ಬೆಂಗಳೂರು: ಕೋವಿಡ್ ಕಾರಣದಿಂದ ಮುಚ್ಚಲಾಗಿದ್ದ 1ರಿಂದ 5ನೇ ತರಗತಿ ಶಾಲೆಗಳು ನಾಳೆಯಿಂದ ರಾಜ್ಯಾದ್ಯಂತ ಶಾಲೆ ಆರಂಭವಾಗುತ್ತಿವೆ. ಸದ್ಯ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದಿದ್ದು, ಭೌತಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಾಳೆ ಮಕ್ಕಳನ್ನ ಶಾಲೆಗೆ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಇನ್ನು ಕೆಲವು ಕೋವಿಡ್ ನಿಯಮದಂತೆ ತರಗತಿಗಳು ಆರಂಭವಾಗಲಿವೆ. ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಅವಕಾಶ ಸರ್ಕಾರ ಶಾಲೆಗಳಿಗೆ ಅವಕಾಶ ಕೊಟ್ಟಿದೆ. ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ಶಾಲೆಗಳು ತೆರೆಯಬೇಕು. …
Read More »Daily Archives: ಅಕ್ಟೋಬರ್ 24, 2021
ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ
ವಿಜಯಪುರ: ಡಾ.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಹಾಗೂ ಜಗಜೀವನರಾಂ ಪ್ರಧಾನಿಯಾಗುವ ಅವಕಾಶ ತಪ್ಪಿಸಿದ ದಲಿತ ವಿರೋಧಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತದಾರರಿಗೆ ಮನವಿ ಮಾಡಿದರು. ಭಾನುವಾರ ಸಿಂದಗಿ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಕನ್ನೋಳಿ, ಕೊಕಟನೂರ, ಹಂದಿಗನೂರು ಗ್ರಾಮಗಳಲ್ಲಿ ರೋಡ್ ಶೋನಲ್ಲಿ ಮಾತನಾಡಿದ ಅವರು, ಸುಳ್ಳು ಬಿತ್ತುವ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಮೂಲಕ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ …
Read More »ಹೃದಯ ವಿದ್ರಾವಕ ಘಟನೆ: ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಕಲಬುರಗಿ: ಮೂರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಳಂದ ತಾಲ್ಲೂಕಿನ ಮಾಡ್ಯಾಳ ಗ್ರಾಮದಲ್ಲಿ ನಡೆದಿದೆ. ಈ ಆತ್ಮಹತ್ಯೆ ಕೇಸ್ನಲ್ಲಿ ತಾಯಿ, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಓರ್ವ ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಬಚಾವ್ ಆಗಿದೆ. ತಾಯಿ ಲಕ್ಷ್ಮಿ ಏಳಕೆ (28), ಮಕ್ಕಳಾದ ಗೌರಮ್ಮ (6), ಸಾವಿತ್ರಿ (1) ಮೃತ ದುರ್ದೈವಿಗಳು. ಇನ್ನೋರ್ವ ಬಾಲಕಿಯನ್ನ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೂರು ಜನ ಹೆಣ್ಣು ಮಕ್ಕಳಿರುವ ಕಾರಣಕ್ಕೆ ಗಂಡ, ಗಂಡನ …
Read More »ಮೆಟ್ರೋ ಕಾಮಗಾರಿ ವೇಳೆ ಅರ್ಧಕ್ಕೆ ತುಂಡಾಗಿ ಬಿದ್ದ ಬೃಹತ್ ಕ್ರೇನ್.. ತಪ್ಪಿದ ಭಾರೀ ದುರಂತ
ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ಅವಾಂತರ ನಡೆದಿದ್ದು, ಮೆಟ್ರೋ ಫೇಸ್ -2 ಕಾಮಗಾರಿ ವೇಳೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಬಹು ದೊಡ್ಡ ಕ್ರೇನ್ ನಲವತ್ತು ಅಡಿ ಎತ್ತರದಿಂದ ಕೆಳಗೆ ಬಿದ್ದ ಘಟನೆ ಸಿಲ್ಕ್ ಬೋರ್ಡ್ ಬಳಿ ನಡೆದಿದೆ. ಸಿಲ್ಕ್ ಬೋರ್ಡ್ ಟು ಕೆ ಆರ್ ಪುರಂ ಮಾರ್ಗವಾಗಿ ನಡೆಯುತ್ತಿರುವ ಕಾಮಗಾರಿ ಸ್ಥಳದಲ್ಲಿ ಮೆಟ್ರೋ ಸೆಗ್ಮೆಂಟ್ಸ್ ಜೋಡಿಸುವ ಕಾರ್ಯ ನಡೆಯುತ್ತಿದ್ದು, ಈ ವೇಳೆ ಮೆಷಿನ್ ಅರ್ಧಕ್ಕೆ ಕಟ್ ಆದ ಪರಿಣಾಮ …
Read More »ಮಕ್ಕಳ ಜೊತೆ ಶಿಲ್ಪಾ ಶೆಟ್ಟಿ ಸುತ್ತಾಟ- ರಾಜ್ ಕುಂದ್ರಾ ಮಿಸ್ಸಿಂಗ್
ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ಬಿಡುಗಡೆಯಾಗುತ್ತಿದ್ದಂತೆ ಸೋಶಿಯಲ್ ಮೀಡಿಯಾ ಸೇರಿದಂತೆ ತಮ್ಮ ದಿನ ನಿತ್ಯದ ಚಟುವಟಿಕೆಯಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಇದೀಗ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಆದರೆ ರಾಜ್ ಕುಂದ್ರಾ ಕಾಣಿಸದೇ ಇರುವುದರ ಕುರಿತಾಗಿ ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಈ ವೀಕೆಂಡ್‌ನಲ್ಲಿ ಶಿಲ್ಪಾ ಶೆಟ್ಟಿ ತಮ್ಮ ಮಕ್ಕಳಾದ ವಿಯಾನ್, ಸಮಿಷಾ ಹಾಗೂ ತಾಯಿ ಸುನಂದಾ ಶೆಟ್ಟಿ ಜೊತೆಯಲ್ಲಿ ಆಲಿಬಾಗ್‍ಗೆ ಹೋಗಿದ್ದಾರೆ. ಶಿಲ್ಪಾ ಶೆಟ್ಟಿ ತೆರಳುವಾಗ ನಗುಮೊಗದಿಂದಲೇ …
Read More »ಚಿಕ್ಕಬಳ್ಳಾಪುರ: ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ
ಚಿಕ್ಕಬಳ್ಳಾಪುರ: ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದ ರಸ್ತೆ ದಾಟಲು ಹೋಗಿ ಕೊಚ್ಚಿ ಹೋದ ಯುವಕ ಪ್ರಾಣಾಪಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಕಮ್ಮಗುಟ್ಟನಹಳ್ಳಿ ವ್ಯಾಪ್ತಿಯ ನವಿಲುಗುರ್ಕಿಯಲ್ಲಿ ಈ ಘಟನೆ ನಡೆದಿದೆ. ಭಾರೀ ಮಳೆ ಕಾರಣ ರಸ್ತೆ ಮೇಲೆ ರಭಸವಾಗಿ ನೀರು ಹರಿಯುತ್ತಿತ್ತು. ಈ ವೇಳೆ ಬೈಕ್ ಮೂಲಕ ಯುವಕ ರಸ್ತೆ ದಾಟಲು ಮುಂದಾಗಿದ್ದು ಈ ವೇಳೆ ಕೊಚ್ಚಿ ಹೋಗುತ್ತಿದ್ದ ಯುವಕನನ್ನ ಸ್ಥಳೀಯರು ಟ್ರ್ಯಾಕ್ಟರ್ ಮೂಲಕ ರಕ್ಷಣೆ ಮಾಡಿದ್ದಾರೆ. ಮಳೆಗೆ ತುಂಬಿ ಹರಿಯುತ್ತಿದ್ದ ರಸ್ತೆಯಲ್ಲಿ …
Read More »ಮಕ್ಕಳ ಆಟದ ಪಾರ್ಕ್ ಮಳೆ ನೀರು ನಿಂತು ಚಿಕ್ಕ ಕೆರೆಯಂತಾಗಿದೆ.
ಗುಡಿಬಂಡೆ: ಪಟ್ಟಣದ ಹನ್ನೊಂದನೇ ವಾರ್ಡ್‌ನ ಮಕ್ಕಳ ಆಟದ ಪಾರ್ಕ್ ಮಳೆ ನೀರು ನಿಂತು ಚಿಕ್ಕ ಕೆರೆಯಂತಾಗಿದೆ. ಪಟ್ಟಣದಲ್ಲಿ ಒಟ್ಟು 7 ಪಾರ್ಕ್‌ಗಳಿದ್ದು, ಅವುಗಳಲ್ಲಿ ನಾರೆಪ್ಪ ಬಡಾವಣೆಯ ಪಾರ್ಕ್‌ನ ಅಭಿವೃದ್ಧಿಗಾಗಿ ಒಂದಷ್ಟು ಹಣವನ್ನು ವ್ಯಯ ಮಾಡಿ ಅಭಿವೃದ್ಧಿ ಮಾಡಿದ್ದರು, ನಂತರ ಇನ್ನು ಹೆಚ್ಚಿನ ಅಭಿವೃದ್ಧಿಗಾಗಿ 2016-17ನೇ ಸಾಲಿನಲ್ಲಿ 14ನೇ ಹಣಕಾಸು ಯೋಜನೆಯಲ್ಲಿ ಸುಮಾರು 7.82 ಲಕ್ಷ ವೆಚ್ಚ ಮಾಡಿ ಪಾರ್ಕ್‌ಗೆ ಗೇಟ್ ಹಾಗೂ ಉಳಿಕೆ ಭಾಗದ ಕಾಂಪೌಂಡ್ ನಿರ್ಮಾಣಕ್ಕೆ ಖರ್ಚು ಮಾಡಿ ಅಭಿವೃದ್ದಿ …
Read More »ಬುರುಡೆ ಬೊಮ್ಮಾಯಿ..ಕೊರೊನಾ ವೇಳೆ ಜನ ಬದುಕಿದ್ದು ಅನ್ನಭಾಗ್ಯದಿಂದ ನಿಮ್ಮಿಂದ ಅಲ್ಲ: Siddaramaiah ತಿರುಗೇಟು
ಬೆಂಗಳೂರು : ಬುರುಡೆ ರಾಮಯ್ಯ ಎಂದು ಟ್ವೀಟ್ ಮಾಡಿ ರಾಜ್ಯದ ಪ್ರತಿಯೊಬ್ಬ ಪ್ರಜೆಯ ತಲೆಯ ಮೇಲೂ 44 ಸಾವಿರಕ್ಕೂ ಅಧಿಕ ಸಾಲದ ಹೊರೆ ಹೇರಿದ್ದೀರಿ ಎಂದು ಟ್ವೀಟ್ ಮಾಡಿದ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಅವರು ಶನಿವಾರ ”ಬುರುಡೆ ಬೊಮ್ಮಾಯಿ” ಎನ್ನುವ ಟ್ಯಾಗ್ ಬಳಸಿಕೊಂಡು ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಮಾಡಿರುವ ಸರಣಿ ಟ್ವೀಟ್ ಗಳು ಹೀಗಿವೆ ”ಬಿಜೆಪಿ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ ಈಗಿನ ಸಾಲ ರೂ.4,57,899 ಕೋಟಿ. 2020-21 ರಲ್ಲಿಯೇ …
Read More »ಕಿತ್ತೂರು ಉತ್ಸವದಲ್ಲಿ ಸಿಎಂ ಮಹತ್ವದ ಘೋಷಣೆ: ಮುಂಬೈ ಕರ್ನಾಟಕಕ್ಕೆ ‘ಕಿತ್ತೂರು ಕರ್ನಾಟಕ’ ಎಂದು ಮರುನಾಮಕರಣ
ಬೆಳಗಾವಿ: ಮುಂದಿನ ವರ್ಷದಿಂದ ರಾಜ್ಯಮಟ್ಟದಲ್ಲಿ ಕಿತ್ತೂರು ಉತ್ಸವ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆಯುತ್ತಿರುವ ಕಿತ್ತೂರು ಉತ್ಸವದಲ್ಲಿ ಅವರು ಮಾತನಾಡಿ, ಒಂದು ತಿಂಗಳ ಕಾಲ ಕಿತ್ತೂರು ಜ್ಯೋತಿ ರಾಜ್ಯದಲ್ಲಿ ಸಂಚರಿಸಲು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಮರು ನಾಮಕರಣ ಮಾಡುವ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆಸಿ ನಿರ್ಣಯ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
Read More »ಶಿಕ್ಷಕರಿಗೆ ದೀಪಾವಳಿ ಗಿಫ್ಟ್: ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ -ಟ್ರಾನ್ಸ್ಫರ್ ನಿರೀಕ್ಷೆಯಲ್ಲಿದ್ದವರಿಗೆ ಕೊನೆಗೂ ಸಿಹಿ ಸುದ್ದಿ
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ನಾಳೆಯಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. 2022ರ ಫೆಬ್ರವರಿ 26 ರವರೆಗೂ ವರ್ಗಾವಣೆ ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ ಅರ್ಜಿ ಸಲ್ಲಿಸಿದ 72,000 ಶಿಕ್ಷಕರಿಗೆ ವರ್ಗಾವಣೆ ಭಾಗ್ಯ ಸಿಗಲಿದೆ. ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. ಕಡ್ಡಾಯ ವರ್ಗಾವಣೆ ಆಗಿದ್ದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಮೊದಲ ಹಂತದ ಕೌನ್ಸೆಲಿಂಗ್ ನವೆಂಬರ್ 2 ರಂದು ನಡೆಯಲಿದೆ. ಎರಡನೇ ಹಂತದ ಕೌನ್ಸೆಲಿಂಗ್ 2021ರ ಜನವರಿ 18 …
Read More »