Home / 2021 / ಸೆಪ್ಟೆಂಬರ್ (page 68)

Monthly Archives: ಸೆಪ್ಟೆಂಬರ್ 2021

ದ.ಕ.ಜಿಲ್ಲೆಯ ಪ್ರಮುಖ ದೇವಸ್ಥಾನಗಳ ನಿರ್ಬಂಧ ಸಡಿಲಿಕೆ ..!

ಮಂಗಳೂರು: ಕೋವಿಡ್ ಸೋಂಕು ನಿಯಂತ್ರಣದ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಧಿಸಲಾಗಿದ್ದ ಕೆಲವು ನಿರ್ಬಂಧ, ಮಾರ್ಗಸೂಚಿಗಳನ್ನು ಹಿಂಪಡೆದು ದ.ಕ.ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳು ಸೇರಿದಂತೆ ಪ್ರಮುಖ ದೇವಸ್ಥಾನಗಳು ವಾರಾಂತ್ಯಗಳನ್ನು ಹೊರತುಪಡಿಸಿ ಭಕ್ತಾದಿಗಳಿಗೆ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರ ತೆರೆದಿರುತ್ತದೆ. ಈ ಸಂದರ್ಭ ಭಕ್ತಾದಿಗಳು ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಕೋವಿಡ್ ನಿಯಂತ್ರಣ ಮುಂಜಾಗ್ರತಾ …

Read More »

ದೇವಸ್ಥಾನದಲ್ಲಿ ಚಪ್ಪಲಿ ಧರಿಸಿ ಓಡಾಡಿದ ನಟಿ ತ್ರಿಷಾ

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲೂ ಪಡ್ಡೆಹುಡುಗರ ನಿದ್ದೆಗೆಡಿಸಿದ್ದ ಕಾಲಿವುಡ್‌ನ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇದೀಗ ವಿವಾದಕ್ಕೆ ಸಿಲುಕಿದ್ದಾರೆ. ಸಿನಿಮಾ ಶೂಟಿಂಗ್ ವೇಳೆ ನಟಿ ತ್ರಿಷಾ ಕೃಷ್ಣನ್ ಮಾಡಿದ ಎಡವಟ್ಟಿನಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ದೇವಸ್ಥಾನದಲ್ಲಿ ಚಪ್ಪಲಿ ಧರಿಸಿ ಓಡಾಡಿದ ನಟಿ ತ್ರಿಷಾ ಕೃಷ್ಣನ್ ಅವರನ್ನು ಬಂಧಿಸುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸುತ್ತಿವೆ. ಶೂಟಿಂಗ್​ ನಡುವೆ ತ್ರಿಶಾ ಕೃಷ್ಣನ್​ ದಾರ್ಮಿಕ ಸ್ಥಳದಲ್ಲಿ ಎಡವಟ್ಟೊಂದನ್ನು ಮಾಡಿದ್ದಾರೆ. ಚಿತ್ರೀಕರಣ ವೇಳೆ ಚಪ್ಪಲಿ ಹಾಕಿಕೊಂಡು ತ್ರಿಶಾ …

Read More »

ಗುಂಡೇಟಿಗೆ ಎಮ್ಮೆ ಬಲಿ

ಬೆಳ್ತಂಗಡಿ :ಮೇಯಲು ಬಿಟ್ಟಿದ್ದ ಎಮ್ಮೆಯನ್ನು ಕಿಡಿಗೇಡಿಗಳು ಗುಂಡುಹಾರಿಸಿ ಕೊಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಫಲಸ್ತಡ್ಕ ಎಂಬಲ್ಲಿ ನಡೆದಿದೆ. ಹೊಸ್ತೋಟ ವಾಳ್ಯದ ಅರೆಕ್ಕಲ್ ಮಹಾದೇವ ಭಟ್ ಎಂಬವರ ಹಾಲು ಕರೆಯುವ ಸುಮಾರು 10 ವರ್ಷ ಪ್ರಾಯದ ಎಮ್ಮೆಯನ್ನು ಮನೆ ಪರಿಸರದಲ್ಲಿ ಮೇಯಲು ಬಿಟ್ಟಿದ್ದರು. ಎಮ್ಮೆ ತಡರಾತ್ರಿವರೆಗೂ ಮನೆಗೆ ಬಾರದ ಕಾರಣ ಹುಡುಕಾಟ ನಡೆಸಿದಾಗ ಸಮೀಪದ ಫಲಸ್ತಡ್ಕ ಎಂಬಲ್ಲಿ ಮಂಗಳವಾರ ಮೃತದೇಹ ಪತ್ತೆಯಾಗಿದೆ. ಎಮ್ಮೆಯ ಮೈಮೇಲೆ ಗುಂಡಿನ ಗಾಯಗಳು …

Read More »

ಪಕ್ಷ ಸಂಘಟನೆಗೆ ಕ್ರಿಯಾಶೀಲತೆ ಅಗತ್ಯ

ಕೊಪ್ಪಳ: ‘ಜಿಲ್ಲಾ ಕಾಂಗ್ರೆಸ್ ಕ್ಷಿಪ್ರಗತಿಯಲ್ಲಿ ಬೆಳವಣಿಗೆ ಹೊಂದಲು ದೂರದೃಷ್ಟಿಯಿಂದ ಕೆಲಸ ಮಾಡಬೇಕಿದೆ. ಎಲ್ಲ ಮುಂಚೂಣಿ ಘಟಕಗಳು ಪ್ರತಿ ವಾರ ಒಂದು ಕಾರ್ಯಕ್ರಮ ಮಾಡಬೇಕು’ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ ಮನವಿ ಮಾಡಿದರು. ಅವರು ಮಂಗಳವಾರ ಪಕ್ಷದ ಕಚೇರಿಯಲ್ಲಿ ವಿವಿಧ ಮೋರ್ಚಾ, ಬ್ಲಾಕ್‌ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ‘ಪ್ರತಿ ಘಟಕವೂ ಸಹ ಜಿಲ್ಲಾ ಪದಾಧಿಕಾರಿಗಳು ಮತ್ತು ಏಳು ಬ್ಲಾಕ್‍ಗಳನ್ನು ಹೊಂದಿರಬೇಕು. ಎಲ್ಲರೂ ಒಂದೊಂದು …

Read More »

ಬಿಜೆಪಿಗೆ ಅಧಿಕಾರ ದುರುಪಯೋಗದ ಗೆಲುವು: ಜಿ.ಪರಮೇಶ್ವರ್‌

ಉಡುಪಿ: ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡಿದೆ ಎಂದು ಕಾಂಗ್ರೆಸ್‌ ನಾಯಕ ಜಿ.ಪರಮೇಶ್ವರ್ ಹೇಳಿದರು. ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಪರಮೇಶ್ವರ್ ಪೆಟ್ರೋಲ್, ಡೀಸೆಲ್‌, ಸಿಲಿಂಡರ್‌ ಹಾಗೂ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿರುವ ಸಂದರ್ಭದಲ್ಲೂ ಬಿಜೆಪಿ ಗೆಲುವು ಸಾಧಿಸಿರುವುದು ಅಧಿಕಾರ ದುರುಪಯೋಗದಿಂದ ಎಂದರು. ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಕಾಂಗ್ರೆಸ್‌ ಪಕ್ಷವನ್ನು ನಿರಾಶೆಗೊಳಿಸಿಲ್ಲ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ವಿಧಾನಸಭಾ ಚುನಾವಣೆಯಲ್ಲಿ …

Read More »

ಜಿ.ಪಂ, ತಾ.ಪಂ ಕ್ಷೇತ್ರಗಳ ಮೀಸಲಾತಿಗಾಗಿ ಪ್ರತ್ಯೇಕ ಆಯೋಗ ರಚನೆ ಸಂವಿಧಾನ ಬಾಹೀರ : ಮಾಜಿ ಸಂಸದ ನಾರಾಯಣಸ್ವಾಮಿ

ಬಾಗಲಕೋಟೆ: ರಾಜ್ಯ ಸರ್ಕಾರ ಜಿ.ಪಂ, ತಾ.ಪಂ ಕ್ಷೇತ್ರಗಳ ಮೀಸಲಾತಿಗಾಗಿ ಪ್ರತ್ಯೇಕ ಆಯೋಗ ರಚನೆ ಮಾಡಲು ಮುಂದಾಗಿರುವುದು ಸಂವಿಧಾನ ಬಾಹೀರವಾಗಿದೆ. ಚುನಾವಣೆ ಆಯೋಗದ ಅಧಿಕಾರದ ವ್ಯಾಪ್ತಿ ಮೊಟಕುಗೊಳಿಸುವ ಉದ್ದೇಶದಿಂದ ಈ ಪ್ರಯತ್ನಕ್ಕೆ ಮುಂದಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಆಘಾತ ಎಂದು ಕಾಂಗ್ರೆಸ್ ಪಕ್ಷದ ರಾಜೀವಗಾಂಧಿ ಗ್ರಾಮೀಣ ಅಭಿವೃಧಿ ಹಾಗೂ ಪಂಚಾಯತ್ ರಾಜ್ ಸಂಘಟನೆಯ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಾರಾಯಣಸ್ವಾಮಿ ಆರೋಪಿಸಿದರು. ಈ ವರೆಗೆ ಚುನಾವಣೆ ಆಯೋಗವು ಕ್ಷೇತ್ರಗಳ ಪುನರ್ ವಿಂಗಡಣೆ, …

Read More »

ಖಾನಾಪುರ ಎಡಿಎಲ್ಆರ್ ಕಚೇರಿಯ ಸರ್ವೇಯರ್ ಎಸಿಬಿ ಬಲೆಗೆ

ಖಾನಾಪುರ – ಇಲ್ಲಿಯ ಎಡಿಎಲ್ಆರ್ ಕಚೇರಿಯ ಸರ್ವೇಯರ್ ಒಬ್ಬ ಎಸಿಬಿ ಬಲೆಗೆ ಬಿದ್ದಿದ್ದಾನೆ. ತಾಲೂಕಿನ ಸುರಾಪುರದ ಶಶಿಕಾಂತ ತಳವಾರ ಎನ್ನುವವರಿಂದ 6 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಡಿಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ದಾಳಿ ನಡೆಯಿತು. ಒಟ್ಟೂ 10 ಸಾವಿರ ರೂ. ಲಂಚ ಕೇಳಿದ್ದ ಸರ್ವೇಯರ್ ಶಶಿಕಾಂತ ಮದವಾಲ ಈ ಮೊದಲು 4 ಸಾವಿರ ರೂ. ಪಡೆದಿದ್ದ. ಇದೀಗ ಕಚೇರಿಯಲ್ಲೇ 6 ಸಾವಿರ ರೂ. ಪಡೆಯುತ್ತಿದ್ದ ಸಂದರ್ಭದಲ್ಲಿ ದಾಳಿ …

Read More »

ಕಲಬುರಗಿ ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್! ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ‌

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆಯ ಅಧಿಕಾರದಿಂದ ಕಾಂಗ್ರೆಸ್ ಪಕ್ಷವನ್ನು ದೂರವಿಡಲು ಬಿಜೆಪಿ ನಿರ್ಧರಿಸಿದ್ದು, ಜೆಡಿಎಸ್ ಜತೆ ಮತ್ತೆ ದೋಸ್ತಿ ಮಾಡಿಕೊಳ್ಳಲು ಮುಂದಾಗಿದೆ. ಆರ್​ಟಿ‌ ನಗರದ ತಮ್ಮ ನಿವಾಸದ ಬಳಿ ಮಂಗಳವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ‌, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿಯಾದ ವೇಳೆ ಔಪಚಾರಿಕವಾಗಿ ಚರ್ಚಿಸಿದ್ದು, ಒಂದಾಗಿ ಹೋಗುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದರು. ಉಭಯ ಪಕ್ಷಗಳು ಸ್ಥಳೀಯ ನಾಯಕರ ಜತೆಗೆ ಚರ್ಚಿಸಿದ ನಂತರ ಮುಂದಿನ ಹೆಜ್ಜೆ ಇರಿಸಲಿದ್ದು, …

Read More »

ಕಲಬುರ್ಗಿ ಪಾಲಿಕೆ ಮೇಲೆ ಬಿಜೆಪಿ ಕಣ್ಣು; ಜೆಡಿಎಸ್ ಜೊತೆ ಮೈತ್ರಿ ಬಹುತೇಕ ಫಿಕ್ಸ್

ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಳಿಕ ಇದೀಗ ಬಿಜೆಪಿ ಕಲಬುರ್ಗಿ ಪಾಲಿಕೆ ಮೇಲೆ ಕಣ್ಣಿಟ್ಟಿದ್ದು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ತಂತ್ರಗಾರಿಕೆ ರೂಪಿಸಿದೆ. ಜೆಡಿಎಸ್ ಜೊತೆ ಸೇರಿ ಕಲಬುರ್ಗಿ ಮೇಯರ್ ಸ್ಥಾನ ಗಿಟ್ಟಿಸಿಕೊಳ್ಳಲು ಮುಂದಾಗಿದ್ದ ಕಾಂಗ್ರೆಸ್ ಗೆ ತಿರುಮಂತ್ರ ಹಾಕಲು ಸಿದ್ಧತೆ ನಡೆಸಿರುವ ಬಿಜೆಪಿ ಇದೀಗ ಜೆಡಿಎಸ್ ಜೊತೆ ಮೈತ್ರಿಗೆ ಮುಂದಾಗಿದೆ. ಕಲಬುರ್ಗಿಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡಿದ್ದಾರೆ.   …

Read More »

ಗಣೇಶೋತ್ಸವಕ್ಕೆ ಹೊಸ ಗೈಡ್ ಲೈನ್; 5 ದಿನದ ಬದಲು 3 ದಿನಕ್ಕೆ ಸೀಮಿತ; ಷರತ್ತಿನ ಮೇಲೆ ಷರತ್ತು ಹಾಕಿದ ಬಿಬಿಎಂಪಿ

ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆ ಇದೀಗ ನಿಫಾ ವೈರಸ್ ಭೀತಿ ಕೂಡ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ ಬಿಬಿಎಂಪಿ ಷರತ್ತುಗಳ ಮೇಲೆ ಷರತ್ತು ವಿಧಿಸಿದೆ. ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ 5 ದಿನಗಳ ಕಾಲ ಅವಕಾಶ ನೀಡಿತ್ತು. ಆದರೆ ಬಿಬಿಎಂಪಿ ಬೆಂಗಳೂರಿಗೆ ಪ್ರತ್ಯೇಕ ಗಣೇಶೋತ್ಸವ ಗೈಡ್ ಲೈನ್ ಪ್ರಕಟಿಸಿದ್ದು, 3 ದಿನಗಳು ಮಾತ್ರ ಗಣೇಶೋತ್ಸವ ಆಚರಿಸಲು ಅನುಮತಿ ನೀಡಿದೆ. ಹೊಸ ಗೈಡ್ ಲೈನ್: ವಾರ್ಡ್ ಗೆ …

Read More »