ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಒಂದು ವಾರ ಹಮ್ಮಿಕೊಂಡಿರುವ ‘ಕನ್ನಡಕ್ಕಾಗಿ ನಾವು’ ವಿಶೇಷ ಅಭಿಯಾನದ ಭಾಗವಾಗಿ ನಗರದ ವಿವಿಧೆಡೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ‘ಮಾತಾಡ್ ಮಾತಾಡ್ ಕನ್ನಡ’ ಘೋಷವಾಕ್ಯದಡಿ ಕಾರ್ಯಕ್ರಮಗಳು ನಡೆಯಲಿವೆ. ಮೈಸೂರು, ಶಿವಮೊಗ್ಗ, ಕಲಬುರಗಿ ಹಾಗೂ ದಾವಣಗೆರೆ ರಂಗಾಯಣ, ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿವೆ. ಅ.24ರಂದು (ಭಾನುವಾರ) ಬೆಳಿಗ್ಗೆ 10ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ‘ಪರ್ವ’ ನಾಟಕ …
Read More »Daily Archives: ಅಕ್ಟೋಬರ್ 24, 2021
ಕಿತ್ತೂರು ರಾಣಿ ಚನ್ನಮ್ಮನಿಂದಾಗಿ ಅಧಿಕಾರ ಹೋದರೆ ಸಂತಸಪಡುವೆ: ಸಿ.ಎಂ ಬೊಮ್ಮಾಯಿ
ಬೆಳಗಾವಿ: ‘ಕಿತ್ತೂರು ರಾಣಿ ಚನ್ನಮ್ಮನ ಸಲುವಾಗಿ ಯಾವುದೇ ಮೂಢನಂಬಿಕೆ ನನಗೆ ಅಡ್ಡಬರುವುದಿಲ್ಲ. ಚನ್ನಮ್ಮನ ಸಲುವಾಗಿ ಅಧಿಕಾರ ಹೋದರೆ ಬಹಳ ಸಂತೋಷಪಡುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಜಿಲ್ಲೆಯ ಕಿತ್ತೂರಿನಲ್ಲಿ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ಕಿತ್ತೂರಿಗೆ ಬಂದ ಮುಖ್ಯಮಂತ್ರಿ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯಕ್ಕೆ ಸಡ್ಡು ಹೊಡೆದಿದ್ದೀರಿ’ ಎಂಬ ಪ್ರಶ್ನೆಗೆ, ‘ಚಾಮರಾಜನಗರಕ್ಕೆ ಹೋಗಬೇಡ ಎಂದಿದ್ದರು ಹೋಗಿದ್ದೆ. ಕಿತ್ತೂರಿಗೆ ಬರಬೇಡ ಎಂದಿದ್ದರು ಬಂದಿದ್ದೇನೆ. ಹಿಂದೆ ಕಾಕತಾಳೀಯವಾಗಿ …
Read More »ಕಲ್ಲಿದ್ದಲು ಆಮದು ನಿಲ್ಲಿಸಲು ತೀರ್ಮಾನ: ಸಚಿವ ಪ್ರಲ್ಹಾದ ಜೋಶಿ
ಬೆಳಗಾವಿ: ‘ದೇಶದಲ್ಲಿ ಕಲ್ಲಿದ್ದಲು ಕೊರತೆ ಆಗಿದ್ದು ನಿಜ. ಇದನ್ನು ನಾವು ಅವಕಾಶವಾಗಿ ಬಳಸಿಕೊಂಡಿದ್ದೇವೆ. ದೇಶದಲ್ಲಿ ಲಭ್ಯವಿರುವ ಕಲ್ಲಿದ್ದಲನ್ನೇ ಅಪಾರ ಪ್ರಮಾಣದಲ್ಲಿ ಪೂರೈಸಲಾಗುತ್ತಿದೆ’ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು. ಕಿತ್ತೂರಿನಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ‘ತೀವ್ರ ಮಳೆ ಹಾಗೂ ಕಲ್ಲಿದ್ದಲಿನ ಆಮದು ದರ ಹೆಚ್ಚಾಗಿದ್ದಕ್ಕೆ ದೇಶದಲ್ಲಿ ಕಲ್ಲಿದ್ದಲು ಕೊರತೆ ಆಗಿತ್ತು. ಸ್ವದೇಶಿ ಕಲ್ಲಿದ್ದಲನ್ನೆ ಅಪಾರ ಪ್ರಮಾಣದಲ್ಲಿ ಒದಗಿಸಲಾಗುತ್ತಿದೆ. ಇದರಿಂದಾಗಿ ಕಲ್ಲಿದ್ದಲು ಆಮದನ್ನು …
Read More »ಕುಮಾರಸ್ವಾಮಿ ಬ್ರದರ್, ಬ್ರದರ್ ಅಂತಾನೇ ಕತ್ತು ಕೊಯ್ಯುತ್ತಾರೆ, ನಮ್ಮ ನಾಯಕ ಸಿದ್ಧರಾಮಯ್ಯ ಹುಲಿ ಇದ್ದಂಗೆ – ಶಾಸಕ ಜಮೀರ್ ಅಹ್ಮಾದ್ ಕಿಡಿ
ಕಲಬುರ್ಗಿ: ಕುಮಾರಸ್ವಾಮಿ ( HD Kumaraswamy ) ಬ್ರದರ್, ಬ್ರದರ್ ಅಂತಾನೇ ಕತ್ತು ಕೊಯ್ಯುತ್ತಾರೆ. ಕುಮಾರಸ್ವಾಮಿ ಯಾವತ್ತೂ ಯಾವುದೇ ಲಾಭ ಇಲ್ಲದೇ ಯಾವುದೇ ಕೆಲಸವನ್ನು ಮಾಡೋದಿಲ್ಲ. ಕುಮಾರಸ್ವಾಮಿ ಹಣಧಾಹಕ್ಕಾಗಿ ಅಲ್ಪಸಂಖ್ಯಾತರನ್ನು ಬಲಿಕೊಡುತ್ತಿದ್ದಾರೆ. ಬಸವಕಲ್ಯಾಣದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಕೊಟ್ಟಿದ್ದೆ 10 ಕೋಟಿ ಹಣ ಪಡೆದು ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ( MLA Zameer Ahmed ) ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತಂತೆ ಸಿಂದಗಿ ಪಟ್ಟಣದಲ್ಲಿ ಇಂದು ಸುದ್ದಿಗಾರರೊಂದಿಗೆ …
Read More »ವಿಜಯಾನಂದ ಚಿತ್ರ ಕುರಿತು ಕುತೂಹಲಕಾರಿ ವಿಚಾರಗಳನ್ನು ಹಂಚಿಕೊಂಡ ಡಾ. ವಿಜಯ ಸಂಕೇಶ್ವರ
ಹುಬ್ಬಳ್ಳಿ: ವಿಜಯಾನಂದ ಸಿನಿಮಾ ಬಿಡುಗಡೆಯಾದ ಬಳಿಕ ಕನ್ನಡದಲ್ಲೂ ಹಾಗೂ ಬೇರೆ ಭಾಷೆಗಳಲ್ಲೂ ಸಿನಿಮಾ ಮಾಡುತ್ತೇವೆ. ಮುಂಬರುವ ಸಿನಿಮಾಗಳ ಬಜೆಟ್ ಖಂಡಿತವಾಗಿಯೂ ದೊಡ್ಡದಿರುತ್ತದೆ. ಸಿನಿಮಾ ಇಂಡಸ್ಟ್ರಿಗೆ ಪರಿಚಿತರಿಲ್ಲದವರನ್ನು ಪರಿಚಯಸಬೇಕು ಅನ್ನೋದೆ ನಮ್ಮ ಸಂಸ್ಥೆಯ ಗುರಿ ಎಂದು ವಿಆರ್ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಮತ್ತು ಪದ್ಮಶ್ರೀ ಪುರಸ್ಕೃತ ಡಾ. ವಿಜಯ ಸಂಕೇಶ್ವರ ಅವರು ಹೇಳಿದರು. ಹುಬ್ಬಳ್ಳಿ ಸಮೀಪದ ವರೂರಿನ ವಿಆರ್ಎಲ್ ಕ್ಯಾಂಪಸ್ನಲ್ಲಿ ತಮ್ಮ ಜೀವನಾಧಾರಿತ ‘ವಿಜಯಾನಂದ’ ಸಿನಿಮಾದ ಮುಹೂರ್ತ ಕಾರ್ಯಕ್ರಮದಲ್ಲಿಂದು ಭಾಗವಹಿಸಿ ಮಾತನಾಡಿದರು. ಪ್ರಾಯಶಃ ಹುಬ್ಬಳ್ಳಿಯಲ್ಲಿ …
Read More »ಕಂಬಳಿ ಹೊದ್ದುಕೊಳ್ಳುವ ಯೋಗ್ಯತೆ ಬಗ್ಗೆ ವಿವರಿಸಿದ ಸಿಎಂ ಬಸವರಾಜ ಬೊಮ್ಮಾಯಿ!
ವಿಜಯಪುರ, ಅ. 24: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಂಬಳಿ ಹೊದ್ದುಕೊಳ್ಳುವ ಯೋಗ್ಯತೆ ಇಲ್ಲವಾ? ಯಾಕೆಂದರೆ ಹೇಳುವ ಮೂಲಕ ಪರೋಕ್ಷ ವಾಗ್ದಾಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಉಪ ಚುನಾವಣೆ ಅತ್ಯಂತ ಪ್ರತಿಷ್ಠೆಯ ವಿಷಯವಾಗಿದೆ. ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ಬಳಿಕ ಎದುರಾಗಿರುವ ಸವಾಲು ಎದುರಿಸಲು ಉಪ ಸಮರ ನಡೆಯುತ್ತಿರುವ ಎರಡೂ ಕ್ಷೇತ್ರಗಳಲ್ಲಿ ಸಿಎಂ ಬೊಮ್ಮಾಯಿ ಮಿಂಚಿನ ಸಂಚಾರ ನಡೆಸಿ ಪ್ರಚಾರ ಮಾಡುತ್ತಿದ್ದಾರೆ. ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ …
Read More »ಮಾಹಿತಿ ಹಕ್ಕು ಅರ್ಜಿದಾರರಿಗೆ ಮಾಹಿತಿನೀಡದ ಅವರಿಗೆ ಐದು ಸಾವಿರ ರೂ.ಗಳ ದಂಡ ವಿಧಿಸಿ ಆದೇಶ
ಸಾಗರ: ಮಾಹಿತಿ ಹಕ್ಕು ಅರ್ಜಿದಾರರಿಗೆ ಮಾಹಿತಿ ನೀಡದಿರುವುದು ಮತ್ತು ವಿಚಾರಣೆಗೆ ಖುದ್ದು ಹಾಜರಾಗಲು ನೀಡಿದ ಸೂಚನೆಯನ್ನೂ ಉಲ್ಲಂಘಿಸಿರುವುದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಎಸ್.ಎಲ್.ಪಾಟೀಲ್ ಸಾಗರ ಉಪವಿಭಾಗದ ಸಹಾಯಕ ಆಯುಕ್ತ ಡಾ. ನಾಗರಾಜ್ ಎಲ್. ಅವರಿಗೆ ಐದು ಸಾವಿರ ರೂ.ಗಳ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಕೆಳದಿ ರಸ್ತೆಯ ರಾಜಕುಮಾರ ಎಂಬುವವರು 2020ರ ಮಾರ್ಚ್‌ನಲ್ಲಿ ಮಾಹಿತಿ ಹಕ್ಕು ಅರ್ಜಿ ಹಾಕಿ, ಆನಂದಪುರ ಹೋಬಳಿಯ ಮಲಂದೂರು ಗ್ರಾಮದ ಸರ್ವೆ ನಂಬರ್ ಒಂದಕ್ಕೆ …
Read More »ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ
ವಿಜಯಪುರ: ಜಾತಿ ಮೀಸಲು ಕಲ್ಪಿಸುವ ಕುರಿತು ಹಲವು ಸಮುದಾಯಗಳಿಂದ ಬೇಡಿಕೆಗಳು ಬಂದಿವೆ. ಈ ಬಗ್ಗೆ ವರದಿ ತರಿಸಿಕೊಂಡು ನನ್ನದೇ ಅವಧಿಯಲ್ಲಿ ಕಾನೂನು ಚೌಕಟ್ಟಿನಲ್ಲಿ ಮೀಸಲು ಸೌಲಭ್ಯ ಕಲ್ಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಭಾನುವಾರ ಸಿಂದಗಿ ವಿಧಾನಸಭೆ ಉಪ ಚುನಾವಣೆ ಪ್ರಚಾರಾರ್ಥ ಹಂದಿಗನೂರು ಗ್ರಾಮದಲ್ಲಿ ರೋಡ್ ಶೋನಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ರಮೇಶ ಭೂಸನೂರ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಬಾರಿಯೂ ರಾಜ್ಯದಲ್ಲಿ ನಮ್ಮದೇ ಸರ್ಕಾರ ಅಧಿಕಾರಕ್ಕೆ …
Read More »ಪಂಚಮಸಾಲಿಗಳ ಒತ್ತಡಕ್ಕೆ ಸರ್ಕಾರ ಮಣಿಯಬಾರದು: ಸಿ.ಎಸ್ ದ್ವಾರಕಾನಾಥ್
ಬೆಂಗಳೂರು: ಹಿಂದುಳಿದ ವರ್ಗಗಳ ಪ್ರವರ್ಗ 2(ಎ)ಗೆ ಸೇರಿಸಬೇಕೆಂಬ ಬಲಿಷ್ಠ ವೀರಶೈವ ಪಂಚಮಸಾಲಿ ಸಮುದಾಯದ ಒತ್ತಡಕ್ಕೆ ಸರ್ಕಾರ ಮಣಿಯಬಾರದೆಂದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ ಎಸ್ ದ್ವಾರಕನಾಥ್ ಎಚ್ಚರಿಸಿದ್ದಾರೆ. ಇಂದು ಕುಮಾರ ಕೃಪ ಅತಿಥಿ ಗೃಹ ದಲ್ಲಿ ರಾಜ್ಯದ ಅತಿ ಹಿಂದುಳಿದ ಜನಾಂಗದ ಮಠಾಧೀಶರನ್ನ ಒಳಗೊಂಡ ಸಭೆಯಲ್ಲಿ ಮಾತನಾಡಿದರು. ‘ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ’, ಪಂಚಮಸಾಲಿಗಳ ಮೀಸಲು ಹೋರಾಟವನ್ನು ವಿರೋಧಿಸಿ ಅತಿ ಹಿಂದುಳಿದ ವರ್ಗಗಳ …
Read More »ಬೆಳಗಾವಿ ಲಾಡ್ಜ್ ಗಳಲ್ಲಿ ಅಕ್ರಮ ಚಟುವಟಿಕೆ ಎಲ್ಲಕಡೆ ತಪಾಸಣೆ
ಬೆಳಗಾವಿ – ನಿನ್ನೆ ರಾತ್ರಿ ಬೆಳಗಾವಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ 100 ಕ್ಕೂ ಹೆಚ್ಚು ಲಾಡ್ಜ್ ಗಳನ್ನು ಪೊಲೀಸರು ಅನಿರೀಕ್ಷಿತವಾಗಿ ಪರಿಶೀಲನೆ ನಡೆಸಿದ್ದಾರೆ. ಲಾಡ್ಜ್ ಗಳಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಕಡೆ ತಪಾಸಣೆ ಶುರುಮಾಡಿದ್ದು, ಇದು ಮುಂದುವರಿಯುವುದಾಗಿ ತಿಳಿಸಿದ್ದಾರೆ. ಕಡ್ಡಾಯವಾಗಿ ಸಿಸಿಟಿವ್ಹಿ ಕ್ಯಾಮೆರಾ ಅಳವಡಿಸಲು, ಕಡ್ಡಾಯವಾಗಿ ಗ್ರಾಹಕರ ಗುರುತಿನ ಚೀಟಿ ಪಡೆಯಲು, ಕಡ್ಡಾಯವಾಗಿ ರೆಜಿಸ್ಟರ್ ನಿರ್ವಹಣೆ ಮಾಡಲು, ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಹತ್ತಿರದ ಠಾಣೆಗೆ ಮಾಹಿತಿ ನೀಡಲು …
Read More »