ಹಾವೇರಿ: ಹಾನಗಲ್ ನಲ್ಲಿ ಬಿಜೆಪಿ ಸೋಲನುಭವಿಸಲಿದೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಮುರುಗೇಶ್ ನಿರಾಣಿ, ನೂರಕ್ಕೆ ನೂರರಷ್ಟು ಹಾನಗಲ್ ನಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ನಿರಾಣಿ, ಬಹಷ್ಟು ಸಲ ಇಂಟಲಿಜನ್ಸ್ ರಿಪೋರ್ಟ್ ಸುಳ್ಳಾಗುತ್ತೆ. ಈ ಬಗ್ಗೆ ಸಾಕಷ್ಟು ಉದಾಹರಣೆಗಳಿವೆ. ಹಾನಗಲ್ ಹಾಗೂ ಸಿಂದಗಿ ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು. ಉಪಚುನಾವಣೆಯಲ್ಲಿ ನಾವು ಗೆಲ್ಲಲಿದ್ದೇವೆ ಎಂಬ ವಿಶ್ವಾಸವಿದೆ. ಯಾವುದೇ ವರದಿ …
Read More »Daily Archives: ಅಕ್ಟೋಬರ್ 22, 2021
80 ಟನ್ ಹೆರಾಯಿನ್ ಯಾರದ್ದು ಎಂಬುದು ಕಟೀಲ್ ಉತ್ತರಿಸಲಿ : ಹರಿಪ್ರಸಾದ್
ಬೆಂಗಳೂರು : ಅದಾನಿ ಪೋರ್ಟ್‌ನಲ್ಲಿ ದೊರೆತ ಎಂಬತ್ತು ಟನ್ ಹೆರಾಯಿನ್ ಡೀಲರ್ ಯಾರು ಎಂಬುದರ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಉತ್ತರ ನೀಡಲಿ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಆಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಇಡದ ಅವರು, ಹೆರಾಯಿನ್ ಡೀಲರ್ ಯಾರು ಎಂಬುದರ ಬಗ್ಗೆ ನಿಜವಾದ ಉತ್ತರ ಕೊಟ್ಟರೆ ನಾನು ರಾಜಕೀಯ ಬಿಡುತ್ತೇನೆ ಎಂದು ಸವಾಲು ಹಾಕಿದರು. ಈ ವಿಚಾರ ಬೇರೆಡೆಗೆ ಸೆಳೆಯಲು ಒಂದೆರಡು ಗ್ರಾಂ ಡ್ರಗ್ಸ್ …
Read More »ಚುನಾವಣೆಗಾಗಿ ಬಿಜೆಪಿಯವರು ಚೀಲದಲ್ಲಿ ಹಣ ತುಂಬಿಸಿಕೊಂಡು ಹಂಚುತ್ತಿದ್ದಾರೆ : ಡಿ.ಕೆ ಶಿವಕುಮಾರ್
ಹಾವೇರಿ : ಬಿಜೆಪಿಯವರು ಹಣ ಹಂಚಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಮುಂದಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಹಾವೇರಿ ಜಿಲ್ಲೆಯ ಹುಲ್ಲತ್ತಿ ಗ್ರಾಮದಲ್ಲಿ ಮಾತನಾಡಿದ ಅವರು ಬಿಜೆಪಿಯವರು ಗೋಣಿ ಚೀಲದಲ್ಲಿ ಹಣ ತುಂಬಿಸಿಕೊಂಡು ಹೋಗಿ ಕೊಡುತ್ತಿದ್ದಾರೆ. ಬಿಜೆಪಿಯವರು ಒಂದು ವೋಟ್ಗೆ 2ರಿಂದ 3 ಸಾವಿರ ರೂ. ಕೊಡ್ತಿದ್ದಾರಂತೆ ಸಚಿವರು ಗೋಣಿ ಚೀಲದಲ್ಲಿ ಹಣ ತುಂಬಿಕೊಂಡು ಬಂದಿದ್ದಾರೆ. ಹೆದ್ದಾರಿಯಲ್ಲಿ ನಿಂತು ಹಣ ಹಂಚಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ …
Read More »ಜ್ಯುವೆಲರಿ ಶಾಪ್‌ಗೆ ಕನ್ನ ಹಾಕಿದ ಹೋಟೆಲ್ ಉದ್ಯಮಿಗಳಿಗೆ ಮುಳವಾದ ಕಾರು
ಬೆಂಗಳೂರು, ಅ. 21: ಅವರಿಬ್ಬರೂ ಬಾಲ್ಯದ ಗೆಳೆಯರು. ಕಷ್ಟ ಪಟ್ಟು ಮೇಲೆ ಬರಬೇಕು ಎಂದು ಆಸೆ ಪಟ್ಟು ಹೋಟೆಲ್ ಉದ್ಯಮ ಆರಂಭಿಸಿದ್ದರು. ಇನ್ನೇನು ಯಶಸ್ಸು ಗಳಿಸುವ ಸಮಯದಲ್ಲಿ ಕೊರೊನಾ ಎದುರಾಗಿ ನಷ್ಟ ಅನುಭವಿಸಿದರು. ಮಾಡಿರುವ ಸಾಲ ತೀರಿಸಲು ಕಳ್ಳತನ ಮಾಡಲು ಪ್ಲಾನ್ ರೂಪಿಸಿದರು. ಯೂಟ್ಯೂಬ್ ನಲ್ಲಿ ವಿಡಿಯೋ ನೋಡಿ ಜ್ಯುವೆಲರಿ ಶಾಪ್‌ನಲ್ಲೇ ಕಳ್ಳತನ ಮಾಡಿದ್ದರು. ಅವರು ಮಾಡಿದ್ದ ಸಣ್ಣ ಎಡವಿಟ್ಟಿನಿಂದ ಬಾಲ್ಯದ ಗೆಳೆಯರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇದು ಮಹೇಂದ್ರ, …
Read More »ಕೆಎಂಎಫ್‌ಗೆ ಒಳಪಡುವ ರಾಜ್ಯದಲ್ಲಿರುವ ಎಲ್ಲ ಒಕ್ಕೂಟಗಳಲ್ಲಿ ಏಕರೂಪ ದರ ಮಾಡುವ ಚಿಂತನೆ : ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕೆಎಂಎಫ್‌ಗೆ ಒಳಪಡುವ ಕೆಲವು ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ಹಾಲಿನ ದರದಲ್ಲಿ ವ್ಯತ್ಯಾಸಗಳಿದ್ದು, ರಾಜ್ಯದಲ್ಲಿರುವ ಎಲ್ಲ ಒಕ್ಕೂಟಗಳಲ್ಲಿ ಏಕರೂಪ ದರ ಮಾಡುವ ಚಿಂತನೆ ನಡೆಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟ, ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅನುದಾನದಡಿ ಕೃತಕ ಗರ್ಭಧಾರಣ ಕಾರ್ಯಕರ್ತರಿಗೆ ಕಿಟ್ ವಿತರಣೆ ಮತ್ತು ಒಕ್ಕೂಟದ ಕಲ್ಯಾಣ ಸಂಘದಿಂದ ಫಲಾನುಭವಿಗಳಿಗೆ …
Read More »ಆರ್ಯನ್ ಭೇಟಿ ಮಾಡಿದ ಶಾರುಖ್ ಖಾನ್ ತೆಗೆದುಕೊಂಡ್ರು ಕಠಿಣ ನಿರ್ಧಾರ; ಪರಿಣಾಮ ಯಾರ ಮೇಲೆ?
ಆರ್ಯನ್ ಖಾನ್ ಪ್ರಕರಣ ದಿನ ಕಳೆದಂತೆ ಜಟಿಲವಾಗುತ್ತಲೇ ಇದೆ. ಎನ್ಸಿಬಿ ನಿತ್ಯ ಹೊಸಹೊಸ ಸಾಕ್ಷ್ಯಗಳೊಂದಿಗೆ ಕೋರ್ಟ್ ಮುಂದೆ ಹಾಜರಿ ಹಾಕುತ್ತಿದೆ. ಆರ್ಯನ್ಗಿಂತಲೂ ಬಲವಾಗಿ ಎನ್ಸಿಬಿ ಪರ ವಕೀಲರು ವಾದ ಮಂಡಿಸುತ್ತಿದ್ದಾರೆ. ಶಾರುಖ್ ಖಾನ್ ಕಳೆದ ಅರ್ಧ ತಿಂಗಳಿಂದ ಚಿಂತೆಗೆ ಒಳಗಾಗಿದ್ದಾರೆ. ಆರ್ಯನ್ ಖಾನ್ ಬಂಧನದ ನಂತರದಲ್ಲಿ ಅವರು ಸಂಪೂರ್ಣವಾಗಿ ಚಿಂತೆಗೆ ಒಳಗಾಗಿದ್ದಾರೆ. ಆರ್ಯನ್ ಖಾನ್ ಅವರನ್ನು ಹೇಗೆ ಜೈಲಿನಿಂದ ಹೊರಗೆ ತರಬೇಕು ಎನ್ನುವ ಚಿಂತೆ ಬಿಟ್ಟೂ ಬಿಡದೇ ಕಾಡುತ್ತಿದೆ. ಅವರು ಸಾರ್ವಜನಿಕವಾಗಿ …
Read More »ಅಂಬಾನಿ’, ‘ಆರ್‌ಎಸ್‌ಎಸ್-ಸಂಬಂಧಿತ ವ್ಯಕ್ತಿ’ಯಿಂದ ನನಗೆ 300 ಕೋಟಿ ರೂ. ಲಂಚದ ಆಮಿಷ ಒಡ್ಡಲಾಗಿತ್ತು: ಸತ್ಯಪಾಲ್ ಮಲಿಕ್
ನವದೆಹಲಿ: ತಾವು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ವೇಳೆ “ಅಂಬಾನಿ” ಮತ್ತು “ಆರ್ ಎಸ್‌ಎಸ್-ಸಂಬಂಧಿತ ವ್ಯಕ್ತಿ”ಗೆ ಸೇರಿದ ಎರಡು ಕಡತಗಳನ್ನು ಪಾಸ್ ಮಾಡಿದರೆ 300 ಕೋಟಿ ರೂಪಾಯಿ ಲಂಚ ನೀಡುವುದಾಗಿ ಹೇಳಿದ್ದರು. ಆದರೆ ನಾನು ಆ ಡೀಲ್ ರದ್ದುಗೊಳಿಸಿದೆ ಎಂದು ಕಣಿವೆ ರಾಜ್ಯದ ಮಾಜಿ ರಾಜ್ಯಪಾಲ ಹಾಗೂ ಹಾಲಿ ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಗುರುವಾರ ಹೇಳಿದ್ದಾರೆ. ಡೀಲ್ ಮತ್ತು ಭ್ರಷ್ಟಾಚಾರದಲ್ಲಿ ರಾಜಿ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದಿರುವ ಮಲಿಕ್ ಅವರು, ತಮ್ಮ …
Read More »ಗೂಂಡಾಗಿರಿ ಸಮರ್ಥನೆ ವಿರೋಧಿಸಿ ಪ್ರತಿಭಟನೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿರುವುದನ್ನು ವಿರೋಧಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ಮೈಸೂರು ಬ್ಯಾಂಕ್ ವೃತ್ತದಲ್ಲಿ ವಾಹನಗಳ ಸಂಚಾರ ತಡೆದು ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದ ಪ್ರತಿಭಟನಕಾರರು, ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ‘ಮಂಗಳೂರಿನ ಮತೀಯ ಗೂಂಡಾಗಿರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಸಂವಿಧಾನಕ್ಕೆ ವಿರುದ್ಧವಾಗಿದೆ. ಈ ಹೇಳಿಕೆಯನ್ನು ಹಿಂದಕ್ಕೆ ಪಡೆದು ಕ್ಷಮೆ ಯಾಚಿಸಬೇಕು’ ಎಂದು ಆಗ್ರಹಿಸಿದರು. ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ಮಾತನಾಡಿ, …
Read More »ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ: ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ
ಧಾರವಾಡ: ಧಾರವಾಡ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಅಕ್ಟೋಬರ್ 24 ರಂದು ಮಧ್ಯಾಹ್ನ 12 ರಿಂದ 1.30 ಗಂಟೆಯ ವರೆಗೆ ಧಾರವಾಡ ನಗರದ ವಿವಿಧ 19 ಶಾಲಾ ಹಾಗೂ ಕಾಲೇಜುಗಳಲ್ಲಿ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಲಾಗುತ್ತಿದೆ. ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ನಾಲ್ಕು (4) ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಕೋವಿಡ್-19 ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ಅಭ್ಯರ್ಥಿಗಳು ಮಾಸ್ಕ್ ಧರಿಸಿ, …
Read More »