Home / 2021 / ಸೆಪ್ಟೆಂಬರ್ (page 79)

Monthly Archives: ಸೆಪ್ಟೆಂಬರ್ 2021

ನಮ್ಮದು ಮಾತನಾಡುವ ಸರ್ಕಾರವಲ್ಲ, ಕಾರ್ಯ ಮಾಡಿ ತೋರಿಸುವ ಸರ್ಕಾರ : ಸಿಎಂ ಬೊಮ್ಮಾಯಿ

ದಾವಣಗೆರೆ : ರೈತ ಮಕ್ಕಳಿಗೆ ಶಿಷ್ಯವೇತನ, ವಿವಿಧ ಸಾಮಾಜಿಕ ಭದ್ರತಾ ಮಾಸಾಶನ ಹೆಚ್ಚಳ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ನಮ್ಮದು ಮಾತನಾಡುವ ಸರ್ಕಾರವಲ್ಲ, ಕಾರ್ಯ ಮಾಡಿ ತೋರಿಸುವ ಸರ್ಕಾರ ಎಂದು ತೋರಿಸಿಕೊಟ್ಟಿದ್ದೇವೆ ಎಮದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದ ಜಿ.ಎಂ.ಐ.ಟಿ. ಕಾಲೇಜು ಆವರಣದಲ್ಲಿ ಇಂದು (ಗುರುವಾರ, ಸೆಪ್ಟೆಂಬರ್ 2) ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದ ಅವರು, …

Read More »

ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ : ಸೆ.5 ರಂದು `ರೈತ ವಿದ್ಯಾನಿಧಿ’ ಯೋಜನೆಗೆ ಚಾಲನೆ

ಬೆಂಗಳೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಿಕ್ಷಕರ ದಿನಾಚರಣೆಯ ಸೆಪ್ಟೆಂಬರ್ 5 ರಂದು ರೈತ ವಿದ್ಯಾನಿಧಿ ಯೋಜನೆಗೆ ಚಾಲನೆ ಸಿಗಲಿದೆ.   ರಾಜ್ಯದ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಾಗೂ ಉನ್ನತ ಶಿಕ್ಷಣಕ್ಕೆ ಒತ್ತುಕೊಡುವ ನಿಟ್ಟಿನಲ್ಲಿ ಎಸ್‌ಎಸ್‌ಎಲ್ ಸಿ ಪೂರ್ಣಗೊಳಿಸಿದ ರೈತರ ಮಕ್ಕಳಿಗೆ ವಾರ್ಷಿಕ ಶಿಷ್ಯವೇತನ ಲಭ್ಯವಾಗಲಿದೆ.   ಪಿಯುಸಿ, ಐಟಿಐ, ಡಿಪ್ಲೋಮಾ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 2,500 ರೂ. ಹಾಗೂ …

Read More »

ಗೋಕಾಕ ನಗರದ ಸಾರ್ವಜನಿಕಕರಿಗೆ ನಗರಸಭೆಯಿಂದ ಸೂಚನೆ?

ಗೋಕಾಕ ನಾಗರಿಕರಲ್ಲಿ ಈ ಮೂಲಕ ತಿಳಿಸುವುದೇನೆಂದರೆ   ಗೋಕಾಕ ನಗರಕ್ಕೆ ನೀರು ಪೂರೈಕೆ ಮಾಡುವ ನಗರದ ನದಿಯ ದಡದಲ್ಲಿರುವ ಜಾಕವೆಲ್ ನಲ್ಲಿರುವ 200 ಎಚ್.ಪಿ ಪಂಪಸೆಟ್ ಮೋಟಾರ್ ರಿಪೇರಿ ಇದ್ದ ಕಾರಣ ಗೋಕಾಕ ನಗರದಲ್ಲಿ  ಶುಕ್ರವಾರ ದಿ.3-9-2021ಮತ್ತು ಶನಿವಾರ ದಿ.4-9-2021 ರಂದು ನೀರು ಸರಬುರಾಜಿನಲ್ಲಿ ವ್ಯತ್ಯಯವಾಗಲಿದೆ ಕಾರಣ ಸಾರ್ವಜನಿಕರು ಸಹಕರಿಸಲು   ನಗರಸಭೆಯ ಅಧ್ಯಕ್ಷರಾದ ಶ್ರೀ ಜಯಾನಂದ ಹುಣಶ್ಯಾಳಿ,ಪೌರಾಯುಕ್ತರಾದ ಶ್ರೀ ಶಿವಾನಂದ ಹಿರೇಮಠ   ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ …

Read More »

ಗೋಕಾಕ ಸರಣಿ ಮನೆ ಕಳ್ಳತನ ಪ್ರಕರಣ ಹಿನ್ನೆಲೆ ಪೊಲೀಸ್ ಅಧಿಕಾರಿಗಳಿಗೆ ಸಾಹುಕಾರ ತರಾಟೆ

  ಗೋಕಾಕ ನಗರದಲ್ಲಿ ಸರಣಿ ಮನೆ ಕಳ್ಳತನ ಪ್ರಕರಣಗಳು ಹಾಗೂ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಹಿನ್ನೆಲೆ ಗೋಕಾಕ ಪೊಲೀಸ್ ಇಲಾಖೆ ಡಿ.ಎಸ್.ಪಿ ಮನೋಜಕುಮಾರ ನಾಯಿಕಸಿಪಿಐ ಗೋಪಾಲ ರಾಠೋಡ ಸೇರಿದಂತೆ ಪಿಎಸ್‌ಐ ಗಳ ಸಭೆ ನಡೆಸಿದ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರು ನಗರದಲ್ಲಿ ಸರಣಿ ಮನೆ ಕಳ್ಳತನ,ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳ ತನಿಖೆಗಾಗಿ ಈ ಕೂಡಲೇ ವಿಶೇಷ ಪೊಲೀಸ್ ತಂಡ ರಚಿಸಿ ಕಳ್ಳರನ್ನು ಬಂಧಿಸಿ   ಹೆಡೆಮುರಿ …

Read More »

ಅಪ್ಪಾ ಕೇಕ್​ ತಿನ್ನಪ್ಪಾ..ಕೋವಿಡ್​ಗೆ ಬಲಿಯಾದ ತಂದೆ ಸಮಾಧಿ ಬಳಿ ಬರ್ತ್​ ​ಡೇ ಆಚರಿಸಿಕೊಂಡ ಬಾಲಕಿ!

ಕೊಪ್ಪಳ: ತಂದೆಯ ಸಮಾಧಿ ಬಳಿ 8 ವರ್ಷದ ಬಾಲಕಿಯೊಬ್ಬಳು ಕೇಕ್​ ಕತ್ತರಿಸಿ ತನ್ನ ಜನ್ಮ ದಿನ ಆಚರಿಸಿಕೊಂಡಿದ್ದಾಳೆ. ಈ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಬಾಲಕಿಯನ್ನ ಕಂಡು ಮರುಕು ವ್ಯಕ್ತಪಡಿಸುತ್ತಿದ್ದಾರೆ. ಕುಷ್ಟಗಿ ಪಟ್ಟಣದ ಬಾಲಕಿ ಸ್ಪಂದನಾ ತನ್ನ 8ನೇ ವರ್ಷದ ಬರ್ತ್ ಡೇ ಪ್ರಯುಕ್ತ ತಂದೆಯ ಸಮಾಧಿ ಮುಂದೆ ಕೇಕ್​ ಕತ್ತರಿಸಿದ್ದಾಳೆ. ಸ್ಪಂದನಾಳ ತಂದೆ ಮಹೇಶ ಕೊನಸಾಗರ ಅವರು ಕಳೆದ ಮೇ ತಿಂಗಳಲ್ಲಿ ಕರೊನಾ ಸೋಂಕಿಗೆ ಬಲಿಯಾಗಿದ್ದರು.     ತಂದೆ ಕೋವಿಡ್​ನಿಂದ …

Read More »

ಪೌರ ಕಾರ್ಮಿಕರಿಗೆ ಸದ್ಯದಲ್ಲೇ ಕೈಮಗ್ಗದ ಸಮವಸ್ತ್ರ; ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಹೊಸ ಪ್ರಯೋಗ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ಪೌರ ಕಾರ್ಮಿಕರಿಗೆ ಕೈಮಗ್ಗ ಅಭಿವೃದ್ಧಿ ನಿಗಮದಿಂದ ಸಮವಸ್ತ್ರ ಖರೀದಿಸುತ್ತಿರುವ ಮೂರನೇ ಪಾಲಿಕೆಯಾಗಿದೆ. ಸೆಪ್ಟೆಂಬರ್ 10ರೊಳಗೆ ಸಮವಸ್ತ್ರಗಳು ಪೂರೈಕೆಯಾಗಲಿವೆ. ಹುಬ್ಬಳ್ಳಿ: ಕರ್ನಾಟಕದ ಅತಿ ದೊಡ್ಡ ಮಹಾನಗರ ಪಾಲಿಕೆ ಅನ್ನುವ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಾ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತದೆ. ಇಲ್ಲಿ ಏನೇ ನಡೆದರೂ ಅದು ಸುದ್ದಿಯಾಗುತ್ತದೆ. ಈ ಬಾರಿ ಪಾಲಿಕೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗೆ ವಿತರಿಸುವ ಸಮವಸ್ತ್ರಗಳನ್ನು ಕರ್ನಾಟಕ ಕೈಮಗ್ಗ …

Read More »

ಹಾಸ್ಟೆಲ್​ನಲ್ಲಿ ಕೇಕ್​ ಕಟ್​ ಮಾಡಿ, ವಿದ್ಯಾರ್ಥಿನಿಯ ಬರ್ಥ್ ​​ಡೆ ಆಚರಿಸಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಗದಗ ನಗರದ ಹುಬ್ಬಳ್ಳಿ ರಸ್ತೆಯಲ್ಲಿರೋ ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದ ವ್ಯವಸ್ಥೆ ಪರಿಶೀಲನೆ ಮಾಡಿದ್ರು. ಗದಗ: ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗದಗ ಜಿಲ್ಲೆಯಲ್ಲಿ ಇಂದು ಪ್ರವಾಸ ಕೈಗೊಂಡಿದ್ರು. ವಸತಿ ನಿಲಯಗಳಿಗೆ ಭೇಟಿ ಮಾಡಿ ಅಲ್ಲಿನ ಪರಿಸ್ಥಿತಿ ಪರಿಶೀಲನೆ ಮಾಡಿದ್ರು. ಈ ವೇಳೆ ಹಾಸ್ಟೆಲ್​ನಲ್ಲಿ ಇರೋ ವಿದ್ಯಾರ್ಥಿಯೊಬ್ಬರ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕೊವಿಡ್ ಭಯದಲ್ಲಿದ್ದ ವಿದ್ಯಾರ್ಥಿನಿಯರಿಗೆ …

Read More »

ಬೆಲೆ ಏರಿಕೆಯನ್ನು ಸಮರ್ಥನೆ ಮಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

ಬೆಂಗಳೂರು: ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ತಾತ್ಕಾಲಿಕ ಅಷ್ಟೇ. ಮುಂದಿನ ದಿನಗಳಲ್ಲಿ ಬೆಲೆ ಕಡಿಮೆಯಾಗಲಿದೆ. ಟೊಮೆಟೊ, ಪೆಟ್ರೊಲ್, ಡಿಸೆಲ್, ಈರುಳ್ಳಿ ಒಂದು ವಸ್ತುವಿನ ಬೆಲೆ ಮೇಲೆ ಮಾತ್ರ ಪ್ರಶ್ನೆ ಮಾಡಿದರೆ ನಾನು ಉತ್ತರ ನೀಡಲು ಆಗುವುದಿಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರಿಗೆ ಮೋದಿ ಸರ್ಕಾರ ಅನೇಕ ಯೋಜನೆ ಮಾಡಿದೆ. ರೈತರ ಖಾತೆಗಳಿಗೆ ಆರು ಸಾವಿರ ರೂ. ಹಾಕುತ್ತಿದ್ದಾರೆ. ಆಯುಷ್ಮಾನ್ ಭಾರತ …

Read More »

ಬೆಲೆ ಏರಿಕೆ ಕುರಿತು ಹಣಕಾಸು ಸಚಿವರ ಜೊತೆ ಚರ್ಚೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ‘ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಕುರಿತಂತೆ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಂತರರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾದ ಕಾರಣ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಸೆ.5 ರಂದು ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಬರಲಿದ್ದು, ಅವರೊಂದಿಗೆ ಚರ್ಚಿಸುತ್ತೇನೆ’ ಎಂದರು. ‘ಕೊರೊನಾ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. …

Read More »

ಮರು ಬಿಡುಗಡೆಯಾಗುತ್ತಿದೆ ‘ಟಗರು’

ಶಿವರಾಜ್‌ಕುಮಾರ್‌ ಅಭಿನಯದ ಟಗರು ಚಿತ್ರವನ್ನು ಶುಕ್ರವಾರ ಮರು-ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಬಿಡುಗಡೆಯಾಗಿ ಮೂರೂವರೆ ವರ್ಷಗಳಾದ ಬಳಿಕವೂ ಸಹ ಶಿವಣ್ಣನೊಂದಿಗೆ, ಧನಂಜಯ್‌, ವಸಿಷ್ಠ ಎನ್ ಸಿಂಹ, ಮನ್ವಿತಾ ಕಾಮತ್‌ ಹಾಗೂ ಭಾವನಾ ಮುಖ್ಯ ಪಾತ್ರಗಳಲ್ಲಿ ಅಭಿನಿಯಿಸಿರುವ ಈ ಚಿತ್ರದ ಕಥೆ ಹಾಗೂ ಸಾಹಸ ದೃಶ್ಯಗಳು ಚಿತ್ರ ಪ್ರಿಯರಿಗೆ ಇನ್ನೂ ಇಷ್ಟವಾಗುತ್ತಿದೆ. ‘ಕಡ್ಡಿಪುಡಿ’ ಬಳಿಕ ಎರಡನೇ ಬಾರಿಗೆ ಕೈಜೋಡಿಸಿರುವ ಶಿವರಾಜ್ ಕುಮಾರ್‌ ಹಾಗೂ ನಿದೇರ್ಶಕ ದುನಿಯಾ ಸೂರಿ ‘ಟಗರು’ ಚಿತ್ರ ಮಾಡಿದ್ದಾರೆ. …

Read More »