Breaking News

Daily Archives: ನವೆಂಬರ್ 2, 2021

ಅವರು ದುಡ್ಡ ಕೊಟ್ಟ ಗೆದ್ದರ ನಾವು ಜನರ ವಿಶ್ವಾಸ ದಿಂದ ಗೆದ್ದೇವು: ಸತೀಶ್ ಜಾರಕಿಹೊಳಿ

ಮುಂದಿನ ಚುನಾವಣೆಗೆ ಇದು ದಿಕ್ಸೂಚಿ ಎಂದು ಹೇಳಿದ್ದೇವು. ಹೀಗಾಗಿ ಕರ್ನಾಟಕದ ಜನ ಕಾಂಗ್ರೆಸ್ ಕಡೆ ನೋಡುತ್ತಿದ್ದಾರೆ. ಬಿಜೆಪಿ ವಿರುದ್ಧವಾಗಿ ಮತ ಚಲಾಯಿಸಲು ಕಾತುರದಿಂದ ಕಾಯುತ್ತಿದ್ದಾರೆ ಎಂಬುದಕ್ಕೆ ಹಾನಗಲ್ ಚುನಾವಣೆ ದಿಕ್ಸೂಚಿಯಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ ಫಲಿತಾಂಶದ ಬಗ್ಗೆ ಗೋಕಾಕ್‍ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ಅವರು ಸಿಂದಗಿಯಲ್ಲಿ ಯಾವ ಕಾರಣದಿಂದ ಸೋತಿದ್ದೇವೆ ಎಂಬುದು ಗೊತ್ತಿಲ್ಲ. ಆದರೆ ಹಾನಗಲ್‍ನಲ್ಲಿ …

Read More »

JDS ಪಕ್ಷವನ್ನು ಅಲ್ಪಸಂಖ್ಯಾತರರು ನಂಬುವುದಿಲ್ಲ ಎನ್ನುವುದಕ್ಕೆ ಈ ಫಲಿತಾಂಶ ಸಾಕ್ಷಿ: ಜಮೀರ್

ಜೆಡಿಎಸ್ ಪಕ್ಷವನ್ನು ಅಲ್ಪಸಂಖ್ಯಾತರರು ನಂಬುವುದಿಲ್ಲ ಎಂಬುದಕ್ಕೆ ಉಪ ಚುನಾವಣೆ ಫಲಿತಾಂಶ ಸಾಕ್ಷಿ. ಎರಡೂ ಕಡೆ ಠೇವಣಿ ಕಳೆದುಕೊಂಡಿದ್ದಾರೆ. ಹಾನಗಲ್ ನಲ್ಲಿ ಪಕ್ಷೇತರ ಅಭ್ಯರ್ಥಿಗಿಂತ ಕಡಿಮೆ ಮತ ಜೆಡಿಎಸ್ ಗೆ ಬಂದಿದೆ.   ಉಪ ಚುನಾವಣೆ ಫಲಿತಾಂಶದ ಕುರಿತಾಗಿ ಮಾತನಾಡಿದ ಅವರು, ಹಾನಗಲ್ ನಲ್ಲಿ ಕಾಂಗ್ರೆಸ್ ಒಗ್ಗಟ್ಟಿನ ಹೋರಾಟ ನಡೆಸಿತ್ತು. ಸಿದ್ದರಾಮಯ್ಯ, ಡಿ. ಕೆ.ಶಿವಕುಮಾರ್ ಸೇರಿ ಎಲ್ಲ ನಾಯಕರೂ ಶ್ರಮ ಹಾಕಿದರು ಎಂದರು. ಸಿಂದಗಿಯಲ್ಲಿ ಕಾಂಗ್ರೆಸ್ ಕಳೆದ ಚುನಾವಣೆಗಿಂತ 40 ಸಾವಿರ …

Read More »

ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಹೊಂದಾಣಿಕೆಯಾಗದೆ ಸಿಂದಗಿಯಲ್ಲಿ ಸೋಲು: ಸಿದ್ದರಾಮಯ್ಯ

ಬೆಂಗಳೂರು: ಸಿಂದಗಿಯಲ್ಲಿ ನಮ್ಮ‌ನಿರೀಕ್ಷೆ ಹುಸಿಯಾಗಿದೆ. ಅಲ್ಲಿ ತೀವ್ರ ಸ್ಪರ್ಧೆಯನ್ನು ನಿರೀಕ್ಷಿಸಿದ್ದೆವು. ಆದರೆ ದೊಡ್ಡ ಅಂತರದಲ್ಲಿ‌ಸೋತಿದ್ದೇವೆ. ಆದರೆ ಕಳೆದ ಬಾರಿ ನಾವು ‌ಮೂರನೇ ಸ್ಥಾನದಲ್ಲಿದ್ದೆವು, ಈಗ ಎರಡನೇ ಸ್ಥಾನಕ್ಕೆ ಬಂದಿದ್ದೇವೆ. ಸೋಲನ್ನು ಒಪ್ಪಿಕೊಳ್ಳಬೇಕು. ನಮ್ಮ ಅಭ್ಯರ್ಥಿ ಅಶೋಕ್ ಮನಗೂಳಿ ಜೆಡಿಎಸ್ ನಿಂದ ಬಂದವರು. ಅವರಿಗೆ ನಾವು ಟಿಕೆಟ್ ಕೊಟ್ಟಿದ್ದೆವು. ಆದರೆ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರಿಗೆ ಹೊಂದಾಣಿಕೆಯಾಗಿಲ್ಲ, ಅವರ ಜೊತೆ ಬಂದ ಜೆಡಿಎಸ್ ಕಾರ್ಯಕರ್ತರ ಜೊತೆ ಹೊಂದಾಣಿಕೆಯಾಗಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ …

Read More »

ಸಿಂದಗಿಯಲ್ಲಿ ಸೋತರೂ ಸಮಾಧಾನವಿದೆ; ಹಾನಗಲ್ ನ ಸ್ವಾಭಿಮಾನಿ ಮತದಾರರಿಗೆ ನನ್ನ ಸೆಲ್ಯೂಟ್

ಬೆಂಗಳೂರು: ಸಿಂದಗಿ ಉಪಚುನಾವಣೆಯಲ್ಲಿ ಸೋತರೂ ನಮಗೆ ಸಮಾಧಾನವಿದೆ. ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವು ಖಚಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಮತ ಗಳಿಸಿದೆ. ಸಿಂದಗಿಯಲ್ಲಿ ಸೋತರೂ ನಮಗೆ ಸಮಾಧಾನವಿದೆ. ಕಳೆದ ಚುನಾವಣೆಗೆ ಹೋಲಿಸಿದರೆ ಕಾಂಗ್ರೆಸ್ ಗೆ ಹೆಚ್ಚು ಮತ ಬಂದಿದೆ. ರಾಜ್ಯದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ಹೇಳಿದರು.ಜೆಡಿಎಸ್ ಮತಗಳನ್ನು ಬಿಜೆಪಿಯವರು ಪಡೆದಿದ್ದಾರೆ. ಸಿಂದಗಿಯಲ್ಲಿ ಕಾಂಗ್ರೆಸ್ 3ನೇ …

Read More »

ಉಪ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದೇನು ಗೊತ್ತಾ.?

ನವದೆಹಲಿ: ಇಂದು ಪ್ರಕಟಗೊಂಡಿರುವಂತ ಹಾನಗಲ್ ಹಾಗೂ ಸಿಂದಗಿ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಹೀನಾಯ ಸೋಲು ಕಂಡಿದ್ದಾರೆ. ಇದಕ್ಕೆ ಮಾಡಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಏನ್ ಹೇಳಿದ್ರು ಅಂತ ಮುಂದೆ ಓದಿ. ನವದಹೆಲಿಯಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು, ಇದುವರೆಗೂ ನಾನು ಉಪಚುನಾವಣೆ ಪ್ರಚಾರ ಮಾಡಿರಲಿಲ್ಲ ಆದರೆ ಸಿಂದಗಿ ಉಪಚುನಾವಣೆ ಹೋಗಿದ್ದೆ. ಸಿಂದಗಿ ಜನರು ಕಷ್ಟದಲ್ಲಿದ್ದರು, ಕೂಲಿಗೆ ಮಹಾರಾಷ್ಟ್ರಕ್ಕೆ ಗುಳೆ ಹೋಗುತ್ತಿದ್ದರು ಆ ಭಾಗದ ಜನರಿಗೆ …

Read More »

ಟಿ20, ಓಡಿಐ ಎರಡೂ ತಂಡಕ್ಕೂ ರೋಹಿತ್ ನಾಯಕ?

ಮುಂಬೈ, ನ. 02: ವಿರಾಟ್ ಕೊಹ್ಲಿಈ ಟಿ20 ವಿಶ್ವಕಪ್ ನಂತರ ನಾಯಕತ್ವ ತ್ಯಜಿಸಲಿದ್ದಾರೆ. ವಿಶ್ವಕಪ್ ಮುಂಚೆಯೇ ಅವರು ಇದನ್ನ ಸ್ಪಷ್ಟಪಡಿಸಿದ್ದಾರೆ. ಅವರ ಸ್ಥಾನ ಯಾರು ತುಂಬುತ್ತಾರೆ ಎಂಬುದು ಸದ್ಯದ ಪ್ರಶ್ನೆ. ಬಿಸಿಸಿಐ ಕೂಡ ಇನ್ನೂ ನಿರ್ಧಾರ ಮಾಡಿಲ್ಲ. ನಾಯಕತ್ವ ಸ್ಥಾನಕ್ಕೆ ಕೆಲವಾರು ಹೆಸರುಗಳು ಚಾಲನೆಯಲ್ಲಿವೆ. ಅದರಲ್ಲಿ ಪ್ರಮುಖವಾಗಿ ರೋಹಿತ್ ಶರ್ಮಾ ಹೆಸರಿದೆ. ವಿರಾಟ್ ಕೊಹ್ಲಿ ಕ್ಯಾಪ್ಟನ್ಸಿ ಸ್ಥಾನ ಯಾರು ತುಂಬಬಹುದು ಎಂಬ ಪ್ರಶ್ನೆ ಉದ್ಭವವಾದಾಗಲೇ ರೋಹಿತ್ ಹೆಸರೇ ಮೊದಲು ಕೇಳಿಬಂದದ್ದು. ಈಗ …

Read More »

ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ : ಚೆಲುವರಾಯಸ್ವಾಮಿ

ಬೆಂಗಳೂರು, ನ.2- ನಿಜವಾದ ಹೋರಾಟ ನಡೆದಿದ್ದು, ಹಾನಗಲ್‍ನಲ್ಲಿ. ಸ್ವತಃ ಮುಖ್ಯಮಂತ್ರಿಗಳೇ ಪ್ರಚಾರಕ್ಕೆ ಇಳಿದು ತಮ್ಮೆಲ್ಲಾ ಬಲವನ್ನು ಪ್ರಯೋಗಿಸಿದರೂ ಮತದಾರ ಪ್ರಭು ಕಾಂಗ್ರೆಸ್ ಕೈ ಹಿಡಿದಿರುವುದು ಮುಂದಿನ 2023 ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂದು ಮಾಜಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ಮಂತ್ರಿಮಂಡಲವೇ ಹಾನಗಲ್‍ನಲ್ಲಿ ಪ್ರಚಾರ ನಡೆಸಿತು. ಇದಲ್ಲದೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ತವರು ಜಿಲ್ಲೆಯಲ್ಲಿ ಬರುವ ಈ ಕ್ಷೇತ್ರವನ್ನು ಗೆಲ್ಲಲು ನಾನಾ …

Read More »

ಬಿಜೆಪಿ ಆಡಳಿತ ಯಂತ್ರದ ದುರ್ಬಳಕೆಯಿಂದ ಕಾಂಗ್ರೆಸ್ ಸೋಲು: ಶಿವಾನಂದ ಪಾಟೀಲ

ವಿಜಯಪುರ: ದುಡ್ಡು ಹಂಚಿ ಗೆದ್ದಿರುವ ಚುನಾವಣೆ ಇದು. ದುಡ್ಡು ಪ್ರಭಾವ ಬೀರಿದೆ. ಆಡಳಿತ ಯಂತ್ರದ ದುರ್ಬಳಕೆ ಮಾಡಿಕೊಂಡು ಬಿಜೆಪಿ ಗೆಲುವು ಸಾಧಿಸಿದೆ ಎಂದು ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಪ್ರತಿಕ್ರಿಯಿಸಿದ್ದಾರೆ. ಸಿಂದಗಿ ಉಪ ಚುನಾವಣೆ ಫಲಿತಾಂಶದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಂದಗಿ ಕ್ಷೇತ್ರದಲ್ಲಿ ಅಧಿಕಾರದ ದುರ್ಬಳಕೆ, ಹಣ ಬಲವನ್ನೆಲ್ಲ ಮೀರಿ ಕಾಂಗ್ರೆಸ್ ಪರ ಮತ ಹಾಕಿದ ಕ್ಷೇತ್ರದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.   ಸಿಂದಗಿ …

Read More »

ಅಪ್ಪು ಇಲ್ಲದ ‘ಜೇಮ್ಸ್’, ನಿರ್ದೇಶಕ ಚೇತನ್‍ಕುಮಾರ್ ಹೇಳಿದ್ದೇನು..?

ಬೆಂಗಳೂರು, ನ.1- ನಾವು ದೇವರನ್ನು ಕಳೆದುಕೊಂಡಿದ್ದೇವೆ. ಸದ್ಯ ಜೇಮ್ಸ್ ಚಿತ್ರದ ಬಗ್ಗೆ ಮಾತನಾಡುವ ಪರಿಸ್ಥಿತಿಯಲ್ಲಿ ಯಾರೂ ಇಲ್ಲ.ಅಪ್ಪು ಸರ್ ಹೋಗುವಾಗಲೂ ಯಾರಿಗೂ ತೊಂದರೆ ಮಾಡದೆ ಸಿನಿಮಾದ ಎಲ್ಲ ಜವಾಬ್ದಾರಿಯನ್ನು ಮುಗಿಸಿ ಕೊಟ್ಟಿದ್ದಾರೆ. ಅವರು ಇರುವಾಗಲೂ ಹೋದಾಗಲೂ ಒಬ್ಬರಿಗೂ ತೊಂದರೆ ಮಾಡಲಿಲ್ಲ. ನಿರ್ಮಾಪಕರಿಗೂ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಜೇಮ್ಸ್ ಚಿತ್ರದ ನಿರ್ದೇಶಕ ಚೇತನ್‍ಕುಮಾರ್ ತಿಳಿದ್ದಾರೆ. ಚಿತ್ರದ ಡಬ್ಬಿಂಗ್ ಮಾತ್ರ ಬಾಕಿ ಇದೆ. ಇದಕ್ಕೆ ಯಾರ ಬಳಿ ಡಬ್ಬಿಂಗ್ ಮಾಡಿಸಬೇಕೆಂದು ಇನ್ನು …

Read More »

ಎರಡೂ ಕಡೆ ಠೇವಣಿ ಕಳೆದುಕೊಂಡ ಜೆಡಿಎಸ್‍

ಬೆಂಗಳೂರು, ನ.2- ಸಿಂಧಗಿ, ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದ ಜೆಡಿಎಸ್‍ಗೆ ಫಲಿತಾಂಶ ಭಾರೀ ನಿರಾಸೆಯನ್ನುಂಟುಮಾಡಿದೆ. ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಪರಾಜಿತರಾಗಿದ್ದು, ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, ನಿರೀಕ್ಷಿತ ಮತಗಳು ಜೆಡಿಎಸ್‍ಗೆ ಲಭಿಸಿಲ್ಲ. ಹೀಗಾಗಿ ಜೆಡಿಎಸ್ ನಾಯಕರಿಗೆ ಭಾರೀ ನಿರಾಸೆಯಾಗಿದೆ. ಹಾನಗಲ್ ಕ್ಷೇತ್ರದಲ್ಲಿ ನಿಯಾಜ್ ಶೇಖ್ ಜೆಡಿಎಸ್ ಅಭ್ಯರ್ಥಿಯಾಗಿ ಸ್ರ್ಪಸಿದ್ದರು. ಸಿಂಧಗಿ ಕ್ಷೇತ್ರದಲ್ಲಿ ಅಂಗಡಿ ನಾಜಿಯಾ ಜೆಡಿಎಸ್‍ನಿಂದ ಕಣಕ್ಕಿಳಿದಿದ್ದರು. …

Read More »