Breaking News

Monthly Archives: ಸೆಪ್ಟೆಂಬರ್ 2021

ಅಕ್ಟೋಬರ್-ನವೆಂಬರ್ ನಲ್ಲಿ ಕೋವಿಡ್-19 ಮೂರನೇ ಅಲೆ: ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ವೇಳೆಗೆ ಮೂರನೇ ಅಲೆ ಎದುರಾಗಬಹುದು ಎಂದು ಕೋವಿಡ್-19 ತಡೆಗೆ ಕ್ರಮ ಕೈಗೊಳ್ಳಲು ರಚಿಸಲಾಗಿರುವ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ. ಹಬ್ಬಗಳ ಸಾಲುಗಳು ಈ ತಿಂಗಳಲ್ಲಿ ಬರುವುದರಿಂದ ಇತ್ತೀಚೆಗೆ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಠಿಣವಾಗಿ ಜಾರಿಗೊಳಿಸಿ ಪಾಲಿಸಬೇಕೆಂದು ಟಿಎಸಿ ಹೇಳಿದೆ. “ಒಂದು ವೇಳೆ ಮಾರ್ಗಸೂಚಿಗಳನ್ನು ಪಾಲಿಸದೇ ಇದ್ದಲ್ಲಿ ಅವ್ಯವಸ್ಥೆ ಉಂಟಾಗಲಿದೆ. ಈ ಹಂತದಲ್ಲಿ ಮಾರ್ಗಸೂಚಿಗಳನ್ನು ಪಾಲಿಸುವುದು ಬಹಳ ಮುಖ್ಯ. ರಾಜ್ಯದಲ್ಲಿ ಈಗ ಕೋವಿಡ್-19 ಸೋಂಕು ಪ್ರಸರಣ ಸಂಖ್ಯೆ …

Read More »

ಈಜುಕೊಳವಾದ ವಿಮಾನ ನಿಲ್ದಾಣ! : ಧಾರಾಕಾರ ಮಳೆಗೆ ದಿಲ್ಲಿ ತತ್ತರ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ 46 ವರ್ಷಗಳಲ್ಲೇ ದಾಖಲೆ ಎಂಬಂತೆ ಧಾರಾಕಾರ ಮಳೆ ಸುರಿದಿದ್ದು, ದಿಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಹಲವು ಪ್ರಮುಖ ರಸ್ತೆಗಳಲ್ಲಿ ಶನಿವಾರ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಶನಿವಾರ ಮುಂಜಾನೆ 5.30ರಿಂದ ಮಧ್ಯಾಹ್ನ 2.30ರ ಅವಧಿಯಲ್ಲಿ 117.9 ಮಿ.ಮೀ. ಮಳೆ ಸುರಿದಿದೆ. ಏರ್‌ಪೋರ್ಟ್‌ಗೆ ನೀರು ನುಗ್ಗಿದ ಪರಿಣಾಮ, 3 ವಿಮಾನಗಳ ಹಾರಾಟ ರದ್ದಾಗಿದ್ದು, 5 ವಿಮಾನಗಳ ಮಾರ್ಗಗಳನ್ನು ತುರ್ತಾಗಿ ಬದಲಿಸಲಾಯಿತು. ಏರ್‌ಪೋರ್ಟ್‌ ಸಿಬಂದಿ ಕೇವಲ 30 ನಿಮಿಷಗಳಲ್ಲಿ ನೀರನ್ನು …

Read More »

ಇನ್ಮುಂದೆ `ಟ್ರಾಫಿಕ್ ರೂಲ್ಸ್’ ಬ್ರೇಕ್ ಮಾಡಿದ್ರೆ ದುಬಾರಿ ದಂಡ!

ಬೆಂಗಳೂರು : ಸಾರ್ವಜನಿಕರೇ ಗಮನಿಸಿ, ಇನ್ಮುಂದೆ ಸಂಚಾರ ನಿಯಮ ಉಲ್ಲಂಘಿಸುವ ಮುನ್ನ ಎಚ್ಚರ ವಹಿಸಿ, ಇಲ್ಲವಾದರೆ, ಭಾರಿ ದಂಡದ ಕಟ್ಟಬೇಕಾದೀತು. ಹೌದು ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಗೆ ಟ್ರಾಫಿಕ್ ಪೊಲೀಸರು ಮತ್ತೊಮ್ಮೆ ಬಿಸಿ ಮುಟ್ಟಿಸಲು ಸಜ್ಜಾಗಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಕಾನೂನಿನ ಕಲಂ ಆಧಾರದ ಮೇಲೆ ವಿಧಿಸುವ ದಂಡದ ವಿವರಗಳನ್ನು ಪೊಲೀಸರು ಪ್ರಕಟಿಸಿದ್ದಾರೆ.   ಈ ಕುರಿತಂತೆ ಬೆಂಗಳೂರು ಸಂಚಾರ ಪಶ್ಚಿಮ ವಿಭಾಗದ ಡಿಸಿಪಿ ಕುಲ್‌ದೀಪ್ ಕುಮಾರ್ ಆರ್ …

Read More »

ಜಿಲ್ಲಾಸ್ಪತ್ರೆಯಲ್ಲಿ ರೋಗಿಗೆ ಇಂಜೆಕ್ಷನ್​ ಕೊಟ್ಟ ಸೆಕ್ಯೂರಿಟಿ ಗಾರ್ಡ್​; ಅಂಥ ಪರಿಸ್ಥಿತಿ ಏನಿತ್ತು ಎಂಬುದು ನೆಟ್ಟಿಗರ ಪ್ರಶ್ನೆ

ಅಂಗುಲ್​: ಅನಾರೋಗ್ಯವೆಂದು ಆಸ್ಪತ್ರೆಗೆ ಬಂದ ರೋಗಿಗೆ ಆ ಹಾಸ್ಪಿಟಲ್​​ನ ಸೆಕ್ಯೂರಿಟಿ ಗಾರ್ಡ್​ ಇಂಜೆಕ್ಷನ್​ ಕೊಟ್ಟಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ. ಈ ಘಟನೆ ನಡೆದದ್ದು ಓಡಿಶಾದ ಅಂಗುಲ್​ ಜಿಲ್ಲಾ ಪ್ರಧಾನ ಆಸ್ಪತ್ರೆಯಲ್ಲಿ. ಅಲ್ಲಿ ವೈದ್ಯರು, ಪ್ಯಾರಾಮೆಡಿಕಲ್​ ಸಿಬ್ಬಂದಿ ಇದ್ದಾಗ್ಯೂ ಕೂಡ ಸೆಕ್ಯೂರಿಟಿ ಗಾರ್ಡ್​ ಇಂಜೆಕ್ಷನ್​ ನೀಡಿದ್ದಾರೆ. ವಿಡಿಯೋ ವೈರಲ್​ ಆದ ಬೆನ್ನಲ್ಲೇ ಸ್ಥಳೀಯ ಮಾಧ್ಯಮವೊಂದು ಆಸ್ಪತ್ರೆಯ ಎಡಿಎಂಒ ಮಾನಸ್​ ರಂಜನ್​ ಬಿಸ್ವಾಲ್​​ ಅವರನ್ನು ಮಾತನಾಡಿಸಿದೆ. ಹೀಗೆ …

Read More »

ಪುರಾತನ ಹಿಂದೂ ದೇವಾಲಯಗಳ ತೆರವು; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಮೈಸೂರಿನಲ್ಲಿ ಪುರಾತನ ಹಿಂದೂ ದೇವಾಲಯಗಳನ್ನು ತೆರವುಗೊಳಿಸಲಾಗಿದ್ದು, ಈ ವಿಚಾರವಾಗಿ ಕಿಡಿಕಾರಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಿಂದೂ ಭಾವನೆಗಳ ವಿರುದ್ಧದ ಕೃತ್ಯಕ್ಕೆ ಸರ್ಕಾರವೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂ ದೇವಾಲಯಗಳನ್ನು ಕೆಡವಿದ್ದು ಖಂಡನೀಯ. ಇದು ಹಿಂದೂ ಭಾವನೆಗಳಿಗೆ ನೋವುಂಟುಮಾಡಿದೆ. ಇದಕ್ಕೆ ಸರ್ಕಾರವೇ ಹೊಣೆ. ತೆರವುಗೊಳಿಸಿದ ದೇವಾಲಯವನ್ನು ಪುನರ್ ನಿರ್ಮಾಣಕ್ಕೆ ತಕ್ಷಣ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ನಂಜನಗೂಡಿನ …

Read More »

ನಾಳೆ 2020-21ನೇ ಸಾಲಿನ ನೀಟ್ ಪರೀಕ್ಷೆ; 16 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ

ಬೆಂಗಳೂರು: ದೇಶದಾದ್ಯಂತ ನಾಳೆ 2020-21ನೇ ಸಾಲಿನ ನೀಟ್ ಪರೀಕ್ಷೆ ನಡೆಯಲಿದೆ. ವೈದ್ಯಕೀಯ & ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ ಗಳಿಗೆ ನಡೆಯುವ ಪರೀಕ್ಷೆ ಇದಾಗಿದ್ದು ನಾಳೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5ರವರೆಗೆ ಪರೀಕ್ಷೆ ನಡೆಯಲಿದೆ. ಒಟ್ಟು 201 ಪ್ರಮುಖ ನಗರಗಳಲ್ಲಿ ನಾಳೆ ಪರೀಕ್ಷೆ ನಡೆಯಲಿದೆ. ಕರ್ನಾಟಕದಲ್ಲಿ ಒಟ್ಟು 9 ನಗರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೆಳಗಾಂ, ದಾವಣಗೆರೆ, ಧಾರವಾಡ, ಗುಲ್ಬರ್ಗಾ, ಹುಬ್ಬಳ್ಳಿ, ಮೈಸೂರು, ಮಂಗಳೂರು ಮತ್ತು ಉಡುಪಿ …

Read More »

ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಆಗೋದು ಪಕ್ಕಾ ಎಂದ ಕಾಂಗ್ರೆಸ್ ಮುಖಂಡ

ಕಲಬುರಗಿ: ಕಲಬುರಗಿಯಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿಕೆ ನೀಡಿ ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಆಗೋದು ಪಕ್ಕಾ ಎಂದಿದ್ದಾರೆ. ಕುಮಾರಸ್ವಾಮಿ ಸರ್ಕಾರವನ್ನ ಕೆಡವಿದ್ದ, ಬಿಜೆಪಿ ಇದೀಗ ‌ಪಾಲಿಕೆ ಮೈತ್ರಿಗಾಗಿ ಮತ್ತೆ ಜೆಡಿಎಸ್ ಮನೆ ಬಾಗಿಲಿಗೆ ಹೋಗಿದೆ. ನಾಚಿಕೆಯಾಗಬೇಕು ಇವರಿಗೆ, ಮಾನ‌ ಮರ್ಯಾದೆ ಇದೆಯಾ ಬಿಜೆಪಿಯವರಿಗೆ ..? ಈಗಾಗಲೇ ಮಲ್ಲಿಕಾರ್ಜುನ ಖರ್ಗೆಯವರು ಜೆಡಿಎಸ್ ಜೊತೆ ಮಾತುಕತೆ ನಡೆಸಿದ್ದಾರೆ. ಜಾತ್ಯಾತೀತ ನಿಲುವಿನೊಂದಿಗೆ ಕಾಂಗ್ರೆಸ್ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲಿದೆ. …

Read More »

ಸಂಚಾರ ನಿಯಮ ಉಲ್ಲಂಘನೆಯಲ್ಲಿ ರವಿಕಾಂತೇಗೌಡರ ಅಭಿಮಾನಿ ದಾಖಲೆ ನಿರ್ಮಾಣ

ಬೆಂಗಳೂರು: ಸ್ಕೂಟರ್ ಮೇಲೆ ರವಿಕಾಂತೇಗೌಡ ಅಭಿಮಾನಿ ಎಂದು ಬರೆಸಿಕೊಂಡು ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದ ಬೈಕ್​ನ್ನು ಜಯನಗರ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಚಾರಿ ವಿಭಾಗ ಜಂಟಿ ಪೊಲೀಸ್ ಆಯುಕ್ತ ಆಗಿರುವ ರವಿಕಾಂತೇಗೌಡ ಹೆಸರು ಬರೆಸಿಕೊಂಡು ನಿಯಮ ಉಲ್ಲಂಘಿಸುತ್ತಿದ್ದವರ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ. ಕೆಎ 05 ಜೆಎಸ್ 2581 ನಂಬರಿನ ಸ್ಕೂಟರ್ ಸೀಜ್ ಮಾಡಲಾಗಿದೆ. ಸ್ವತಃ ರವಿಕಾಂತರೆಗೌಡರ ಆದೇಶದ ಮೇರೆಗೆ ಸ್ಕೂಟರ್ ಸೀಜ್ ಮಾಡಲಾಗಿದೆ. ಆರ್​ಟಿಐ ಕಾರ್ಯಕರ್ತ ಗಿರೀಶ್ ಬಾಬು ಓಡಿಸುತ್ತಿದ್ದ …

Read More »

ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು: ಮರಾಠಿಗರನ್ನ ಖುಷಿ ಪಡಿಸಲ ಬಿಜೆಪಿ ಮಾಸ್ಟರ್​ ಪ್ಲ್ಯಾನ್​!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಆಯ್ಕೆಗಾಗಿ ಸೂತ್ರ ಸಿದ್ಧಪಡಿಸಿರುವ ಬಿಜೆಪಿ, ಮರಾಠ ಸಮುದಾಯವನ್ನು ಖುಷಿ ಪಡಿಸಲು ಪ್ಲ್ಯಾನ್ ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ನೇತೃತ್ವದಲ್ಲಿ ಯೋಜನೆ ರೂಪಿಸಿರುವ ಬಿಜೆಪಿ ನಾಯಕರು, ಮರಾಠಿ ಭಾಷಿಕರಿಗೇ ಮೇಯರ್ ಹುದ್ದೆ ನೀಡಲು ಚಿಂತನೆ ನಡೆಸಿದೆ. ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ಮರಾಠಿ ಭಾಷಿಕರು ಎಂಇಎಸ್ ಬದಲು ಬಿಜೆಪಿಗೆ ಜೈ ಎನ್ನುವ ಗಡಿ, ಭಾಷೆ ವಿಚಾರ ಮುಂದಿಟ್ಟುಕೊಂಡು ಬೆಳಗಾವಿಯಲ್ಲಿ ರಾಜಕೀಯ ಮಾಡುತ್ತಿದ್ದ …

Read More »

ಕಲಬುರಗಿ: ಜೆಡಿಎಸ್​​ ಮನವೊಲಿಸುವ ಜವಾಬ್ದಾರಿ ಸಿಎಂ ಬೊಮ್ಮಾಯಿ ಹೆಗಲಿಗೆ; ಪಾಲಿಕೆ ಕೈ ತಪ್ಪುವ ಆತಂಕದಲ್ಲಿ ಕಾಂಗ್ರೆಸ್​

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ಉದ್ಭವವಾಗಿದ್ದು, ಹೇಗಾದರೂ ಮಾಡಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ಬಯಸಿರುವ ಬಿಜೆಪಿ ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಅಖಾಡಕ್ಕೆ ಇಳಿಸಿದೆ. ಕಾಂಗ್ರೆಸ್​ ಪಕ್ಷದ ಜತೆ ಮೈತ್ರಿಗೆ ಜೆಡಿಎಸ್​ ಸಿದ್ಧವಾಗಿದೆ ಎಂಬ ಸುದ್ದಿ ಹೊರಬಿದ್ದ ಬೆನ್ನಲ್ಲೇ ಜೆಡಿಎಸ್​ ಪಕ್ಷದೊಂದಿಗೆ ಮಾತುಕತೆ ನಡೆಸುವ ಜವಾಬ್ದಾರಿಯನ್ನು ರಾಜ್ಯ ಬಿಜೆಪಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಗಲಿಗೇರಿಸಿದೆ. ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವ …

Read More »