Breaking News

Daily Archives: ಸೆಪ್ಟೆಂಬರ್ 28, 2021

ಪಿಯು ಉಪನ್ಯಾಸಕರ ವರ್ಗಾವಣೆ ಈ ವರ್ಷವೂ ಅನುಮಾನ?

ಬೆಂಗಳೂರು : ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಕಾಯ್ದೆ ತಿದ್ದುಪಡಿ ವಿಧೇಯಕ ಅಧಿವೇಶನದಲ್ಲಿ ಮಂಡನೇ ಆಗದೆ ಇರುವುದರಿಂದ ಈ ವರ್ಷ ವರ್ಗಾವಣೆ ಪ್ರಕ್ರಿಯೆ ನಡೆಯುವುದು ಕಷ್ಟವಿದೆ. ಉಪನ್ಯಾಸಕರ ವರ್ಗಾವಣೆಗೆ ಸಂಬಂಧಿಸಿದಂತೆ ಕಾಯ್ದೆಗೆ ತಿದ್ದುಪಡಿ ತರಬೇಕು ಮತ್ತು ವರ್ಗಾವಣೆ ಪ್ರಮಾಣ ಹೆಚ್ಚಿಸಬೇಕು ಎಂದು ಆಗ್ರಹಿ ಇತ್ತೀಚೆಗೆ ರಾಜ್ಯ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕರ ಸಂಘದಿಂದ ಇಲಾಖೆಯ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸಿದ್ದರು. ಹಳೇ ಕಾಯ್ದೆ ಹಾಗೂ ನಿಯಮದಡಿ ವರ್ಗಾವಣೆ ನಡೆಸಲು …

Read More »

ಕೆಪಿಸಿಸಿ ಪಟ್ಟಿ : ಹೈಕಮಾಂಡ್‌ ಜತೆ ಇಂದು ಡಿಕೆಶಿ ಚರ್ಚೆ

ಬೆಂಗಳೂರು: ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಮಂಗಳವಾರ ಹೈಕಮಾಂಡ್‌ ನಾಯಕರ ಜತೆ ಚರ್ಚಿಸುವ ನಿರೀಕ್ಷೆಯಿದೆ. ರವಿವಾರ ದಿಲ್ಲಿಗೆ ತೆರಳಿರುವ ಡಿಕೆಶಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭೇಟಿಗೆ ಕಾಲಾವಕಾಶ ಕೋರಿದ್ದಾರೆ. ಪಂಜಾಬ್‌ ಪ್ರವಾಸದಲ್ಲಿರುವ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಮಂಗಳವಾರ ದಿಲ್ಲಿಗೆ ಆಗಮಿಸಲಿದ್ದು ಡಿಕೆಶಿ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ. ಕೆಪಿಸಿಸಿ ಪದಾಧಿಕಾರಿಗಳa ಪಟ್ಟಿ, ಹಿಂದುಳಿದ, …

Read More »

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ಹೆಸ್ಕಾಂನಿಂದ 200 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುಬ್ಬಳ್ಳಿ ವಿದ್ಯುತ್​ ಸರಬರಾಜು ನಿಗಮವು 2021ನೇ ಸಾಲಿನಲ್ಲಿ ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಹೆಸ್ಕಾಂ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಲು ಅಕ್ಟೋಬರ್​ 20 ಕೊನೆಯ ದಿನಾಂಕವಾಗಿದೆ.‌ ಒಟ್ಟು 200 ಹುದ್ದೆಗಳಿಗೆ ಹೆಸ್ಕಾಂ ಅರ್ಜಿ ಆಹ್ವಾನ ಮಾಡಿದೆ. ಆಸಕ್ತ ಅಭ್ಯರ್ಥಿಗಳು hescom.co.in ಹಾಗೂ mhrdnats.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಲು ಇಚ್ಛಿಸುವವರು ಇಂಜಿನಿಯರಿಂಗ್​, ಬಿಇ ಅಥವಾ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು. 2019, 2020 ಹಾಗೂ 2021ನೇ ಸಾಲಿನಲ್ಲಿ …

Read More »

ಹಣಕಿತ್ತು ಪರಾರಿಯಾಗುತ್ತಿದ್ ಯುವಕನನ್ನು ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. videovirel….

ಬೆಳಗಾವಿ ನಗರದ ಟೆಂಗಿನಕೇರಿ ಗಲ್ಲಿಯಲ್ಲಿ ವೃದ್ಧನೋರ್ವನಿಂದ ಹಣಕಿತ್ತು ಪರಾರಿಯಾಗುತ್ತಿದ್ದ ಅಪ್ರಾಪ್ತ ಯುವಕನನ್ನು ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ರಸ್ತೆಯಲ್ಲಿ ಹೋಗುತ್ತಿದ್ದ ವೃದ್ಧನನ್ನು ಥಳಿಸಿ ಅವನಿಂದ 4000 ರೂಪಾಯಿ ಹಣವನ್ನು ಕಿತ್ತು ಪರಾರಿಯಾಗುತ್ತಿದ್ದ ನಾಲ್ವರ ಪೈಕಿ ಓರ್ವ ಅಪ್ರಾಪ್ತ ಯುವಕನನ್ನು ಸಾರ್ವಜನಿಕರೇ ಹಿಡಿದಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.   ದಾರಿಯಲ್ಲಿ ಹೋಗುತ್ತಿದ್ದ ವೃದ್ಧ ವ್ಯಕ್ತಿಗೆ ಈ ನಾಲ್ವರು ಗಾಂಜಾ ಕೊಡುವಂತೆ ಕೇಳಿ ಅವನ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ನೋಡುತ್ತಿದ್ದ …

Read More »

ಬೆಳಗಾವಿಯ ಕೆಎಲ್‍ಎಸ್ ಸಂಸ್ಥೆಯ ಗೋಗಟೆ ತಾಂತಿಕ ವಿದ್ಯಾಲಯದಲ್ಲಿ ಇಂಜನೀಯರಿಂಗ್ ಜಾಗ್ರತಿ ಕಾರ್ಯಕ್ರಮ

ಬೆಳಗಾವಿಯ ಕೆಎಲ್‍ಎಸ್ ಸಂಸ್ಥೆಯ ಗೋಗಟೆ ತಾಂತಿಕ ವಿದ್ಯಾಲಯದಲ್ಲಿ ಇಂಜನೀಯರಿಂಗ್ ಜಾಗ್ರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ಕೆಎಲ್‍ಎಸ್ ಸಂಸ್ಥೆಯ ಗೋಗಟೆ ತಾಂತ್ರಿಕ ವಿದ್ಯಾಲಯದಲ್ಲಿ ದಿನಾಂಕ 26 ರಂದು ರವಿವಾರ ಪಿಯು ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಎಂಜನೀಯರಿಂಗ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಕೆಎಲ್‍ಎಸ್ ಗೋಗಟೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಂತ ಕಿತ್ತೂರ್ ಅಭಿಯಂತರರಿರುವುದೇ ಸಮಸ್ಯೆಗಳನ್ನು ಪರಿಹಾರ ಮಾಡಲು. ಸಮಾಜಕ್ಕೆ ಉತ್ತಮ ಸುಲಭ ಜೀವನ ನೀಡಲು. ಹಾಗಾಗಿ ವಿದ್ಯಾರ್ಥಿಗಳು ಉತ್ತಮ …

Read More »