ಹಾವೇರಿ: 20 ವರ್ಷದ ಯುವತಿಯೊಬ್ಬಳು ಹಲವರ ಬದುಕಿಗೆ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಆ ಮಹಾನ್ ತಾಯಿ ಹೆಸರು ಕವನ ಮಳ್ಳಯ್ಯ ಹಿರೇಮಠ. ರಟ್ಟಿಹಳ್ಳಿ ತಾಲೂಕಿನ ಹಳ್ಳೂರು ಗ್ರಾಮದ ಕವನ ಶಿಕಾರಿಪುರದ ಗಾಮೆಂಟ್ಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸೆ.9ರಂದು ಹೊನ್ನಾಳಿ ತಾಲೂಕು ಸೊರಟೂರು ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಕವನ ಗಂಭೀರ ಗಾಯಗೊಂಡಿದ್ದರು. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕವನರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ತೀವ್ರ …
Read More »Daily Archives: ಸೆಪ್ಟೆಂಬರ್ 14, 2021
ಟಿಪ್ಪುಸುಲ್ತಾನ್ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಜಿಲ್ಲಾಡಳಿತಕ್ಕೆ ಮನವಿ
ರಾಯಚೂರು: ನಗರದ ಟಿಪ್ಪುಸುಲ್ತಾನ್ ರಸ್ತೆ ನಿರ್ಮಾಣ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ವಾರ್ಡ್ ಸಂಖ್ಯೆ 7 ಹಾಗೂ 8ರ ನಿವಾಸಿಗಳು ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿ ಸೋಮವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಸೋಮವಾರ ಮನವಿ ಸಲ್ಲಿಸಿದರು. ಟಿಪ್ಪುಸುಲ್ತಾನ್ ರಸ್ತೆಯು ನಗರದ ನುಖ್ಯ ರಸ್ತೆಯಾಗಿದ್ದು, ವಿಸ್ತರಣೆ ಕಾರ್ಯ ಆರಂಭಿಸಿ ಒಂದು ವರ್ಷ ಗತಿಸಿದರೂ ಈವರೆಗೆ ಪೂರ್ಣಗೊಂಡಿಲ್ಲ. ಇದರಿಂದ ಅಂದ್ರೂನ್ ಕಿಲ್ಲಾ ಹಾಗೂ ಸ್ಥಳೀಯ ನಿವಾಸಿಗಳಿಗೆ ತೀವ್ರ ಸಮಸ್ಯೆಯಾಗಿದೆ. …
Read More »ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಕಾಮಗಾರಿ: ಈ ವಾಹನಗಳ ಸಂಚಾರಕ್ಕೆ ನಿರ್ಬಂಧ
ಬೆಂಗಳೂರು, ಸೆಪ್ಟೆಂಬರ್ 14: ಬೆಂಗಳೂರು-ಮೈಸೂರು ನಡುವಿನ ದಶಪಥ ಹೆದ್ದಾರಿ ಕಾಮಗಾರಿ ಶುರುವಾಗಲಿದ್ದು, ದ್ವಿಚಕ್ರ ವಾಹನ, ಆಟೋ ಹಾಗೂ ಟ್ರ್ಯಾಕ್ಟರ್‌ಗಳ ಓಡಾಟವನ್ನು ನಿಷೇಧಿಸಲಾಗಿದೆ. ಯೋಜನೆಗಾಗಿ ಒಟ್ಟು 8,172 ಕೋಟಿ ರೂ. ವ್ಯಯಿಸುತ್ತಿದ್ದು, 2022ರ ಅಕ್ಟೋಬರ್‌ನಲ್ಲಿ ಕಾಮಗಾರಿ ಪೂರ್ಣಗೊಳಿಸುವ ಭರವಸೆಯನ್ನು ನೀಡಲಾಗಿದೆ. ಈ ಕಾಮಗಾರಿ ಮುಗಿದಲ್ಲಿ ಬೆಂಗಳೂರು-ಮೈಸೂರು ನಡುವಿನ ಪ್ರಯಾಣ ಈಗಿರುವ 3 ಗಂಟೆಗೆ ಬದಲಾಗಿ 90 ನಿಮಿಷಕ್ಕೆ ಇಳಿಯಲಿದೆ. 2019ರಿಂದ ಕಂಪನಿಯು ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ. ದಶಪಥಗಳ ಹೆದ್ದಾರಿ ವಿಸ್ತರಣೆ …
Read More »ಮಂಗಳೂರಿನ ವ್ಯಕ್ತಿಯೊಬ್ಬರಿಗೆ ನಿಫಾ ಸೋಂಕಿನ ಲಕ್ಷಣ
ಮಂಗಳೂರು : ಕೇರಳದ ಕೋಯಿಕ್ಕೊಡ್‌ನಲ್ಲಿ ನಿಫಾ ಸೋಂಕಿಗೆ 13 ವರ್ಷದ ಬಾಲಕ ಮೃತಪಟ್ಟ ವಾರದ ಬಳಿಕ ಇದೀಗ ಮಂಗಳೂರಿನ ವ್ಯಕ್ತಿಯೊಬ್ಬರಿಗೆ ಸೋಂಕಿನ ಲಕ್ಷಣಗಳು ಕಾಣಿಸಿವೆ. ಲ್ಯಾಬ್ ಟೆಕ್ನಿಶಿಯನ್ ಆಗಿ ಕೆಲಸ ಮಾಡುವ ವ್ಯಕ್ತಿಯೊಬ್ಬರಿಗೆ ನಿಫಾ ಸೋಂಕಿನ ಲಕ್ಷಣಗಳು ಕಾಣಿಸಿದೆ ಎಂದು ಆರೋಗ್ಯ ಆಯುಕ್ತ ಕೆ.ವಿ. ತ್ರಿಲೋಕ್ ಚಂದ್ರ ಮಾಹಿತಿ ನೀಡಿದ್ದಾರೆ. ಸೋಂಕಿತರ ಸ್ಯಾಂಪಲ್‌ನ್ನು ಪುಣೆಯಲ್ಲಿರುವ ನ್ಯಾಷನಲ್ ಇನ್ಸ್‌ಟಿಟ್ಯೂಟ್ ಆಫ್ ವೈರಾಲಜಿ ಕೇಂದ್ರಕ್ಕೆ ಕಳುಹಿಸಲಾಗಿದೆ. ನಾವು ಜಾಗರೂಕರಾಗಿರಬೇಕು. ಆದರೆ ಭಯಪಡುವ ಅವಶ್ಯ …
Read More »ಹಿಂದಿ ಹೇರಿಕೆ ಸಲ್ಲದು ಎಂದ ನಟ ಧನಂಜಯ್-ನಿರ್ದೇಶಕ ಸಿಂಪಲ್ ಸುನಿ..!
ರಾಜ್ಯದಲ್ಲಿ ಹಿಂದಿ ಹೇರಿಕೆ (Hindi Imposition) ವಿಚಾರವಾಗಿ ಸಾಕಷ್ಟು ಸಲ ಚರ್ಚೆ ಹಾಗೂ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಇನ್ನೂ ಸಹ ಇದಕ್ಕೆ ಪರಿಹಾರ ಸಿಕ್ಕಿಲ್ಲ. ಈಗ ಮತ್ತೊಮ್ಮೆ ಹಿಂದಿ ಹೇರಿಕೆ ವಿಷಯ ಚರ್ಚೆಗೆ ಬಂದಿದೆ. ಸೆ.14ರಂದು ದೇಶದ ಹಲವೆಡೆ ಹಿಂದಿ ದಿವಸ್ (Hindi Diwas) ಅನ್ನು ಆಚರಣೆ ಮಾಡಲಾಗುತ್ತದೆ. ಉತ್ತರ ಭಾರತದಲ್ಲಿ ಹಿಂದಿ ದಿವಸ್ ಆಚರಣೆ ತುಂಬಾ ಜೋರಾಗಿ ನಡೆಯುತ್ತದೆ. ಆದರೆ ದಕ್ಷಿಣ ಭಾರತದಲ್ಲಿ ಈ ದಿನದ ಆಚರಣೇಗೆ ತೀವ್ರ …
Read More »ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ’ : ಹೆಚ್. ಡಿ. ಕುಮಾರಸ್ವಾಮಿ :
ಬೆಂಗಳೂರು : ಇಂದು ದೇಶಾದ್ಯಂತ ಹಿಂದಿ ದಿವಸ್ ಆಚರಣೆ ಮಾಡಲಾಗುತ್ತಿದ್ದು, ‘ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಭಾರತ ಒಕ್ಕೂಟರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ ? ಎಂದು ಪ್ರಶ್ನಿಸಿದ್ದಾರೆ. ಹಿಂದಿ …
Read More »ಸಿ.ಎ. ಪರೀಕ್ಷೆಯಲ್ಲಿ ಮಂಗಳೂರಿನ ಯುವತಿ ದೇಶಕ್ಕೆ ಟಾಪರ್
ಮಂಗಳೂರು: ಸಿ.ಎ. ಪರೀಕ್ಷೆಯಲ್ಲಿ ಮಂಗಳೂರಿನ ರೂತ್ ಕ್ಲಾರಾ ಡಿಸಿಲ್ವಾ ದೇಶಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಇನ್ ಸ್ಟಿಟ್ಯೂಟ್ ವತಿಯಿಂದ 2021ರ ಸಾಲಿನ ಸಿಎ ಅಂತಿಮ ಪರೀಕ್ಷೆಯನ್ನು ನಡೆಸಲಾಗಿತ್ತು. ರಾಷ್ಟ್ರ ಮಟ್ಟದ ಈ ಸಿಎ ಪರೀಕ್ಷೆಯಲ್ಲಿ ರೂತ್ ಕ್ಲಾರಾ ಡಿಸಿಲ್ವಾ ಮೊದಲ ರ್ಯಾಂಕ್ ಪಡೆದಿದ್ದಾರೆ. ಪದವಿ ಶಿಕ್ಷಣದ ಜೊತೆಯಲ್ಲೇ ಸಿಎ ವ್ಯಾಸಂಗ ನಡೆಸಿದ್ದ ರೂತ್, ಗ್ರೂಪ್ ಒನ್ ಹಾಗೂ ಗ್ರೂಪ್ ಟು ಹೆಸರಿನ ಎರಡು ಪರೀಕ್ಷೆಗಳನ್ನೂ ಏಕಕಾಲದಲ್ಲಿ …
Read More »ಹಿಂದಿ ಹೇರಿಕೆ ಖಂಡಿಸಿ ಟ್ವಿಟರ್ ಅಭಿಯಾನ, ಕನ್ನಡಿಗರು ಕೈ ಜೋಡಿಸಲು ಕರ್ನಾಟಕ ರಕ್ಷಣಾ ವೇದಿಕೆ ಮನವಿ
ಬೆಂಗಳೂರು: ಸೆಪ್ಟೆಂಬರ್ 14ರಂದು ದೇಶಾದ್ಯಂತ ಹಿಂದಿ ದಿವಸ್(Hindi Diwas) ಆಚರಣೆ ಮಾಡಲಾಗುತ್ತಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಟ್ವಿಟರ್ನಲ್ಲಿ ದೇಶದ ಜನತೆಗೆ ಹಿಂದಿ ದಿನದ ಶುಭಾಶಯ ಕೋರಿದ್ದಾರೆ. ಆದ್ರೆ ಹಿಂದಿ ದಿವಸ್ ಹಾಗೂ ಹಿಂದಿ ಹೇರಿಕೆ ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶ ಖಂಡಿಸಿ ಕರ್ನಾಟಕ …
Read More »ಅನಧಿಕೃತ ಪ್ರಾರ್ಥನಾ ಮಂದಿರಗಳ ತೆರವು; 80 ವರ್ಷಕ್ಕೂ ಹಿಂದಿನ ಆಂಜನೇಯ ದೇವಸ್ಥಾನದ ಮೇಲೂ ಕಣ್ಣು
ಬೆಳಗಾವಿ: ಅನಧಿಕೃತ ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವ ವಿಚಾರವಾಗಿ ರಾಜ್ಯದಲ್ಲಿ ಸದ್ಯ ಚರ್ಚೆ ಮತ್ತು ಗೊಂದಲ ಸೃಷ್ಟಿಯಾಗಿದೆ. ಅದರಂತೆ ಹಳೆ ಬೆಳಗಾವಿ ಹೊರ ವಲಯದಲ್ಲಿರುವ ಎಂಬತ್ತು ವರ್ಷಕ್ಕೂ ಹಿಂದಿನ ಆಂಜನೇಯ ದೇವಸ್ಥಾನವನ್ನು ಸುಪ್ರೀಂಕೋರ್ಟ್ ತೆರವುಗೊಳಿಸಲು ತಿಳಿಸಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಳಿತದ ಸಂದರ್ಭದಲ್ಲಿ ದೇವಸ್ಥಾನ ತೆರವು ಮಾಡಲು ಆದೇಶ ನೀಡಲಾಗಿತ್ತು. ಆದರೆ ಆದೇಶವಿದ್ದರೂ ಹೋರಾಟ ಮಾಡಿ ಸ್ಥಳೀಯರು ಮತ್ತು ಹಿಂದೂಪರ ಕಾರ್ಯಕರ್ತರು ಉಳಿಸಿಕೊಂಡಿದ್ದರು. ಎಂಟು ವರ್ಷದ ಹಿಂದೆ …
Read More »ಮಹಿಳಾ ಪೇದೆ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಹಿರಿಯ ಪೊಲೀಸ್ ಅಧಿಕಾರಿಯ ಮಿಲನ…..!
ಜೈಪುರ: 6 ವರ್ಷದ ಮಗುವಿನ ಮುಂದೆಯೇ ಹಿರಿಯ ಪೊಲೀಸ್ ಅಧಿಕಾರಿ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಲೈಂಗಿಕ ಸಂಪರ್ಕ ನಡೆಸಿದ ಮಹಿಳಾ ಕಾನ್‍ಸ್ಟೇಬಲನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಮಧ್ಯಾಹ್ನ ಮಹಿಳಾ ಪೇದೆಯನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದು, ಸೆಪ್ಟೆಂಬರ್ 17ರವರೆಗೆ ಆಕೆಯನ್ನು ಪೊಲೀಸ್ ವಶಕ್ಕೆ ನೀಡಿದ್ದಾರೆ. ಮಹಿಳಾ ಪೇದೆ ಜೊತೆ ದೈಹಿಕ ಸಂಪರ್ಕ ನಡೆಸಿದ್ದ ಹಿರಿಯ ಅಧಿಕಾರಿಯನ್ನು ಇದಕ್ಕೂ ಮುನ್ನವೇ ಪೊಲೀಸರು ಬಂಧಿಸಿದ್ದಾರೆ. ಇಬ್ಬರ ಬಂಧನ ಬೆನ್ನಲ್ಲೇ ವೀಡಿಯೋದಲ್ಲಿದ್ದ ಅಜ್ಮಲ್ …
Read More »