Breaking News

Daily Archives: ನವೆಂಬರ್ 13, 2021

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ದೆಹಲಿ: ಇಂದು (ನವೆಂಬರ್ 13, ಶನಿವಾರ) ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸತತ ಒಂಬತ್ತನೇ ದಿನವೂ ಇಂಧನ ದರ (Fuel Price) ಸ್ಥಿರವಾಗಿದೆ. ನವೆಂಬರ್ 3ನೇ ತಾರೀಕಿನಂದು ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಮನ್ನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಅನೇಕ ರಾಜ್ಯಗಳು ವ್ಯಾಟ್ ಅನ್ನು ಕಡಿಮೆ ಮಾಡಿತ್ತು. ಆ ಬಳಿಕ ಹಲವೆಡೆ ಇಂಧನ ದರದಲ್ಲಿ ಕೊಂಚ ಇಳಿಕೆ ಆಗಿತ್ತು. ನಿರಂತರ ಏರಿಕೆ ಕಾಣುತ್ತಿದ್ದ ಪೆಟ್ರೋಲ್ (Petrol …

Read More »

ಜಗದೀಶ್ ಶೆಟ್ಟರ್ ದಿಢೀರ್ ಆಗಿ ದೆಹಲಿಗೆ ಪ್ರಯಾಣ ಶೆಟ್ಟರ್ ದೆಹಲಿ ಪ್ರಯಾಣ ಕುತೂಹಲಕ್ಕೆ ಕಾರಣ

ಬೆಂಗಳೂರು: ಮಾಜಿ ಸಿಎಂ, ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ದಿಢೀರ್ ಆಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ನಡುವೆ ಶೆಟ್ಟರ್ ದೆಹಲಿ ಪ್ರಯಾಣ ಕುತೂಹಲಕ್ಕೆ ಕಾರಣವಾಗಿದೆ. ಏಕಾಏಕಿ ಹೈಕಮಾಂಡ್ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ದೆಹಲಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣದ ಕುರಿತು ತೀವ್ರ ಚರ್ಚೆ ನಡೆದಿರುವ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಹೈಕಮಾಂಡ್ ಶೆಟ್ಟರ್ ಗೆ ಬುಲಾವ್ ನೀಡಿದೆ ಎನ್ನಲಾಗುತ್ತಿದೆ. ಅಲ್ಲದೇ …

Read More »

ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಿದ ಕಾರ ಕಳ್ಳತನ ಮಾಡಿದ ಬಾಲಕನನ್ನು ಪೊಲೀಸರು ಬಂಧಿಸಿ, ಕಾರ ವಶಕ್ಕೆ

ಬೆಳಗಾವಿ ನೆಹರು ನಗರದಲ್ಲಿರುವ ಡಿ-ಮಾರ್ಟ್ ಕಾರ್ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಿದ ಕಾರ ಕಳ್ಳತನ ಮಾಡಿದ ಬಾಲಕನನ್ನು ಪೊಲೀಸರು ಬಂಧಿಸಿ, ಕಾರನ್ನು ವಶಕ್ಕೆ ಪಡೆದಿದ್ದಾರೆ. ಎಪಿಎಂಸಿ ಪೊಲೀಸ್ ಇನಸ್ಪೆಕ್ಟರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು. ಬಾಲಕನನ್ನು ಕೇವಲ 8 ದಿನಗಳಲ್ಲಿ ಪತ್ತೆ ಮಾಡಿ ಆತನ ವಶದಲ್ಲಿದ್ದ ಸುಮಾರು 50,000  ರೂ. ಕಿಮ್ಮತ್ತಿನ ಒಂದು ಮಾರುತಿ 800 ಕಾರ್ ವಶಪಡಿಸಿಕೊಳ್ಳಲಾಗಿದೆ.   ಬಾಲಕನನ್ನು ಬಾಲ ನ್ಯಾಯ ಮಂಡಳಿ ಮುಂದೆ ಹಾಜರ್ ಪಡಿಸಿದ್ದು, …

Read More »