ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹರಿಹಾಯ್ದಿದ್ದಾರೆ. ಬಿಜೆಪಿ- ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ’ ಎಂಬ ಸಿದ್ದರಾಮಯ್ಯ ಆರೋಪಕ್ಕೆ ರವಿ ತಿರುಗೇಟು ನೀಡಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜನತಾದಳದ ಅಡುಗೆ ಮನೆ, ಇನ್ನೊಬ್ಬರು ಮಲಗುವ ಕೋಣೆ ಇಣುಕಿ ನೋಡುವ ಚಟ ಅಂಟಿಕೊಂಡಿದೆ’ ಎಂದು ಲೇವಡಿ ಮಾಡಿದ್ದಾರೆ. ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಭಾನುವಾರ ನಡೆದ ಪಕ್ಷದ ಪ್ರಮುಖರ …
Read More »Daily Archives: ಅಕ್ಟೋಬರ್ 4, 2021
ಮಕ್ಕಳ ಮಾರಾಟ ಪ್ರಕರಣ : ಆಶಾಕಾರ್ಯಕರ್ತೆ ಬಂಧನ
ಕೋಲಾರ: ರಾಜ್ಯದಲ್ಲಿ ದಿನದಿಂದದಿನಕ್ಕೆ ಮಕ್ಕಳ ಮಾರಾಟ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಸ್ವತ: ಆಶಾ ಕಾರ್ಯಕರ್ತೆಯರೇ ಮಕ್ಕಳ ಮಾರಾಟ ಜಾಲದ ಹಿಂದೆ ಇದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಕ್ಕಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋಲಾರದಲ್ಲಿ ಇಬ್ಬರು ಆಶಾ ಕಾರ್ಯಕರ್ತೆಯರು ಹಾಗೂ ಮಗು ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರದ ಕೆಜಿಎಫ್ ತಾಲೂಕಿನ ಪಂತನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನೀಲಮ್ಮ ಹಾಗೂ ಬಾಬು ದಂಪತಿ ಮಗುವನ್ನು ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. …
Read More »ಶಾರುಖ್ ಖಾನ್ ಪುತ್ರನಿಗೆ ಸಿಗದ ಜಾಮೀನು
ಮುಂಬೈ: ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾದ ಪ್ರಕರಣದಡಿ ಬಂಧಿತರಾಗಿರುವ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಮತ್ತೆ ಎನ್.ಸಿ.ಬಿ. ಕಸ್ಟಡಿಗೆ ನೀಡಲಾಗಿದೆ. ಇಂದು ವಿಚಾರಣೆ ನಡೆಸಿದ ಮುಂಬೈನ ಕಿಲ್ಲಾ ಕೋರ್ಟ್ ಅಕ್ಟೋಬರ್ 7 ರವರೆಗೆ NCB ಕಸ್ಟಡಿಗೆ ನೀಡಿ ಆದೇಶ ನೀಡಿದೆ. ಮುಂಬೈ ಗೋವಾ ನಡುವೆ ಸಮುದ್ರದ ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯ ಮೇಲೆ ಶನಿವಾರ ರಾತ್ರಿ ಎನ್.ಸಿ.ಬಿ. ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಆರ್ಯನ್ …
Read More »ರಾಜ್ಯಮಟ್ಟದ ಗಾಲಿ ಕುರ್ಚಿ ರಗ್ಬಿ ಟೂರ್ನಿಯಲ್ಲಿ ಪ್ರಥಮ ಸ್ಥಾನ ಬೆಳಗಾವಿಗೆ
ಬೆಳಗಾವಿ: ಬೆಳಗಾವಿ ತಂಡವು ಜಿಲ್ಲಾ ಅಂಗವಿಕಲರ ಸೇವಾ ಸಂಘ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಗಾಲಿ ಕುರ್ಚಿ ರಗ್ಬಿ ಟೂರ್ನಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಟ್ರೋಫಿ ತನ್ನದಾಗಿಸಿಕೊಂಡಿತು. ಬಾಗಲಕೋಟೆ ತಂಡ ದ್ವಿತೀಯ ಮತ್ತು ಮೈಸೂರು ತಂಡದವರು ತೃತಿಯ ಸ್ಥಾನ ಪಡೆದರು. ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಕ್ತಾರಹುಸೇನ ಪಠಾಣ ಹಾಗೂ ಸುರೇಶ ಯಾದವ ಪ್ರತಿಷ್ಠಾನದ ಅಧ್ಯಕ್ಷ ಸುರೇಶ ಯಾದವ ವಿಜೇತ ತಂಡಗಳಿಗೆ …
Read More »ರೈತರಿಗೆ ಭದ್ರತೆ ನೀಡಲು ಆಗ್ರಹ
ಬೆಳಗಾವಿ: ಉತ್ತರಪ್ರದೇಶದ ಲಿಖಿಂಪುರ್‌ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರ ಬೆಂಗಾವಲು ವಾಹನ ಹರಿಸಿ ನಾಲ್ವರು ರೈತರನ್ನು ಬಲಿ ಪಡೆದ ಆರೋಪಿಯನ್ನು ಗೂಂಡಾ ಕಾಯ್ದೆಯಲ್ಲಿ ಬಂಧಿಸಿ, ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆಯವರು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು ಈ ವೇಳೆ ಮಾತನಾಡಿದ ಸಂಘಟನೆಯ ಅಧ್ಯಕ್ಷ ಸಿದಗೌಡ ಮೋದಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ …
Read More »ಬೆಳಗಾವಿ :ಡಿಸೆಂಬರ್‌ನಲ್ಲಿ ಈ ಬಾರಿಯ ಚಳಿಗಾಲ ಅಧಿವೇಶನ ನಡೆಯಲಿದೆ.
ಬೆಂಗಳೂರು: ಕೊನೆಗೂ ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನ ನಡೆಸಲು ಮನಸು ತೋರಿದ್ದು ಇದೇ ಡಿಸೆಂಬರ್‌ನಲ್ಲಿ ಈ ಬಾರಿಯ ಚಳಿಗಾಲ ಅಧಿವೇಶನ ನಡೆಯಲಿದೆ. ಈ ಬಗ್ಗೆ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿ, ಡಿಸೆಂಬರ್ ತಿಂಗಳಿನಲ್ಲಿ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲು ಅಭಿಪ್ರಾಯ ವ್ಯಕ್ತವಾಗಿದೆ ಸರ್ಕಾರದಿಂದಲೂ ಕೂಡ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಚಿಂತನೆ ಇದೆ ಎಂದರು. ಕ್ಷೇತ್ರದ ಜನರು ತಮ್ಮ ಸಮಸ್ಯೆಗಳನ್ನು ಭಾವನೆಗಳನ್ನು ಸದನದಲ್ಲಿ ಶಾಸಕರು ವ್ಯಕ್ತಪಡಿಸಬೇಕೆಂದು ಚುನಾಯಿಸಿ ಕಳುಹಿಸಿದ್ದಾರೆ. …
Read More »ಡೆತ್ನೋಟ್ ಬರೆದಿಟ್ಟು ಡಿ ಫಾರ್ಮಸಿ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾರೆ
ಬೆಳಗಾವಿ :ಮರಾಠಿ ಭಾಷೆಯಲ್ಲಿ ಮೂರು ಸಾಲು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ, ಎಕ್ಸಾಂ ಟೆನ್ಷನ್ ಹಾಗೂ ಫ್ಯಾಮಿಲಿ ಪ್ರಾಬ್ಲಮ್ನಿಂದ ಈ ನಿರ್ಣಯ ಕೈಗೊಂಡಿದ್ದೇನೆ ಅಂತ ಉಲ್ಲೇಖಿಸಿದ್ದಾರೆ. ನನ್ನಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮಿಸಿ. ಗುಡ್ ಬಾಯ್ ಅಂತಾ ಬರೆದು, ಸ್ಮೈಲಿ ಸಿಂಬಾಲ್ ಚಿತ್ರ ಬಿಡಿಸಿ ಸಾವಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Read More »ಕೆಲಸದ ವೇಳೆ ಆತ್ಮ ಹತ್ಯೆಗೆ ಶರಣಾದ ಯುವ
ನೆಲಮಂಗಲ: ಖಾಸಗಿ ಆಸ್ಪತ್ರೆ ಸಿಬ್ಬಂದಿಯೊಬ್ಬರು ಎರಡು ಮಾದರಿಯ ಚುಚ್ಚುಮದ್ದುಗಳನ್ನು ಸಮೀಕರಿಸಿಕೊಂಡು ಸ್ವತಃ ಇಂಜೆಕ್ಷನ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಟ್ಟಣದ ಕುಣಿಗಲ್ ವೃತ್ತದ ಬಳಿಯಲ್ಲಿರುವ ಆಸ್ಪತ್ರೆಯಲ್ಲಿ ನಡೆದಿದೆ. ಸಂಜಯ್ (19)ಮೃತ ಆಸ್ಪತ್ರೆ ಸಿಬ್ಬಂದಿ. ಮೂಲತಃ ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಾರ್ವತಿನಗರ ಮಂಜುನಾಥ್ ಎಂಬುವರ ಮಗನಾದ ಈತ ಕಳೆದ ಎರಡು ತಿಂಗಳಿನಿಂದ ಕುಣಿಗಲ್ ವೃತ್ತದ ಬಳಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸಮಾಡುತ್ತಿದ್ದ. ಎಂದಿನಂತೆ ಶನಿವಾರ …
Read More »ಸಮಾಜ ಸೇವೆಗೆ ಜೀವನ ಮೀಸಲು: ಯುವ ನಾಯಕ ರಾಹುಲ್ ಜಾರಕಿಹೊಳಿ
ಯಮಕನಮರಡಿ:ನನ್ನ ಜೀವನ ಸಮಾಜ ಸೇವೆಗೆ ಮೀಸಲು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಹುಕ್ಕೇರಿ ತಾಲ್ಲೂಕಿನ ಕರಗುಪ್ಪಿ ಗ್ರಾಮದಲ್ಲಿ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ತಮ್ಮ 22ನೇ ಜನ್ಮದಿನ ಸಂಭ್ರಮಾಚರಣೆ ಸಮಾರಂಭದಲ್ಲಿ ಮಾತನಾಡಿದರು. ನಾನು ಇತ್ತೀಚೆಗೆ ಏರೊನಾಟಿಕಲ್ ಎಂಜಿನಿಯರಿಂಗ್ ಪದವಿ ಪೂರೈಸಿದ್ದೇನೆ. ಕಳೆದ ಎರಡು ವರ್ಷಗಳಿಂದ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲಿದ್ದೇನೆ’ ಎಂದು ಹೇಳಿದರು. ತಂದೆ ಸತೀಶ ಜಾರಕಿಹೊಳಿ ಅವರೊಂದಿಗೆ ಚಿಕ್ಕಂದಿನಿಂದಲೂ ಸರಿಯಾಗಿ …
Read More »ಅಖಿಲೇಶ್ ಯಾದವ್ ನಿವಾಸದ ಹೊರಗೆ ಪ್ರತಿಭಟನಾಕಾರರಿಂದ ಪೊಲೀಸ್ ವಾಹನಕ್ಕೆ ಬೆಂಕಿ
ಲಕ್ನೋ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ನಿವಾಸದ ಹೊರಗೆ ಸೋಮವಾರ ಪ್ರತಿಭಟನಾಕಾರರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದರು. ಅಖಿಲೇಶ್ ಯಾದವ್ ಅವರು ಲಖಿಂಪುರ್ ಖೇರಿಗೆ ಹೋಗದಂತೆ ಪೊಲೀಸರು ತಡೆದ ನಂತರ ಅವರ ನಿವಾಸದ ಬಳಿ ಧರಣಿ ಕುಳಿತಿದ್ದ ಸ್ಥಳದಿಂದ ಕೆಲವೇ ಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ. ನಂತರ ಅಖಿಲೇಶ್ ಯಾದವ್ ಅವರನ್ನು ವಶಕ್ಕೆ ಪಡೆಯಲಾಯಿತು. ವೀಡಿಯೊದಲ್ಲಿ, ಪೊಲೀಸರು ಬೆಂಕಿಯನ್ನು ನಂದಿಸಲು ಪ್ರಯತ್ನಿಸುವುದನ್ನು …
Read More »