ಸಿಂದಗಿ: ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತ ತನ್ನ ಸಹಚರನೊಂದಿಗೆ ಬಿಜೆಪಿ ಯುವ ಕಾರ್ಯಕರ್ತರನ ಮೇಲೆ ಹಲ್ಲೆ ಮಾಡಿದ ಘಟನೆ ತಾಲೂಕಿನ ರಾಂಪುರ ಪಿ.ಎ. ಗ್ರಾಮದ ಪೆಟ್ರೋಲ್ ಪಂಪ್ ಬಳಿ ಮಂಗಳವಾರ ನಡೆದಿದೆ. ತಾಲೂಕಿನ ನಾಗರಹಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಪ್ರಮೋದ ಬಾಗೇವಾಡಿ ಅವರ ಮೇಲೆ ಬಬಲೇಶ್ವರ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಬಾರದು ಎಂದು ಅವರು …
Read More »Daily Archives: ಅಕ್ಟೋಬರ್ 13, 2021
ಜಮ್ಮು & ಕಾಶ್ಮೀರದಲ್ಲಿ ಭದ್ರತಾಪಡೆಯ ಕಾರ್ಯಾಚರಣೆ : ಐವರು ಉಗ್ರರ ಹತ್ಯೆ
ನವದೆಹಲಿ: ನಿನ್ನೆ (ಮಂಗಳವಾರ) ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಲಷ್ಕರ್-ಎ-ತೊಯ್ಬಾ ಮತ್ತು ರೆಸಿಸ್ಟೆನ್ಸ್ ಫ್ರಂಟ್ ನೊಂದಿಗೆ ಸಂಪರ್ಕ ಹೊಂದಿದ ಐವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಶೋಪಿಯಾನ್ ಜಿಲ್ಲೆಯ ತಲ್ರಾನ್ ಗ್ರಾಮದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಭದ್ರತಾ ಪಡೆಯಿಂದ ಎನ್‌ಕೌಂಟರ್ ನಡೆದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರು-ಸೇನೆಯ ಜಂಟಿ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದ್ದು, ಎನ್ ಕೌಂಟರ್ ನಡೆದಿದೆ. ಇನ್ನೊಂದು ಕಡೆ ದೆಹಲಿ …
Read More »ಇಂಜಿನಿಯರಿಂಗ್ ಪದವಿಯಲ್ಲಿ ಕನ್ನಡ ಅಳವಡಿಕೆ 4 ಕಾಲೇಜುಗಳಿಗೆ ಅನುಮತಿ : ಸಿಎಂ
ಬೆಂಗಳೂರು: ಇಂಜಿಯರಿಂಗ್ ಕಾಲೇಜುಗಳಲ್ಲಿ 4 ವರ್ಷದ ಬಿಎಸ್ಸಿ ಆನರ್ಸ್ ಆರಂಭಿಸಲು ಅನುಮತಿ ಪತ್ರ ನೀಡಲಾಗಿದೆ. ನೂತನ ಶಿಕ್ಷಣ ಪದ್ಧತಿ (NEP) ಅನುಸಾರ ಇಂಜಿನಿಯರಿಂಗ್ ಶಿಕ್ಷಣ ಅನುಷ್ಠಾನ ಮಾಡಲಾಗುವುದು ಎಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ಒಪ್ಪಿಗೆ ನೀಡಲಾಗಿದೆ. ಈ ಸಂಬಂಧ ನಾಲ್ಕು ಕಾಲೇಜುಗಳಿಗೆ ಅನುಮತಿ ಪತ್ರವನ್ನು ನೀಡಲಾಗಿದೆ. ಕನ್ನಡ ಭಾಷೆಯಲ್ಲಿ ಇಂಜಿನಿಯರಿಂಗ್ ಸಿಲಬಸ್ ಬಿಡುಗಡೆ ಮಾಡಿರುವುದು ಹೊಸ …
Read More »100 ಲಕ್ಷ ಕೋಟಿ ರೂ. ಮೊತ್ತದ ‘ಪಿಎಂ ಗತಿ ಶಕ್ತಿ ಯೋಜನೆ’ಗೆ ಇಂದು ಚಾಲನೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗತಿ ಶಕ್ತಿ ಯೋಜನೆಯನ್ನು (PM Gati Shakti Yojana) ಜಾರಿಗೆ ತರಲು ಮುಂದಾಗಿದ್ದು, ಇಂದು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆ ಬರೋಬ್ಬರಿ ₹100 ಲಕ್ಷ ಕೋಟಿ ಮೊತ್ತದ್ದಾಗಿದೆ. ಇನ್ನು ಈ ಯೋಜನೆಯಿಂದ ದೇಶದಲ್ಲಿ ಉದ್ಯೋಗಾವಕಾಶ ಸುಧಾರಿಸಲಿವೆ. ಗತಿ ಶಕ್ತಿ ಯೋಜನೆಯು ದೇಶದ ಮಾಸ್ಟರ್ ಪ್ಲಾನ್ ಮತ್ತು ಮೂಲಸೌಕರ್ಯಕ್ಕೆ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. 100 ಲಕ್ಷ ಕೋಟಿ ರೂಪಾಯಿ ಮೊತ್ತದ ಈ …
Read More »BIG ENCOUNTER ಕಣಿವೆ ನಾಡಿನಲ್ಲಿ 5 ಭಯೋತ್ಪಾದಕರು ಉಡೀಸ್
ನವದೆಹಲಿ: ಲಷ್ಕರ್-ಎ-ತೊಯ್ಬಾ -ರೆಸಿಸ್ಟೆನ್ಸ್ ಫ್ರಂಟ್ ನೊಂದಿಗೆ ಸಂಪರ್ಕ ಹೊಂದಿದ ಒಟ್ಟು ಐದು ಭಯೋತ್ಪಾದಕರು ನಿನ್ನೆ ಜಮ್ಮು & ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಹತ್ಯೆಗೀಡಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ತಲ್ರಾನ್ ಗ್ರಾಮದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಬೆನ್ನಲ್ಲೆ ಉಗ್ರರ ಎನ್‌ಕೌಂಟರ್ ನಡೆದಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರು ಮತ್ತು ಸೇನೆಯ ಜಂಟಿ ಶೋಧ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದು …
Read More »ಉತ್ತರ ಕನ್ನಡ: ಗ್ಯಾಸ್ ಟ್ಯಾಂಕರ್ ಸ್ಫೋಟ; ಸುತ್ತಮುತ್ತ 300-400 ಮೀಟರ್ ವ್ಯಾಪಿಸಿರುವ ಬೆಂಕಿ
ಉತ್ತರ ಕನ್ನಡ: ಇಂದು (ಅಕ್ಟೋಬರ್ 13) ಬೆಳಿಗ್ಗೆ 5.30ರ ಸುಮಾರಿಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದೆ. ಸ್ಪೋಟದಿಂದಾಗಿ ಸುತ್ತಮುತ್ತ 300 ರಿಂದ 400 ಮೀಟರ್ ಬೆಂಕಿ ವ್ಯಾಪಿಸಿದೆ. ಸಾಕಷ್ಟು ದೂರ ವ್ಯಾಪ್ತಿಯಲ್ಲಿ ಹಬ್ಬಿಕೊಂಡಿದ್ದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿಗಳು ಹರಸಾಹಸ ಪಡಬೇಕಾಯಿತು. ಸದ್ಯ 300 ರಿಂದ 400 ಮೀಟರ್ ದೂರಗಳಷ್ಟು ಸ್ಪೋಟದಿಂದ ಏನಾಗಿದೆ ಎನ್ನುವ ಮಾಹಿತಿ ದೊರೆಯದೆ ಅಧಿಕಾರಿಗಳು ಕಂಗಾಲಾಗಿದ್ದಾರೆ.
Read More »