ವಿಜಯಪುರ: ‘ಖತಲ್ ರಾತ್ರಿ’ ಮಾಡುವವರೇ ಕಾಂಗ್ರೆಸ್ ಪಕ್ಷದವರು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಸಿಂದಗಿ ಮತಕ್ಷೇತ್ರದ ಕನ್ನೂಳ್ಳಿ ಗ್ರಾಮದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ಅಂಗವಾಗಿ ನಡೆದ ರೋಡ್ ಶೋ ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸ್ವಾರ್ಥ ರಾಜಕಾರಣ ಮಾಡಿ, ಗಳಿಸಿದ್ದ ಹಣವನ್ನು ಹಂಚುತ್ತಾರೆ ಎಂದು ದೂರಿದರು. ‘ಡಿಕೆಶಿ ವಿವಿಧ ಉಪ ಚುನಾವಣೆಗಳಲ್ಲಿ ಗೋಣಿ ಚೀಲದಲ್ಲಿ ಹಣ ಹಂಚಿದ್ದಾರೆ. ಅವರ ಅನುಭವವನ್ನು ಹೇಳುವ …
Read More »Daily Archives: ಅಕ್ಟೋಬರ್ 25, 2021
ಯಾವತ್ತಾದರೂ ಕುರಿ ಕಾಯ್ದಿದ್ದೀರೇನು?: ಸೀನಿಯರ್-ಜೂನಿಯರ್ ಬೊಮ್ಮಾಯಿಗೆ ಸಿದ್ದರಾಮಯ್ಯ ಪ್ರಶ್ನೆ
ವಿಜಯಪುರ: ಕಂಬಳಿ ಹಾಕಿಕೊಳ್ಳಲೂ ಯೋಗ್ಯತೆ ಬೇಕು ಎಂದಿರುವ ಸಿಎಂ ಬಸವರಾಜ ಬೊಮ್ಮಾಯಿಗೆ ಟಾಂಗ್ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ನೀವೇನಾದರೂ ಕುರಿ ಕಾಯ್ದಿದ್ದೀರೇನು? ಎಂದು ತಿರುಗೇಟು ನೀಡಿದರು. ಸಿಂದಗಿಯಲ್ಲಿ ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು ಎಂದು ಬಸವರಾಜ ಬೊಮ್ಮಾಯಿ ಭಾಷಣ ಬಿಗಿದಿದ್ದಾರೆ. ನಾನು ಕೇಳುತ್ತೇನೆ, ‘ಸೀನಿಯರ್ ಬೊಮ್ಮಾಯಿ, ಬಸವರಾಜ ಬೊಮ್ಮಾಯಿ ಯಾವತ್ತಾದರೂ ಕುರಿ ಕಾಯ್ದಿದ್ದೀರೇನು?’ ಎಂದು ಪ್ರಶ್ನಿಸಿದರು. ನಾನು ಕುರಿ ಕಾಯ್ದಿದಿನಯ್ಯ..! ಕಂಬಳಿ …
Read More »ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ
ಬೆಂಗಳೂರು: ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ. ಈ ವಿಚಾರವಾಗಿ ಸೋಮವಾರ ಟ್ವೀಟ್ ಮಾಡಿರುವ ಬಿಜೆಪಿ, ‘ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ’ ಎಂದು ಆರೋಪಿಸಿದೆ. ‘ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂಬುದಾಗಿ ಹೇಳುತ್ತೀರಿ ಸಿದ್ದರಾಮಯ್ಯ?’ ಎಂದು …
Read More »ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ
ಪುತ್ತೂರು, ಅ.25 : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ದ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮೈಂದನಡ್ಕ ನಿವಾಸಿ ಆದಂ(56) ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯಾಗಿದ್ದಾನೆ. ಸ್ಥಳೀಯ ಬಾಲಕಿ ಬೀಡಿ ಬ್ರಾಂಚಿಗೆ ತೆರಳುತ್ತಿದ್ದ ವೇಳೆ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಘಟನೆ ಕುರಿತು ಸಂಪ್ಯ ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
Read More »ಧಾರವಾಡದಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ: ಹೆಗ್ಗಡೆ
ಬೆಳ್ತಂಗಡಿ: ತೃಪ್ತಿಯ ಜೀವನ ಯಶಸ್ಸಿನ ಜೀವನಕ್ಕಿಂತ ಶ್ರೇಷ್ಠವಾದುದು. 800 ವರ್ಷಗಳ ಪರಂಪರೆಯಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯು ನನಗೆ ದಶಾವತಾರಗಳಲ್ಲಿ ಯೋಜನೆ ರೂಪಿಸಿ ತೃಪ್ತಿಕರ ಜೀವನ ಅನುಗ್ರಹಿಸಿದ್ದಾನೆ. ಶೀಘ್ರವೇ ಧಾರವಾ ಡದ ಎಸ್‌ಡಿಎಂ ವೈದ್ಯಕೀಯ ವಿದ್ಯಾಲಯದಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪಿಸುವುದಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಪ್ರಕಟಿಸಿದರು. ಚತುರ್ದಾನ ಶ್ರೇಷ್ಠ ಪರಂಪರೆಯ ಶ್ರೀ ಕ್ಷೇತ್ರ ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾದ 54ನೇ ವರ್ಷದ ವರ್ಧಂತಿ …
Read More »ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ 54 ನೇ ಪಟ್ಟಾಭಿಷೇಕ
ಬೆಳ್ತಂಗಡಿ: ಮಾನವನ ಸೇವೆಯೇ ಭಗವಂತನ ಸೇವೆ ಎಂಬುದನ್ನು ಅಕ್ಷರಶಃ ನಿರೂಪಿಸಿರುವ ಡಾ. ಹೆಗ್ಗಡೆ ಭಾರತ ರತ್ನಕ್ಕೆ ಅರ್ಹರು ಎಂದು ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಹೇಳಿದರು. ಅವರು ಧರ್ಮಸ್ಥಳದಲ್ಲಿ ಆದಿತ್ಯವಾರ ನಡೆದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ 54 ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವದಲ್ಲಿ ಶುಭಾಶಂಸನೆಗೈದರು. ಧರ್ಮಕ್ಕೆ ಹೊಸ ಸ್ವರೂಪವನ್ನು, ವ್ಯಾಖ್ಯಾನವನ್ನು ಡಾ. ಹೆಗ್ಗಡೆ ನೀಡಿದ್ದಾರೆ. ಪಟ್ಟಾಧಿಕಾರವನ್ನು ಅಧಿಕಾರ ಎಂದು ಭಾವಿಸದೆ ಸೇವಾದೀಕ್ಷೆಯಾಗಿ ಸ್ವೀಕರಿಸಿ ಕ್ಷೇತ್ರವನ್ನು ವಿಸ್ತಾರವಾಗಿ ವೈಶಾಲ್ಯದಿಂದ …
Read More »ಸಿದ್ದರಾಮಯ್ಯ ಅಂಡ್ ಟೀಂ ಸಿಂಧಗಿಯಲ್ಲಿ ಬೀಡುಬಿಟ್ಟಿರೋದೆ ಜೆಡಿಎಸ್ ಸೋಲಿಸಿ, ಬಿಜೆಪಿಯನ್ನು ಗೆಲ್ಲಿಸೋದಕ್ಕಾಗಿ : ಹೆಚ್ ಡಿ ಕುಮಾರಸ್ವಾಮಿ
ಮೈಸೂರು : ಸಿಂದಗಿ ಹಾಗೂ ಹಾನಗಲ್ ಉಪ ಚುನಾವಣೆಯಲ್ಲಿ ಜೆಡಿಎಸ್ ಸೋಲಿಸಿ, ಬಿಜೆಪಿ ಗೆಲ್ಲಿಸೋದೆ ಸಿದ್ಧರಾಮಯ್ಯ ಮತ್ತು ಅವರ ತಂಡದ ಉದ್ದೇಶ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಜಿಲ್ಲೆಯ ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ಜಾತಿ ವಿಷ ಬೀಜ ಬಿತ್ತಿ, ಜಾತಿ ಜಾತಿಗಳನ್ನು ಒಡೆದರು. ಇದೇ ರೀತಿಯಲ್ಲೇ ಉಪ ಚುನಾವಣೆಯಲ್ಲಿ ಜಾತಿವಾರು ಸಭೆ ನಡೆಸಿ, ಜಾತಿ ಒಡೆಯುವಂತ ಕೆಲಸ …
Read More »ಸಿದ್ದರಾಮಯ್ಯ ಮಾತುಗಳಿಗೆ ಕವಡೆ ಕಾಸಿನ ಬೆಲೆ ಇಲ್ಲ : ಬಿ.ಎಸ್. ಯಡಿಯೂರಪ್ಪ
ದಾವಣಗೆರೆ : ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿರುವ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಮಾತುಗಳಿಗೆ ಕವಡೆ ಕಾಸಿನ ಬೆಲೆ ಇಲ್ಲ ಎಂದು ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದರು. ನಗರದ ಜಿಎಂಐಟಿ ಅತಿಥಿ ಗೃಹಕ್ಕೆ ಅನಿರೀಕ್ಷಿತವಾಗಿ ಭಾನುವಾರ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಂಧಗಿ, ಹಾನಗಲ್ ಉಪ ಚುನಾವಣೆಯಲ್ಲಿ ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ. ಫಲಿತಾಂಶ ಬಂದ ಮೇಲೆ ನಿಮಗೇ ಗೊತ್ತಾಗುತ್ತದೆ’ ಎಂದರು. ಎರಡೂ ಕ್ಷೇತ್ರಗಳಲ್ಲೂ ನಾವು ದೊಡ್ಡ ಅಂತರದಿಂದಲೇ …
Read More »ಅಪರಿಚಿತರನ್ನು ಪೋಸ್ಕೋ ಬೆಗ್ಗರ್ ಕೇರ್ ಗೆ ಕಳುಹಿಸಿದ ಎಎಸ್’ಐ ಶಾಂತರಾಜು; ಹೃದಯಸ್ಪರ್ಶಿ ಕಾರ್ಯಕ್ಕೆ ಪ್ರಶಂಸೆ
ಬೆಂಗಳೂರು : ಅಪರಿಚಿತರಿಬ್ಬರು ನಿಸ್ಸಾಹಯಕ ಸ್ಥಿತಿಯಲ್ಲಿದ್ದವರನ್ನು ಗಮನಿಸಿದ ಚಿಕ್ಕಪೇಟೆ ಸಂಚಾರ ಠಾಣಾ ಅಧಿಕಾರಿ ಆರೈಕೆಗಾಗಿ ಪೋಸ್ಕೊ ಬೆಗ್ಗರ್ ಕೇರ್ ಗೆ ಕಳುಹಿಸಿರುತ್ತಾರೆ. ಚಿಕ್ಕಪೇಟೆ ಸಂಚಾರ ಠಾಣೆಯ ಅಧಿಕಾರಿ ಶಾಂತರಾಜು ಪಿ. ಎಎಸ್ ಐ ರವರು ಮತ್ತು ಅವರ ತಂಡದಿಂದ ಸಿಟಿ ರೈಲ್ವೆ ಸ್ಟೇಷನ್ ಮುಂಭಾಗ ಇವರ ಅಪರಿಚಿರ ಬಗ್ಗೆ ಮಾನವೀಯತೆ ತೋರಿದ್ದಾರೆ. ಈ ಹಿನ್ನೆಲೆ ಈ ಹೃದಯಸ್ಪರ್ಶಿ ಕಾರ್ಯಕ್ಕೆ ಇಲಾಖಾ ವತಿಯಿಂದಲೂ ಪ್ರಶಂಸೆ ನೀಡಲಾಗಿದೆ. ಈ ವೇಳೆ ಮಾತನಾಡಿದ ಪಿಎಎಸ್ ಐ ಶಾಂತರಾಜು …
Read More »ಹಾನಗಲ್‌ನಲ್ಲಿ ಮತ್ತೆ 3 ದಿನ ಸಿಎಂ ಮೊಕ್ಕಾಂ
ಬೆಂಗಳೂರು: ಹಾನಗಲ್ ವಿಧಾನಸಭೆ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರದಿಂದ ಮೂರು ದಿನ ಹಾನಗಲ್‌ನಲ್ಲಿಯೇ ಮೊಕ್ಕಾಂ ಹೂಡಲಿದ್ದಾರೆ. ರವಿವಾರ ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಬೂಸನೂರು ಪರ ಪ್ರಚಾರ ನಡೆಸಿ, ಹುಬ್ಬಳ್ಳಿಗೆ ಆಗಮಿಸಿದ್ದ ಅವರು ಸೋಮವಾರದಿಂದ ಹಾನಗಲ್‌ನಲ್ಲಿ ನಿರಂತರ ಪ್ರಚಾರ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆಂದು ತಿಳಿದು ಬಂದಿದೆ. ಬಿಜೆಪಿಯ ಗೆಲುವಿನ ಅಂತರವನ್ನು ಹೆಚ್ಚಿಸುವ ಮೂಲಕ ತಮ್ಮ ನಾಯಕತ್ವವನ್ನು ಸಾಬೀತುಪಡಿಸಲು ಸಿಎಂ ಈ ಕಾರ್ಯತಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಬಿಎಸ್‌ವೈ …
Read More »