Breaking News
Home / 2021 / ಸೆಪ್ಟೆಂಬರ್ (page 5)

Monthly Archives: ಸೆಪ್ಟೆಂಬರ್ 2021

ತಾಲಿಬಾನ್ ಹೇಳಿಕೆ ನೀಡಿದ ಸಿದ್ದರಾಮಯ್ಯ ಮಾನಸಿಕತೆ ಬಗ್ಗೆ ನೋವಿದೆ- ಕೋಟ ಶ್ರೀನಿವಾಸ ಪೂಜಾರಿ

ಬೀದರ್: ರಾಷ್ಟ್ರ ಭಕ್ತ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ತಾಲಿಬಾನ್‌ಗೆ ಹೋಲಿಕೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಾನಸಿಕತೆ ಬಗ್ಗೆ ನೋವಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿಯಾಗಿದ್ದ ಜವಾಹರಲಾಲ್ ನೆಹರು ಅವರು ಆರ್‌ಎಸ್‌ಎಸ್‌ನ್ನು ಗಣರಾಜ್ಯೋತ್ಸವದ ಪಥ ಸಂಚಲನಕ್ಕೆ ಅವಕಾಶ ಮಾಡಿಕೊಟ್ಟಿದ್ದರು. ಸಿದ್ದರಾಮಯ್ಯನವರು ಕಾಂಗ್ರೆಸ್‌ನ್ನು ಪರಂಪರೆಯನ್ನು ಒಪ್ಪಿಕೊಂಡವರು ಮತ್ತು ನೆಹರು ಅವರನ್ನು ಗೌರವಿಸುತ್ತಾರೆ ಎಂದಾದರೆ ಆರ್‌ಎಸ್‌ಎಸ್‌ನ್ನು …

Read More »

ಲೇ ನೀವೆಲ್ಲ ಹೀರೋಗಳಾ…ಹಿಂದೂಗಳೇ ಎಲ್ಲೋಗಿದ್ದೀರಾ? ವಿಜಯಲಕ್ಷ್ಮಿ ಪರಿಸ್ಥಿತಿ ಕಂಡು ವಕೀಲ ಜಗದೀಶ್ ಗರಂ

ನಮ್ಮ ತಾಯಿ ಆರೋಗ್ಯ ಸರಿಯಿಲ್ಲ, ನಮ್ಮ ಅಕ್ಕನ ಆರೋಗ್ಯ ಸರಿಯಲ್ಲ, ಯಾರಾದರೂ ಸಹಾಯ ಮಾಡಿ ಎಂದು ಅಂಗಲಾಚಿ ಬೇಡುತ್ತಿದ್ದ ನಟಿ ವಿಜಯಲಕ್ಷ್ಮಿ ಅವರು ತನ್ನ ತಾಯಿಯನ್ನು ಕಳೆದುಕೊಂಡಿದ್ದಾರೆ. 75 ವರ್ಷದ ವಿಜಯಾ ಸುಂದರಂ ಅವರು ಸೆಪ್ಟಂಬರ್ 29ರಂದು ಕೊನೆಯುಸಿರೆಳೆದರು. ವಿಜಯಲಕ್ಷ್ಮಿ ಅವರ ತಾಯಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ತಾಯಿಯನ್ನು ಕಳೆದುಕೊಂಡ ನಟಿ ವಿಜಯಲಕ್ಷ್ಮಿ ಬಿಕ್ಕಿ ಬಿಕ್ಕಿ ಅಳುತ್ತಿದ್ದರು. ಇಂಥ ಕಷ್ಟದ ಪರಿಸ್ಥಿತಿಯಲ್ಲೂ, ಅಸಹಾಯಕ ಸ್ಥಿತಿಯಲ್ಲಿ ಕಣ್ಣೀರಿಡುತ್ತಿದ್ದ ಕುಳಿತ್ತಿದ್ದ ಹೆಣ್ಣುಮಗಳ ಸಹಾಯಕ್ಕೆ ಯಾರು …

Read More »

2022ರ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಲಿದೆ: ನಡ್ಡಾ ವಿಶ್ವಾಸ

ಡೆಹ್ರಾಡೂನ್‌: ಉತ್ತರಾಖಂಡ ರಾಜ್ಯದಲ್ಲಿ ‘ಡಬಲ್‌ ಎಂಜಿನ್‌’ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳೊಂದಿಗೆ 2022ರ ವಿಧಾನಸಭಾ ಚುನಾವವಣೆಯಲ್ಲಿ ಬಿಜೆಪಿ ಪಕ್ಷ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪ್ರತಿಪಾದಿಸಿದರು. ಬುಧವಾರ ವರ್ಚುವಲ್‌ ಸಭೆಯಲ್ಲಿ ಪಕ್ಷದ ಶಕ್ತಿ ಕೇಂದ್ರದ ಸಂಚಾಲಕರು ಮತ್ತು ಉಸ್ತುವಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪಕ್ಷದ ಚುನಾವಣಾ ಕಾರ್ಯಗಳಲ್ಲಿ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರು ನಿರ್ಣಾಯಕ ಪಾತ್ರವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ತಳಮಟ್ಟದ ಕಾರ್ಯಕರ್ತರನ್ನು ಬಲವರ್ಧನೆಗೊಳಿಸುವಂತೆ ಸೂಚಿಸಿದರು. ಬೂತ್ …

Read More »

ಗೋವಾದಲ್ಲಿ ಯಾರೊಂದಿಗೂ ಮೈತ್ರಿ ಇಲ್ಲ: ಶಿವಸೇನೆ

ಪಣಜಿ: ಗೋವಾದಲ್ಲಿ ಸರ್ಕಾರ ರಚಿಸಲು ಅಗತ್ಯವಿರುವ 22 ಕ್ಷೇತ್ರಗಳಲ್ಲಿ ಶಿವಸೇನೆಯು ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಫರ್ಧಿಸಲಿದೆ ಎಂದು ಸಂಜಯ್ ರಾವುತ್ ಬುಧವಾರ ಹೇಳಿಕೆ ನೀಡಿದ್ದಾರೆ. ಗೋವಾದ ದಾಬೋಲಿಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ಶಿವಸೇನೆಯ ಪ್ರಭಾರಿ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಅವ ರನ್ನು ಗೋವಾ ಶಿವಸೇನೆಯ ಪ್ರಮುಖ ಜಿತೇಶ್ ಕಾಮತ್ ಹಾಗೂ ಸುಭಾಷ ಕೇರಕರ್ ರವರು ಸ್ವಾಗತಿಸಿದರು . ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಸಂಜಯ್ ರಾವುತ್, …

Read More »

ಕಿಚ್ಚನ ಕೋಟಿಗೊಬ್ಬ-3ಗೆ ಪೈರಸಿ ಭಯ..!

ಬೆಂಗಳೂರು: ಬಿಡುಗಡೆಗೂ ಮುನ್ನವೇ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾಗೆ ಪೈರಸಿ ಕಾಟ ಶುರುವಾಗಿದೆ. ಸಿನಿಮಾವನ್ನು ಬಿಡುಗಡೆಗೂ ಮುನ್ನ ಪೈರಸಿ ಮಾಡೋದಾಗಿ ಕೋಟಿಗೊಬ್ಬ 3 ಸಿನಿಮಾ ನಿರ್ಮಾಪಕ ಸೂರಪ್ಪಬಾಬುಗೆ ಟೆಲಿಗ್ರಾಂನಲ್ಲಿ ಬೆದರಿಕೆಗಳು ಬಂದಿವೆಯಂತೆ. ಈ ಹಿನ್ನೆಲೆ ಸೂರಪ್ಪ ಬಾಬು ಗೃಹ ಸಚಿವ ಆರಗ ಜ್ಞಾನೇಂದ್ರಗೆ ಪತ್ರ ಬರೆದಿದ್ದಾರೆ. ಕೋಟಿಗೊಬ್ಬ 3 ಸಿನಿಮಾ ಅಕ್ಟೋಬರ್ 1 ರಂದು ರಿಲೀಸ್ ಆಗಲಿದೆ. ಆದ್ರೆ ಅದಕ್ಕೂ ಮುನ್ನ ಇದೀಗ ಪೈರಸಿಯ ಬೆದರಿಕೆ ಬಂದಿದ್ದು ಮುನ್ನೆಚ್ಚರಿಕೆ …

Read More »

ಹಾನಗಲ್ ಬೈಎಲೆಕ್ಷನ್: ಬಿಜೆಪಿಯಿಂದ BSY-ಬೊಮ್ಮಾಯಿ; ಕಾಂಗ್ರೆಸ್​ನ ಜೋಡೆತ್ತು ಯಾರು ?

ಹಾವೇರಿ: ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳಿಗೆ ನಡೆಯಬೇಕಾಗಿದ್ದ ಉಪಚುನಾವಣೆಯನ್ನ ಅಕ್ಟೋಬರ್ 30 ರಂದು ನಡೆಸಲಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ತಂತ್ರ-ಪ್ರತಿತಂತ್ರದ ಬಗ್ಗೆ ಚರ್ಚೆಗಳು ಶುರುವಾಗಿದೆ. ಜೋಡೆತ್ತುಗಳ ಹೋರಾಟ ಮೂಲಗಳ ಪ್ರಕಾರ ಹಾನಗಲ್​ನಲ್ಲಿ ಜೋಡೆತ್ತುಗಳ ಪಾಲಿಟಿಕ್ಸ್ ಜೋರಾಗಲಿದ್ಯಂತೆ. ಚುನಾವಣಾ ಅಖಾಡದಲ್ಲಿ ತೊಡೆತಟ್ಟಲು ಘಟಾನುಘಟಿ ನಾಯಕರು ಸಜ್ಜಾಗಿದ್ದಾರೆ ಎನ್ನಲಾಗಿದೆ. ಅದರಂತೆ ಬಿಜೆಪಿಯಿಂದ ಬಿಎಸ್​ವೈ ಮತ್ತು ಬಸವರಾಜ್ ಬೊಮ್ಮಾಯಿ ಹಾಗೂ ಕಾಂಗ್ರೆಸ್​ನಿಂದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್​ …

Read More »

ಕೋರ್ಟ್​ ಆವರಣದಲ್ಲೇ ಪತ್ನಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಪತಿ

ಬೆಳಗಾವಿ: ಕೋರ್ಟ್ ಆವರಣದಲ್ಲಿ ಪತ್ನಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದಿವಾಣಿ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಪ್ಪ ಅಡಕಿ (35) ಪತ್ನಿ ಜಯಮಾಲಾ (33) ಮೇಲೆ ಹಲ್ಲೆ ಮಾಡಿದ್ದು, ಮಾರಕಾಸ್ತ್ರದಿಂದ ಪತ್ನಿಯ ತಲೆ ಹಾಗೂ ಕಾಲಿಗೆ ಕೊಚ್ಚಿದ ಕೊಲೆ ಮಾಡಲು ಯತ್ನಿಸಿದ್ದಾನೆ.     ಪತಿ-ಪತ್ನಿಯ ಕೌಟುಂಬಿಕ ಕಲಹದ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. …

Read More »

ರೋಟರಿ ಸಂಸ್ಥೆ, ಆರ್ಟ ಆಫ್ ಲಿವಿಂಗ್, ಟೊರೊಂಟೋ ಫಾರ್ಮ ಹಾಗೂ ರಿಸರ್ಚಸೊಸೈಟಿ ಫಾರ್ ಸ್ಟಡಿ ಆಫ್ ಡಯಾಬಿಟಿಸ್ ಇಂಡಿಯಾದವರು ಸಂಯುಕ್ತವಾಗಿ ಆಯೋಜಿಸಿದ್ದ ಮಧುಮೇಹ ತಪಾಸಣಾ ಕಾರ್ಯಕ್ರವiಕ್ಕೆ ತಹಶೀಲ್ದಾರ ಅವರು ಚಾಲನೆ ನೀಡುತ್ತಿರುವುದು.

ಗೋಕಾಕ ;- ದೇಶದಲ್ಲಿ ಹೆಚ್ಚುತ್ತಿರುವ ಮಧುಮೇಹವನ್ನು ನಿಯಂತ್ರಿಸಲು ಜನತೆಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ರೋಟರಿ ಸಂಸ್ಥೆಯ ಅಧ್ಯಕ್ಷ ರಾಜು ವರದಾಯಿ ಹೇಳಿದರು. ಬುಧವಾರದಂದು ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ರೋಟರಿ ಸಂಸ್ಥೆ, ಆರ್ಟ ಆಫ್ ಲಿವಿಂಗ್, ಟೊರೊಂಟೋ ಫಾರ್ಮ ಹಾಗೂ ರಿಸರ್ಚಸೊಸೈಟಿ ಫಾರ್ ಸ್ಟಡಿ ಆಫ್ ಡಯಾಬಿಟಿಸ್ ಇಂಡಿಯಾದವರು ಸಂಯುಕ್ತವಾಗಿ ಆಯೋಜಿಸಿದ್ದ ಭಾರತದಾಧ್ಯಂತ ಒಂದೇ ದಿನದಲ್ಲಿ 10 ಲಕ್ಷ ಮಧುಮೇಹಿಗಳ ತಪಾಸಣಾ ಶಿಭಿರದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ದೇಶದಲ್ಲಿ ಅತೀ ಹೆಚ್ಚು …

Read More »

ಗುತ್ತಿಗೆದಾರನ ನಿರ್ಲಕ್ಷ್ಯ.. ರಸ್ತೆ ಗುಂಡಿಗೆ ಬಿದ್ದು ವ್ಯಕ್ತಿ ಸಾವು: ಗ್ರಾಮಸ್ಥರಿಂದ ಪ್ರತಿಭಟನೆ

ರಸ್ತೆ ಗುಂಡಿಗೆ ಬಿದ್ದು ವ್ಯಕ್ತಿ ಸಾವಿಗೀಡಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್-ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. ಸಬ್ ಮಂಗಲ ನಿವಾಸಿ ಮಾದೇಶ್ ಮೃತ ವ್ಯಕ್ತಿಯಾಗಿದ್ದಾನೆ. ರಸ್ತೆ ಕಾಮಗಾರಿಗೆ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರ ರಸ್ತೆಯಲ್ಲಿನ ಮರ ತೆರವು ಮಾಡಲು ಹೋಗಿ ಗುಂಡಿ ತೆಗೆದು ಹಾಗೆ ಬಿಟ್ಟಿದ್ದ. ಇದೀಗ ರಸ್ತೆಯಲ್ಲಿರುವ ಅದೇ ಹೊಂಡಕ್ಕೆ ಬಿದ್ದು ಮಾದೇಶ್ ಮೃತಪಟ್ಟಿದ್ದಾರೆ. ಕಳೆದ ರಾತ್ರಿ ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುವಾಗ ಅಪಘಾತ ಸಂಭವಿಸಿದೆ. ಗ್ರಾಮಸ್ಥರು ರಸ್ತೆ ತಡೆದು …

Read More »

ರಸ್ತೆ ಗುಂಡಿಯಲ್ಲಿ ಬಿದ್ದು ಬೈಕ್ ಓಡಿಸುತ್ತಿದ್ದ ಬಿಜೆಪಿ ಮುಖಂಡ ಸಾವು

ಆನೇಕಲ್: ಬೈಕ್ ಓಡಿಸುವಾಗ ರಸ್ತೆ ಕಾಮಗಾರಿಗೆಂದು ತೋಡಿದ್ದ ಗುಂಡಿಯಲ್ಲಿ ಬಿದ್ದು ಬಿಜೆಪಿ ಮುಖಂಡ ಸಬ್‌ಮಂಗಲ ನಿವಾಸಿ ಮಾದೇಶ್(50) ಸಾವನ್ನಪ್ಪಿದ್ದಾರೆ. ಆನೇಕಲ್‌ನ ಹೊಸೂರು ಮುಖ್ಯರಸ್ತೆಯಲ್ಲಿ ದುರ್ಘಟನೆ ನಡೆದಿದ್ದು, ಗುತ್ತಿಗೆದಾರ ರಸ್ತೆ ಕಾಮಗಾರಿಗೆ ಹೊಂಡ ತೋಡಿದ್ದರು. ಆದರೆ ಕೆಲಸ ಪೂರ್ಣಗೊಳಿಸದೆ ಗುಂಡಿಯನ್ನು ಹಾಗೆಯೇ ಬಿಟ್ಟುಹೋಗಿದ್ದರು ಎನ್ನಲಾಗಿದೆ. ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯರು ಧರಣಿ ನಡೆಸಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ದಿನೇಶ್ ಭೇಟಿ ನೀಡಿ ಧರಣಿ ನಡೆಸುತ್ತಿದ್ದವರ ಮನವೊಲಿಕೆಗೆ ಯತ್ನಿಸಿದ್ದಾರೆ. ಈ ರಸ್ತೆಯಲ್ಲಿ ಕಾಮಗಾರಿ ಪ್ರಾರಂಭ …

Read More »