Breaking News
Home / 2021 / ಸೆಪ್ಟೆಂಬರ್ (page 40)

Monthly Archives: ಸೆಪ್ಟೆಂಬರ್ 2021

ಯುವ ವಕೀಲರಿಗೆ ಮೋಹನ್ ಶಾಂತನಗೌಡರ್ ಸ್ಫೂರ್ತಿ : ಸಿಎಂ ಬೊಮ್ಮಾಯಿ

ಬೆಂಗಳೂರು,ಸೆ.18- ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿದ್ದ ಮೋಹನ್ ಶಾಂತನಗೌಡರ್ ಸಾಧನೆ ಯಾವಾಗಲೂ ಶಾಶ್ವತವಾಗಿದ್ದು, ಯುವ ವಕೀಲರು ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಹಮ್ಮಿಕೊಂಡಿದ್ದ ನ್ಯಾಯಮೂರ್ತಿ ಶ್ರೀ ಮೋಹನ್ ಶಾಂತನಗೌಡರ್ ಅವರ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೆಳಹಂತದಿಂದ ಬಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಸ್ಥಾನಕ್ಕೇರಿದರೂ ಮೋಹನ್ ಶಾಂತನಗೌಡರ್ ಎಂದಿಗೂ ಹಮ್ಮುಬಿಮ್ಮು ತೋರಿದವರಲ್ಲ. ಯಾವಾಗಲೂ ಸಾಮಾನ್ಯರಂತೆ …

Read More »

ಮಹಿಳಾ ಕಾನ್ ಸ್ಟೇಬಲ್ ಗೆ ಸಿನಿಮಾ, ಮಾಡೆಲಿಂಗ್ ನಲ್ಲಿ ಬಂಪರ್ ಅವಕಾಶ!

ಉತ್ತರ ಪ್ರದೇಶ ಆಗ್ರಾದ ಮಹಿಳಾ ಕಾನ್‌ಸ್ಟೇಬಲ್ ಪ್ರಿಯಾಂಕಾ ಶರ್ಮಾ ಬಂದೂಕು ಹಿಡಿದು ವಿಡಿಯೋ ಮಾಡಿ ಅದನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಬಹಳ ವೈರಲ್ ಆಗಿತ್ತು. ಕೊನೆಗೆ ಆ ಕಾನ್‌ಸ್ಟೇಬಲ್ ಅನ್ನು ಕೆಲಸದಿಂದ ಅಮಾನತು ಮಾಡಲಾಯ್ತು. ಸರ್ವೀಸ್‌ ಪಿಸ್ತೂಲು ಹಿಡಿದುಕೊಂಡು, ‘ಉತ್ತರ ಪ್ರದೇಶದಲ್ಲಿ ಐದು ವರ್ಷದ ಹುಡುಗರು ಸಹ ಪಿಸ್ತೂಲು ಚಲಾಯಿಸುತ್ತಾರೆ” ಎಂದು ಸ್ಟೈಲ್‌ ಆಗಿ ವಿಡಿಯೋ ಒಂದನ್ನು ಮಾಡಿದ್ದರು. ಇದು ಉತ್ತರ ಪ್ರದೇಶ ಪೊಲೀಸರ ಕೆಂಗಣ್ಣಿಗೆ ಗುರಿಯಾಗಿ ಪ್ರಿಯಾಂಕಾ …

Read More »

ರಸ್ತೆನೂ ಮಾಡ್ತೀವಿ, ಮದುವೆನೂ ಮಾಡ್ತೀವಿ’: ರಸ್ತೆಯಾಗುವವರೆಗೂ ಮದುವೆಯಾಗಲ್ಲ ಎಂದ ಯುವತಿಗೆ ಡಿಸಿ ಭರವಸೆ

ದಾವಣಗೆರೆ: ‘ರಸ್ತೆನೂ ಮಾಡ್ತೀವಿ, ಮದುವೆನೂ ಮಾಡ್ತೀವಿ’. ತಮ್ಮ ಊರಿಗೆ ರಸ್ತೆ ಮಾಡಿಕೊಡುವವರೆಗೂ ತಾನು ಮದುವೆಯಾಗಲ್ಲ ಎಂದು ಪಟ್ಟುಹಿಡಿದು, ರಸ್ತೆಗಾಗಿ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಪತ್ರ ಕಳುಹಿಸಿದ್ದ ದಾವಣಗೆರೆ ತಾಲ್ಲೂಕು ಮಾಯಕೊಂಡ ಹೋಬಳಿಯ ಹೆದ್ನೆ ರಾಂಪುರದ ಯುವತಿ ಆರ್.ಡಿ. ಬಿಂದು ಅವರಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ನೀಡಿದ ಭರವಸೆಯ ಮಾತುಗಳಿವು. ಊರಿಗೆ ರಸ್ತೆ, ವಾಹನ ಸೌಕರ್ಯವಿಲ್ಲದೆ ಮದುವೆಗಳೂ ಆಗದ ಸ್ಥಿತಿ ಇದ್ದು, ಪ್ರತಿಯೊಬ್ಬರೂ ಸವಾಲುಗಳ ಮಧ್ಯಯೇ ಬದುಕುತ್ತಿದ್ದಾರೆ. ಸಾರಿಗೆ ವ್ಯವಸ್ಥೆ ಇಲ್ಲವೆಂಬ …

Read More »

ಕುಡಿದು ವಾಹನ ಚಾಲನೆ ಮಾಡಿದ್ರೆ ಹುಷಾರ್‌. ಪೊಲೀಸರಿಂದ ಸ್ಟ್ರಿಕ್ಟ್‌ ತಪಾಸಣೆ!

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಸಾಲು ಸಾಲು ಅಪಘಾತಗಳು ಸಂಭವಿಸಿದ್ದು, ಸಾವು-ನೋವುಗಳಾಗಿವೆ. ಇದರಿಂದ ಎಚ್ಚೆತ್ತ ಟ್ರಾಫಿಕ್‌ ಪೊಲೀಸರು ಟಫ್‌ ರೂಲ್ಸ್‌ಗೆ ಮುಂದಾಗಿದ್ದು, ಸ್ಟ್ರಿಕ್ಟ್‌ ಆಗಿ ತಪಾಸಣೆ ನಡೆಸುತ್ತಿದ್ದಾರೆ. ಒಂದೂವರೆ ವರ್ಷದ ಬಳಿಕ ಮತ್ತೆ ಪೊಲೀಸರು, ಕುಡಿದು ವಾಹನ ಚಲಾಯಿಸುವವರ ಪರೀಕ್ಷೆ ಆರಂಭಿಸಿದ್ದಾರೆ. ವಾರದಲ್ಲಿ ಮೂರು ದಿನ ಡ್ರಂಕ್‌ ಅಂಡ್ ಡ್ರೈವ್ ಚೆಕ್ ಮಾಡುವಂತೆ ಆದೇಶಿಸಲಾಗಿದೆ. ವೀಕೆಂಡ್‌ನಲ್ಲಿ ಕುಡಿದು ವಾಹನ ಚಾಲನೆ ಮಾಡುವವರಿಗೆ ಖಡಕ್‌ ಎಚ್ಚರಿಕೆ ನೀಡಲಾಗಿದೆ. ಕುಡಿದು ಕಾರಲ್ಲಿ ಮೋಜು-ಮಸ್ತಿ ಮಾಡಿಕೊಂಡು …

Read More »

ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಸಂದರ್ಭ ಬಂದರೆ ದೇವೇಗೌಡರನ್ನ ಕೇಳೋದ್ರಲ್ಲಿ ತಪ್ಪಿಲ್ಲ: ರಾಮುಲು

ಚಿತ್ರದುರ್ಗ: 2023 ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬಾರದು ಎಂಬ ಸ್ಪಷ್ಟತೆ ಇದೆ. ಹಾಗಾಗಿ ಒಂದೊಮ್ಮೆ ಅಂತಹ ಸಂದರ್ಭ ಬಂದರೆ ದೇವೇಗೌಡರನ್ನು ಕೇಳುವುದರಲ್ಲಿ ತಪ್ಪಿಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. 2023ಕ್ಕೆ ಎರಡೂ ಪಕ್ಷಗಳು ಜೆಡಿಎಸ್ ಮನೆ ಬಾಗಿಲಿಗೆ ಬರಲಿವೆ ಎಂಬ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆಗೆ ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿದ ಶ್ರೀರಾಮುಲು, ಅಂತಹ ಸಂದರ್ಭ ಬಂದರೆ ದೇವೇಗೌಡರನ್ನು ಕೇಳಿದರೆ ತಪ್ಪಿಲ್ಲ. ಈ ಬಗ್ಗೆ ಮುಂದಿನ ದಿನಗಳಲ್ಲಿ …

Read More »

ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಗ್ರೀನ್ ಸಿಗ್ನಲ್ ನೀಡುವ ಪ್ರಶ್ನೆಯೇ ಇಲ್ಲ; ಅರುಣ್ ಸಿಂಗ್

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಆರಂಭಿಸಲು ಗ್ರೀನ್ ಸಿಗ್ನಲ್ ನೀಡುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಬಿಜೆಪಿಯ ಹಿರಿಯ ನಾಯಕರು. ಅವರು ಪ್ರವಾಸ ಮಾಡಬಹುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್ ಸಿಂಗ್ ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಪಕ್ಷದ ಕಾರ್ಯಕಾರಿಯಲ್ಲಿ ಗ್ರೀನ್​ ಸಿಗ್ನಲ್​ ನೀಡಿದ್ದಾರೆ. ಈಗಾಗಲೇ ಬಗ್ಗೆ ಹಲವಾರ ಸಲ ಹೇಳಿರುವೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತ್ರತ್ವದಲ್ಲಿ ಒಳ್ಳೆಯ ಕೆಲ್ಸ …

Read More »

ಗಾಂಧೀಜಿಯನ್ನೇ ಬಿಟ್ಟಿಲ್ಲ, ಇನ್ನು ನೀವ್ಯಾವ ಲೆಕ್ಕ? ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ

ಮಂಗಳೂರು: ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ. ಇನ್ನು ನೀವು ಯಾವ ಲೆಕ್ಕ? ಎಂದು ಮಂಗಳೂರಿನಲ್ಲಿ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಲ್ಲದೇ ದೇವಸ್ಥಾನ ಕೆಡವಿದ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿ ಎಚ್ಚರಿಕೆ ನೀಡಿದ್ದಾರೆ. ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮಿ, ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ. ಹೀಗಿರುವಾಗ ನಿಮ್ಮ ವಿಚಾರದಲ್ಲಿ ಅಲೋಚನೆ ಮಾಡಕ್ಕೆ ಅಗಲ್ಲ ಅಂತೀರಾ? …

Read More »

ನಿಯಮ ಉಲ್ಲಂಘಿಸಿ ಪಂಚಾಯಿತಿ ಕಟ್ಟಡ ನಿರ್ಮಾಣ ಕಾಮಗಾರಿ

ಹೊಸಪೇಟೆ (ವಿಜಯನಗರ): ಸರ್ಕಾರದ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ತಾಲ್ಲೂಕಿನ ಬೈಲುವದ್ದಿಗೇರಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಪಂಚಾಯಿತಿ ಸದಸ್ಯರು, ಗ್ರಾಮದ ಮುಖಂಡರು ಆರೋಪಿಸಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಪುಷ್ಪಾವತಿ ದೇವರಮನೆ, ವಿ, ಶಾಂತಾ, ಭುವನೇಶ್ವರಿ, ಶಿವರಾಜ ವೆಂಕೋಬಪ್ಪ, ಮುಖಂಡರಾದ ಕೋರಿ ಫಕೀರಪ್ಪ, ಮೂಕಪ್ಪ, ಎನ್‌. ನಾರಾಯಣಪ್ಪ ಶನಿವಾರ ನಗರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಆರೋಪ ಮಾಡಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಹೊಸ ಕಾಮಗಾರಿ ಕೈಗೆತ್ತಿಗೊಳ್ಳಬೇಕಾದರೆ ತಾಲ್ಲೂಕು ಪಂಚಾಯಿತಿ …

Read More »

ಬೈಲಹೊಂಗಲ : ಗ್ರಾಮ ಪಂಚಾಯತ್ ಸದಸ್ಯನಿಗೆ ಕಪಾಳ ಮೋಕ್ಷ ಮಾಡಿದ ಪಿಡಿಓ

ಬೈಲಹೊಂಗಲ : ಗ್ರಾ.ಪಂ ಸದಸ್ಯನೋರ್ವನಿಗೆ ಪಿಡಿಓ ಓರ್ವನು ಕ್ಷುಲ್ಲಕ ಕಾರಣಕ್ಕೆ ಕಪಾಳ ಮೋಕ್ಷ ಮಾಡಿ ಘಟನೆ ತಾಲೂಕಿನ ನಾಗನೂರ ಗ್ರಾಮ ಪಂಚಾಯ್ತಿಯಲ್ಲಿ ನಡೆದಿದೆ. ನಾಗನೂರ ಗ್ರಾಮ ಪಂಚಾಯತಿ ಸದಸ್ಯ ಬಸವರಾಜ ಉಣಕಲ್ಲ ಎಂಬವರಿಗೆ ನಾಗನೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವಿನಾಶ ಅಂಗರಗಟ್ಟಿ ಅವರು ಕಪಾಳಮೋಕ್ಷ ಮಾಡಿದ್ದಾರೆ. ಘಟನೆ ವಿವರ : ನಾಗನೂರು ಗ್ರಾಮದ ಓರ್ವ ವ್ಯಕ್ತಿಯ ಆಸ್ತಿಗೆ ಸಂಬಂಧಪಟ್ಟ ದಾಖಲೆಗಳ ಬಗ್ಗೆ ಪಿಡಿಓ ಅವರನ್ನು ಸದಸ್ಯ ಬಸವರಾಜ ಉಣಕಲ್ಲ …

Read More »

ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಹೆಸರಲ್ಲಿ ನಕಲಿ ಖಾತೆ ತೆರೆದು ವಂಚನೆ: ಖದೀಮರ ಬಂಧನ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಹೆಸರಲ್ಲಿ ನಕಲಿ ಖಾತೆ ತೆರೆದು, ವಂಚಿಸುತ್ತಿದ್ದ ಮೂವರನ್ನು ಸಿಐಡಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಮುಜಾಹಿದ್, ಇಕ್ಬಾಲ್ ಮತ್ತು ಆಸಿಫ್ ಬಂಧಿತರಾಗಿದ್ದು, ಉಳಿದವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಜಾಲತಾಣಗಳಲ್ಲಿ ಪುರುಷರನ್ನು ಪರಿಚಯ ಮಾಡಿಕೊಂಡು ಅವರ ಜತೆ ಸಲುಗೆಯಿಂದ ಮಾತಾಡಿ, ಅವರ ಬೆತ್ತಲೆ ವಿಡಿಯೋವನ್ನು ಸೆರೆಹಿಡಿದು ಈ ಗ್ಯಾಂಗ್ ಬ್ಲ್ಯಾಕ್ ಮೇಲ್ ಮಾಡುತ್ತಿತ್ತು ಎಂದು ತಿಳಿದುಬಂದಿದೆ. ಸೈಬರ್ ಖದೀಮರು ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಸೋಗಿನಲ್ಲಿ …

Read More »