Breaking News

Daily Archives: ಸೆಪ್ಟೆಂಬರ್ 24, 2021

ಸರ್ಕಾರಿ ಶಾಲೆಯಲ್ಲಿ ಕಳ್ಳತನ!

ಕೊಪ್ಪಳ : ಮಕ್ಕಳಿಗೆ ಕಂಪ್ಯೂಟರ್ ಜ್ಞಾನ ಬರಲಿ ಎಂಬ ನಿಟ್ಟಿನಲ್ಲಿ ಕಂಪ್ಯೂಟರ್ ಲ್ಯಾಬ್ ಗಳನ್ನು ತೆರೆಯಲಾಗಿದೆ. ಆದರೆ, ಖದೀಮರು ಮಾತ್ರ ಅವುಗಳನ್ನು ಬಿಡದೆ ದೋಚಿರುವ ಘಟನೆ ನಡೆದಿದೆ. ಸರ್ಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಲ್ಯಾಬ್ ಬಾಗಿಲು ಮುರಿದು ಒಳಗೆ ನುಗ್ಗಿದ್ದ ಖದೀಮರು 10 ಕಂಪ್ಯೂಟರ್, ಒಂದು ಲ್ಯಾಪ್ ಟಾಪ್ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಯಲಬುರ್ಗಾ ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ …

Read More »

ಚಿಕ್ಕಮಗಳೂರಿನಲ್ಲಿ ದಾರುಣ ಘಟನೆ; ಹೆತ್ತಮ್ಮನನ್ನ ಕೊಲೆಗೈದು ಮೃತದೇಹದ ಪಕ್ಕದಲ್ಲೇ ಕುಳಿತಿದ್ದ ಮಗ

ಚಿಕ್ಕಮಗಳೂರು: ಹೆತ್ತಮ್ಮನನ್ನು ಮಗನೇ ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ದಾರುಣ ಘಟನೆ ಚಿಕ್ಕಮಗಳೂರು ನಗರದ ಗೌರಿ ಕಾಲುವೆಯಲ್ಲಿ ನಡೆದಿದೆ. ಸುಧಾ( 48 ) ಕೊಲೆಯಾದ ಮಹಿಳೆಯಾಗಿದ್ದು, ಮಗ ದುಶ್ಯಂತ್ (28) ಹೆತ್ತಮ್ಮನನ್ನೇ ಕೊಲೆ ಮಾಡಿದ್ದಾನೆ. ಇಂದು ಮಧ್ಯಾಹ್ನ ಘಟನೆ ನಡೆದಿದೆ ಎನ್ನಲಾಗಿದ್ದು, ಸಂಜೆ 5.45ರ ವೇಳೆಗೆ ಸುಧಾ ಅವರ ಕಿರಿಯ ಪುತ್ರ ಸಂತೋಷ್ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎಂಬುದು ಇನ್ನೂ ತಿಳಿದು ಬಂದಿಲ್ಲ. …

Read More »

ಪಾಲಿಕೆ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡುವ ಕಾರ್ಯ ತೀವ್ರಗೊಳಿಸಿದ್ದೇವೆ:ಆಯುಕ್ತ ರಂದೀಪ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇದುವರೆಗೂ ಲಸಿಕೆ ಪಡೆಯದವರನ್ನು ಗುರುತಿಸಿ ಪಾಲಿಕೆ ಸಂಚಾರಿ ಲಸಿಕಾ ತಂಡವು ಮನೆ-ಮನೆಗೆ ತೆರಳಿ ಲಸಿಕೆ ನೀಡುತ್ತಿದೆ. ವಿಶೇಷವಾಗಿ ಮನೆಯಿಂದ ಹೊರಗೆ ಬಾರದಂತಹ ಹಿರಿಯರು, ವಿಕಲಚೇತನರು ಹಾಗೂ ವೃದ್ಧಾಶ್ರಮಗಳಿಗೆ ಸಂಚಾರಿ ಮೊಬೈಲ್ ತಂಡ ಭೇಟಿ ನೀಡಿ ಲಸಿಕೆ ನೀಡಲಾಗುತ್ತಿದೆ. ಜೊತೆಗೆ ಕೊಳಗೇರಿ ಪ್ರದೇಶದ ಮನೆ-ಮನೆಗೆ ಭೇಟಿ ನೀಡಿ ಲಿಸಕೆ ಪಡೆಯದವರಿಗೆ ಜಾಗೃತಿ ಮೂಡಿಸಿ ಲಸಿಕೆ ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ಪಾಲಿಕೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತ …

Read More »

35 ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

ಜನವಾಡ: ಅರಳು ಸ್ವಯಂ ಸೇವಾ ಸಂಸ್ಥೆಯು ಆಶಾ ಫಾರ್ ಎಜುಕೇಷನ್ ಸಂಸ್ಥೆ ನೆರವಿನಡಿ ಬೀದರ್‍ನ ನಾವದಗೇರಿ, ಕಮಠಾಣ, ಯದಲಾಪುರ ಹಾಗೂ ಕಾಪಲಾಪುರ ಗ್ರಾಮಗಳ 35 ಬಡ ಕುಟುಂಬಗಳಿಗೆ ಉಚಿತ ಆಹಾರಧಾನ್ಯ ಕಿಟ್ ವಿತರಿಸಿತು. ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯ ಹಿಂದುಗಡೆಯ ಸಂಸ್ಥೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅರಳು ಸಂಸ್ಥೆ ನಿರ್ದೇಶಕ ಡಾ. ಕೆ.ಟಿ. ಮೆರಿಲ್ ಅವರು, ಕೋವಿಡ್ ಪ್ರಯುಕ್ತ ತಲಾ ಐದು ಕೆ.ಜಿ ಅಕ್ಕಿ, …

Read More »

ಲಸಿಕಾ ಕೇಂದ್ರಕ್ಕೆ ಜಿಲ್ಲಾ ಸಮೀಕ್ಷಣಾಧಿಕಾರಿ ಬೇಟಿ, ಪರಿಶೀಲನೆ

ಬಾಗಲಕೋಟೆ: ಜಿಲ್ಲೆಯಲ್ಲಿ ಬುಧವಾರ ಹಮ್ಮಿಕೊಂಡ ಕೋವಿಡ್-19 ಲಸಿಕಾ ಮೇಳದ ಹಿನ್ನಲೆಯಲ್ಲಿ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ ಅವರು ವಿವಿಧ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯ ಸರಕಾರದ ಸೂಚನೆ ಮೇರೆಗೆ ಲಸಿಕಾಕರಣ ಪ್ರಗತಿಯನ್ನು ವೃದ್ದಿಸುವ ನಿಟ್ಟಿನಲ್ಲಿ ಪ್ರತಿ ಬುಧವಾರ ಲಸಿಕಾ ಮೇಳ ಹಮ್ಮಿಕೊಳ್ಳಲಾಗುತ್ತಿದ್ದು, ಲಸಿಕಾಕರಣ ಪರಿಶೀಲನೆಗೆ ಬುಧವಾರ ಬಾದಾಮಿ ತಾಲೂಕಿನಲ್ಲಿ ಸ್ಥಾಪಿಸಲಾದ ವಿವಿಧ ಕೋವಿಡ್ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭೇಟಿ ಸಮಯದಲ್ಲಿ ಮುಖ್ಯ …

Read More »

ಸರ್ ನಮ್ಮ ಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನು ನಿಯೋಜನೆ ಮಾಡಿ ಎಂದು ಶಿಕ್ಷಣಾಧಿಕಾರಿ ಕಾಲು ಹಿಡಿದ ವಿದ್ಯಾರ್ಥಿಗಳು

ಗದಗ: ಸರ್ಕಾರಿ ಪ್ರೌಢಶಾಲೆಯಲ್ಲಿ 6 ವರ್ಷದಿಂದ ಇಂಗ್ಲಿಷ್ ಶಿಕ್ಷಕರಿಲ್ಲ. ‘ಸರ್ ನಮ್ಮ ಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನು ನಿಯೋಜನೆ ಮಾಡಿ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಾಲು ಹಿಡಿದು ವಿದ್ಯಾರ್ಥಿಗಳು ಗೋಳಾಡಿದ ಘಟನೆ ಗದಗದಲ್ಲಿ ನಡೆದಿದೆ. ಗದಗ ತಾಲೂಕಿನ ಕದಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 6 ವರ್ಷದಿಂದ ಇಂಗ್ಲಿಷ್ ಶಿಕ್ಷಕರ ಕೊರತೆ ಇದೆ. ಹೀಗಾಗಿ ಇಂಗ್ಲಿಷ್ ಶಿಕ್ಷಕರ ನೇಮಕ ಮಾಡಿ ಎಂದು ಗದಗ ಬಿಇಒ ಎಂ.ಎ.ರಡ್ಡೇರ್‌ಗೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಇದೇ ವೇಳೆ ಬಿಇಒಗೆ …

Read More »

ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಘೋಷಿಸಿದ ಜಮೀರ್ ಅಹ್ಮದ್

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಮೃತಪಟ್ಟ ಎರಡು ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಘೋಷಿಸಿದ್ದಾರೆ. ನ್ಯೂ ತರಗುಪೇಟೆಯಲ್ಲಿ ನಿಗೂಢ ಸ್ಫೋಟ ಪ್ರಕರಣದಲ್ಲಿ ಮನೋಹರ್ ಮತ್ತು ಅಸ್ಲಮ್ ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ವೈಯಕ್ತಿಕವಾಗಿ ಪರಿಹಾರ ಮೊತ್ತ ಘೋಷಿಸಿದರು. ಘಟನೆಯಲ್ಲಿ ಒಟ್ಟು ಇಬ್ಬರು ಮೃತಪಟ್ಟರೆ ಐದು ಮಂದಿಗೆ ಗಾಯವಾಗಿದೆ. ಎಲ್ಲರೂ ಸ್ಥಳೀಯರೇ ಆಗಿದ್ದು, …

Read More »

ಮೋದಿ-ಕಮಲಾ ಹ್ಯಾರೀಸ್ ದ್ವಿಪಕ್ಷೀಯ ಮಾತುಕತೆ; ಇಂಡೋ-ಫೆಸಿಫಿಕ್ ಪ್ರದೇಶದ ​ಬಗ್ಗೆ ಫೋಕಸ್

ನವದೆಹಲಿ: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು​ ಭೇಟಿಯಾದರು. ಬಳಿಕ ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು. ಇಬ್ಬರು ನಾಯಕರುಗಳು ಇಂಡೋ-ಫೆಸಿಫಿಕ್​  ಪ್ರದೇಶದ ಬಗ್ಗೆ ಹೆಚ್ಚು ಗಮನ ಹರಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ವ್ಯಾಪಾರ, ಅಭಿವೃದ್ಧಿ, ಎರಡೂ ದೇಶಗಳ ಸ್ನೇಹ ಸಂಬಂಧ, ಸಂಸ್ಕೃತಿ ಹೀಗೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಜೊತೆಗೆ ಇತ್ತೀಚೆಗೆ ಅಫ್ಘಾನಿಸ್ತಾನದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆಯೂ ಚರ್ಚೆ …

Read More »

ಮೈಸೂರು ಗ್ಯಾಂಗ್ ರೇಪ್ ಪ್ರಕರಣವನ್ನು ಯಾರೂ ಗಂಭೀರವಾಗಿ ಪರಿಗಣಿಸಿಲ್ಲ : ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣವನ್ನು ರಾಜ್ಯ ಸರ್ಕಾರವಾಗಲೀ, ಪೊಲೀಸರಾಗಲಿ ಗಂಭೀರವಾಗಿ ಪರಿಗಣಿಸಿಯೇ ಇಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ಮೈಸೂರು ಪೊಲೀಸರು ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ನಿರಂತರವಾಗಿ ಆ ಭಾಗದಲ್ಲಿ ಅಪರಾಧ ಪ್ರಕರಣಗಳು ನಡೆಯುತ್ತಿರುವ ಸಂದರ್ಭದಲ್ಲಿ ಪೊಲೀಸರು ನಿದ್ದೆ ಮಾಡ್ತಿದ್ರಾ? ಎಂದು ಪ್ರಶ್ನಿಸಿದರು. ಈ ಕುರಿತು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು …

Read More »

ಬಸ್ ಸಂಚಾರ ಪುನರಾರಂಭ

ಬೆಂಗಳೂರು : ಕೋವಿಡ್‌ ನಿಂದಾಗಿ ಕೆಲವೆಡೆ ಬಸ್‌ಗಳ ಸಂಚಾರ ನಿಲ್ಲಿಸಿತ್ತು. ಆದರೆ ದ್ದು, ಮಕ್ಕಳು ಶಾಲಾ-ಕಾಲೇಜಿಗೆ ತೆರಳಲು ಮೊದಲ ಆದ್ಯತೆ ನೀಡಲಾಗಿ ದ್ದು , ಈ ನಿಟ್ಟಿನಲ್ಲಿ ಬಸ್ ಸಂಚಾರ ಮತ್ತೆ ಆರಂಭಿಸಲು ನಿರ್ಧಾರಿಸಲಾಗಿದೆ ಎಂದು ಸಾರಿಗೆ ಸಚಿವ ಶ್ರೀ ರಾಮುಲು ಭರವಸೆ ನೀಡಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬುಧವಾರ ಕಾಂಗ್ರೆಸ್ ಸದಸ್ಯ ಬಸವನಗೌಡ ದದ್ದಲ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದಲ್ಲಿ ಶಾಲೆ- ಕಾಲೇಜು ಪ್ರಾರಂಭವಾಗಿದೆ. ಮಕ್ಕಳ ಅನುಕೂಲಕ್ಕಾಗಿ ಕೋವಿಡ್ ವೇಳೆ …

Read More »