Breaking News

Daily Archives: ಸೆಪ್ಟೆಂಬರ್ 25, 2021

ಪ್ರಧಾನಿ ಮೋದಿ ಅವರ ಆಡಳಿತದಿಂದ ಇಡೀ ವಿಶ್ವಕ್ಕೆ “ಭಾರತ ಗುರು”ವಾಗುವ ಕಾಲ ಸನ್ನಿಹಿತ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ : ಶಿಸ್ತಿನ ಪಕ್ಷ ಬಿಜೆಪಿಗೆ ಕಾರ್ಯಕರ್ತರೇ ಜೀವಾಳವಾಗಿದ್ದು, ಕಾರ್ಯಕರ್ತರ ಪರಿಶ್ರಮದಿಂದ ಕೇಂದ್ರ ಹಾಗೂ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆ. ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗಳಲ್ಲಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಬೇಕಾಗಿದೆ. ಎಲ್ಲರೂ ಒಂದಾಗಿ, ಒಗ್ಗಟ್ಟಾಗಿ ದುಡಿದು ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಶನಿವಾರ ಸಂಜೆ …

Read More »

6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ತರಗತಿ ಅ.1ರಿಂದ ಆರಂಭ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೋವಿಡ್‌ ಪ್ರಕರಣಗಳ ದೃಢಪ್ರಮಾಣ ದರ ಶೇಕಡ 0.66ಕ್ಕೆ ಕುಸಿದಿರುವುದರಿಂದ ಅಕ್ಟೋಬರ್‌ 1ರಿಂದ ಆರನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಶುಕ್ರವಾರ ಕೋವಿಡ್‌ ನಿಯಂತ್ರಣ ಕಾರ್ಯಪಡೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಕೋವಿಡ್‌ ದೃಢಪ್ರಮಾಣ ದರ ಶೇ 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ವಾರದಲ್ಲಿ ಐದು ದಿನಗಳ ಕಾಲ ಆರರಿಂದ ದ್ವಿತೀಯ ಪಿಯುಸಿವರೆಗಿನ ಶೇ 100ರಷ್ಟು …

Read More »

ಅಥಣಿಯ ಮೋಟಗಿಮಠದ ಶ್ರೀ ಪ್ರಭು ಚನ್ನಬಸವ ಸ್ವಾಮಿಗಳು ರಚಿಸಿರುವ ಮಹಾತ್ಮರ ಚರಿತಾಮೃತ ಗ್ರಂಥ ಸಾರ್ಥಕ ಬದುಕಿಗೆ ದಾರಿದೀಪ : ಬೊಮ್ಮಾಯಿ

ಅಥಣಿಯ ಮೋಟಗಿಮಠದ ಶ್ರೀ ಪ್ರಭು ಚನ್ನಬಸವ ಸ್ವಾಮಿಗಳು ರಚಿಸಿರುವ ಮಹಾತ್ಮರ ಚರಿತಾಮೃತ ಗ್ರಂಥ ಸಾರ್ಥಕ ಬದುಕಿಗೆ ದಾರಿದೀಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಅಥಣಿಯ ಮೊಟಗಿಮಠದ ಪೀಠಾಧಿಪತಿ ಶ್ರೀ ಪ್ರಭು ಚನ್ನಬಸವ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥವನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಅಥಣಿಯ ಚನ್ನಬಸವ ಸ್ವಾಮಿಗಳು ಅತ್ಯಂತ ಕ್ರಿಯಾಶೀಲರು. ಚಿಂತನೆಯ ಜೊತೆಗೆ ಕ್ರಿಯಾಶೀಲತೆ ಮುಖ್ಯ. ಚಿಂತನೆಯನ್ನು ಕಾರ್ಯರೂಪಕ್ಕೆ ತರಲು ಕ್ರಿಯಾಶೀಲತೆ ಬೇಕು. ಸ್ವಾಮೀಜಿಗಳು ಒಂದು ಹೆಜ್ಜೆ …

Read More »

ರಾಜ್ಯದಲ್ಲಿ ಮುಂದಿನ ತಿಂಗಳು 11 ದಿನ ಬ್ಯಾಂಕ್ ಗಳಿಗೆ ರಜಾ

ಸೆಪ್ಟೆಂಬರ್ ತಿಂಗಳು ಮುಗಿಯಲು ಇನ್ನು ಐದು ದಿನ ಮಾತ್ರ ಬಾಕಿ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಅಮವಾಸ್ಯೆ, ನವರಾತ್ರಿ, ವಿಜಯ ದಶಮಿ ಸೇರಿದಂತೆ ಅನೇಕ ಹಬ್ಬಗಳಿವೆ. ಇದೇ ಕಾರಣಕ್ಕೆ ಅಕ್ಟೋಬರ್ ತಿಂಗಳಿನಲ್ಲಿ 21 ದಿನಗಳ ಕಾಲ ಬ್ಯಾಂಕ್ ಮುಚ್ಚಿರಲಿದೆ. ಈ ರಜಾ ದಿನಗಳು ಬೇರೆ ಬೇರೆ ರಾಜ್ಯಗಳಿಗೆ ಬೇರೆ ಬೇರೆ ರೀತಿಯಾಗಿರುತ್ತವೆ. ಎಲ್ಲ ರಾಜ್ಯಗಳಲ್ಲೂ 21 ದಿನಗಳ ಕಾಲ ಬ್ಯಾಂಕ್ ರಜೆ ಇರುವುದಿಲ್ಲ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಅಕ್ಟೋಬರ್ ರಜಾ …

Read More »

ಸೆ.27ರಂದು ‘ಭಾರತ್ ಬಂದ್’ ಹಿನ್ನಲೆ : ಬಸ್ ಗಳ ಮೇಲಿನ ದಾಳಿ ತಪ್ಪಿಸಲು KSRTCಯಿಂದ ಮುಂಜಾಗ್ರತಾ ಕ್ರಮ

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ, ರೈತರ ವಿರೋಧಿ ಮಸೂದೆ ಸೇರಿದಂತೆ ವಿವಿಧ ನೀತಿಗಳ ವಿರುದ್ಧ ಕಿಸಾನ್ ಮೋರ್ಚಾದಿಂದ ಸೆಪ್ಟೆಬರ್ 27ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಇಂತಹ ಸಂದರ್ಭದಲ್ಲಿ ಸಾರಿಗೆ ಬಸ್ ಗಳ ಮೇಲೆ ಉಂಟಾಗುವಂತ ದಾಳಿ, ಹಾನಿ ತಪ್ಪಿಸಲು ಕೆ ಎಸ್ ಆರ್ ಟಿ ಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.   ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು …

Read More »

ಗೋಕಾಕ ಜನತೆಗೆ ಅನುಕೂಲಕ್ಕಾಗಿ ಅತಿ ಸುಂದರವಾದ ಸಮುದಾಯ ಭವನ: ಸತೀಶ್ ಜಾರಕಿಹೊಳಿ ಭೇಟಿನೀಡಿ ವೀಕ್ಷಣೆ. 

    ಗೋಕಾಕ: ಗೋಕಾಕ ನಗರದ ಜನತೆಗೆ ಲಕ್ಷ್ಮಿ ದೇವಿಯು ಆರಾಧ್ಯ ದೇವತೆ ಇನ್ನು ಪ್ರತಿಯೊಂದು ಕುಟುಂಬ ಈ ಆರಾಧ್ಯ ದೇವತೆಯ ಭಕ್ತರು   ಇನ್ನು ಈ ಒಂದು ದೇವಸ್ಥಾನದ ಕಮಿಟಿ ಒಂದು ಅಧ್ಬೂತ ವಾದ ಕೆಲಸಕ್ಕೆ ಮುಂದಾಗಿದ್ದು ಇಂದು ಅದರ ಪ್ರತಿಫಲವಾಗಿ ಒಂದು ಸುಂದರವಾದ ಸಮುದಾಯ ಭವನ ಜನತೆಯೇ ಹಿತಾಸಕ್ತಿ ಗಾಗಿ ನಿರ್ಮಾಣ ವಾಗಿದೆ.   ಈ ಒಂದು ಕೆಲಸಕ್ಕೆ ಗೋಕಾಕ ಜನತೆ ಜಾತ್ರಾ ಕಮಿಟಿ ಹಾಗೂ ಸಾಹುಕಾರರ …

Read More »

ಚಿತ್ರಮಂದಿರ ಪೂರ್ಣ ತೆರೆಯಲು ಅವಕಾಶ: ಕೆಲವು ಜಿಲ್ಲೆಗಳಲ್ಲಿ ಮಾತ್ರ

ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಬಾಗಿಲು ಹಾಕಿದ್ದ ಚಿತ್ರಮಂದಿರಗಳು ಆ ನಂತರ ಸರ್ಕಾರದ ಆದೇಶದಂತೆ 50% ನಿಯಮಕ್ಕೆ ಬದ್ಧವಾಗಿ ಕೆಲಸ ಮಾಡುತ್ತಿದ್ದವು. ಇದೀಗ ಸರ್ಕಾರವು ಚಿತ್ರಮಂದಿರಗಳ ಮೇಲೆ ಕೃಪೆ ತೋರಿದ್ದು 100% ಪ್ರೇಕ್ಷಕರಿಗೆ ಅವಕಾಶ ನೀಡಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಮಾತ್ರ. ರಾಜ್ಯದ ಯಾವ ಜಿಲ್ಲೆಯಲ್ಲಿ ಕೊರೊನಾ ಶೇ 1ಕ್ಕಿಂತಲೂ ಕಡಿಮೆ ಪ್ರಸರಣ ಇದೆಯೋ ಆ ಜಿಲ್ಲೆಗಳಲ್ಲಿ ಮಾತ್ರವೇ ಚಿತ್ರಮಂದಿರಗಳು ಪೂರ್ಣವಾಗಿ ಬಾಗಿಲು ತೆರೆಯಬಹುದಾಗಿದೆ. ಯಾವ ಜಿಲ್ಲೆಗಳಲ್ಲಿ ಶೇ 1ಕ್ಕಿಂತಲೂ …

Read More »

ಜೇಮ್ಸ್ ದಾಖಲೆ: ಭರ್ಜರಿ ಬೆಲೆಗೆ ಸ್ಯಾಟ್‌ಲೈಟ್ ಹಕ್ಕು ಸೇಲ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ಭಾರಿ ನಿರೀಕ್ಷೆ ಮೂಡಿಸಿದೆ. ಯುವರತ್ನ ಚಿತ್ರದ ನಂತರ ಅಪ್ಪು ನಾಯಕನಾಗಿ ಅಭಿನಯಿಸುತ್ತಿರುವ ಚಿತ್ರ ಇದಾಗಿದ್ದು, ಬಹುದ್ಧೂರ್, ಭರ್ಜರಿ ಖ್ಯಾತಿಯ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಜೇಮ್ಸ್ ಸಿನಿಮಾ ಪ್ರತಿ ಹಂತದಲ್ಲೂ ಕುತೂಹಲ ಹೆಚ್ಚಿಸುತ್ತಲೇ ಇದೆ. ಕಳೆದ ಆಗಸ್ಟ್ 15 ರಂದು ಜೇಮ್ಸ್ ಹೊಸ ಪೋಸ್ಟರ್ ಬಂದಿತ್ತು. ಅದಾದ ಮೇಲೆ ಮತ್ತೆ ಯಾವ …

Read More »

ರಾಜ್ಯದಲ್ಲಿ ವಾರದೊಳಗೆ ಮಹತ್ವದ ಬದಲಾವಣೆಯಾಗಲಿದೆ: ಯತ್ನಾಳ

ಬೆಳಗಾವಿ: ‘ರಾಜ್ಯದಲ್ಲಿ ವಾರದೊಳಗೆ ಮಹತ್ವದ ಬದಲಾವಣೆಯಾಗಲಿದೆ. ಮಹತ್ವದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆಗೆದುಕೊಳ್ಳಲಿದ್ದಾರೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು. ಇಲ್ಲಿನ ಗಾಂಧಿ ಭವನದಲ್ಲಿ ಶುಕ್ರವಾರ ನಡೆದ ಲಿಂಗಾಯತ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್‌ನಲ್ಲಿ ಪಾಲ್ಗೊಂಡ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೆರಳಲ್ಲ. ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವ ಶಕ್ತಿ ಮತ್ತು ಅನುಭವ ಅವರಿಗಿದೆ. ಇನ್ನೊಂದು ವಾರದಲ್ಲಿ ಅವರು …

Read More »

ಸುವರ್ಣ ವಿಧಾನಸೌಧದ 1 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ಸುತ್ತಮುತ್ತಲಿನ 1 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ‘ಸುವರ್ಣ ವಿಧಾನಸೌಧದ ಬಳಿ ಕೆಲವು ಸಂಘ ಸಂಸ್ಥೆಯವರು, ಪ್ರತಿಭಟನಾಕಾರರು ಹಲವು ಬೇಡಿಕೆಗಳ ಈಡೇರಿಕೆಗಾಗಿ ಚಿಕ್ಕಪುಟ್ಟ ವಿಷಯಗಳಿಗೆ ಪದೇ ಪದೇ ಪ್ರತಿಭಟನೆ ನಡೆಸುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಸುವರ್ಣಸೌಧದ ಸುತ್ತಲೂ ಯಾವುದೇ ಪ್ರತಿಭಟನೆಗಳು ನಡೆಯದಂತೆ ನೋಡಿಕೊಳ್ಳುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕ್ರಮ ವಹಿಸಲಾಗಿದೆ’ ಎಂದು ತಿಳಿಸಿದ್ದಾರೆ. ‘ಸೌಧದ …

Read More »