Breaking News

Daily Archives: ಅಕ್ಟೋಬರ್ 9, 2021

ಸಿಂದಗಿ ಉಪಚುನಾವಣೆ, ಬಿಜೆಪಿ ಗೆಲುವಿಗೆ ಪ್ಲಾನ್: ಲಕ್ಷ್ಮಣ ಸವದಿ

ವಿಜಯಪುರ: ಸಿಂದಗಿ ಉಪ ಚುನಾವಣೆಯಲ್ಲಿ 20 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಪ್ಲಾನ್ ಹಾಕಿಕೊಳ್ಳಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಜಿಲ್ಲೆಯ ಸಿಂದಗಿ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಭೂಸನೂರ ಅವರು ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಚುನಾವಣಾ ಪ್ರಚಾರಕ್ಕೆ 7 ತಂಡಗಳನ್ನು ರೆಡಿ ಮಾಡಲಾಗಿದೆ. ನಿರೀಕ್ಷೆಗಿಂತ ಹೆಚ್ಚಿನ ಮತಗಳು ಬಿಜೆಪಿಗೆ ಬರಲಿವೆ ಎಂದರು. ಈ ನಿಟ್ಟಿನಲ್ಲಿ ಈಗಾಗಲೇ …

Read More »

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳನ್ನು ಚಪ್ಪಲಿ ಬಿಡೋ ಜಾಗದಲ್ಲಿ ಬಿಡೋಣವೆಂದ ಕೆ.ಎಸ್​. ಈಶ್ವರಪ್ಪ..!

ಬಾಗಲಕೋಟೆ: ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ಗ್ರಾಮದ ಅಭಿವೃದ್ದಿ ಕಡೆಗೆ ಗಮನ ಹರಿಸೋಣ ಎಂದು ಸಲಹೆ ನೀಡುವ ವೇಳೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಟ್ಟು ಬಿಡೋಣ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ನಿನ್ನೆ (ಅ.8) ಬಾಗಲಕೋಟೆ ನವನಗರದ ಕಲಾಭವನದಲ್ಲಿ ನಡೆದ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒಗಳ ಕಾರ್ಯಾಗಾರದಲ್ಲಿ ಈಶ್ವರಪ್ಪ ಹೇಳಿಕೆ ನೀಡಿದರು. ನಾವುಗಳು ಗ್ರಾಮದ ಅಭಿವೃದ್ದಿ ಮಾಡುವವರು. …

Read More »

ಯಡಿಯೂರಪ್ಪ-ವಿಜಯೇಂದ್ರರಿಗೆ ಕಡಿವಾಣ ಹಾಕಲು ‘ದಾಳಿ’ ಅಸ್ತ್ರ?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒತ್ತಡ ಮುಕ್ತವಾಗಿ ಮತ್ತು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಹಾದಿ ಸುಗಮ ಮಾಡುವುದು ಮತ್ತು ಸರ್ಕಾರದ ಮೇಲೆ ನಿಯಂತ್ರಣ ಸಾಧಿಸುವ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಅವರ ಯತ್ನಕ್ಕೆ ಕಡಿವಾಣ ಹಾಕಲು ಅವರ ಆಪ್ತರ ಮೇಲೆ ಆದಾಯ ತೆರಿಗೆ(ಐ.ಟಿ) ಇಲಾಖೆ ದಾಳಿ ನಡೆದಿದೆ ಎಂಬ ವ್ಯಾಖ್ಯಾನ ಬಿಜೆಪಿ ವಲಯದಲ್ಲಿ ನಡೆದಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗಲೇ ವಿಜಯೇಂದ್ರ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರುಗಳು ಸಲ್ಲಿಕೆಯಾಗಿದ್ದವು. ಐದಾರು ತಿಂಗಳಿನಿಂದ ಮಾಹಿತಿ …

Read More »

ಹೋದಲೆಲ್ಲಾ ಬೊಮ್ಮಾಯಿಗೆ ಜೋಡೆತ್ತುಗಳು ಸಾಥ್; ತೀವ್ರ ಚರ್ಚೆ ಹುಟ್ಟುಹಾಕಿದ ಆ ಇಬ್ಬರ ಉಪಸ್ಥಿತಿ..!

ಬೆಂಗಳೂರು: ಬಸವರಾಜ್​​​ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನದಿಂದಲೂ ಇಲ್ಲಿಯವರೆಗೂ ಕಂದಾಯ ಸಚಿವ ಆರ್​​.ಅಶೋಕ್​​ ಮತ್ತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್​​​​​​​​ ಅವರಲ್ಲಿ ಭಾರೀ ಬದಲಾವಣೆಯಾಗಿದೆ. ಸಿಎಂ ಬಸವರಾಜ್​​ ಬೊಮ್ಮಾಯಿ ಎಲ್ಲಿಗೆ ಹೋದರೆ ಅಲ್ಲಿಗೆ ಈ ಜೋಡೆತ್ತು ಹೋಗುತ್ತಿದೆ ಎಂದು ರಾಜಕೀಯ ವಲಯದಲ್ಲಿ ಜೋರು ಚರ್ಚೆ ಶುರುವಾಗಿದೆ. ಸಿಎಂ ಬಸವರಾಜ್​​ ಬೊಮ್ಮಾಯಿ ಹಿಂದೆ ಮುಂದೆಯೇ ಈ ಜೋಡೆತ್ತು ಓಡಾಡುತ್ತಿದೆ. ಆರ್​​. ಅಶೋಕ್​​ …

Read More »

ಉಪ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗೆ ಜನ ಮತ: ಸಿದ್ದರಾಮಯ್ಯ

ಬೆಂಗಳೂರು: ಜೆಡಿಎಸ್‌ ಪಕ್ಷದವರು ಉಪ ಚುನಾವಣೆಯಲ್ಲಿ ಎರಡೂ ಕಡೆ ಮುಸ್ಲಿಂ ಅಭ್ಯರ್ಥಿಳನ್ನು ಕಣಕ್ಕಿಳಿಸಿರುವ ಹಿಂದಿನ ಉದ್ದೇಶ ಏನೇ ಇದ್ದರೂ ಮತದಾರರು ಮೂರ್ಖರಲ್ಲ. ಕಾಂಗ್ರೆಸ್‌ನ ಗೆಲ್ಲುವ ಅಭ್ಯರ್ಥಿಗೇ ಮತ ನೀಡುತ್ತಾರೆಯೇ ಹೊರತು ಸೋಲು ಅಭ್ಯರ್ಥಿಗಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಅಗತ್ಯ ವಸ್ತುಗಳ ಬೆಲೆ ಏರಿಕೆ, ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ನಿಷ್ಕ್ರಿಯತೆ ಬಗ್ಗೆ ಇರುವ ಅಸಹನೆಯನ್ನು ಹೊರ ಹಾಕಲು ಜನತೆ ಈ …

Read More »

ಅವಧಿ ಪೂರ್ಣಗೊಳಿಸಲಿದ್ದೇನೆ, ನನ್ನ ನೇತೃತ್ವದಲ್ಲೇ 2023 ವಿಧಾನಸಭೆ ಚುನಾವಣೆ: ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ನವದೆಹಲಿ: ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಅವಧಿ ಪೂರೈಸಲಿದದ್ದೇನೆ, ಹಾಗೂ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ 2023ರ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಡೆದ ಇಂಡಿಯಾ ಕಾನ್ ಕ್ಲೇವ್ ನಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಉತ್ತಮ ಆಡಳಿತ ನೀಡುವ ಜತೆಗೆ ಮತ್ತೊಂದು ಅವಧಿಗೆ ಬಿಜೆಪಿಯನ್ನು ಅಧಿಕಾರಕ್ಕ ತರುತ್ತೇನೆ .ಎಷ್ಟು ಅವಧಿಗೆ ನಾನು ಮುಖ್ಯಮಂತ್ರಿಯಾಗಿರುತ್ತೇನೆ ಎಂಬುದು ಮುಖ್ಯವಲ್ಲ. ಈ …

Read More »

ಮನಗೂಳಿ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ: ಡಿಕೆಶಿಗೆ ಕುಮಾರಸ್ವಾಮಿ ತರಾಟೆ

ಬೆಂಗಳೂರು: ತಾವು ನಿಧನರಾಗುವುದಕ್ಕೆ ಹದಿನೈದು ದಿನ ಮೊದಲು ಎಂ.ಸಿ.ಮನಗೂಳಿ ಅವರು ತಮ್ಮ ಮನೆಗೆ ಬಂದು ಮಕ್ಕಳನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಕೇಳಿದ್ದರು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು ಸರಣಿ ಟ್ವೀಟ್ ಮಾಡಿರುವ ಅವರು, ಡಿಕೆ ಶಿವಕುಮಾರ್ ಅಪ್ಪಟ ಸುಳ್ಳು ಹೇಳುತ್ತಿದ್ದಾರೆಂದು ಟೀಕಿಸಿದ್ದಾರೆ. ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ವಿಚಾರದಲ್ಲಿ ಜನರಲ್ಲಿ …

Read More »

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ

ಹೊಸದಿಲ್ಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಕೇಂದ್ರ ಕಲ್ಲಿದ್ದಲು,ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವರಾದ ವಿ.ಸುನೀಲ್‌ ಕುಮಾರ್, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ …

Read More »

ದೇವನಹಳ್ಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ನಾಯಿಗಳ ದಾಳಿ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

ದೇವನಹಳ್ಳಿ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ನಾಯಿಗಳು ದಾಳಿ ಮಾಡಿವೆ. ಬಾಲಕಿ ಮೇಲೆ ನಾಯಿಗಳು ಅಟ್ಯಾಕ್ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಮಾರ್ಕೆಟ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಇಂದು (ಅ.9) ಬೆಳಿಗ್ಗೆ 16 ವರ್ಷದ ಬಾಲಕಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ 6 ಕ್ಕೂ ಅಧಿಕ ನಾಯಿಗಳು ಏಕಾಏಕಿ ಬಾಲಕಿ ಮೇಲೆ ದಾಳಿ ಮಾಡಿವೆ. ಸ್ಥಳೀಯರ ನೆರವಿನಿಂದ ಅದೃಷ್ಟವಶಾತ್ …

Read More »

ಬಿಬಿಎಂಪಿ ಯಡವಟ್ಟಿಗೆ 9 ವರ್ಷದ ಬಾಲಕ ಬಲಿ

ಬೆಂಗಳೂರು: ನಿರ್ವಹಣೆ ಇಲ್ಲದ ಬಿಬಿಎಂಪಿ ಪಾರ್ಕ್‌ನ ಹೊಂಡದಲ್ಲಿ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಟಿ.ದಾಸರಹಳ್ಳಿಯ ಮಲ್ಲಸಂದ್ರದ 13 ನೇ ವಾರ್ಡ್ನ ಕೆಂಪೇಗೌಡ ಪಾರ್ಕ್‌ನಲ್ಲಿ ನಡೆದಿದೆ. ಮೃತ ಬಾಲಕನನ್ನು 9 ವರ್ಷದ ಪ್ರತಾಪ್ ಎಂದು ಗುರುತಿಸಲಾಗಿದೆ. ಈತ ಗಾರ್ಮೆಂಟ್ಸ್ ನೌಕರ ರುದ್ರಮುನಿ ಹಾಗೂ ತಾಯಿ ಕಾಂತಮಣಿ ದಂಪತಿಯ ಪುತ್ರ. ಮಳೆಯಿಂದಾಗಿ ಪಾರ್ಕ್‌ನ ತಗ್ಗು ಪ್ರದೇಶದಲ್ಲಿ ನಿಂತಿದ್ದ ನೀರಿನಿಂದ ಅವಘಡ ಸಂಭವಿಸಿದ್ದು, ಆಟವಾಡುವ ವೇಳೆ ನೀರಿನಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿದ್ದಾನೆ. ಪಾರ್ಕ್ …

Read More »