Breaking News

Daily Archives: ಸೆಪ್ಟೆಂಬರ್ 2, 2021

ಸಬ್ ಇನ್ಸ್​ಪೆಕ್ಟರ್​ ನೇಮಕಾತಿ ಲಿಖಿತ ಪರೀಕ್ಷೆ ಮುಂದೂಡಿಕೆ: ಸೆ.26ರ ಬದಲಿಗೆ ಅ.3ಕ್ಕೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಸಬ್‌ ಇನ್ಸ್​ಪೆಕ್ಟರ್​ ಹುದ್ದೆಗಳ ನೇಮಕಾತಿಗೆ ನಿಗದಿಯಾಗಿದ್ದ ಲಿಖಿತ ಪರೀಕ್ಷೆ ದಿನಾಂಕವನ್ನು ತಾಂತ್ರಿಕ ಸಮಸ್ಯೆಯಿಂದ ಇಲಾಖೆ ಮುಂದೂಡಿದೆ. 545 ಸಬ್​ ಇನ್ಸ್​ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 26ಕ್ಕೆ ಲಿಖಿತ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ತಾಂತ್ರಿಕ ಸಮಸ್ಯೆಯಿಂದ ಅಂದು ಪರೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ. ಬದಲಿಗೆ ಅಕ್ಟೋಬರ್ 3ರ ಬೆಳಗ್ಗೆ 10.30 ರಿಂದ 12 ಗಂಟೆ ವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 1.30ರಿಂದ 3 ಗಂಟೆ ವರೆಗೆ …

Read More »

ಪಾನಿಪೂರಿ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಮಹಿಳೆಯೊಬ್ಬಳ ಆತ್ಮಹತ್ಯೆ

ಹುಡುಗಿಯರಿಗೆ ಪಾನಿಪುರಿ ಅಂದ್ರೆ ಪಂಚಪ್ರಾಣ. ಮಹಿಳೆಯೊಬ್ಬಳು ಪಾನಿಪೂರಿ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪುಣೆಯ ನಿವಾಸಿಯಾಗಿರುವ ಪ್ರತೀಕ್ಷಾ ಸರ್ವಾಡೆ ೨೦೧೯ ರಲ್ಲಿ ಗಹಿನಿನಾಥ್‌ ಸರ್ವಾಡೆ ಎಂಬವರನ್ನು ಮದುವೆಯಾಗಿದ್ದರು. ಗಹಿನಿನಾಥ್‌ ಸರ್ವಾಡೆ ಕೆಲಸದಿಂದ ಬರುವಾಗ ಪತ್ನಿಗೆ ತಿಳಿಸದೇ ಪಾನಿಪೂರಿಯನ್ನು ತಂದಿದ್ದರು. ಅಡುಗೆ ಮಾಡಿಟ್ಟಿದ್ದ ಪತ್ನಿ ಪ್ರತೀಕ್ಷಾ ಇದೇ ಕಾರಣಕ್ಕೆ ಕೋಪ ಮಾಡಿಕೊಂಡಿದ್ದಾಳೆ. ಮರುದಿನ ಪತಿ ಮನೆಯಲ್ಲಿ ಇಲ್ಲದ ವೇಳೆಯಲ್ಲಿ ವಿಷ ಸೇವನೆ ಮಾಡಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾಳೆ. …

Read More »

ದೇಶದ ಜನರನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದೇ ‘ಡಬಲ್ ಇಂಜಿನ್’ ಸರ್ಕಾರದ ದೊಡ್ಡ ಸಾಧನೆ: ದಿನೇಶ್ ಗುಂಡೂರಾವ್

ಬೆಂಗಳೂರು : ದೇಶದ ಜನರನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದೇ ‘ಡಬಲ್ ಇಂಜಿನ್’ ಸರ್ಕಾರದ ದೊಡ್ಡ ಸಾಧನೆ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ತೆರಿಗೆ ವಿಚಾರವಾಗಿ ಸರಕಾರದ ವಿರುದ್ಧ ಟ್ವೀಟ್ ಮಾಡಿದ ದಿನೇಶ್, ಜನರನ್ನು ತೆರಿಗೆ ವಿಷವರ್ತುಲಕ್ಕೆ ತಳ್ಳಿರುವ ಡಬಲ್ ಇಂಜಿನ್ ಸರ್ಕಾರ, ರಕ್ತ ಹೀರುವ ತಿಗಣೆಯಂತೆ ತೆರಿಗೆ ಹೀರುತ್ತಿದೆ. ದೇಶದ ಜನರಿಗೆ ದರಿದ್ರಭಾಗ್ಯ ಕಲ್ಪಿಸಿದ ಈ ಡಬಲ್ ಇಂಜಿನ್ ಸರ್ಕಾರ ಒಂದು ರೀತಿ ಸ್ಮಶಾನದ ಹೆಣವಿದ್ದಂತೆ ಎಂದು …

Read More »

ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ಪಿಎಸ್ ಐ ಅರ್ಜುನ್ ಬಂಧಿಸಿದ ಸಿಐಡಿ

ಚಿಕ್ಕಮಗಳೂರು, ಸೆ.1 ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣದ ಆರೋಪಿ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ ಐ ಅರ್ಜುನ್ ಅವರನ್ನು ಸಿಐಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆಂದು ತಿಳಿದು ಬಂದಿದೆ. 2021 ಮೇ 10ರಂದು ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್‍ಐ ಆಗಿದ್ದ ಅರ್ಜುನ್ ಎಂಬುವರು ಠಾಣಾವ್ಯಾಪ್ತಿಯ ಕಿರುಗುಂದ ಗ್ರಾಮದ ದಲಿತ ಯುವಕ ಪುನೀತ್ ಎಂಬಾತನನ್ನು ಪ್ರಕರಣವೊಂದರ ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆ ತಂದಿದ್ದರು. ಪಿಎಸ್‍ಐ ಅರ್ಜುನ್ ಅವರು …

Read More »

ಅತ್ಯಾಚಾರ ತಡೆದಿದ್ರೆ ಬೇಷ್ ಅನ್ನಬಹುದಿತ್ತು|ಸರ್ಕಾರ-ಪೊಲೀಸ್ ವಿರುದ್ಧ ಸಿದ್ಧರಾಮಯ್ಯ ಆಕ್ರೋಶ

ಮೈಸೂರು : ನಗರದಲ್ಲಿ ನಡೆದ ಗ್ಯಾಂಗ್ ರೇಪ್ ಬಹಳ ಹೇಯ ಕೃತ್ಯ. ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಕೃತ್ಯ. ಸರ್ಕಾರ ಈ ಪ್ರಕರಣವನ್ನು ಹಗುರವಾಗಿ ತೆಗೆದುಕೊಂಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಕಿಡಿ ಕಾರಿದರು. ಇಂದು (ಸೆ.01) ಅತ್ಯಾಚಾರ ನಡೆದ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಹರಿಹಾಯ್ದರು. ಇತ್ತೀಚಿನ ದಿನಗಳಲ್ಲಿ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿವೆ. ಮೈಸೂರು …

Read More »

ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮ ಪ್ರಸ್ತಾಪ ಮಾಡಿದ ಎಂ.ಬಿ.ಪಾಟೀಲ್‌

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಮತ್ತೆ ಪ್ರಸ್ತಾಪಿಸಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್‌, ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಪಂಚಪೀಠದವರು ಎಲ್ಲರೂ ಸೇರಿ ಬಸವ ಧರ್ಮ ಆಗಬೇಕು. ಪ್ರತ್ಯೇಕ ಲಿಂಗಾಯತ ಧರ್ಮ ಆದರೆ ನಮಗೆ ಸೌಲಭ್ಯ ಸಿಗುತ್ತದೆ. ಮುಸ್ಲಿಂ, ಜೈನರ ಮಾದರಿಯಲ್ಲಿ ಅಲ್ಪಸಂಖ್ಯಾತ ಸ್ಥಾನಮಾನ ದೊರೆಯುತ್ತದೆ ಎಂದು ಹೇಳಿದರು. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿಗೆ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಕಾರಣವಲ್ಲ ಎಂದ ಅವರು, …

Read More »