ಪುನೀತ್ ರಾಜ್ ಕುಮಾರ್ ನೇತ್ರದಾನದ ಮೂಲಕ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ಕಣ್ಣುಗಳನ್ನು ಇಬ್ಬರಿಗೆ ಅಳವಡಿಸುವ ಮೂಲಕ ಬೆಂಗಳೂರಿನ ನಾರಾಯಾಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ನಾರಾಯಣ ನೇತ್ರಾಲಯದ ವೈದ್ಯರು ನಿನ್ನೆ ಪುನೀತ್ ರಾಜ್ ಕುಮಾರ್ ಅವರ ಒಂದು ಕಣ್ಣನ್ನು ಒಬ್ಬರಿಗೆ ಅಳವಡಿಸಿದ್ದರು, ಇಂದು ಮತ್ತೊಬ್ಬರಿಗೆ ಒಂದು ಕಣ್ಣನ್ನು ಅಳವಡಿಸುವ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
Read More »Monthly Archives: ಅಕ್ಟೋಬರ್ 2021
ಇಂದಿರಾ ಗಾಂಧಿ ಪುಣ್ಯ ತಿಥಿ ಶ್ರದ್ಧಾಂಜಲಿ ಸಲ್ಲಿಸಿದ ಕಾಂಗ್ರೆಸ್ ನಾಯಕರು
ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರ 37ನೇ ಪುಣ್ಯತಿಥಿಯ ಅಂಗವಾಗಿ ಕಾಂಗ್ರೆಸ್ ನಾಯಕರು ಭಾನುವಾರ ಶ್ರದ್ಧಾಂಜಲಿ ಸಲ್ಲಿಸಿದೆ.ಇಂದಿರಾ ಗಾಂಧಿ ಅವರ ಸ್ಮಾರಕ ‘ಶಕ್ತಿ ಸ್ಥಳ’ ದಲ್ಲಿ ಪುಷ್ಪನಮನ ಸಲ್ಲಿಸಲಾಯಿತು. ‘ಕೊನೆಯ ಗಳಿಗೆಯವರೆಗೂ ನನ್ನ ಅಜ್ಜಿ ದೇಶಕ್ಕೆ ನಿರ್ಭೀತಿಯಿಂದ ಸೇವೆ ಸಲ್ಲಿಸಿದ್ದಾರೆ. ಅವರ ಜೀವನವು ನಮಗೆ ಸ್ಪೂರ್ತಿಯ ಸೆಲೆಯಾಗಿದೆ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ‘ಇಂದಿರಾ ಗಾಂಧಿ ಅವರು ಸಾಮರ್ಥ್ಯವನ್ನು ಪ್ರತಿನಿಧಿಸಿದರು, ತ್ಯಾಗವನ್ನು ಪ್ರತಿಫಲಿಸಿದರು, ಸೇವೆಯನ್ನು …
Read More »ಗೋವಾದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ: ಸತೀಶ ಜಾರಕಿಹೊಳಿ ಸೇರಿ ಹಲವರು ಭಾಗಿ
ಗೋವಾದ ಜಾಗೊರ್‍ನಲ್ಲಿ ಇಂದು ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ರಾಹುಲ್ ಗಾಂಧಿ ಅವರು ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು. ಗೋವಾ ಕಾಂಗ್ರೆಸ್ ಉಸ್ತುವಾರಿಯಾದ ಮಾಜಿ ಸಚಿವ ದಿನೇಶ್ ಗುಂಡೂರಾವ್, ಗೋವಾ ಚುನಾವಣಾ ಉಸ್ತುವಾರಿ ಪಿ.ಚಿದಂಬರಂ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ …
Read More »ಪವರ್ ಸ್ಟಾರ್ ಮಾರ್ಗದಲ್ಲೇ ಗುಮ್ಮಟನಗರಿ ಯುವಕರಿಂದ ನೇತ್ರದಾನ ವಾಗ್ದಾನ
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಅಂತ್ಯಕ್ರಿಯೆ ನೆರವೇರಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ಮುಂಜಾನೆ 7.30ಕ್ಕೆ ಅಂತ್ಯ ಸಂಸ್ಕಾರ ಮಾಡಲಾಗಿದೆ. ರಾಜ್ಕುಮಾರ್ ಕುಟುಂಬದವರು ಈಡೀಗ ಸಂಪ್ರದಾಯದಂತೆ ಕಾರ್ಯ ನೆರವೇರಿಸಿದ್ದಾರೆ. ತಂದೆ ಡಾ. ರಾಜ್ಕುಮಾರ್, ತಾಯಿ ಪಾರ್ವತಮ್ಮ ಸಮಾಧಿಯ ಪಕ್ಕದಲ್ಲೇ ಪುನೀತ್ ಪಾರ್ಥಿವ ಶರೀರವನ್ನು ಮಣ್ಣು ಮಾಡಲಾಗಿದೆ. ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಪುನೀತ ರಾಜಕುಮಾರ ತಮ್ಮ ಸಾವಿನ ಬಳಿಕ ಅಮರರಾಗಲಿದ್ದಾರೆ. ಪುನೀತ ತಮ್ಮ …
Read More »ಹಿಂಬದಿಯಿಂದ ಟ್ಯಾಂಕರ್ ಕಬ್ಬಿನ ಟ್ರ್ಯಾಕ್ಟರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿ
ಹಿಂಬದಿಯಿಂದ ಟ್ಯಾಂಕರ್ ಕಬ್ಬಿನ ಟ್ರ್ಯಾಕ್ಟರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-4ರ ಹಲಗಾ ಬಳಿ ನಡೆದಿದೆ. ಹೌದು ಹಲಗಾ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಮಂಜುನಾಥ್ ರೈಸ್ ಮಿಲ್ ಬಳಿ ಈ ದುರ್ಘಟನೆ ಸಂಭವಿಸಿದೆ. ಹಿಂಬದಿಯಿಂದ ಕಬ್ಬಿನ ಟ್ರ್ಯಾಕ್ಟರ್‍ಗೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಇದರಿಂದ ಟ್ರ್ಯಾಕ್ಟರ್ ಚಾಲನಿಗೆ ಗಾಯವಾಗಿದ್ದು. ಯಾವುದೇ ರೀತಿ ಪ್ರಾಣಹಾನಿ ಸಂಭವಿಸಿಲ್ಲ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Read More »ಪುನೀತ್ ಹಠಾತ್ ನಿಧನದಿಂದ ರಾಜ್ಕುಮಾರ್ ಹೆಸರಿನ ಹೋಟೆಲ್ ನಡೆಸುತ್ತಿದ್ದ ಅಭಿಮಾನಿ ಸಾವು!
ಮಂಡ್ಯ: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿಕೆ ಕೋಟ್ಯಾಂತರ ಅಭಿಮಾನಿಗಳಿಗೆ ನೋವು ತರಿಸಿದೆ. ಕನ್ನಡ ಚಿತ್ರರಂಗಕ್ಕೆ ಅಪ್ಪು ಮರಣ ತುಂಬಲಾರದ ನಷ್ಟ. ಇನ್ನು ಪುನೀತ್ ಹಠಾತ್ ನಿಧನದಿಂದ ಕೆಲ ಅಭಿಮಾನಿಗಳು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಂಡ್ಯದಲ್ಲಿ ಇದೀಗ ಮತ್ತೊಬ್ಬ ಅಭಿಮಾನಿ ಪುನೀತ್ ನಿಧನದ ಆಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದ ಕೆಎಂ ರಾಜೇಶ್ (50) ಎಂಬುವವರು ಸಾವನ್ನಪ್ಪಿದ್ದಾರೆ. ಅಭಿಮಾನಿ ರಾಜೇಶ್ ಪುನೀತ್ ನಿಧನದ ಬಳಿಕ ಸರಿಯಾಗಿ ಊಟ ಸೇವಿಸದೇ …
Read More »ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಒಂದು ಸಿನಿಮಾ ಮಾಡ್ತಿದ್ದಾರೆ ಅಂದ್ರೆ ಬರೋಬ್ಬರಿ ಒಂದು ಲಕ್ಷ ಮನೆಯ ಒಲೆ ಉರಿಯುತ್ತಿತ್ತು: ಎಸ್.ನಾರಾಯಣ್
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಒಂದು ಸಿನಿಮಾ ಮಾಡ್ತಿದ್ದಾರೆ ಅಂದ್ರೆ ಬರೋಬ್ಬರಿ ಒಂದು ಲಕ್ಷ ಮನೆಯ ಒಲೆ ಉರಿಯುತ್ತಿತ್ತು ಅಂತಾ ನಿರ್ದೇಶಕ ಎಸ್.ನಾರಾಯಣ್ ನೆನೆದಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ಅಂತಿಮ ದರ್ಶನ ಪಡೆದು ನ್ಯೂಸ್ಫಸ್ಟ್ ಜೊತೆ ಮಾತನಾಡಿದ ಅವರು.. ಪುನೀತ್ ರಾಜ್ಕುಮಾರ್ ಬಣ್ಣ ಹಚ್ಚುತ್ತಾರೆ ಎಂದರೆ ಕನಿಷ್ಟ ಒಂದು ಲಕ್ಷ ಮಂದಿ ಮನೆಯಲ್ಲಿ ಕುಳಿತು ಊಟ ಮಾಡುತ್ತಿದ್ದರು. ಮನುಷ್ಯನಿಗೆ ಸಾವು ಅನ್ನೋದು ಅಂತಿಮವಾದದ್ದು. ಹೌದು, ಆದರೆ ಅದು ಬರುವ ರೀತಿ …
Read More »ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ : `KSRTC’ ಯಿಂದ 1 ಸಾವಿರ ಹೆಚ್ಚುವರಿ ಬಸ್
ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ನವೆಂಬರ್ 7 ರವರೆಗೆ 1 ಸಾವಿರ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ಹಾಗೂ ಅಂತರರಾಜ್ಯದ ತಿರುಪತಿ, …
Read More »ಕನ್ನಡ ರಾಜ್ಯೋತ್ಸವ ಆಚರಣೆಗೆ 500 ಜನರಿಗೆ ಮಾತ್ರ ಅವಕಾಶ
ಕನ್ನಡ ರಾಜ್ಯೋತ್ಸವ ಆಚರಣೆಗೆ 500 ಜನರಿಗೆ ಮಾತ್ರ ಅವಕಾಶ ನೀಡಿದೆ. ಕನ್ನಡ ರಾಜ್ಯೋತ್ಸವ, ದೀಪಾವಳಿ ಹಬ್ಬಕ್ಕೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕನ್ನಡ ರಾಜ್ಯೋತ್ಸವದ ವೇಳೆ 500 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ದೈಹಿಕ ಅಂತರವಿಲ್ಲದ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗುವುದು. ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಎಂದು ಕನ್ನಡ ರಾಜ್ಯೋತ್ಸವ ಆಚರಣೆಯ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಆಚರಣೆಗೆ 500 ಜನರಿಗೆ ಮಾತ್ರ ಅವಕಾಶ …
Read More »ದೀಪಾವಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ: ಹಸಿರು ಪಟಾಕಿಗೆ ಮಾತ್ರ ಅವಕಾಶ
ಬೆಂಗಳೂರು ಅಕ್ಟೋಬರ್ 30: ದೀಪದಿಂದ ದೀಪ ಹಚ್ಚೋ ದೀಪಾವಳಿ ಹಬ್ಬ ಬಂದೇ ಬಿಡ್ತು. ಕೊರೊನಾ ಕಾರಣದಿಂದ ಸುಮಾರು ಎರಡು ವರ್ಷವೂ ದೀಪಾವಳಿ ಹಬ್ಬವನ್ನು ಬಹುತೇಕ ಜನರು ಆಚರಿಸಲಾಗಲಿಲ್ಲ. ಆದರೀಗ ಅಧಿಕ ಜನ ದೀಪಾವಳಿ ಹಬ್ಬವನ್ನು ಆಚರಿಸಲು ಕಾತುರದಿಂದ ಕಾಯುತ್ತಿದ್ದಾರೆ. ಹೀಗಾಗಿ ಈ ಬಾರಿ ದೀಪಾವಳಿ ಹಬ್ಬ ಅತ್ಯಂತ ಸಡಗರ ಸಂಭ್ರಮದಿಂದ ಕೂಡಿರುವುದರಲ್ಲಿ ಯಾವ ಅನುಮಾನವೇ ಇಲ್ಲ. ಆದರೆ ಹಬ್ಬದ ಆಚರಣೆಯಲ್ಲಿ ಮೈಮರೆತು ಅನಾರೋಗ್ಯಕ್ಕೆ ಒಳಗಾಗುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. …
Read More »