20ರಂದು ಹೊರಬೀಳುವ ಸಾಧ್ಯತೆಯಿದೆ. ಎಂಜಿನಿಯರಿಂಗ್‌ ಮೊದಲಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿಗಳ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯವೂ ನಡೆಯುತ್ತಿದೆ. ಸೆ.20ರಂದು ಫ‌ಲಿತಾಂಶ ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪ್ರಸಕ್ತ ಸಾಲಿಗೆ ಅನ್ವಯವಾಗುವಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ …

Read More »

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ಕಾರ್ಯಕ್ರಮ ಹುಬ್ಬಳ್ಳಿಯ ಖಾಸಗಿ ಹೋಟೆಲ್​ನಲ್ಲಿ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ಕಾರ್ಯಕ್ರಮ ಹುಬ್ಬಳ್ಳಿಯ ಖಾಸಗಿ ಹೋಟೆಲ್​ನಲ್ಲಿ ನಡೆಯುತ್ತಿದ್ದು, ಅನೇಕ ಗಣ್ಯರು ಭಾಗಿಯಾಗಿ ನವ ವಧು-ವರರನ್ನು ಹಾರೈಸಿದರು.   ಜೋಶಿ ಪುತ್ರಿ ಅರ್ಪಿತಾ ಮತ್ತು ಹೃಷಿಕೇಶ ಮದುವೆ ಸಭಾರಂಭ ನಡೆಯುತ್ತಿದ್ದು, ಗೋಧೂಳಿ ಮುಹೂರ್ತದಲ್ಲಿ ನವಜೋಡಿ ಹಸೆಮಣೆ ಏರಿದೆ. ಜೋಶಿ ಪುತ್ರಿಯ ಮದುವೆ ಸಮಾರಂಭದಲ್ಲಿ ರಾಜ್ಯಪಾಲ ಥಾವರಚೆಂದ್ ಗೆಹ್ಲೋಟ್ ಹಾಗೂ ಕೇಂದ್ರ ಸಚಿವ ಮೇಘವಾಲ್ ಸೇರಿದಂತೆ ರಾಜ್ಯದ ಬಿಜೆಪಿ ನಾಯಕರು ಭಾಗಿಯಾಗಿ ಶುಭ ಹಾರೈಸಿದ್ದಾರೆ. …

Read More »