Breaking News

Daily Archives: ಸೆಪ್ಟೆಂಬರ್ 5, 2021

ನಾಳೆಯಿಂದ ರಾಜ್ಯಾದ್ಯಂತ 6, 7 ಮತ್ತು 8ನೇ ತರಗತಿ ಆರಂಭ

ಬೆಂಗಳೂರು: ಇದೇ ಸೋಮವಾರ, ಸೆ. 6ರಿಂದ ರಾಜ್ಯಾದ್ಯಂತ 6, 7 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೂ ತರಗತಿ ಆರಂಭಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಶನಿವಾರ, ರವಿವಾರ ಸೋಂಕು ಪ್ರಕರಣ ಕಡಿಮೆಯಾಗಿ, ಪಾಸಿಟಿವಿಟಿ ದರ ಶೇ. 2ಕ್ಕಿಂತ ಕಡಿಮೆಯಾದರೆ ಇಲ್ಲೂ ಶಾಲಾರಂಭ ಖಚಿತ. ಶನಿವಾರ ಐದು ಗಡಿ ಜಿಲ್ಲೆಗಳ ಕೋವಿಡ್‌ 19 ಸ್ಥಿತಿಗತಿ ಕುರಿತು ವೀಡಿಯೋ ಕಾನ್ಫರೆನ್ಸ್‌ ಮೂಲಕ ಮಾಹಿತಿ ಪಡೆದ ಬಳಿಕ …

Read More »

ಜನರು ಆತಂಕ ಪಡುವ ಅಗತ್ಯವಿಲ್ಲ: ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದೆ: ಶಶಿಕಲಾ ಜೊಲ್ಲೆ

ಬೆಂಗಳೂರು: ವಿಜಯಪುರ ನಗರ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಶನಿವಾರ ರಾತ್ರಿ ಕೇಳಿ ಬಂದಿರುವ ದೊಡ್ಡ ಶಬ್ದದ ಬಗ್ಗೆ ಸೂಕ್ತ ಅಧ್ಯಯನ ನಡೆಸಿ ವರದಿ ನೀಡಲು ಭೂರ್ಗರ್ಭ ಶಾಸ್ತ್ರಜ್ಞರಿಗೆ ಸೂಚಿಸಲಾಗಿದೆ. ಅಲ್ಲದೆ ರಾಜ್ಯದ ವಿಪತ್ತು ನಿರ್ವಹಣಾ ಘಟಕಕ್ಕೆ ಈಗಾಗಲೇ ಸೂಚನೆ ನೀಡಲಾಗಿದ್ದು, ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಬೆಂಗಳೂರಿನಿಂದ ವಿಪತ್ತು ನಿರ್ವಹಣಾ ತಂಡ ವಿಜಯಪುರಕ್ಕೆ ಆಗಮಿಸಲಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ …

Read More »

ಉಜ್ವಲ ಯೋಜನೆ : ಈ ಕಾಗದವಿಲ್ಲದೆ ನೀವು ಉಚಿತ LPG ಸಿಲಿಂಡರ್ ಗಳನ್ನು ಪಡೆಯಲು ಸಾಧ್ಯವಿಲ್ಲ

 : ಉಜ್ವಲ ಯೋಜನೆ 2.0 ಅನ್ನು ಆಗಸ್ಟ್ 25 ರಿಂದ ಉತ್ತರ ಪ್ರದೇಶದಲ್ಲಿ ಪ್ರಾರಂಭಿಸಲಾಗಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯ ಮೊದಲ ಹಂತದ ಅಡಿಯಲ್ಲಿ ದೇಶದ 80 ದಶಲಕ್ಷಕ್ಕೂ ಹೆಚ್ಚು ಮಹಿಳೆಯರು ಹೊಗೆಯಿಂದ ಮುಕ್ತಿ ಪಡೆದಿದ್ದಾರೆ ಎಂದು ಸರ್ಕಾರ ಹೇಳಿಕೊಂಡಿದೆ. ಎರಡನೇ ಹಂತದಲ್ಲಿ ಈ ಯೋಜನೆಯಿಂದ ರಾಜ್ಯದ ಸುಮಾರು 20 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ. ಯೋಜನೆಯ ಎರಡನೇ ಹಂತದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ ಎಂದು ಸರ್ಕಾರ ಹೇಳುತ್ತದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ …

Read More »

ಆಧಾರ್ ನಲ್ಲಿ ನಿಮ್ಮ ಹಳೆಯ ಫೋಟೋವನ್ನು ನವೀಕರಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ಸರ್ಕಾರ, ಬ್ಯಾಂಕುಗಳು ಮತ್ತು ಇತರ ರಾಜ್ಯ ಬೆಂಬಲಿತ ಏಜೆನ್ಸಿಗಳು ನೀಡುವ ವಿವಿಧ ಸೇವೆಗಳ ಕೊಡುಗೆಗಳನ್ನು ಪಡೆಯಲು ಆಧಾರ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಹೊರಡಿಸಿದ 12 ಅಂಕಿಗಳ ಸಂಖ್ಯೆ ನಮ್ಮ ದೈನಂದಿನ ಜೀವನದಲ್ಲಿ ನಿಜವಾಗಿಯೂ ನಿರ್ಣಾಯಕವಾಗಿದೆ.   ಭಾರತೀಯ ಸರ್ಕಾರವು ಸೇವೆಯನ್ನು ಜಾರಿಗೆ ತಂದಾಗ ಹೆಚ್ಚಿನ ಭಾರತೀಯ ನಾಗರಿಕರು ವರ್ಷಗಳ ಹಿಂದೆ ಆಧಾರ್ ಕಾರ್ಡ್ ಗಾಗಿ ಅರ್ಜಿ ಹಾಕಿದ್ದರು. ಇದರ …

Read More »

ಸೂಕ್ತ ಸ್ಥಾನಮಾನ ದೊರೆತಿಲ್ಲ ಎಂದು ಕರಂದ್ಲಾಜೆ ಎದುರಿಗೆ ಕಣ್ಣೀರಿಟ್ಟ ಕಾರ್ಯಕರ್ತೆ!

ಕಲಬುರಗಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎದುರಿಗೆ ಬಿಜೆಪಿ ಮಹಿಳಾ ಕಾರ್ಯಕರ್ತೆಯೊಬ್ಬರು ಕಣ್ಣೀರು ಹಾಕಿದ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪಕ್ಷದಲ್ಲಿ ಸೂಕ್ತ ಸ್ಥಾನ ಕೊಡದಿದ್ದಕ್ಕೆ ಸಾವಿತ್ರಿ ಕುಳಗೇರಿ ಶೋಭಾ ಕರಂದ್ಲಾಜೆ ಮುಂದೆ ಕಣ್ಣೀರು ಇಟ್ಟಿದ್ದಾರೆ. ಸಾವಿತ್ರಿ ಕುಳಗೇರಿ ಬಿಜೆಪಿ ರಾಜ್ಯ ಮಹಿಳಾ ಕಾರ್ಯಕಾರಣಿ ಸದಸ್ಯೆಯಾಗಿದ್ದಾರೆ. 25 ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ಪಕ್ಷಕ್ಕೆ ಕೆಲಸ ಮಾಡಿದ್ದೇನೆ. ಈ ಬಾರಿ ನಡೆದ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ …

Read More »

ಬೆಚ್ಚಿಬಿದ್ದ ರಾಯಚೂರು; ಕಣ್ಣಿಗೆ ಖಾರದಪುಡಿ ಎರಚಿ ಯುವಕನ ಬರ್ಬರ ಹತ್ಯೆ

ರಾಯಚೂರು: ಕಣ್ಣಿಗೆ ಖಾರದಪುಡಿ ಎರಚಿ ಯುವಕನೋರ್ವನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ನಡೆದಿದೆ. ಹಾಡಹಗಲೇ ಪಟ್ಟಣದ ನಡುಬೀದಿಯಲ್ಲಿ ಈ ಕೊಲೆ ನಡೆದಿದೆ. ಹಟ್ಟಿ ಚಿನ್ನದ ಗಣಿಯ ಹೊಸ ಬಸ್ ನಿಲ್ದಾಣದ ಹತ್ತಿರ ಬರ್ಬರ ಹತ್ಯೆ ನಡೆದಿದ್ದು ಸಾವನ್ನಪ್ಪಿದವನನ್ನ ದಿಲ್​ಬರ್​ (30) ಎಂದು ಗುರುತಿಸಲಾಗಿದೆ. ಘಟನಾ‌ ಸ್ಥಳಕ್ಕೆ ಸಿಪಿಐ ಮಹಾಂತೇಶ್ ಸಜ್ಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಬಿಕಿನಿ ತೊಟ್ಟು, ಮಾಸ್ಕ್​ ಹಾಕಿ ಏರ್​​ಪೋರ್ಟ್​ಗೆ ಬಂದ ಮಹಿಳೆ; ..

ಮಹಿಳೆಯೊಬ್ಬರು ಕೇವಲ ಬಿಕಿನಿ ತೊಟ್ಟು ಏರ್​​​ಪೋರ್ಟ್​ಗೆ ಬಂದಿರುವ ಘಟನೆ ಅಮೆರಿಕಾದಲ್ಲಿ ನಡೆದಿದೆ. ಅಮೆರಿಕಾದ ಮಿಯಾಮಿ ವಿಮಾನ ನಿಲ್ದಾಣಕ್ಕೆ ಬಿಕಿನಿ ತೊಟ್ಟ ಮಹಿಳೆ ಬಂದಿದ್ದು, ಎಲ್ಲರ ಗಮನ ಸೆಳೆದಿದ್ದಾರೆ. ಗ್ರೀನ್​​ ಬಿಕಿನಿ ತೊಟ್ಟು ಏರ್​​ಪೋರ್ಟ್​ಗೆ ಬಂದಿದ್ದ ಮಹಿಳೆ ಮಾಸ್ಕ್​​​ ಹಾಕುವುದು ಮಾತ್ರ ಮರೆತಿರಲಿಲ್ಲ. ಕೈಯಲ್ಲಿ ಬ್ಯಾಗ್​​ ಹಿಡಿದು ಬಂದಿದ್ದ ಇವರು ಎಲ್ಲಿಗೆ ಹೊರಟಿದ್ದರು ಎಂಬ ಏರ್​​​ಪೋರ್ಟ್​ ಸಿಬ್ಬಂದಿ ಯಾವುದೇ ಮಾಹಿತಿ ನೀಡಿಲ್ಲ. ಏರ್​​ಪೋರ್ಟ್​ನಲ್ಲಿ ನಡೆದುಕೊಂಡು ಬರುತ್ತಿರುವ ಬಿಕಿನಿ ತೊಟ್ಟ ಮಹಿಳೆಯ ವಿಡಿಯೋ …

Read More »

ಪ್ರತಿ ಮನೆಗೂ ಶುದ್ಧ ನೀರು ಪ್ರಧಾನಿ ಆಶಯ :,ದುರ್ಯೋಧನ ಐಹೊಳೆ

ಚಿಕ್ಕೋಡಿ: ‘ಜನರ ಆರೋಗ್ಯದ ಹಿತದೃಷ್ಟಿಯಿಂದ ರಾಯಬಾಗ ಕ್ಷೇತ್ರದ ಜನರಿಗೆ ಶುದ್ಧ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಮಾಡಲಾಗಿದೆ. ಪ್ರತಿ ಮನೆಗೂ ಶುದ್ಧ ನೀರು ದೊರೆಯಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯವಾಗಿದೆ’ ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು. ರಾಯಬಾಗ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕಿನ ಬಂಬಲವಾಡ, ಕುಂಗಟೋಳ್ಳಿ, ಕರೋಶಿ ಗ್ರಾಮದಲ್ಲಿ ಜಲಜೀವನ ಅಭಿಯಾನದಲ್ಲಿ ₹ 4 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕುಡಿಯುವ ನೀರಿನ ಯೋಜನೆಗೆ ಶನಿವಾರ ಚಾಲನೆ …

Read More »

ಜಿಪಂ, ತಾಪಂ ಚುನಾವಣೆ; ಸರ್ಕಾರದ ಮಹತ್ವದ ನಿರ್ಧಾರ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರು ವರ್ಗೀಕರಣಕ್ಕೆ ಪ್ರತ್ಯೇಕ ಆಯೋಗ ರಚಿಸಲು ಸರ್ಕಾರ ತೀರ್ಮಾನಿಸಿದೆ. ಚುನಾವಣೆ ಆಯೋಗದ ವಿಂಗಡಣೆಗೆ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಹೊಸ ಹೆಜ್ಜೆ ಇಟ್ಟಿದ್ದು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ವಿಂಗಡಣೆಗೆ ಪ್ರತ್ಯೇಕ ಆಯೋಗ ರಚನೆ ಮಾಡಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯ ಚುನಾವಣಾ ಆಯೋಗದಿಂದ ಹಿಂದೆಯೇ ಜಿಲ್ಲಾ …

Read More »

ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನ: ಡಿ.ಕೆ.ಶಿವಕುಮಾರ್‌

ಬೆಂಗಳೂರು: ‘ವಿಧಾನ ಪರಿಷತ್ ಸೇರಿದಂತೆ ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನಿಸಿದ್ದು, 10 ದಿನ ಕಾಲಾವಕಾಶ ನೀಡಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಚುನಾವಣೆಗೆ ಪೂರ್ವತಯಾರಿ ಮತ್ತು ಪಕ್ಷ ಸಂಘಟನೆ ಕುರಿತು ಪಕ್ಷದ ಜಿಲ್ಲಾ ಘಟಕಗಳ ನಾಯಕರ ಜೊತೆ ಶನಿವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಈಗಾಗಲೇ ಪದವೀಧರ ಕ್ಷೇತ್ರದ ಅಭ್ಯರ್ಥಿಗೆ ಅರ್ಜಿ ಕರೆಯಲಾಗಿದೆ. ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಅಭ್ಯರ್ಥಿಗಳ ಆಯ್ಕೆಗೆ ಶೀಘ್ರದಲ್ಲೇ …

Read More »