Breaking News

Daily Archives: ಅಕ್ಟೋಬರ್ 12, 2021

ಕರಾಳ ದಿನಾಚರಣೆಗೆ ಅನುಮತಿ ಬೇಡ, ಅದ್ಧೂರಿ ರಾಜ್ಯೋತ್ಸವಕ್ಕೆ ಕನ್ನಡಪರ ಸಂಘಟನೆಗಳ ಅಗ್ರಹ:

ರಾಜ್ಯೋತ್ಸವ ಸಂದರ್ಭದಲ್ಲಿ ಎಂ.ಇ.ಎಸ್. ಕರಾಳ ದಿನಾಚರಣೆಗೆ ಜಿಲ್ಲಾಡಳಿತ ಅವಕಾಶ ನೀಡಬಾರದು ಎಂದು ಕನ್ನಡಪರ ಸಂಘಟನೆಗಳ ಮುಖಂಡರೊಬ್ಬರು ಮನವಿ ಮಾಡಿಕೊಂಡರು. ಅನಂತ ಬ್ಯಾಕೂಡ್ ಮಾತನಾಡಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಬೇಕು. ಬೆಳಗಾವಿ ಕನ್ನಡ ರಾಜ್ಯೋತ್ಸವಕ್ಕೆ ಸರಕಾರ ವಿಶೇಷ ಅನುದಾನ ಒದಗಿಸಬೇಕು ಎಂದು ಒತ್ತಾಯಿಸಿದರು. ರಾಣಿ ಚೆನ್ನಮ್ಮ ಪುತ್ಥಳಿಗೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಬೇಕು. ಪಾಲಿಕೆಯ ಪ್ರತಿ ವಾರ್ಡಿನಲ್ಲಿ ನವೆಂಬರ್ ಅಂತ್ಯದವರೆಗೆ ಕಾರ್ಯಕ್ರಮ ಏರ್ಪಡಿಸಬೇಕು ಎಂದು …

Read More »

ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆದಿಲ್ಲ. ಪದೇ ಪದೇ ಸಭೆ ಮುಂದಕ್ಕೆ ಹೋಗುತ್ತಿರುವುದಕ್ಕೆ ಬಿಜೆಪಿಯ ಇಬ್ಬರು ಶಾಸಕರೇ ಕಾರಣ

ಬೆಳಗಾವಿ: ಬಿಜೆಪಿಯ ಇಬ್ಬರು ಶಾಸಕರ ಅಸಹಕಾರದಿಂದ ನಗರದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಈ ಬಗ್ಗೆ ಶಾಸಕರೇ ಸ್ಪಷ್ಟೀಕರಣ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆದಿಲ್ಲ. ಪದೇ ಪದೇ ಸಭೆ ಮುಂದಕ್ಕೆ ಹೋಗುತ್ತಿರುವುದಕ್ಕೆ ಬಿಜೆಪಿಯ ಇಬ್ಬರು ಶಾಸಕರೇ ಕಾರಣ ಎಂದು ಆರೋಪಿಸಿದರು. ಸ್ಥಳೀಯ ಇಬ್ಬರು ಶಾಸಕರು ಬುಡಾ ಅಧ್ಯಕ್ಷರಿಗೆ ಸಹಕಾರ ನೀಡುತ್ತಿಲ್ಲ. …

Read More »

ಮಂಗಳೂರು: ಸಂಚಾರ ಪೊಲೀಸರಿಗೆ ಬಾಡಿ ಕ್ಯಾಮರಾ ಅಳವಡಿಕೆ

ಮಂಗಳೂರು, ಅ.11: ಸಾರ್ವಜನಿಕರ ಮೇಲೆ ಪೊಲೀಸರು ಹರಿ ಹಾಯ್ದು ಹೋಗುವುದು ಅಥವಾ ಪೊಲೀಸರ ಜೊತೆ ಸಾರ್ವಜನಿಕರು ಒರಟಾಗಿ ವರ್ತಿಸುವುದನ್ನು ತಪ್ಪಿಸುವ ಸಲುವಾಗಿ ಮಂಗಳೂರು ನಗರ ಸಂಚಾರ ಪೊಲೀಸರು ‘ಬಾಡಿ ಕ್ಯಾಮರಾ’ ಅಳವಡಿಕೆ ಪ್ರಕ್ರಿಯೆ ಆರಂಭಿಸಿದ್ದಾರೆ. ಅಹಿತಕರ ಘಟನೆಗಳ ಸಂದರ್ಭ ಸತ್ಯಾಸತ್ಯತೆಯನ್ನು ಅರಿಯಲು ಇದು ಸಹಕಾರಿ ಎಂದು ಹೇಳಲಾಗುತ್ತಿದೆ. ವಾಹನಗಳ ತಪಾಸಣೆಯ ವೇಳೆ ಪೊಲೀಸರು ಮತ್ತು ಸಾರ್ವ ಜನಿಕರ ಮಧ್ಯೆ ಮಾತಿನ ಚಕಮಕಿ ನಡೆಯುವುದು ಸಾಮಾನ್ಯವಾಗಿದೆ. ಆವಾಗ ‘ಬಾಡಿ ಕ್ಯಾಮರಾ’ ಸೂಕ್ತ …

Read More »

ಮ್ಯಾನೇಜ್ಮೆಂಟ್ ಕೋಟಾ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಮ್ಯಾನೇಜ್ಮೆಂಟ್ ಕೋಟಾ ಅಡಿ 13 ಸಾವಿರ ಜನ ವಿದ್ಯಾರ್ಥಿಗಳು ಇದ್ದಾರೆ. ಮಾನವೀಯ ಆಧಾರದ ಮೇಲೆ ಅವರಿಗೂ ವಿದ್ಯಾರ್ಥಿ ವೇತನದ ಹಣ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ. ಇದಕ್ಕಾಗಿ 8-9 ಕೋಟಿ ಹಣ ವೆಚ್ಚವಾಗಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ವಿದ್ಯಾರ್ಥಿ ವೇತನ ಬಂದಿಲ್ಲ ಅಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆ ಇಂದು (ಅ.12) ಸಮಾಜ ಕಲ್ಯಾಣ ಇಲಾಖೆ, ಹಾಗೂ ಹಿಂದುಳಿದ ವರ್ಗಗಳ …

Read More »

ಬೆಂಗಳೂರು : ಓದಿನಲ್ಲಿ ಆಸಕ್ತಿ ಇಲ್ಲವೆಂದು ಪತ್ರ ಬರೆದಿಟ್ಟು ಮನೆ ತೊರೆದಿದ್ದ ವಿದ್ಯಾರ್ಥಿಗಳು ಪತ್ತೆ

ಬೆಂಗಳೂರು: ಓದಿನಲ್ಲಿ ಆಸಕ್ತಿ ಇಲ್ಲ, ಕ್ರೀಡೆಯಲ್ಲಿ ಸಾಧನೆ ಮಾಡುತ್ತೇವೆ ಎಂದು ಪತ್ರ ಬರೆದು ಮನೆ ಬಿಟ್ಟು ಹೋಗಿದ್ದ 7 ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸೋಮವಾರ ಪತ್ತೆಯಾಗಿದ್ದಾರೆ. ಪರೀಕ್ಷಿತ್, ಕಿರಣ್ ಮತ್ತು ನಂದನ್ ಎಂಬ ಮಕ್ಕಳು ನಗರದ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದ್ದಾರೆ. ಆನಂದ್ ರಾವ್ ವೃತ್ತದ ಬಳಿ ಸುತ್ತಾಡುತ್ತಿದ್ದ ವಿದ್ಯಾರ್ಥಿಗಳನ್ನ ಪೇಪರ್ ಆಯುವ ವ್ಯಕ್ತಿ ಮಾತಾಡಿಸಿದ್ದಾರೆ. ಆದರೆ ವಿದ್ಯಾರ್ಥಿಗಳು ಮಾತನಾಡದೆ ಓಡಿ ಹೋಗಿದ್ದರಿಂದ ಅನುಮಾನಗೊಂಡ ಪೇಪರ್ ಆಯುವ …

Read More »

ಬಿಎಸ್‌ವೈ-ಸಿದ್ದರಾಮಯ್ಯ ತಡರಾತ್ರಿ ಭೇಟಿ:

ಮೈಸೂರು, ಅ 12: ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪನವರ ಆಪ್ತರ ಮೇಲೆ ಇತ್ತೀಚೆಗೆ ನಡೆದ ಆದಾಯ ತೆರಿಗೆ ದಾಳಿ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಹೊಸ ಬಾಂಬ್ ಸಿಡಿಸುವ ಮೂಲಕ ಚರ್ಚೆಯನ್ನು ಜೀವಂತವಾಗಿರಿಸಿದ್ದಾರೆ. ಉಪ ಚುನಾವಣೆಯ ಸಂದರ್ಭದಲ್ಲಿ ಕುಮಾರಸ್ವಾಮಿಯವರು ನೀಡಿದ ಹೇಳಿಕೆ ಮಹತ್ವವನ್ನು ಪಡೆದುಕೊಂಡಿದ್ದು, ಯಾವ ರಾಜಕೀಯ ಆಯಾಮಗಳಲ್ಲಿ ತಿರುವುಗಳನ್ನು ಪಡೆದುಕೊಳ್ಳಲಿದೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.   ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪನವರು ತಡರಾತ್ರಿ ಭೇಟಿಯಾಗಿ ಮಾತುಕತೆ ನಡೆಸಿದ್ದೇ, …

Read More »

2023 ರ ಚುನಾವಣೆಯಲ್ಲಿ ಸ್ವತಂತ್ರ ಸರ್ಕಾರ ನಡೆಸಲು ನಮ್ಮ ಪಕ್ಷವನ್ನು ಬೆಂಬಲಿಸಿ: ಹೆಚ್ ಡಿಕೆ

ಮೈಸೂರು: ಇಲವಾಲದ ಸುತ್ತಮುತ್ತಲಿನ 52 ಹಳ್ಳಿಗಳಿಗೆ ಕುಡಿಯುವ ‌ನೀರಿನ ಯೋಜನೆ ಅನುಷ್ಠಾನ ಮಾಡಿದ್ದೆ. ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆಗೆ ಹಣ ಕೊಟ್ಟರೂ ಅದನ್ನು ಇನ್ನೂ ಕೂಡ ಈ ಸರ್ಕಾರ ಅನುಷ್ಠಾನ ಮಾಡಿಲ್ಲ. ತೆರಿಗೆ ಹಣವನ್ನು ಸ್ವೇಚ್ಛಾಚಾರವಾಗಿ ಸರ್ಕಾರ ಲೂಟಿ ಮಾಡುತ್ತಿದೆ ವಿನಃ ಜನರಿಗೆ ನೆರವಾಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಮೈಸೂರಿನ ಬೆಳವಾಡಿಯ ಚಾಮುಂಡೇಶ್ವರಿ ನಗರದ ಚಾಮುಂಡೇಶ್ವರಿ ‌ದೇವಸ್ಥಾನವನ್ನು ಉದ್ಘಾಟಿಸಿ, ಮಾತಾನಾಡಿದ ಅವರು, ಕೊರೊನಾದಿಂದ ಮೃತಪಟ್ಟ ಪತಿ ಕಳೆದುಕೊಂಡು …

Read More »

ಜೀವಂತವಿದೆ ಭ್ರೂಣ ಹತ್ಯೆ; ಭ್ರೂಣ ಲಿಂಗ ಪತ್ತೆ, ಹತ್ಯೆಗೆ ಬಂದಿದ್ದ ದಂಪತಿ ಪೊಲೀಸರ ವಶ

ಮಂಡ್ಯ: ಭ್ರೂಣ ಲಿಂಗ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಖಚಿತ ಮಾಹಿತಿ ಆಧರಿಸಿ ಮಂಡ್ಯದ ವಿವೇಕಾನಂದ ಜೋಡಿ ರಸ್ತೆಯಲ್ಲಿರುವ ನಮ್ಮ ಮನೆ ಪಾಲಿ ಕ್ಲಿನಿಕ್ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಧನಂಜಯ್ ದಾಳಿ ಮಾಡಿದ್ದಾರೆ. ಈ ವೇಳೆ ದಂಪತಿ ಭ್ರೂಣ ಲಿಂಗ ಪತ್ತೆಗೆ ಬಂದಿರುವುದಾಗಿ ತಪ್ಪೊಪ್ಪಿಕ್ಕೊಂಡಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದ ದಂಪತಿಗೆ ಈಗಾಗಲೇ ಇಬ್ಬರು ಹೆಣ್ಣು …

Read More »

ಚಂಡಿಕಾ ಯಾಗದಲ್ಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಹುಕ್ಕೇರಿ ಹಿರೇಮಠದ ದಸರಾ ಉತ್ಸವ ಕಾರ್ಯಕ್ರಮದ ನಿಮಿತ್ಯ ಆಯೋಜನೆ ಮಾಡಿದ್ದ ಚಂಡಿಕಾ ಯಾಗದಲ್ಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿಯಾಗಿ ಸರಸ್ವತಿ ಮಹಾಮಂಡಲಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಸರಾ ಉತ್ಸವ ನಮ್ಮ ಸಂಸ್ಕøತಿಯ ಪ್ರತೀಕವಾಗಿದೆ. 9 ದಿನಗಳ ಕಾಲ ನಡೆಯುವ ಭಾವಕ್ಯತೆಯ ಸಂಕೇತವಾಗಿರುವ ಹುಕ್ಕೇರಿ ದಸರಾ ಉತ್ಸವದ ಚಂಡಿಕಾ ಯಾಗದಲ್ಲಿ ಭಾಗಿಯಾಗಿದ್ದು ನನ್ನ ಪುಣ್ಯ. ಹುಕ್ಕೇರಿ …

Read More »

ರಾಜ್ಯ ಸರ್ಕಾರ’ದಿಂದ ‘ಮುಜುರಾಯಿ ಇಲಾಖೆ’ಯ ದೇವಾಲಯಗಳ ‘ಅರ್ಚಕರು, ನೌಕರ’ರಿಗೆ ‘ದಸರಾ’ ಭರ್ಜರಿ ಗಿಫ್ಟ್.!

ಬೆಂಗಳೂರು : ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ಸಚಿವರು ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ರಾಜ್ಯ ಸರ್ಕಾರ ಘೋಷಿಸಿದೆ. ಮುಜುರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಪ್ ‌ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.   …

Read More »