Breaking News

Daily Archives: ನವೆಂಬರ್ 1, 2021

ಇಳಿ ವಯಸ್ಸಿನಲ್ಲಿ ನೆಮ್ಮದಿಯಿಂದ ಇರಬೇಕಾದ ಜೀವಕ್ಕೆ ಸೊಸೆ ಕಾಟ

ಗದಗ: ಅದು ಇಂದೋ ನಾಳೆ ಬಿದ್ದೋಗೋ ಜೀವ. ಇಳಿ ವಯಸ್ಸಿನಲ್ಲಿ ನೆಮ್ಮದಿಯಿಂದ ಇರಬೇಕಾದ ಜೀವಕ್ಕೆ ಸೊಸೆ ಕಾಟ ವಿಪರೀತವಾಗಿದೆ. ಹೀಗಾಗಿ ಆ ಅಜ್ಜಿ ಈ ಲೋಕದ ಜೀವನವೇ ಬೇಡ ಅಂತ ಕೆರೆಗೆ ಹಾರಿದ್ಲು. ಆದ್ರೆ ಅಜ್ಜಿಯ ಅದೃಷ್ಟ ಗಟ್ಟಿ ಇತ್ತೂ ಅಂತ ಕಾಣಿಸುತ್ತೆ. ಅದೇ ಸಮಯಕ್ಕೆ ಬಂದ ಬೋಟಿಂಗ್ ಸಿಬ್ಬಂದಿ ಆಪತ್ಬಾಂಧವರಾಗಿದ್ದಾರೆ. ಮುಳುಗುತ್ತಿದ್ದ ಅಜ್ಜಿಯನ್ನ ರಕ್ಷಿಸಿ ದಡಸೇರಿಸಿದ್ದಾರೆ. ಆದ್ರೆ ಬದುಕುಳಿದ ಆ ಅಜ್ಜಿ ಬಿಚ್ಚಿಟ್ಟ ತನ್ನ ಆತ್ಮಹತ್ಯೆಯ ಯತ್ನದ ರಹಸ್ಯ …

Read More »

ಸರ್ಕಾರಿ ಶಾಲೆಗಳು ಮತ್ತು ಕನ್ನಡ ಕಲಿಕೆ ಕುರಿತು ಮಕ್ಕಳು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸಬೇಕಿದೆ-ಬಿ.ಸಿ. ನಾಗೇಶ್

ಬೆಂಗಳೂರು: ಸರ್ಕಾರಿ ಶಾಲೆಗಳು ಮತ್ತು ಕನ್ನಡ ಕಲಿಕೆ ಕುರಿತು ಮಕ್ಕಳು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸಬೇಕಿದೆ ಅದೇ ರೀತಿ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಒಂದು ಸುಸಜ್ಜಿತವಾದ ಶಾಲಾ ಸಂಕೀರ್ಣ ನಿರ್ಮಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು. ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣ ಅಗತ್ಯವಿದೆ. ಅದಕ್ಕೆ ಪೂರಕವಾಗಿ …

Read More »

ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಷ್ಠೆಯ ಕಣವಾಗಿರುವ ಹಾನಗಲ್ ವಿಧಾನಸಭಾ ಉಪಚುನಾವಣೆಯ ಮತಎಣಿಕೆ ನಾಳೆ

ಹಾವೇರಿ : ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಷ್ಠೆಯ ಕಣವಾಗಿರುವ ಹಾನಗಲ್ ವಿಧಾನಸಭಾ ಉಪಚುನಾವಣೆಯ ಮತಎಣಿಕೆ ನಾಳೆ ನಡೆಯಲಿದೆ. ಮತ ಎಣಿಕೆಗೆ ಹಾವೇರಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ್ ತಿಳಿಸಿದ್ದಾರೆ. ಹಾವೇರಿ ಸಮೀಪದ ದೇವಗಿರಿ ಹೊರವಲಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತಎಣಿಕೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಬೆಳಗ್ಗೆ 7 ಗಂಟೆ 30 ನಿಮಿಷಕ್ಕೆ ಸ್ಟ್ರಾಂಗ್ ರೋಮ್ ಓಪನ್ ಮಾಡಲಾಗುತ್ತದೆ. ಮೊದಲು ಅಂಚೆ ಮತ್ತು ಸೇವಾ ಮತಎಣಿಕೆ ಮಾಡಲಾಗುತ್ತದೆ. …

Read More »

ಗೋವಾದ ಕ್ಯಾಸಿನೋದಲ್ಲಿ ಜೂಜಾಟದಿಂದ ಬಂದ ಹಣಕ್ಕಾಗಿಯೇ ನವನಗರದ ಬಾಲಕಿ ಅಪಹರಣ ನಡೆದಿರುವುದು ಬೆಳಕಿಗೆ ಬಂದಿದೆ.

ಬಾಗಲಕೋಟೆ: ಗೋವಾದ ಕ್ಯಾಸಿನೋದಲ್ಲಿ ಜೂಜಾಟದಿಂದ ಬಂದ ಹಣಕ್ಕಾಗಿಯೇ ನವನಗರದ ಬಾಲಕಿ ಅಪಹರಣ ನಡೆದಿರುವುದು ಬೆಳಕಿಗೆ ಬಂದಿದೆ. ಅಕ್ಟೋಬರ್ 27ರಂದು ನವನಗರದ ಸೆಕ್ಟರ್ ನಂಬರ 61ರಲ್ಲಿ ಕೃತಿಕಾ ಕೊಡಗಾನೂರ (7) ಎಂಬ ಬಾಲಕಿಯನ್ನು ಅಪಹರಣ ಮಾಡಲಾಗಿತ್ತು. ಅಪಹರಣ ಆಗಿರುವ ಬಾಲಕಿ ಸಹೋದರ ಮಾವ ಅನಿಲ ಎಂಬುವನು ಗೋವಾಗೆ ಹೋಗಿ ಕ್ಯಾಸಿನೋದಲ್ಲಿ ಅಂದಾಜು 45 ಲಕ್ಷ ರೂಪಾಯಿಗಳು ತೆಗೆದುಕೊಂಡು ಬಂದಿದ್ದನು. ಅಪಹರಣಕ್ಕೆ ಪ್ಲ್ಯಾನ್ ಮಾಡಿದ ಪ್ರಮುಖ ಆರೋಪಿ ಭೀರಪ್ಪ ಬೂದಿಹಾಳ ಎಂಬುವನು ಅನಿಲ ಜೊತೆಗೆ …

Read More »

ಉತ್ತರ ಕರ್ನಾಟಕ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನೆಡೆಯಾಗಿದೆ. ಹೀಗಾಗಿ, ಪ್ರತ್ಯೇಕ ರಾಜ್ಯದ ಕೂಗು ಸದ್ಯಕ್ಕೆ ಬೇಕಾಗಿಲ್ಲ.

ಬಾಗಲಕೋಟೆ : ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯ ಆದಾಗ ಪ್ರತ್ಯೇಕ ರಾಜ್ಯದ ಬೇಡಿಕೆ ಕೂಗು ಇರಲಿದೆ. ಈಗ ಒಬ್ಬ ಜವಾಬ್ದಾರಿಯುತ ಮಂತ್ರಿಯಾಗಿದ್ದೇನೆ. ಹೀಗಾಗಿ, ಆ ವಿಚಾರ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಹೇಳಿದರು. ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾದಿಂದ ಸರ್ಕಾರದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ಹೀಗಾಗಿ, ಉತ್ತರ ಕರ್ನಾಟಕ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ …

Read More »

ಮಹಿಳಾ-ಯುವಕ ಮಂಡಳದಿಂದ ಅಗಲಿದ ಅಪ್ಪುಗೆ ಶ್ರದ್ಧಾಂಜಲಿ

ಪುನೀತ್ ರಾಜ್‍ಕುಮಾರ್ ಅವರ ಅಕಾಲಿಕ ನಿಧನಕ್ಕೆ ಎಲ್ಲರೂ ಮಮ್ಮಲ ಮರಗುತ್ತಿದ್ದಾರೆ. ಈ ಸಾವು ನ್ಯಾಯವೇ ಎನ್ನುತ್ತಿದ್ದಾರೆ. ಇನ್ನು ನಾಡಿನ ಮೂಲೆ ಮೂಲೆಯಲ್ಲಿ ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ. ಅದೇ ರೀತಿ ಬೆಳಗಾವಿಯ ಕಪಿಲೇಶ್ವರ ಮಹಿಳಾ ಮಂಡಳ ಮತ್ತು ಯುವಕ ಮಂಡಳ ವತಿಯಿಂದಲೂ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬೆಳಗಾವಿಯ ಕಪಿಲೇಶ್ವರ ಏರಿಯಾದಲ್ಲಿ ಕಪಿಲೇಶ್ವರ ಮಹಿಳಾ ಮಂಡಳ ಮತ್ತು ಯುವಕ ಮಂಡಳದ ಪದಾಧಿಕಾರಿಗಳು ಅಗಲಿದ ಕನ್ನಡದ ಕಣ್ಮನಿ, ಯುವರತ್ನ, ಪುನೀತ್ ರಾಜ್‍ಕುಮಾರ್ ಅವರ ಭಾವಚಿತ್ರ ಇರುವ …

Read More »

ಉತ್ತರ ಪ್ರದೇಶ ಚುನಾವಣಾ ಮೇಲೆ ಬೆಲೆ ಏರಿಕೆ ಪರಿಣಾಮ ಬೀರುವದಿಲ್ಲ:ಅರವಿಂದ ಬೆಲ್ಲದ

ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಇಳಿಸಲು ಕೇಂದ್ರ ಕ್ರಮಗಳನ್ನು ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಬೆಲೆ ಇಳಿಕೆಯಾಗಲಿದೆ ಎಂಬ ವಿಶ್ವಾಸವನ್ನು ಶಾಸಕ‌ ಅರವಿಂದ ಬೆಲ್ಲದ ವ್ಯಕ್ತಪಡಿಸಿದರು. ನಗರದಲ್ಲಿಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮಾತನಾಡಿದ ಅವರು,ಬೆಲೆ ಏರಿಕೆಯಾಗುತ್ತಿರುವದು ಸರ್ಕಾರದ ಗಮನಕ್ಕೆ ಇದೆ. ಸರ್ಕಾರ ಬೆಲೆ ಇಳಿಕೆ ಮಾಡಲು ಯತ್ನಿಸುತ್ತಿದೆ ಎಂದರು. ತೆರಿಗೆ ವಸೂಲಿ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ತಗೆದುಕೊಳ್ಳಲಿದೆ. ಎಲ್ಲಾ ರಾಜ್ಯಗಳಿಗಿಂತಲೂ ರಾಜ್ಯ ಸರ್ಕಾರ ಕಡಿಮೆ ತೆರಿಗೆ ಇದೆ. …

Read More »

ದೇಶಾಧ್ಯಂತ ಪಾದಯಾತ್ರೆ ಕೈಗೊಂಡ ಮಹಾರಾಷ್ಟ್ರದ ಯುವಕ

ಪ್ಲಾಸ್ಟಿಕ್ ಮುಕ್ತ ಭಾರತ, ಗುರುಕುಲ ವ್ಯವಸ್ಥೆ ಪುನರ್ ಆರಂಭ ಹಾಗೂ ದೇಶದಲ್ಲಿ ಭ್ರಾತೃತ್ವ ಭಾವನೆ ಎಲ್ಲರಲ್ಲಿಯೂ ಬರಬೇಕು ಎಂಬ ಉದ್ದೇಶದಿಂದ ಮಹಾರಾಷ್ಟ್ರದ ಯುವಕನೊರ್ವ ದೇಶಾಧ್ಯಂತ ಪಾದಯಾತ್ರೆ ಕೈಗೊಂಡಿದ್ದಾನೆ. ಸಧ್ಯ ಬೆಳಗಾವಿಗೆ ಆಗಮಿಸಿರುವ ಈ ಯುವಕನಿಗೆ ಕನ್ನಡಪರ ಸಂಘಟನೆಗಳು ಆತ್ಮೀಯವಾಗಿ ಬರಮಾಡಿಕೊಂಡಿವೆ. ಹೌದು ನೀವು ನೋಡುತ್ತಿರುವ ಈ ಯುವಕನ ಹೆಸರು ರೋಹನ್ ಅಗರವಾಲ್ ಅಂತಾ. ಈತ ಮಹಾರಾಷ್ಟ್ರದ ನಾಗ್ಪುರದವನು. ಇನ್ನು ಕೇವಲ 19 ವರ್ಷ ವಯಸ್ಸು. ತನ್ನ ಕಾಲೇಜು, ತನ್ನ ಮನೆ …

Read More »

ಪುನೀತ್ ನಿಧನದ ಬಳಿಕ ಬೆಂಗಳೂರಿನ ಜಯದೇವ, ಮಂಗಳೂರು.. ಸೇರಿದಂತೆ ಮಂಡ್ಯದ ಪ್ರಿಯದರ್ಶಿನಿ ಹಾರ್ಟ್ ಕೇರ್ ಸೆಂಟರ್‌ಗೆ ರೋಗಿಗಳ ದೌಡಾ

: ಮಂಡ್ಯ: ಸ್ಯಾಂಡಲ್​​ವುಡ್​​ ಪವರ್​ ಸ್ಟಾರ್​ ಪುನೀತ್​ ರಾಜಕುಮಾರ್​​ ಹಠಾತ್ ನಿಧನ ಜನರ ಆತಂಕಕ್ಕೆ ಕಾರಣವಾಗಿದೆ. ಪುನೀತ್ ನಿಧನದ ಬಳಿಕ ಆತಂಕದಿಂದಲೇ ಆಸ್ಪತ್ರೆಯತ್ತ ಜನ ದೌಡಾಯಿಸಿದ್ದಾರೆ. ಆಸ್ಪತ್ರೆಗೆ ಬರುವ ಹೃದಯ ಸಂಬಂಧಿ ರೋಗಿಗಳ ಸಂಖ್ಯೆ 1ಕ್ಕಿಂತ 3 ಪಟ್ಟು ಹೆಚ್ಚಾಗತೊಡಗಿದೆ. : ಬೆಂಗಳೂರಿನ ಜಯದೇವ, ಮಂಗಳೂರು.. ಸೇರಿದಂತೆ ಮಂಡ್ಯದ ಪ್ರಿಯದರ್ಶಿನಿ ಹಾರ್ಟ್ ಕೇರ್ ಸೆಂಟರ್‌ಗೆ ರೋಗಿಗಳ ದೌಡಾಯಿಸಿದ್ದಾರೆ. ಹೃದ್ರೋಗ ತಜ್ಞ ಡಾ. ಪ್ರಶಾಂತ್ ಬಳಿ ಚಿಕಿತ್ಸೆ ಪಡೆಯಲು ಸಾಲುಗಟ್ಟಿ ನಿಂತಿದ್ದಾರೆ. …

Read More »

ಬೆಳಗಾವಿಯ ಸಾಹಿತ್ಯ ಕ್ಷೇತ್ರದ ಹಿರಿಯ ಕೊಂಡಿಯೊಂದು ಕಳಚಿದೆ.

ಬೆಳಗಾವಿಯ ಸಾಹಿತ್ಯ ಕ್ಷೇತ್ರದ ಹಿರಿಯ ಕೊಂಡಿಯೊಂದು ಕಳಚಿದೆ. ಖ್ಯಾತ ಸಾಹಿತಿಗಳು ಹಾಗೂ ಜಾನಪದ ಸಂಶೋಧಕರು ಆಗಿದ್ದ ಪ್ರೊ.ಜ್ಯೋತಿ ಹೊಸೂರ ಅವರು ಇಂದು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಪ್ರೊ.ಜ್ಯೋತಿ ಹೊಸೂರ ಅವರು ಜಾನಪದ ಕ್ಷೇತ್ರದಲ್ಲಿ ಬಹು ದೊಡ್ಡ ಹೆಸರು ಮಾಡಿದ ಸಾಹಿತಿ. ಗಾದೆ, ಒಡಪು, ಗ್ರಾಮದೇವತೆ ಅವರು ಮಾಡಿದ ಸಂಶೋಧನೆಗಳು, ವಿದ್ವತ ಪ್ರಪಂಚದಲ್ಲಿ ಗೌರವ ಆದರಕ್ಕೆ ಪಾತ್ರವಾಗಿದ್ದವು. ರಾಯಬಾಗದಂತಹ ಸಣ್ಣ ಹಳ್ಳಿಯಲ್ಲಿದ್ದರು. ಅವರು ನಡೆಸಿದ ಸಂಶೋಧನೆಗಳು ವಿಶ್ವವಿದ್ಯಾಲಯ ಮಟ್ಟದಲ್ಲಿ ಚರ್ಚೆ …

Read More »