ಬೆಳಗಾವಿ : ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಬರುವ 19 ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಮಂಗಳವಾರದಂದು ನಗರದ ಜಿಲ್ಲಾ ಹಾಲು ಒಕ್ಕೂಟದಲ್ಲಿ ಜರುಗಿದ ಸಹಕಾರ ಸಪ್ತಾಹ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಹಕಾರ ಸಪ್ತಾಹ ಅಂಗವಾಗಿ ನವ್ಹೆಂಬರ 14 ರಿಂದ 21 ರವರೆಗೆ …
Read More »Daily Archives: ನವೆಂಬರ್ 9, 2021
BJP ಈಗ ಕಲಬೆರಕೆ ಪಕ್ಷ.. ಡಿಕೆಶಿಗೆ DNA ಟೆಸ್ಟ್ ಮಾಡಿಸಬೇಕು:ಮುತಾಲಿಕ್
ಬಾಗಲಕೋಟೆ: ಬಿಜೆಪಿ (BJP) ಈಗ ಕಲಬೆರಕೆ ಪಕ್ಷವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ (KPCC President D. K. Shivakumar) ಡಿಎನ್ಎ ಪರೀಕ್ಷೆ (DNA Test) ಮಾಡಿಬೇಕು ಎಂದು ಶ್ರೀರಾಮಸೇನೆ (sriram sena) ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ತಮ್ಮ ಎಂದಿನ ಶೈಲಿಯಲ್ಲಿ ವಾಗ್ದಾಳಿ ನಡೆಸಿದರು. ಇವತ್ತು ಬಿಜೆಪಿಗೆ 60-70 ಪ್ರತಿಶತ ಕಾಂಗ್ರೆಸ್, ಜೆಡಿಎಸ್ ಪಕ್ಷದಿಂದ ಬಂದಿದ್ದಾರೆ, ಕಮ್ಯುನಿಸ್ಟರು ಬಂದಿದ್ದಾರೆ. 30-40 % ಮಾತ್ರ ಬಿಜೆಪಿಯವರು ಇದ್ದಾರೆ. ಕಾಂಗ್ರೆಸ್ …
Read More »ಅಪ್ಪು’ ಕಂಡಿದ್ದ ಕನಸು ನನಸು ಮಾಡುವ ಸಣ್ಣ ಪ್ರಯತ್ನ: ಸಚಿವ ಮುರುಗೇಶ್ ನಿರಾಣಿ!
ಬೆಂಗಳೂರು, ನ. 09: ತಮ್ಮ ನಡೆ, ನುಡಿ, ಸರಳತೆ, ಸಮಾಜ ಸೇವೆ ಮೂಲಕ ಯುವ ಜನತೆಗೆ ಮಾದರಿಯಾಗಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ಇದೇ ನವೆಂಬರ್ 11 ರಂದು ಕಲಬುರಗಿಯಲ್ಲಿ ನಡೆಯಲಿರುವ ‘ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಾಗಾರದ ವೇದಿಕೆಗೆ ಹೆಸರಿಡಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತೀರ್ಮಾನಿಸಿದ್ದಾರೆ. ನವೆಂಬರ್ 11 ರಂದು ಕಲಬುರಗಿಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ವತಿಯಿಂದ …
Read More »ಪುನೀತ್ ಮದುವೆ, ತಿಥಿ ಎರಡಕ್ಕೂ ಅದೇ ಕ್ಯಾಟರಿಂಗ್ ತಂಡ
ಬೆಂಗಳೂರು, ನ 9: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹನ್ನೆರಡನೇ ದಿನದ ಕಾರ್ಯ ಅವರ ನಿವಾಸದಲ್ಲಿ ನಡೆದಿದೆ. ಅವರ ಅಭಿಮಾನಿಗಳಿಗಾಗಿ ಡಾ.ರಾಜ್ ಕುಟುಂಬ ಬೃಹತ್ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದೆ. ಸಾವಿರ ಸಾವಿರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸುತ್ತಿದ್ದು, ಸಸ್ಯಾಹಾರಿ ಮತ್ತು ಮಾಂಸಾಹಾರಿ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಅಭಿಮಾನಿಗಳಿಗೆ ಮತ್ತು ವಿಐಪಿಗಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗಿದೆ. 35-40 ಕೌಂಟರ್ ಗಳನ್ನು ಹಾಕಲಾಗಿದ್ದು, ವೆಜ್ ಮತ್ತು ನಾನ್ ವೆಜ್ …
Read More »ವಾಕಿಂಗ್ ಮುಗಿಸಿ ಮನೆಗೆ ತೆರಳಿದ್ದ ವೇಳೆ ಹೃದಯಾಘಾತದಿಂದ ಡಿವೈಎಸ್ಪಿ ಸಾವು
ಚಿತ್ರದುರ್ಗ: ಹೃದಯಾಘಾತದಿಂದ ಡಿವೈಎಸ್ಪಿ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ವಾಕಿಂಗ್ ಮುಗಿಸಿ ಮನೆಗೆ ತೆರಳಿದ್ದ ವೇಳೆ ಧೀಡಿರ್ ಕುಸಿದು ಬಿದ್ದಿದ್ದ ಡಿವೈಎಸ್ಪಿ ರಮೇಶ (52) ಅವರನ್ನು ತಕ್ಷಣವೇ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಡಿಸಿಆರ್ಬಿ ಮತ್ತು ಡಿವೈಎಸ್ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಮೇಶ್, 1998 ಬ್ಯಾಚ್ನಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಸದ್ಯ ಬಸವೇಶ್ವರ ಆಸ್ಪತ್ರೆಗೆ ಎಸ್ಪಿ ಜಿ.ರಾಧಿಕಾ …
Read More »ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪರಿಶಿಷ್ಟರನ್ನು ಅವಮಾನಿಸಿದ್ದಾರೆ. ಅವರು ಕ್ಷಮೆಯಾಚಿಸಬೇಕು : ಮಹೇಂದ್ರ ಕೌತಾಳ
ಹುಬ್ಬಳ್ಳಿ: ಇತ್ತೀಚೆಗೆ ನಡೆದ ಉಪಚುನಾವಣೆ ಸಮಯದಲ್ಲಿ ಪರಿಶಿಷ್ಟರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗುತ್ತಾರೆ ಎಂದು ಹೇಳಿಕೆ ನೀಡುವ ಮೂಲಕ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪರಿಶಿಷ್ಟರನ್ನು ಅವಮಾನಿಸಿದ್ದಾರೆ. ಅವರು ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ ಕಾರ್ಯದರ್ಶಿ ಮಹೇಂದ್ರ ಕೌತಾಳ ಆಗ್ರಹಿಸಿದರು. ಇದನ್ನು ಖಂಡಿಸಲು ಬಿಜೆಪಿ ನ. 12ರಂದು ನಗರದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿ ತನಕ ಪ್ರತಿಭಟನೆ ಹಮ್ಮಿಕೊಂಡಿದೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಪರಿಶಿಷ್ಟರನ್ನು …
Read More »ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ ಘೋಷಣೆ: ಡಿ.10ಕ್ಕೆ ಮತದಾನ
ಬೆಂಗಳೂರು: ರಾಜ್ಯದ 20 ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದ್ದು, ಡಿಸೆಂಬರ್ 10 ಕ್ಕೆ ಮತದಾನ ನಡೆಯಲಿದೆ. ಒಟ್ಟು 25 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ವಿಧಾನಪರಿಷತ್ ನ ಸಭಾನಾಯಕ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿರೋಧಪಕ್ಷದ ನಾಯಕ ಎಸ್.ಆರ್.ಪಾಟೀಲ ಅವರ ಅವಧಿಯೂ ಮುಗಿದಿದ್ದು ಚುನಾವಣೆ ಎದುರಿಸಬೇಕಾಗಿದೆ. ನಾಮಪತ್ರ ಸಲ್ಲಿಸಲು ನ. 23 ಕೊನೆ ದಿನ. ನ. 24ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ನ. …
Read More »ದೆಹಲಿಯ ಏಮ್ಸ್ ಬಳಿ ಪೊಲೀಸರಿಂದ ಫೈರಿಂಗ್; ದುಷ್ಕರ್ಮಿಯ ಕಾಲಿಗೆ ಗುಂಡೇಟು
ದೆಹಲಿ: ದೆಹಲಿಯಲ್ಲಿ(Delhi) ಪೊಲೀಸರು ಮತ್ತು ದುಷ್ಕರ್ಮಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಮಂಗಳವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಏಮ್ಸ್ (AIIMS) ಬಳಿ ಗುಂಡಿನ ದಾಳಿ ನಡೆದಿದ್ದು, ದುಷ್ಕರ್ಮಿಯ ಕಾಲಿಗೆ ಗುಂಡು ತಗುಲಿದೆ. ಈ ದುಷ್ಕರ್ಮಿ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದನು ಎಂದು ಎನ್ಡಿಟಿವಿ ವರದಿ ಮಾಡಿದೆ. ಮಂಗಳವಾರ ಬೆಳಗ್ಗೆ ದಕ್ಷಿಣ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಬಳಿ ದೆಹಲಿ ಪೊಲೀಸರ ಗಸ್ತು ತಂಡದೊಂದಿಗೆ …
Read More »ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿಕೊಂಡ ಪುರಸಭೆ ಅಧಿಕಾರಿಗಳು, ಸ್ಥಳೀಯರ ಆಕ್ರೋಶ
ಬೆಳಗಾವಿ: ಮುಗಳಖೋಡ ಪುರಸಭೆಯಲ್ಲಿ ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ. ಮುಗಳಖೋಡ ಪುರಸಭೆ ಅಧಿಕಾರಿಗಳು ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಪುರಸಭೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮುಗಳಖೋಡ ಪುರಸಭೆ ಅಧಿಕಾರಿಗಳು ಮಕ್ಕಳ ಕೈಯಲ್ಲಿ ಕಸದ ಬಾಕ್ಸ್‌ಗಳನ್ನು ಹೊರಿಸಿ ಮಕ್ಕಳ ಬಳಿ ಕೆಲಸ ಮಾಡಿಸಿಕೊಂಡಿದ್ದಾರೆ ಎಂದು ಸ್ಥಳೀಯರು ಪುರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ …
Read More »ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು :ಬಸವರಾಜ ಬೊಮ್ಮಾಯಿ
ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಈ ಭರವಸೆ ನೀಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ …
Read More »