ಬೆಳಗಾವಿ-ರಾಜ್ಯೋತ್ಸವದ ದಿನ ಕರಾಳ ದಿನಾಚರಣೆ ಮಾಡಲು ಅನುಮತಿ ಕೊಡೋದಿಲ್ಲ ಎಂದು ನೇರವಾಗಿ,ಬಹಿರಂಗವಾಗಿ ಹೇಳಿದ ಮೊದಲ ಜಿಲ್ಲಾಧಿಕಾರಿ ಹಿರೇಮಠ ಇದರಲ್ಲಿ ಎರಡು ಮಾತಿಲ್ಲ. ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಬೆಳಗಾವಿಯ ಎಲ್ಲ ಕನ್ನಡ ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರು ಈಬಾರಿ ರಾಜ್ಯೋತ್ಸವದ ದಿನ ಎಂಈಎಸ್ ಗೆ ಕಪ್ಪು ದಿನ ಆಚರಿಸಲು ಅನುಮತಿ ಕೊಡೋದಿಲ್ಲ ಎಂದು ನೇರವಾಗಿ ಹೇಳುವ ಮೂಲಕ ಗಡಿನಾಡಿನ ಹೋರಾಟದಲ್ಲಿ ಹೊಸ ದಾಖಲೆ ಮಾಡಿದ್ದಾರೆ. ಬೆಳಗಾವಿಯಲ್ಲಿ …
Read More »Daily Archives: ಅಕ್ಟೋಬರ್ 15, 2021
ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಇನ್ನಿಲ್ಲ
ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಇಂದು (ಶುಕ್ರವಾರ) ಬೆಳಿಗ್ಗೆ ನಿಧನರಾಗಿದ್ದಾರೆ. ಲೇಖಕರಾಗಿ, ಪ್ರಾಧ್ಯಾಪಕರಾಗಿ, ರಂಗಭೂಮಿ ಕಲಾವಿದರಾಗಿ, ಚಿತ್ರ ನಟರಾಗಿ ಗೋವಿಂದ ರಾವ್ ಗುರುತಿಸಿಕೊಂಡಿದ್ದರು. ಇವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಇನ್ನು ಹುಬ್ಬಳ್ಳಿಯ ಮುಕ್ತಿಧಾಮದಲ್ಲಿ ಬೆಳಗ್ಗೆ 8.30 ಸುಮಾರಿಗೆ ಅಂತ್ಯಕ್ರಿಯೆ ಮಾಡಲಾಗಿದೆ. ಈ ಬಗ್ಗೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ”ಹಿರಿಯ ಲೇಖಕ, ಚಿಂತಕ, ನಟ ಪ್ರೊ.ಜಿ.ಕೆ.ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. …
Read More »ಗಂಗಾವತಿ : ವೈಭವದಿಂದ ಜರುಗಿದ ಹೇಮಗುಡ್ಡದ ಅಂಬಾರಿ ಮೆರವಣಿಗೆ
ಗಂಗಾವತಿ :ನಾಡಹಬ್ಬ ದಸರಾ ಸಕಲ ಜೀವರಾಶಿಗಳಿಗೆ ಒಳಿತನ್ನು ಮಾಡಲಿ ಜಗತ್ತನ್ನು ಕಾಡುತ್ತಿರುವ ಕೊರೋನಾ ಮಹಾಮಾರಿ ಬೇಗನೆ ದೂರವಾಗಲಿ ದುರ್ಗಾಪರಮೇಶ್ವರಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಮಾಜಿ ಸಂಸದ ಎಚ್. ಜಿ .ರಾಮುಲು ಹೇಳಿದರು . ಅವರು ತಾಲ್ಲೂಕಿನ ಸುಕ್ಷೇತ್ರ ಹೇಮಗುಡ್ಡದಲ್ಲಿ ಶರನ್ನವರಾತ್ರಿ ನಿಮಿತ್ತ ದಸರಾ ಆನೆ ಮೇಲೆ ಅಂಬಾರಿ ಮೆರವಣಿಗೆಗೆ ಪೂಜೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು . ನಾಡಹಬ್ಬ ದಸರಾ ಆಚರಣೆ ಮಾಡಿದ್ದು ಮೊದಲು ಕುಮ್ಮಟ ದುರ್ಗದ …
Read More »ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಹಬ್ಬದ ಶುಭಾಶಯ ಕೋರಿದ ಸಿಎಂ
ಬೆಂಗಳೂರು : ದೇಶಾದ್ಯಂತ ಇಂದು ದಸರಾ ಮತ್ತು ವಿಜಯದಶಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇದೇ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಬ್ಬದ ಶುಭಾಶಯ ಕೋರಿದ್ದಾರೆ. ಯಡಿಯೂರಪ್ಪ ಅವರ ನಿವಾಸ ಕಾವೇರಿಗೆ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಶಾಲು ಹೊದಿಸಿ ಸನ್ಮಾನ ಮಾಡುವ ಮೂಲಕ ಹಬ್ಬದ ಶುಭಾಶಯ ತಿಳಿಸಿದ್ದಾರೆ. ದಸರಾ ಮತ್ತು ವಿಜಯದಶಮಿ ಹಬ್ಬ ತಮಗೆ ಶುಭ ತರಲಿ …
Read More »ಸಾಂಸ್ಕೃತಿಕ ಮೈಸೂರಿನಲ್ಲಿಂದು ವಿಜಯದಶಮಿ: ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ ಆರಂಭ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಸಂಭ್ರಮ ಮನೆಮಾಡಿದೆ. ವಿಜಯದಶಮಿ ದಿನವಾದ ಶುಕ್ರವಾರ ಜಂಬೂಸವಾರಿ ನಡೆಯಲಿದೆ. ಅಂಬಾರಿ ಹೊರಲಿರುವ ಆನೆ ಅಭಿಮನ್ಯುವಿನ ಎಡ ಹಾಗೂ ಬಲದಲ್ಲಿ ಕುಮ್ಕಿ ಆನೆಗಳಾದ ಕಾವೇರಿ ಹಾಗೂ ಚೈತ್ರಾ ಆನೆಗಳು ಹೆಜ್ಜೆ ಹಾಕಲಿವೆ. ಒಂದು ತಾಸಿನಲ್ಲಿ ಮೆರವಣಿಗೆ ಸಂಪನ್ನಗೊಳ್ಳಲಿದೆ. ಒಂದು ವಾರದಿಂದ ನಡೆದು ಬಂದಿದ್ದ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ತೆರೆ ಬೀಳಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಸತತ ಎರಡನೇ ವರ್ಷವೂ ದಸರಾ ಮೆರವಣಿಗೆಯನ್ನು ಅರಮನೆ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸದ್ದಿಲ್ಲದೇ ಕೆಲಸ ಶುರು ಮಾಡಿದ ಶ್ರದ್ಧಾ
ಬೆಳಗಾವಿ (ಅಕ್ಟೋಬರ್. 14): ಬೆಳಗಾವಿ ಜಿಲ್ಲೆ ರಾಜ್ಯದಲ್ಲಿ ಕುಟುಂಬ (Belagavi Family Politics) ರಾಜಕೀಯಕ್ಕೆ ಹೆಸರುವಾಸಿಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಜಾರಕಿಹೊಳಿ, ಕತ್ತಿ, ಕೌಜಲಗಿ ಹಾಗೂ ಜೊಲ್ಲೆ ಕುಟುಂಬ ಪಾರುಪತ್ಯ ಸಾಧಿಸಿವೆ. ಈಗ ಈ ಪಟ್ಟಿಗೆ ಅಂಗಡಿ ಹಾಗೂ ಶೆಟ್ಟರ್ ಕುಟುಂಬ ಸೇರ್ಪಡನೆಯಾಗುವ ಸಾಧ್ಯತೆ ಇದೆ. ಸುರೇಶ್ ಅಂಗಡಿ (Late mp Suresh Angadi) ಕುಟುಂಬದ ಶ್ರದ್ಧಾ ಶೆಟ್ಟರ್ (shraddha shetter )ಸಹ ಸಕ್ರಿಯ ರಾಜಕೀಯದತ್ತ ಒಲವು ವ್ಯಕ್ತಪಡಿಸಿದ್ದಾರೆ. ಈ ಹಿಂದೆ …
Read More »ಡಿ.ಕೆ ಶಿವಕುಮಾರ್ ಪರ ಮಾಜಿ ಸಿಎಂ ಕುಮಾರಸ್ವಾಮಿ ಬ್ಯಾಟಿಂಗ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪರ ಮಾಜಿ ಸಿಎಂ ಕುಮಾರಸ್ವಾಮಿ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಡಿ.ಕೆ. ಶಿವಕುಮಾರ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದ ಕುಮಾರಸ್ವಾಮಿ ದಿಢೀರ್ ಸಾಫ್ಟ್ ಆಗಿದ್ದಾರೆ ಎನ್ನಲಾಗಿದೆ. ಉಗ್ರಪ್ಪ, ಸಲೀಂ ಪಿಸುಮಾತು ವಿಡಿಯೋ ಪ್ರಸಾರವಾಗುತ್ತಿದ್ದಂತೆ ಡಿಕೆಎಸ್ ಪರ ಸಾಫ್ಟ್ ಆಗಿರುವ ಕುಮಾರಸ್ವಾಮಿ ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಪಾಪ ಡಿ.ಕೆ ಶಿವಕುಮಾರ್ ಪಕ್ಷ ಕಟ್ಟುತ್ತಿದ್ದಾರೆ’.. ‘ಸಿದ್ದರಾಮಯ್ಯ ಪಟಾಲಂ ಡಿಕೆ …
Read More »ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಸಂಭಾಷಣೆ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಡ್ಯಾಮೇಜ್
ಬೆಂಗಳೂರು: ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಮತ್ತು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ನಡುವಿನ ಡಿ.ಕೆ ಶಿವಕುಮಾರ್ ಬಗೆಗಿನ ಸಂಭಾಷಣೆ ಕೋಲಾಹಲವನ್ನೇ ಎಬ್ಬಿಸಿದೆ. ಈಗ ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಸಂಭಾಷಣೆ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಡ್ಯಾಮೇಜ್ ಮಾಡಿದ್ದಾರೆ. ಸದ್ಯ ಈ ಡ್ಯಾಮೇಜ್ ಕಂಟ್ರೋಲ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹರಸಾಹಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಮುಂದೆ ಸಾಲು ಸಾಲು ಚುನಾವಣೆಗಳು ಎದುರಾಗಲಿವೆ. ಇದೇ ಹೊತ್ತಲ್ಲೇ ಕೆಪಿಸಿಸಿ ಸಾರಥಿ ಬಗ್ಗೆಯೇ …
Read More »