Breaking News
Home / 2021 / ಸೆಪ್ಟೆಂಬರ್ (page 10)

Monthly Archives: ಸೆಪ್ಟೆಂಬರ್ 2021

ಮಹರ್ಷಿ ವಾಲ್ಮೀಕಿ ಜಯಂತಿ ವೇದಿಕೆಗೆ ಜಾರಕಿಹೊಳಿ ಬ್ರದರ್ಸ ತಂದೆ-ತಾಯಿ ಹೆಸರಿಡಿ

ಅಕ್ಟೋಬರ್ 10ರಂದು ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಡಿಸಿಪಿ ಡಾ.ವಿಕ್ರಮ್ ಆಮ್ಟೆ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಉಮಾ ಸಾಲಿಗೌಡರ ಸೇರಿದಂತೆ ಹಲವು ಅಧಿಕಾರಿಗಳು, ಎಸ್‍ಸಿ, ಎಸ್‍ಟಿ ಸಮಾಜದ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಸಮಾಜದ ಮುಖಂಡ ಸುರೇಶ ಗವನ್ನವರ …

Read More »

ಸಿನಿಮಾ ಬ್ಲಾಕ್ ಟಿಕೆಟ್ ಮಾರುತ್ತಿದ್ದ ವಿಚಾರ ಬಹಿರಂಗ ಪಡಿಸಿದ ರವಿ ಡಿ. ಚನ್ನಣ್ಣನವರ್

ದಕ್ಷ, ಖಡಕ್ ಅಧಿಕಾರಿ ಎಂದೇ ಹೆಸರು ಪಡೆದಿರುವ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಇತ್ತೀಚಿಗೆ ಸಿನಿಮಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮೊದಲ ಬಾರಿಗೆ ಸಿನಿಮಾ ಈವೆಂಟ್ ನಲ್ಲಿ ಕಾಣಿಸಿಕೊಂಡಿದ್ದ ರವಿ ಚನ್ನಣ್ಣನವರ್ ಆ ಸಮಯದಲ್ಲಿ ತನ್ನ ಹಳೆಯ ದಿನಗಳನ್ನು ಮೆಲುಕು ಹಾಕಿ ಅಚ್ಚರಿ ಮೂಡಿಸಿದರು. ರವಿ ಡಿ ಚನ್ನಣ್ಣನವರ್ ಅವರ ಬಗ್ಗೆ ಯಾರಿಗೂ ಗೊತ್ತಿರದ ಕೆಲವು ಇಂಟ್ರಸ್ಟಿಂಗ್ ಮಾಹಿತಿಯನ್ನು ಬಹಿರಂಗ ಪಡಿಸಿದರು. ಅನೇಕರಿಗೆ ಮಾದರಿಯಾಗಿರುವ ರವಿ ಡಿ ಚನ್ನಣ್ಣನವರ್ ಒಂದು …

Read More »

ಪೋಸ್ಟ್​ ಆಫೀಸ್​ನ ಈ ಸ್ಕೀಮ್​ನಲ್ಲಿ 50 ಸಾವಿರ ರೂಪಾಯಿ ಇಟ್ಟರೆ 3300 ರೂ. ಪೆನ್ಷನ್

ಪೋಸ್ಟ್​ ಆಫೀಸ್​ನ ಈ ತಿಂಗಳ ಆದಾಯ ಯೋಜನೆಯಲ್ಲಿ ರೂ. 50,000 ಹೂಡಿಕೆ ಮಾಡಿದರೆ ರೂ. 3300 ಪೆನ್ಷನ್ ಪಡೆಯಬಹುದು. ಹಣವನ್ನು ಹೂಡಿಕೆ ಮಾಡುವಾಗ ಪ್ರಮುಖವಾಗಿ ಎರಡು ವಿಷಯಗಳು ಮನಸ್ಸಿಗೆ ಬರುತ್ತವೆ: ಭದ್ರತೆ ಮತ್ತು ಯೋಗ್ಯವಾದ ಆದಾಯ. ಅಂಚೆ ಇಲಾಖೆ ಈ ಎರಡನ್ನೂ ಒದಗಿಸುವ ವಿವಿಧ ಉಳಿತಾಯ ಯೋಜನೆಗಳನ್ನು ನೀಡುತ್ತದೆ. ಈ ದಿನದ ಲೇಖನದಲ್ಲಿ ಒಂದು ಅತ್ಯುತ್ತಮ-ಯಶಸ್ವಿ ಯೋಜನೆ ಬಗ್ಗೆ ಹೇಳುತ್ತೇವೆ. ಅದು ಉತ್ತಮವಾದ ರಿಟರ್ನ್ಸ್ ನೀಡುತ್ತದೆ. ಒಮ್ಮೆ ಪೋಸ್ಟ್ ಆಫೀಸ್ …

Read More »

ಮೈಸೂರು ಅರಮನೆ ವಿದ್ಯುದ್ದೀಪ ಅಳವಡಿಸುವ ಕಾರ್ಯ ಶುರು

ಮೈಸೂರು :ಈ ಬಾರಿಯ ದಸರಾ ಕಾರ್ಯಕ್ರಮಗಳು ಅರಮನೆ ಆವರಣಗಷ್ಟೆ ಸೀಮಿತವಾಗಿರುವುದರಿಂದ ಅರಮನೆ ಸೇರಿದಂತೆ ಸುತ್ತಮುತ್ತ ಸಿದ್ಧತಾ ಕಾರ್ಯಗಳನ್ನು ಮಾಡಲಾಗುತ್ತಿದ್ದು, ಅರಮನೆಗೆ ಸುಣ್ಣ ಬಣ್ಣ ಬಳಿಯುವ ಮತ್ತು ಝಗಮಗಿಸಲು ವಿದ್ಯುತ್ ಬಲ್ಪ್ ಗಳನ್ನು ಅಳವಡಿಸುವ ಕಾರ್ಯವೂ ಸಮಾರೋಪಾದಿಯಲ್ಲಿ ಸಾಗುತ್ತಿದೆ. ಮೈಸೂರು ಅರಮನೆ ರಂಗು ತುಂಬುವುದೇ ವಿದ್ಯುತ್ ದೀಪಗಳು ಹಾಗಾಗಿ ದಸರಾ ಬರುತ್ತಿದ್ದಂತೆಯೇ ಅರಮನೆಗೆ ಅಳವಡಿಸಲಾಗಿರುವ ವಿದ್ಯುದ್ದೀಪಗಳನ್ನು ದುರಸ್ತಿ ಮಾಡುವ ಕಾರ್ಯ ನಡೆಯುತ್ತದೆ ಅದರಂತೆ ಈ ಬಾರಿಯೂ ನಡೆಯತ್ತಿದೆ. ಅರಮನೆ ದೀಪಾಲಂಕಾರ ದಸರಾದ …

Read More »

ಎಸ್‌ಟಿಪಿ ಸ್ಥಳಾಂತರ: ಲೋಕಾಯುಕ್ತ ತನಿಖೆಗೆ ಆದೇಶ

ಬೆಂಗಳೂರು: ಬೆಳಗಾವಿಯ ಅಲರವಾಡದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ(ಎಸ್‌ಟಿಪಿ) ನಿರ್ಮಾಣಕ್ಕೆ ₹2 ಕೋಟಿ ವೆಚ್ಚ ಮಾಡಿದ ಬಳಿಕ ಬೇರೆಡೆಗೆ ಸ್ಥಳಾಂತರಿಸಲು ಮುಂದಾಗಿರುವ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖೆಗೆ ಹೈಕೋರ್ಟ್‌ ಆದೇಶಿಸಿದೆ. ಬೆಳಗಾವಿ ನಿವಾಸಿಗಳಾದ ನಾರಾಯಣ ಬೈರು ಸಾವಂತ್ ಸೇರಿ ಐವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿತು. ಬೆಳಗಾವಿ ಪಾಲಿಕೆ ಆಯುಕ್ತರು ಸಲ್ಲಿಸಿದ್ದ …

Read More »

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲಿಸಿದ ಜಗದೀಶ ಶೆಟ್ಟರ್

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ವಿವಿಧೆಡೆ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿ ಪ್ರಗತಿಯನ್ನು ಶಾಸಕ ಜಗದೀಶ ಶೆಟ್ಟರ್ ಅವರು, ಮಂಗಳವಾರ ವೀಕ್ಷಿಸಿದರು‌. ಉಣಕಲ್ ಕೆರೆ, ಮಾರುಕಟ್ಟೆ ಹಾಗೂ ತೋಳನಕೆರೆಗೆ ಭೇಟಿ ನೀಡಿದ ಶೆಟ್ಟರ್, ಕಾಮಗಾರಿ ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಕೀಲ್ ಅಹ್ಮದ್, ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರ, ಬಿಜೆಪಿ ಮುಖಂಡ ಮಹೇಶ ಬುರ್ಲಿ ಹಾಗೂ ಇತರರು ಇದ್ದರು.

Read More »

ಮುಖ್ಯಮಂತ್ರಿಯವರೇ ಮಂಗಳೂರಿನಲ್ಲಿರುವುದು ತಾಲಿಬಾನ್ ಸರ್ಕಾರವೇ?: ಸಿದ್ದರಾಮಯ್ಯ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಂಗಳೂರಿನಲ್ಲ ತಾಲಿಬಾನ್ ಸರ್ಕಾರವಿದಯೇ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸನ್ಮಾನ್ಯ ಮುಖ್ಯಮಂತ್ರಿಯವರೇ, ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ತಾಲಿಬಾನ್ ಗಳದ್ದಾ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಏನಿದು ಪ್ರಕರಣ: ಒಂದೇ ವಾಹನದಲ್ಲಿ ಅನ್ಯ ಕೋಮಿನ ಯುವಕ ಯುವತಿಯರು …

Read More »

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಕ್ಟೋಬರ್ 11ರವರೆಗೂ ನೈಟ್ ಕರ್ಫ್ಯೂ ಮುಂದುವರಿಕೆ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಕ್ಟೋಬರ್ 11ರವರೆಗೂ ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಲ್ಲಿ ಇದೀಗ ನೈಟ್ ಕರ್ಫ್ಯೂ ಸರ್ಕಾರದ ಮಾರ್ಗಸೂಚಿ ಮೇರೆಗೆ ರಾತ್ರಿ 11 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ಇರಲಿದೆ ಎಂದು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದು, ನಿನ್ನೆ ಒಂದೇ ದಿನ181 ಮಂದಿ ಸೋಂಕಿತ …

Read More »

ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಇಂದು ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಹಾನಗಲ್ ಹಾಗೂ ಸಿಂಧಗಿ ಕ್ಷೇತ್ರಕ್ಕೆ ಅಕ್ಟೋಬರ್ 30ರಂದು ಉಪಚುನಾವಣೆ ನಡೆಯಲಿದೆ. ಅಕ್ಟೋಬರ್ 1 ರಂದು ಅಧಿಸೂಚನೆ ಪ್ರಕಟವಾಗಲಿದೆ. ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಕ್ಟೋಬರ್ 8ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ. ನವೆಂಬರ್ 2ರಂದು ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಹಿರಿಯ ನಾಯಕ ಸಿ.ಎಂ ಉದಾಸಿ ನಿಧನದಿಂದ ಹಾನಗಲ್ ಕ್ಷೇತ್ರ …

Read More »

ಅಡುಗೆ ಅನಿಲ ಸಬ್ಸಿಡಿಯನ್ನು ಪುನರಾರಂಭಿಸುವ ಬಗ್ಗೆ ಸರಕಾರ ಚಿಂತನೆ..?

ಹೊಸದಿಲ್ಲಿ: ಅಡುಗೆ ಅನಿಲ ಸಬ್ಸಿಡಿಯನ್ನು ಪುನರಾರಂಭಿಸುವ ಬಗ್ಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಗಂಭೀರ ಚಿಂತನೆ ನಡೆಸಿದ್ದು, ಈ ಸಂಬಂಧ ಸಮೀಕ್ಷೆಯೊಂದನ್ನು ಕೈಗೊಳ್ಳುತ್ತಿದೆ ಎಂದು ಉನ್ನತ ಮೂಲಗಳು ವರದಿ ಮಾಡಿವೆ. ಸಬ್ಸಿಡಿಯನ್ನು ಉಜ್ವಲ ಯೋಜನೆಯ ಫ‌ಲಾನುಭವಿಗಳಿಗೆ ಸೀಮಿತಗೊಳಿಸುವ ಚಿಂತನೆಯೂ ಇದೆ ಎನ್ನಲಾಗಿದೆ. ಈ ಹಿಂದೆ ಎಲ್‌ಪಿಜಿ ದರ ಇಳಿಕೆಯಾಗಿದ್ದರಿಂದ 2020ರ ಮೇ ತಿಂಗಳಿ ನಲ್ಲಿ ಸರಕಾರವು ಎಲ್‌ಪಿಜಿ ಸಬ್ಸಿಡಿಯನ್ನು ಹಿಂದೆ ಗೆದುಕೊಂಡಿತ್ತು. ಆಗ ದಿಲ್ಲಿಯಲ್ಲಿ 14.2 ಕೆ.ಜಿ.ಯ ಅಡುಗೆ …

Read More »