Breaking News

Daily Archives: ನವೆಂಬರ್ 4, 2021

ನಾನು ದಲಿತರ ಬಗ್ಗೆ ಎಲ್ಲೂ ಹೇಳಿಲ್ಲ. ಕಾರಜೋಳ ಸೇರಿ ಕೆಲವರ ಬಗ್ಗೆ ಮಾತನಾಡಿದ್ದೆ. ಅದನ್ನೇ ತಿರುಚಿ ಎತ್ತಿಕಟ್ಟೋಕೆ ನೋಡ್ತಿದ್ದಾರೆ

ಬೆಂಗಳೂರು: ನಾನು ದಲಿತರ ಬಗ್ಗೆ ಎಲ್ಲಿಯೂ ಅವಹೇಳನಕಾರಿಯಾಗಿ ಮಾತನಾಡಿಲ್ಲ. ಬಿಜೆಪಿಯವರು ಈ ವಿಚಾರವನ್ನು ತಿರುಚುವ ಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.   ಬೆಂಗಳೂರಿನ ತಮ್ಮ ಸರ್ಕಾರಿ ನಿವಾಸದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಿಜೆಪಿಯವರು ಸಂವಿಧಾನ ಬದಲಾಯಿಸ್ತೇವೆ ಅಂತಾರೆ. ಸಂವಿಧಾನದಲ್ಲಿ ಸಮಸಮಾಜದ ಬಗ್ಗೆ ಹೇಳಿದೆ. ಅಂತಹ ಸಂವಿಧಾನವನ್ನು ಅವರು ತೆಗೆಯೋಕೆ ಹೊರಟಿದ್ದಾರೆ. ಅದಕ್ಕೆ ನಾನು ದಲಿತರು ಸ್ವಾರ್ಥಕ್ಕೆ ಅಲ್ಲಿಗೆ ಹೋಗಿದ್ದಾರೆ ಎಂದಿದ್ದೆ. ಸಿಂದಗಿ ಪ್ರಚಾರದ ವೇಳೆ …

Read More »

ಹಾನಗಲ್​​​ನಲ್ಲಿ ಸೋತಿದ್ದರೂ ಈ ಚುನಾವಣೆಯ ಫಲಿತಾಂಶ ಬಿಜೆಪಿ ಸರ್ಕಾರ ಹಾಗು ಮುಖ್ಯಮಂತ್ರಿ ನಾಯಕತ್ವದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ :ಕುಮಟಳ್ಳಿ

ಅಥಣಿ: ಸಿಂದಗಿ ಹಾಗು ಹಾನಗಲ್ ಉಪಚುನಾವಣೆ ಫಲಿತಾಂಶ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರದು ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹೇಳಿದರು. ಅಥಣಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್​​ ಅಲ್ಪಮತಗಳಿಂದ ಸೋತಿದ್ದಾರೆ. ಜನರ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದರು. ಅದೇ ರೀತಿ, ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಅವರು 30 ಸಾವಿರ ಅಧಿಕ ಮತಗಳ ಅಂತರದಿಂದ …

Read More »

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ

ಮುಚ್ಚಂಡಿ ಗ್ರಾಮದ ಸರ್ಕಾರಿ ಕನ್ನಡ ಹಾಗೂ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಎಲ್ಲಾ ಗ್ರಾಮಗಳ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಸರ್ಕಾರದ ಅನುದಾನದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದರು. 90 ಲಕ್ಷ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯ: ಗ್ರಾಮದ ಸರ್ಕಾರಿ ಕನ್ನಡ ಹಾಗೂ ಮರಾಠಿ ಶಾಲೆಯಲ್ಲಿ ಇಂದು 90 ಲಕ್ಷ ರೂ. ವೆಚ್ಚದಲ್ಲಿ …

Read More »

ಸೇವೆಯಿಂದ ವಜಾಗೊಂಡಿದ್ದ ಕೆ‌ಎಸ್‌ಆರ್‌ಪಿ ಕಾನ್ಸ್‌ಟೇಬಲ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಗೋಕಾಕ ತಾಲೂಕಿನ ಸಂಗನಕೇರಿ ಕ್ರಾಸ್ ಬಳಿ ನಡೆದಿದೆ.

ಬೆಳಗಾವಿ: ಸೇವೆಯಿಂದ ವಜಾಗೊಂಡಿದ್ದ ಕೆ‌ಎಸ್‌ಆರ್‌ಪಿ ಕಾನ್ಸ್‌ಟೇಬಲ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಗೋಕಾಕ ತಾಲೂಕಿನ ಸಂಗನಕೇರಿ ಕ್ರಾಸ್ ಬಳಿ ನಡೆದಿದೆ. ಗೋಕಾಕ್ ತಾಲೂಕಿನ ನಲ್ಲಾನಟ್ಟಿ ಗ್ರಾಮದ ನಿವಾಸಿ ರಮೇಶ್ ಬಿಲಕುಂದಿ (26) ಮೃತಪಟ್ಟವರು. ಆದರೆ ಮಗ ಅಪಘಾತದಲ್ಲಿ ಮೃತಪಟ್ಟಿಲ್ಲ, ಸೊಸೆಯೇ ಕೊಲೆ ಮಾಡಿಸಿದ್ದಾಳೆ ಎಂದು ಮೃತನ ತಾಯಿ ಲಕ್ಷ್ಮಿಬಾಯಿ ಆರೋಪಿಸಿದ್ದಾರೆ. ಮಗನ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ತಾಯಿ ಕಣ್ಣೀರಿಡುತ್ತಿದ್ದು, ಈ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ …

Read More »

ಬಸವರಾಜ ಬೊಮ್ಮಾಯಿ ಕುಟುಂಬ ಸಮೇತವಾಗಿ ಯಲ್ಲಮ್ಮನಗುಡ್ಡಕ್ಕೆ ಭೇಟಿ

ಬೆಳಗಾವಿ: ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಂಬ ಸಮೇತವಾಗಿ ಭೇಟಿ ನೀಡಿದರು. ತಮ್ಮ ಕುಲದೇವತೆ ಆದಿಶಕ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದರ್ಶನಾಶೀರ್ವಾದ ಪಡೆದುಕೊಂಡರು. ಎಣ್ಣೆಹೊಂಡ ಹಾಗೂ ಪರಶುರಾಮ ಮತ್ತು ಯಲ್ಲಮ್ಮ ದೇವಸ್ಥಾನ ಪ್ರಾಂಗಣದಲ್ಲಿರುವ ದೇವಸ್ಥಾನಗಳಿಗೂ ಭೇಟಿ ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲರ ಅಮ್ಮ ಯಲ್ಲಮ್ಮ ದೇವಿ ದರ್ಶನ ಪಡೆದು, ನಾಡಿನ ಜನರ ಒಳಿತಿಗಾಗಿ ಪ್ರಾರ್ಥಿಸಿದ್ದೇನೆ. ದೀಪಾವಳಿ ಎಲ್ಲರ ಬಾಳಲ್ಲೂ …

Read More »