ಗದಗ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾದ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಕಲಕೇರಿ ಗ್ರಾಮದ ಬಳಿ ನಡೆದಿದೆ. ಹುಬ್ಬಳ್ಳಿ-ಇಳಕಲ್ ಮಾರ್ಗದ ಸಾರಿಗೆ ಸಂಸ್ಥೆಯ ಬಸ್ ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ್ದು, ಏಕಾಏಕಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ 30 ಕ್ಕೂ ಹೆಚ್ಚು ಪ್ರಯಾಣಿಕರು ಬಚಾವ್ ಆಗಿದ್ದಾರೆ. ಬಸ್ ಪಲ್ಟಿಯಾದ ಮೇಲೆ ಗ್ಲಾಸ್ ಒಡೆದು ಹೊರಗಡೆ ಬಂದ್ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಘಟನೆಯಲ್ಲಿ ಕೆಲ ಪ್ರಯಾಣಿಕರಿಗೆ ಸಣ್ಣ …
Read More »Monthly Archives: ಸೆಪ್ಟೆಂಬರ್ 2021
700 ಅಡಿಕೆ ಮರಗಳನ್ನು ಕಡಿದು ಹಾಕಿದ್ದ ಆರೋಪಿಯನ್ನ 5 ಗಂಟೆಗಳಲ್ಲಿ ಬಂಧಿಸಿದ ಪೊಲೀಸ್
ಹಾವೇರಿ: ತಾಲೂಕಿನ ಬಾಳಂಬೀಡ ಗ್ರಾಮದಲ್ಲಿ ಬರೋಬ್ಬರಿ 700 ಅಡಿಕೆ ಮರಗಳನ್ನು ಕತ್ತರಿಸಿದ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ಐದು ಗಂಟೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರೈತ ಸಹೋದರರ ಮನೆಯಲ್ಲಿ ಬಾಡಿಗೆ ಇದ್ದವನೇ ಗಿಡಗಳನ್ನು ಕಡಿದಿರುವ ಆರೋಪಿ ಎನ್ನಲಾಗಿದೆ. ರಾಜಾಸಬ ಹೊಸಮನಿ ಎಂಬಾತನನ್ನು ಬಂಧಿಸಲಾಗಿದ್ದು ಈತ ತೋಟದಲ್ಲಿ ಬಂದ ಫಸಲಲ್ಲಿ ಶೇರ್ ಕೊಡುವಂತೆ ಕೇಳಿದ್ದನಂತೆ. ಈ ವಿಚಾರಕ್ಕೆ ರೈತರು ಹಾಗೂ ಆರೋಪಿ ನಡುವೆ ಜಗಳವಾಗಿತ್ತು.. ಈ ಹಿನ್ನಲೆ ರಾಜಾಸಾಬ ಹೊಸಮನಿಯನ್ನ ಮನೆ …
Read More »ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ: ಕನ್ನಡಕ್ಕೆ ಆದ್ಯತೆ: ಸುನಿಲ್ ಕುಮಾರ್
ಬೆಂಗಳೂರು: ರಾಜ್ಯ ಸರಕಾರ ಕನ್ನಡಕ್ಕೆ ವಿಶೇಷ ಆದ್ಯತೆ ನೀಡಿದ್ದು, ಎಲ್ಲೆಲ್ಲಿ ಕನ್ನಡವನ್ನು ಪ್ರಧಾನವಾಗಿ ತೆಗೆದುಕೊಂಡು ಬರಲು ಸಾಧ್ಯವೋ, ಅದೆಲ್ಲವನ್ನು ಮಾಡಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ಕುಮಾರ್ ಹೇಳಿದ್ದಾರೆ. ಕನ್ನಡ ಸಾಹಿತ್ಯ ಅಕಾಡೆಮಿ ರವಿವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 2020ನೇ ಸಾಲಿನ ಗೌರವ ಪ್ರಶಸ್ತಿ 2019-20ನೇ ಸಾಲಿನ ಸಾಹಿತ್ಯಶ್ರೀ ಮತ್ತು 2018-19ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಮುಂದಿನ ರಾಜ್ಯೋತ್ಸವವನ್ನು …
Read More »ಹಂಸಲೇಖ, ನಾನು ಗುಡ್ ಫ್ರೆಂಡ್ಸ್ ಅಲ್ಲವೇ ಅಲ್ಲ’ ಎಂದು ಹೇಳಿ ಅಚ್ಚರಿ ಮೂಡಿಸಿದ ರವಿಚಂದ್ರನ್
ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಮತ್ತು ಖ್ಯಾತ ಸಂಗೀತ ಸಂಯೋಜಕ ಹಂಸಲೇಖ ಅವರ ಸಂಬಂಧದ ಕುರಿತು ಟಿವಿ9ನೊಂದಿಗೆ ಮಾತನಾಡಿದ್ದಾರೆ. ಈ ವೇಳೆ ನಾವೀರ್ವರೂ ಉತ್ತಮ ಗೆಳೆಯರೇ ಅಲ್ಲ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ. ಹಾಗಾದರೆ ಅವರೀರ್ವರ ಸಂಬಂಧ ಹೇಗಿತ್ತು? ವಿಡಿಯೊ ನೋಡಿ ಕನ್ನಡ ಬೆಳ್ಳಿತೆರೆಯಲ್ಲಿ ತಮ್ಮ ಸೂಪರ್ ಹಿಟ್ ಕಾಂಬಿನೇಷನ್ನಿಂದ ಗಮನ ಸೆಳೆದ ಜೋಡಿಗಳಲ್ಲಿ ರವಿಚಂದ್ರನ್ ಹಾಗೂ ಹಂಸಲೇಖ ಪ್ರಮುಖರು. ದೃಶ್ಯ 2 ಚಿತ್ರದ ಬಿಡುಗಡೆಯ ಸಂದರ್ಭದಲ್ಲಿಮಾತನಾಡಿರುವ ರವಿಚಂದ್ರನ್ ಹಳೆಯ ದಿನಗಳನ್ನು …
Read More »ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಮೇಯರ್, ಉಪಮೇಯರ್ ಸ್ಥಾನ ಬಿಜೆಪಿಗೆ: ಜಗದೀಶ್ ಶೆಟ್ಟರ್ ವಿಶ್ವಾಸ
ಹುಬ್ಬಳ್ಳಿ, ಸೆ. 12: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮೇಯರ್ ಹಾಗೂ ಉಪಮೇಯರ್ ಗಾದಿಯನ್ನು ಬಿಜೆಪಿಯವರೇ ಅಲಂಕರಿಸಲಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ರವಿವಾರ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಎರಡು ಬಾರಿ ಆಡಳಿತ ನಡೆಸಿದೆ. ಈ ಬಾರಿಯೂ ಜನರ ಆಶೀರ್ವಾದದಿಂದಾಗಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದರು. ನಮ್ಮ ಪಕ್ಷದ ಜನಪ್ರತಿನಿಧಿಗಳು ತಮ್ಮ ವಿಶೇಷ ಮತ ಹಾಕುವುದರಿಂದ ಬಿಜೆಪಿ 45 …
Read More »ಬಿಜೆಪಿ ಹಣದಿಂದ ಅಧಿಕಾರಕ್ಕೆ ಬಂದಿರುವುದಕ್ಕೆ ಶ್ರೀಮಂತ್ ಪಾಟೀಲ್ ಹೇಳಿಕೆ ಸಾಕ್ಷಿ: ದಿನೇಶ್
ಬೆಂಗಳೂರು: ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಬಿಜೆಪಿ ಸೇರಲು ಹಣದ ಆಫರ್ ನೀಡಿದ್ದ ಬಗ್ಗೆ ಸ್ವತಃ ಒಪ್ಪಿಕೊಂಡಿದ್ದಾರೆ. ಶಾಸಕರನ್ನು ಖರೀದಿಸಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದಕ್ಕೆ ಇದು ಸಾಕ್ಷಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, 17 ಶಾಸಕರನ್ನು ಬಿಜೆಪಿ ಅಕ್ರಮ ದುಡ್ಡಿನಿಂದ ಖರೀದಿಸಿದೆ ಎಂಬುದು ಕೊನೆಗೂ ನಿಜವಾಗಿದೆ. ಶಾಸಕರ ಖರೀದಿಸಿ ಅಧಿಕಾರಕ್ಕೆ ಬಂದಿರುವ ಈ ಸರ್ಕಾರ ಅಕ್ರಮ ಸಂತಾನ. ಶಾಸಕರ ಖರೀದಿಗೆ …
Read More »ಕರ್ನಾಟಕದಲ್ಲಿ ಮೂರು ದಿನ ಮಳೆ; ಯೆಲ್ಲೋ ಅಲರ್ಟ್
ಬೆಂಗಳೂರು, ಸೆಪ್ಟೆಂಬರ್ 13; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರುದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು, ಕರಾವಳಿ, ಕೊಡಗು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಜಲಾಶಯಗಳಿಗೆ ಒಳಹರಿವು ಸಹ ಹೆಚ್ಚಿದೆ. ಇನ್ನೂ ಮೂರು ದಿನಗಳ ಕಾಲ …
Read More »ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೊಮ್ಮಾಯಿ ಅವರಿಗೆ ಇದು ಮೊದಲ ಅಧಿವೇಶನ
ಬೆಂಗಳೂರು: ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೊಮ್ಮಾಯಿ ಅವರಿಗೆ ಇದು ಮೊದಲ ಅಧಿವೇಶನವಾಗಿದೆ. ಅಧಿವೇಶನದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿಳಂಬ, ವರ್ಗಾವಣೆ ದಂಧೆ ಕುರಿತು ಪ್ರಸ್ತಾವಿಸುವುದಾಗಿ ವಿಪಕ್ಷ ಕಾಂಗ್ರೆಸ್ ಘೋಷಿಸಿದ್ದು, ಪ್ರತಿಪಕ್ಷ ಹಾಗೂ ಆಡಳಿತ ಪಕ್ಷಗಳ ಮಧ್ಯೆ ವಾಕ್ಸಮರ, ಆರೋಪ – ಪ್ರತ್ಯಾರೋಪ, ಬಿಸಿ ಬಿಸಿ ಚರ್ಚೆಗೆ ವೇದಿಕೆಯಾಗಲಿದೆ. 6 …
Read More »ಇಂದಿನಿಂದ ವಿಧಾನಮಂಡಲ ಅಧಿವೇಶನ: ಎತ್ತಿನ ಗಾಡಿಯಲ್ಲಿ ಕಲಾಪಕ್ಕೆ ಆಗಮಿಸಲಿರುವ ಕಾಂಗ್ರೆಸ್ ನಾಯಕರು!
ಬೆಂಗಳೂರು: 10 ದಿನಗಳ ವಿಧಾನಮಂಡಲ ಅಧಿವೇಶನ ಸೋಮವಾರ ಆರಂಭವಾಗುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಮುಖ್ಯವಾಗಿ ಪ್ರತಿಪಕ್ಷ ಕಾಂಗ್ರೆಸ್ ಸಜ್ಜುಗೊಳ್ಳುತ್ತಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವನ್ನು ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೋವಿಡ್ ನಿರ್ವಹಣೆ, ಲಸಿಕೆ ಪೂರೈಕೆಯಲ್ಲಿ ಕೊರತೆ, ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಇಕ್ಕಟ್ಟಿಗೆ ಸಿಲುಕಿಸಲು, ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿವೆ. ಇನ್ನೊಂದೆಡೆ ಸರ್ಕಾರ, ಈ ಕಲಾಪದಲ್ಲಿ 18 ಮಸೂದೆಗಳ ಅಂಗೀಕಾರಕ್ಕೆ ಬಯಸುತ್ತಿದೆ. ಕರ್ನಾಟಕ ಪೊಲೀಸ್ …
Read More »ಅಡುಗೆ ಎಣ್ಣೆ ಸುಂಕ ಇಳಿಕೆ:4ರೂಪಾಯಿ ಇಳಿಸಿದ್ದೇ ಕೇಂದ್ರದ ಮಹಾನ್ ಸಾಧನೆ: ಗುಂಡೂರಾವ್ ವ್ಯಂಗ್ಯ
ಬೆಂಗಳೂರು : ಹಬ್ಬಗಳ ಋತುವಿನಲ್ಲಿ ಅಡುಗೆ ಎಣ್ಣೆಗಳ ಬೆಲೆಯನ್ನು ನಿಯಂತ್ರಣದಲ್ಲಿ ಇರಿಸುವುದಕ್ಕಾಗಿ ಕೇಂದ್ರ ಸರಕಾರವು ತಾಳೆ, ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆಗಳ ಆಮದು ಸುಂಕವನ್ನು ಶೇ. 2.11ರಷ್ಟು ಕಡಿಮೆ ಮಾಡಿದ ಬೆನ್ನಿಗೆ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್, ಮೋದಿ ಸರ್ಕಾರ ಹಬ್ಬಕ್ಕೆ ಜನಸಾಮಾನ್ಯರಿಗೆ ಕೊಟ್ಟ ಬಹುದೊಡ್ಡ ಕೊಡುಗೆಯಿದು ಎಂದು ಹೇಳಿದ್ದಾರೆ. ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಕೇಂದ್ರ ಸರ್ಕಾರವನ್ನು ವ್ಯಂಗ್ಯ ಧ್ವನಿಯಲ್ಲಿ ಟೀಕೆ ಮಾಡಿದ ಗುಂಡೂರಾವ್, ಕೇಂದ್ರ ಸರ್ಕಾರ ಅಡುಗೆ …
Read More »