ಕಲಬುರಗಿ: ಆಂಧ್ರಪ್ರದೇಶದ ಧರ್ಮಾಚಲಂನಿಂದ ನಗರ ತಂದ 340 ಕೆಜಿ ತೂಕದ ಕಾಂಜಾವನ್ನು ನಗರ ಪೊಲೀಸರು ಶುಕ್ರವಾರ ವಶಪಡಿಸಿಕೊಂಡಿದ್ದಾರೆ. ಮೂವರು ಆರೋಪಿಗಳನ್ನೂ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ನಗರ ಪೊಲೀಸ್ ಆಯುಕ್ತಾಲಯದ ಸೈಬರ್ ಅಪರಾಧ ಮತ್ತು ಮಾದಕದ್ರವ್ಯ ನಿಗ್ರಹ ಠಾಣೆ (ಸಿಇಎನ್) ಪೊಲೀಸರು, ವಾಹನ ಜಪ್ತಿ ಮಾಡಿದರು. ಮಹಾರಾಷ್ಟ್ರದ ಲಾತೂರ ಮೂಲದ ಅಕ್ರಮ ಇನಾಮದಾರ, ಸುಮೇರ್ ಇನಾಮದಾರ್ ಹಾಗೂ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಮೋಹನ್ ಮೇತ್ರೆ ಎಂಬುವರನ್ನು …
Read More »Daily Archives: ಅಕ್ಟೋಬರ್ 9, 2021
ರಸ್ತೆಯಿಂದ ಇಳಿದು ಗದ್ದೆಗೆ ನುಗ್ಗಿದ ಸರ್ಕಾರಿ ಬಸ್; ವಿದ್ಯಾರ್ಥಿಗಳೇ ತುಂಬಿದ್ದರು!
ಬಳ್ಳಾರಿ: ಶಾಲಾ ಕಾಲೇಜಿನ ಮಕ್ಕಳೇ ಹೆಚ್ಚಾಗಿದ್ದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ನುಗ್ಗಿದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಓರ್ವಾಯಿ ಗ್ರಾಮದ ಬಳಿ ನಡೆದಿದೆ. ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ. ಓರ್ವಾಯಿ ಗ್ರಾಮದಿಂದ ಬಳ್ಳಾರಿಗೆ ತೆರಳುತ್ತಿದ್ದ ಬಸ್ನಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳೇ ಹೆಚ್ಚಾಗಿ ಪ್ರಯಾಣಿಸುತ್ತಿದ್ದರು. ರಸ್ತೆ ಕಿರಿದಾಗಿರುವುದರಿಂದ ಚಾಲಕನಿಗೆ ನಿಯಂತ್ರಿಸುವಲ್ಲಿ ಸಮಸ್ಯೆಯಾಗಿ, ಬಸ್ ರಸ್ತೆ ಪಕ್ಕದಲ್ಲಿದ್ದ ಗದ್ದೆಗೆ ನುಗ್ಗಿತು. ಗದ್ದೆಯು ತಗ್ಗಿನಲ್ಲಿದ್ದರೂ …
Read More »ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಕಿಡ್ನ್ಯಾಪ್ ಮಾಡಿ ಅತ್ಯಾಚಾರವೆಸಗಿದ ಆರೋಪಿಗಳು
ದಕ್ಷಿಣ ಕನ್ನಡ: ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಅಪ್ರಾಪ್ತೆಯನ್ನು ಅಪಹರಿಸಿದ ಐವರು ಆರೋಪಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ಬಾಲಕಿಗೆ ಮತ್ತುಬರಿಸಿ ಅತ್ಯಾಚರವೆಸಗಿರುವ ಆರೋಪ ಕೇಳಿಬಂದಿದೆ. ಸಂತ್ರಸ್ತ ಅಪ್ರಾಪ್ತೆಯನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬಂಟ್ವಾಳದಿಂದ ಬಾಲಕಿಯನ್ನು ಅಪಹರಿಸಿ ಅಮ್ಟಾಡಿಯ ರೂಂ ಒಂದಕ್ಕೆ ಕರೆದೊಯ್ದು ಆರೋಪಿಗಳು ಅತ್ಯಾಚಾರವೆಸಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ …
Read More »ನಿಲ್ಲದ IT ಬೇಟೆ.. ಬೆಳಗಾವಿಯ ಜಯಶೀಲ ಶೆಟ್ಟಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಶಾಕ್
ಬೆಳಗಾವಿ: ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸುತ್ತಿರುವ ಐಟಿ ಅಧಿಕಾರಿಗಳು ಇಂದು ಕೂಡ ಹಲವು ಭಾಗಗಳಲ್ಲಿ ದಾಳಿಯನ್ನ ಮುಂದುವರಿಸಿದ್ದಾರೆ. ಅದರಂತೆ ಇಂದು ಕೂಡ ದಾಳಿ ಕಂಟಿನ್ಯೂ ಆಗಿದ್ದು ಜಿಲ್ಲೆಯ ಉದ್ಯಮಿ ಹಾಗೂ ನೀರಾವರಿ ಇಲಾಖೆ ಗುತ್ತಿಗೆದಾರ ಜಯಶೀಲ ಶೆಟ್ಟಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಜಿಲ್ಲೆಯ ಘಟಪ್ರಭಾದಲ್ಲಿರುವ ಉದ್ಯಮಿ ಜಯಶೀಲ ಶೆಟ್ಟಿ ಮನೆ ಮೇಲೆ 16 ಜನ ಆದಾಯ ತೆರಿಗೆ ಅಧಿಕಾರಿಗಳ …
Read More »ಪೊಲೀಸರ ಸೋಗಿನಲ್ಲಿ ಬಂದು ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಆರೋಪಿ ಅಂದರ್
ತುಮಕೂರು: ಪೊಲೀಸ್ ಅಧಿಕಾರಿಯೆಂದು ಹೇಳಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಆರೋಪಿಯನ್ನು ಅಮೃತೂರು ಠಾಣೆ ಪೋಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆಯ ನಾಮಮಂಗಲ ತಾಲೂಕು ದೊಡ್ಡನಾಗನಹಳ್ಳಿ ಗ್ರಾಮದ ನಿವಾಸಿ ಪ್ರದೀಪ @ ಕೆಂಚ (37) ಬಂಧಿತ ಆರೋಪಿ. ಕಳೆದ ಆಗಸ್ಟ್ 1 ರಂದು ಪೊಲೀಸರ ಸೋಗಿನಲ್ಲಿ ಬಂದಿದ್ದ ಆರೋಪಿ ಮಹಿಳೆಯೋರ್ವರನ್ನ ಸಾಹೇಬ್ರು ನಿನ್ನ ಕರಿತಿದ್ದಾರೆ ಬಾ ಅಂತಾ ಹೇಳಿ ಕುಣಿಗಲ್ ತಾಲೂಕಿನ ಶ್ರೀನಿವಾಸ ದೇವರ ಬೆಟ್ಟಕ್ಕೆ ಕರೆದೊಯ್ದು.. ಈ ವೇಳೆ ಮಹಿಳೆಗೆ ಚಾಕು …
Read More »ವಿಜಯೇಂದ್ರ ಸಹಪಾಠಿ ಸೇರಿ ಹಲವರ ಮನೆಗಳಲ್ಲಿ ಶೋಧ: ಅಪಾರ ದಾಖಲೆಗಳ ವಶ
ಬೆಂಗಳೂರು: ಸರ್ಕಾರಿ ಕಾಮಗಾರಿಗಳ ಭ್ರಷ್ಟಾಚಾರ, ತೆರಿಗೆ ವಂಚನೆ ಮತ್ತು ಅಕ್ರಮ ಹಣದ ವಹಿವಾಟು ಕುರಿತು ಶುಕ್ರವಾರವೂ ಶೋಧ ಮುಂದುವರಿಸಿರುವ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು, ಮುಖ್ಯಮಂತ್ರಿ ಸಚಿವಾಲಯ ಸಿಬ್ಬಂದಿಯಾಗಿದ್ದ ಆಯನೂರು ಉಮೇಶ್ ನಿವಾಸದಿಂದ ಜಲ ಸಂಪನ್ಮೂಲ ಇಲಾಖೆಯ ಅಧೀನದ ನೀರಾವರಿ ನಿಗಮಗಳ ಕಾಮಗಾರಿಗಳ ಟೆಂಡರ್‌ಗಳಿಗೆ ಸಂಬಂಧಿಸಿದ ಅಪಾರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಉಮೇಶ್, ದೀರ್ಘಕಾಲದಿಂದ ಮುಖ್ಯಮಂತ್ರಿಯವರ ಸಚಿವಾಲಯದಲ್ಲಿ ನಿಯೋಜನೆ …
Read More »ಭ್ರಷ್ಟಾಚಾರ ಆರೋಪ ಕೇಸ್ಗೆ ಟ್ವಿಸ್ಟ್ ; ತನಿಖೆ ಚುರುಕುಗೊಳಿಸಿದ ACB
ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಶಾಸಕ ಪರಣ್ಣ ಮುನವಳ್ಳಿ ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಕಾನೂನು ಕುಣಿಕೆ ಸದ್ದಿಲ್ಲದೇ ಸಿದ್ಧವಾಗುತ್ತಿದೆ. ರಾಜ್ಯದಾದ್ಯಂತ ಎಸಿಬಿ ಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ನ್ಯೂಸ್ ಫಸ್ಟ್ ಕೂಡಾ ತನಿಖೆಗೆ ಸಹಕರಿಸುತ್ತಿದ್ದು ಪೂರಕ ದಾಖಲೆಗಳನ್ನು ಎಸಿಬಿ ನೀಡಿದೆ. ಶಶಿಕಲಾ ಜೊಲ್ಲೆ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬೆಳಗಾವಿಯ ಎಸಿಬಿ ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಿದ್ದಾರೆ. ರಾಜ್ಯದ ನಾಲ್ಕು ಕಡೆ ಸಚಿವೆ ಶಶಿಕಲಾ ಜೊಲ್ಲೆ …
Read More »ವಿದ್ಯುದ್ದೀಪದ ಬೆಳಕಿನಲ್ಲಿ ಜಗಮಗಿಸುತ್ತಿರುವ ಮೈಸೂರು
ಮೈಸೂರು: ದಸರಾ ಮಹೋತ್ಸವ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಮಾಡಿರುವ ದಸರಾ ದೀಪಾಲಂಕಾರದಲ್ಲಿ ಮೈಸೂರು ನಗರ ಮಿಂದೇಳುತ್ತಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ನಿರ್ಮಿಸಿರುವ ಹಸಿರುಚಪ್ಪರದ ಮಂಟಪ ಕಣ್ಮನ ಸೆಳೆಯುತ್ತಿದೆ.ಇಡೀ ನಗರ ವಿದ್ಯುದ್ದೀಪದ ಬೆಳಕಿನಲ್ಲಿ ಕಂಗೊಳಿಸುತ್ತಿದ್ದು ಇಂದ್ರನ ಅಮರಾವತಿಯೇ ಧರೆಗೆ ಇಳಿದು ಬಂದಂತೆ ಭಾಸವಾಗುತ್ತಿದೆ. ಈ ಸುಂದರ ದೃಶ್ಯಗಳನ್ನು ನೋಡಲು ಜನ ರಾತ್ರಿಯಾಗುತ್ತಿದ್ದಂತೆಯೇ ಮುಗಿ ಬೀಳುತ್ತಿದ್ದಾರೆ. ಕಳೆದ ವರ್ಷದ ದಸರಾದಲ್ಲಿ 50ಕಿ.ಮೀ. ವ್ಯಾಪ್ತಿಯಲ್ಲಿದ್ದ ದೀಪಾಲಂಕಾರವನ್ನು ಈ ಬಾರಿ 106 ಕಿ.ಮೀ.ಗೆ …
Read More »ಮನಗೂಳಿ ಅವರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ: ಡಿ.ಕೆ.ಶಿವಕುಮಾರ್
ಸಿಂದಗಿ, ಅ.8: ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರ ಇಂದಿನಿಂದ ಆರಂಭವಾಗಿದೆ. ಮಾಜಿ ಸಚಿವ ಎಂ.ಸಿ.ಮನಗೂಳಿ ಅವರನ್ನು ಭಗವಂತ ಕರೆಸಿಕೊಂಡ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯುತ್ತಿದೆ. ನಾವೆಲ್ಲ ಸೇರಿ ಮನಗೂಳಿ ಅವರ ಪುತ್ರನಿಗೆ ಟಿಕೆಟ್ ನೀಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು. ಶುಕ್ರವಾರ ಸಿಂದಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂ.ಸಿ.ಮನಗೂಳಿ ಅವರು ಕೊನೆಯುಸಿರು ಎಳೆಯುವುದಕ್ಕೂ 15 ದಿನಗಳ ಮುನ್ನ …
Read More »ರಾಜಕೀಯ ನಿವೃತ್ತಿಯ ಸುಳಿವು ಕೊಟ್ಟ ಹೆಚ್ಡಿಕೆ
ಬಿಡದಿ : ಬಿಜೆಪಿ ಹೈಮಾಂಡ್ ನಾಗಪುರದಲ್ಲಿದೆ. ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಇದೆ. ಜೆಡಿಎಸ್ ಹೈಕಮಾಂಡ್ ಬಿಡದಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಬಿಡದಿಯ ತೋಟದಲ್ಲಿ ನಡೆಯುತ್ತಿರುವ ಜನತಾ ಪರ್ವ 1.O ಮಿಷನ್ 123 ಕಾರ್ಯಾಗಾರದ ಆರನೇ ದಿನ ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗದ ಪ್ರತಿನಿಧಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ನಿಮ್ಮ ಕೂಗಳತೆಯಲ್ಲಿ ನಿಮ್ಮ ಪಕ್ಷದ ವರಿಷ್ಠ ನಾಯಕರು ಇದ್ದಾರೆ. ಕಾರ್ಯಕರ್ತರು ಹೈಕಮಾಂಡ್ ನೋಡಲು ವಿಮಾನ ಹತ್ತಿ …
Read More »