Breaking News

Daily Archives: ನವೆಂಬರ್ 9, 2021

ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಮಾತುಕತೆ

ಬೆಂಗಳೂರು, ನವೆಂಬರ್ 8: ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ದೊಡ್ಡಜಾಲ ಮತ್ತು ರಾಜಾನುಕುಂಟೆ ಪಂಚಾಯತಿಗಳಿಗೆ ಭೇಟಿ ನೀಡಿದ್ದು, ಗ್ರಾಮೀಣ ಭಾಗದಲ್ಲಿ ಆಸ್ತಿ ಸೃಜನೆಗೆ ಹಾಗೂ ಗ್ರಾಮೀಣ ಆರ್ಥಿಕತೆಗೆ ಮಹತ್ವ ನೀಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.   ಡಿಜಿಟಲ್ ಗ್ರಂಥಾಲಯಗಳಿಗೂ ಭೇಟಿ ನೀಡಿದ್ದಾಗಿ ತಿಳಿಸಿದ ಸಚಿವ ಕಪಿಲ್ ಮೊರೇಶ್ವರ ಪಾಟೀಲ್, ಭಾರತ್ ನೆಟ್ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ …

Read More »

ಶಂಕರ್​ ನಾಗ್ ಇಂದು (ನವೆಂಬರ್​ 9) ಬದುಕಿದ್ದರೆ 67ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದರು (Happy Birthday Shankar Nag).

ಅರುಂಧತಿ ನಾಗ್ ಶಂಕರ್ ಅವರ ನೆನಪಿನಲ್ಲಿ ಬೆಂಗಳೂರಿನ ಜೆ.ಪಿ.ನಗರದಲ್ಲಿ ರಂಗಶಂಕರವನ್ನು ಪ್ರಾರಂಭಿಸಿದರು. ರಂಗಭೂಮಿ,ಕಲೆ ಮತ್ತು ಸಾಹಿತ್ಯ ಚಟುವಟಿಕೆಗಳಿಗೆ ಎಂದೇ ಮೀಸಲಾಗಿರುವ ರಂಗ ಶಂಕರ ಹಲವು ದೇಶಗಳಲ್ಲೂ ಮನೆಮಾತಾಗಿದೆ.  ನಟನೆ, ನಿರ್ದೇಶನ, ನಿರ್ಮಾಣದ ಮೂಲಕ ಜನರ ಮನ ಗೆದ್ದ ಅವರು 36 ನೇವಯಸ್ಸಿನಲ್ಲೇ ನಿಧನ ಹೊಂದಿದ್ದರು. ಜನ್ಮದಿನದಂದು ಅವರನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ನೆನಪಿಸಿಕೊಳ್ಳುತ್ತಿದ್ದಾರೆ. ‘ಆಟೋ ರಾಜ’ ಸಿನಿಮಾ ಮೂಲಕ ಶಂಕ್ರಣ್ಣ ಅಸಂಖ್ಯಾತ ಆಟೋ ಚಾಲಕರಲ್ಲಿ ಸ್ವಾಭಿಮಾನದ ಭಾವನೆ ಮೂಡಿಸಿದ್ದರು. 1954ರಲ್ಲಿ …

Read More »

ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 206 ಪ್ರಕರಣಗಳನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿ ‍ಪತ್ತೆ:S.P. ಲಕ್ಷ್ಮಣ ನಿಂಬರಗಿ

ಬೆಳಗಾವಿ : ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 206 ಪ್ರಕರಣಗಳನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿ ‍ಪತ್ತೆ ಹಚ್ಚಿದ್ದು, ₹ 8.58 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದರು. ಇದೇ ವೇಳೆ ಮಾತನಾಡಿದ ಅವರು, ಕಾಗವಾಡ, ಚಿಕ್ಕೋಡಿ, ಅಥಣಿ, ಗೋಕಾಕ, ಅಂಕಲಿ, ಮುರಗೋಡ, ಘಟಪ್ರಭಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ‍ಪ್ರಕರಣಗಳಲ್ಲಿ ಸಿಇಎನ್ ಅಪರಾಧ ಠಾಣೆಯಿಂದ 2020ರಲ್ಲಿ ₹ 10.97 ಲಕ್ಷ ವಶಕ್ಕೆ ಪಡೆಯಲಾಗಿದೆ …

Read More »

ಅಮೃತ ಯೋಜನೆಯಡಿ ರಾಜ್ಯದ 7,500 ಸ್ತ್ರೀ ಶಕ್ತಿ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ 1 ಲಕ್ಷ ರೂ.ಅನುದಾನ : ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಮೃತ ಯೋಜನೆಯಡಿ 7,500 ಸ್ತ್ರೀಶಕ್ತಿ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ 1 ಲಕ್ಷ ರೂ.ಗಳ ಅನುದಾನ ನೀಡುವ ಯೋಜನೆಯನ್ನು ಘೋಷಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.   ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಅವರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ 5,690 ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ಅಂತರ್ಜಾಲ ವ್ಯವಸ್ಥೆ …

Read More »

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 1 ಕೋಟಿ ರೂ.ವರೆಗೆ ಬ್ಯಾಂಕ್ ಗಳಿಂದ ಸಾಲ ಸೌಲಭ್ಯ

 ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಆಯವ್ಯಯ ಘೋಷಣೆಯಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ಹಾಲಿ ಜಾರಿಯಲ್ಲಿರುವ ಶೇ.4 ರಷ್ಟು ಬಡ್ಡಿ ಸಹಾಯಧನ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲಾಗುವುದು. ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳಾದ ಮಳಿಗೆ, ಡೀಲರ್ ಶಿಪ್, ಪ್ರಾಂಚೈಸಿ ಮತ್ತು ಹೋಟೆಲ್ ಉದ್ಯಮಗಳನ್ನು ಪ್ರಾರಂಭಿಸುವ ಸಲುವಾಗಿ ಈ ಯೋಜನೆಯಡಿ ಗರಿಷ್ಟ 1 ಕೋಟಿ ರೂ. ವರೆಗೆ ರಾಷ್ಟ್ರೀಕೃತ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್‍ಗಳಿಂದ …

Read More »

ಎಚ್​.ಡಿ.ರೇವಣ್ಣ ಕುಟುಂಬ ಸದಸ್ಯರು ಜನರ ಪ್ರಾಣ ಹಿಂಡುತ್ತಿದ್ದಾರೆ. ಚುನಾವಣೆಯಲ್ಲಿ ಅವರ ಕುಟುಂಬದವರನ್ನೆಲ್ಲಾ ಸೋಲಿಸಿ ಬಿಡು ತಾಯಿ:

ಹಾಸನ: ಎಚ್​.ಡಿ.ರೇವಣ್ಣ ಕುಟುಂಬ ಸದಸ್ಯರು ಜನರ ಪ್ರಾಣ ಹಿಂಡುತ್ತಿದ್ದಾರೆ. ಚುನಾವಣೆಯಲ್ಲಿ ಅವರ ಕುಟುಂಬದವರನ್ನೆಲ್ಲಾ ಸೋಲಿಸಿ ಬಿಡು ತಾಯಿ. ಅವರು ಮುಂದೆ ಬರಲು ಯಾರನ್ನೂ ಬಿಡುತ್ತಿಲ್ಲ… ತಾಯಿ ನಿನ್ನ ಕೃಪೆಯಿಂದ ‌ಹೊಳೆನರಸೀಪುರದ ಎಂಎಲ್‌ಎ ಬದಲಾಗಬೇಕು, ಆ ಮೂಲಕ ಹೊಳೆನರಸೀಪುರ ಜನರಿಗೆ ಒಳ್ಳೇದು ಮಾಡು ತಾಯಿ… ನನ್ನ ದೊಡ್ಡ ಮಗನಿಗೆ ಮದುವೆ‌ ಮಾಡು… ಒಂದು ವರ್ಷದೊಳಗೆ ಮನೆ ಕಟ್ಟಿದರೆ 301 ರೂಪಾಯಿಯನ್ನ ನಿನ್ನ ಹುಂಡಿಗೆ ಕಾಣಿಕೆ ಹಾಕುವೆ… ತಾಯಿ ನನಗೆ ಬೇಗ ಪ್ರಮೋಷನ್ ಕೊಡಮ್ಮ… …

Read More »

ಇಬ್ಬರು ಜೆಡಿಎಸ್ ಶಾಸಕರು ಬಿಜೆಪಿಯತ್ತ

ಹಾನಗಲ್ ಮತ್ತು ಸಿಂಧಗಿ ಕ್ಷೇತ್ರದ ಜೆಡಿಎಸ್ ಪಕ್ಷದ ಸೋಲಿನಿಂದಾಗಿ ಮತ್ತಷ್ಟು ದಳದ ನಾಯಕರು ಪಕ್ಷದಿಂದ ವಿಮುಖರಾಗುತ್ತಿದ್ದಾರಾ ಎನ್ನುವ ಚರ್ಚೆ ಹಲವು ದಿನಗಳಿಂದ ಚಾಲ್ತಿಯಲ್ಲಿದೆ. ಅದಕ್ಕೊಂದು ಉದಾಹರಣೆಯೆಂದರೆ, ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಜೆಡಿಎಸ್ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಗೈರಾಗಿದ್ದದ್ದು.   ಎರಡು ದಿನಗಳ ಹಿಂದೆ ಪಕ್ಷದ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಕುಮಾರಸ್ವಾಮಿ, ಇನ್ನಷ್ಟು ನಮ್ಮ ಮುಖಂಡರು ಪಕ್ಷವನ್ನು ತ್ಯಜಿಸಲಿದ್ದಾರೆ ಎನ್ನುವ ಮಾತನ್ನು ಹೇಳಿದ್ದರು. ಈ ವಿಚಾರ ನನಗೆ ಮೊದಲೇ …

Read More »

ನಾಯಕತ್ವ ಬದಲಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿಗೆ ಮಿಶ್ರ ಬೆಂಬಲ ವ್ಯಕ್ತವಾಗಿದೆ. , ಸಿಎಂ ಬೊಮ್ಮಾಯಿ, ಕಟೀಲ್ ಬದಲಾವಣೆ ಬಗ್ಗೆ ಅರುಣ್ ಸಿಂಗ್ ಮಹತ್ವದ ಹೇಳಿಕೆ!

ಬೆಂಗಳೂರು, : ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೊದಲ ಸಲ ಬೆಂಗಳೂರಿಗೆ ಬಂದಿದ್ದಾರೆ. ಹೀಗಾಗಿ ಅರುಣ್ ಸಿಂಗ್ ಭೇಟಿಗೆ ಮಹತ್ವ ಬಂದಿದೆ. ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಜೊತೆಗೆ ಉಪ ಚುನಾವಣೆಯಲ್ಲಿ ಸೋಲಿನ ಬಗ್ಗೆಯೂ ಮಹತ್ವದ ಮಾಹಿತಿಯನ್ನು ಅರುಣ್ ಸಿಂಗ್ ಕಲೆ ಹಾಕಲಿದ್ದಾರೆ ಎಂಬ ಮಾಹಿತಿಯಿದೆ. ನಾಯಕತ್ವ ಬದಲಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿಗೆ ಮಿಶ್ರ ಬೆಂಬಲ …

Read More »

ಕೋಲಾರ: ಆಕ್ರೋಶದ ಕಿಡಿ ಹೊತ್ತಿಸಿದ ಸರ್ಕಾರದ ನಡೆ

ಕೋಲಾರ: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಕೋಚಿಮುಲ್‌) ವಿಭಜನೆಗೆ ಸರ್ಕಾರ ಹಸಿರು ನಿಶಾನೆ ತೋರಿರುವುದು ಜಿಲ್ಲೆಯಲ್ಲಿ ಆಕ್ರೋಶದ ಕಿಡಿ ಹೊತ್ತಿಸಿದೆ. ಹೈನುಗಾರಿಕೆಯು ಜಿಲ್ಲೆಯ ರೈತರ ಜೀವನಾಡಿಯಾಗಿದ್ದು, ಬಹುಪಾಲು ರೈತರು ಕೃಷಿಯ ಜತೆಗೆ ರಾಸುಗಳನ್ನು ಸಾಕಿ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಕೃಷಿಗೆ ಪರ್ಯಾಯವಾಗಿ ಹೈನುಗಾರಿಕೆಯು ರೈತರ ಪ್ರಮುಖ ಆದಾಯ ಮೂಲವಾಗಿದ್ದು, ಕೋವಿಡ್‌ ಸಂಕಷ್ಟದಲ್ಲೂ ಅನ್ನದಾತರ ಕೈ ಹಿಡಿದಿದೆ. ಜಿಲ್ಲೆಯಲ್ಲಿ ಕ್ಷೀರ ಕ್ರಾಂತಿಯ ಹರಿಕಾರ ಮಾಜಿ ಸಚಿವ ಎಂ.ವಿ.ಕೃಷ್ಣಪ್ಪರ ಹೆಸರಿನಲ್ಲಿ …

Read More »

ಇವತ್ತಿನ ಪೆಟ್ರೋಲ್‌, ಡೀಸೆಲ್‌ ದರ: ಹಲವು ಜಿಲ್ಲೆಗಳಲ್ಲಿ ಏರಿಳಿತ

ಕೇಂದ್ರ ಹಾಗೂ ರಾಜ್ಯ ಸರ್ಕಾರದ ದೀಪಾವಳಿ ಕೊಡುಗೆಯಾಗಿ ಪೆಟ್ರೋಲ್‌, ಡೀಸೆಲ್ (Petrol And Diesel Price)‌ ಮೇಲಿನ ಸುಂಕವನ್ನು ಕಡಿತಗೊಳಿಸಿದ್ದವು. ಇದರ ಪರಿಣಾಮವಾಗಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ.ಎಲ್​ಪಿಜಿ ಬೆಲೆ (LPG) ಏರಿಕೆಯಿಂದ ಕಂಗಾಲಾಗಿದ್ದ ಜನ ದಿನನಿತ್ಯ ಏರುತ್ತಿದ್ದ ಪೆಟ್ರೋಲ್-ಡೀಸೆಲ್ ಬೆಲೆಯಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದರು. ಈ ಹಿನ್ನೆಲೆ ಜನ ಸಾಮಾನ್ಯರಿಗೆ ತೈಲ ದರದ (Oil Price)ಹೊರೆ ಸ್ವಲ್ಪ ಕಡಿಮೆಯಾಗಿದೆ. ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ …

Read More »