Breaking News

Monthly Archives: ನವೆಂಬರ್ 2021

ಹುಬ್ಬಳ್ಳಿ : ಹುಬ್ಬಳ್ಳಿಯ ಸಿದ್ದಾರೊಡ ಮಠದಲ್ಲಿರುವ ಕಲ್ಯಾಣಿ ಒಳಗೆ ವಿದ್ಯಾರ್ಥಿ ಈಜಲು ಹೋಗಿ ಮೃತಪಟ್ಟ ಘಟನೆ ನಡೆದಿದೆ.

ಹುಬ್ಬಳ್ಳಿ : ಹುಬ್ಬಳ್ಳಿಯ ಸಿದ್ದಾರೊಡ ಮಠದಲ್ಲಿರುವ ಕಲ್ಯಾಣಿ ಒಳಗೆ ವಿದ್ಯಾರ್ಥಿ ಈಜಲು ಹೋಗಿ ಮೃತಪಟ್ಟ ಘಟನೆ ನಡೆದಿದೆ. ಇಂದು ಮುಂಜಾನೆ ಸಿದ್ದಾರೊಡ ರ ಮಠದ ಕೆರೆಯಲ್ಲಿನ ಶ್ರೀ ಗುರುನಾಥರೂಢರ ಪೂಜೆಯನ್ನು ಸಲ್ಲಿಸಲು ಹೋಗಿದ್ದ ವಿದ್ಯಾರ್ಥಿ ಈಜಲು ಹೋಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಹಲವು ವರ್ಷಗಳಿಂದ ಸಿದ್ದಾರೊಡರ ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಉಮೇಶಪ್ಪ ಜಾಳಿಹಾಳ ಎಂದು ತಿಳಿದು ಬಂದಿದೆ. ಸುದ್ದಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ NDRF ಸಿಬ್ಬಂದಿ ಬಂದು …

Read More »

ಣ್ಣೆ ಪಾರ್ಟಿಗೆಂದು ಆಹ್ವಾನಿಸಿ ಸ್ನೇಹಿತನನ್ನೇ ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ : ಎಣ್ಣೆ ಪಾರ್ಟಿಗೆಂದು ಆಹ್ವಾನಿಸಿ ಸ್ನೇಹಿತನನ್ನೇ ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವಡಗಾವಿಯ ಸೂರಜ್ ಗೊಂದವಾಡ್ಕರ್ (23) ಕೊಲೆಯಾದ ದುರ್ದೈವಿ. ಮನೆಯಲ್ಲಿದ್ದ ಸೂರಜ್​ಗೆ ಫೋನ್ ಮಾಡಿರುವ ದುಷ್ಕರ್ಮಿಗಳು, ಎಣ್ಣೆ ಪಾರ್ಟಿಗೆ ಆಹ್ವಾನಿಸಿದ್ದಾರೆ. ನಂತರ ಹಳೆ ಬೆಳಗಾವಿಯ ಯಡಿಯೂರಪ್ಪ ಮಾರ್ಗದಲ್ಲಿ ಸ್ನೇಹಿತರೆಲ್ಲರೂ ಪಾರ್ಟಿ ಮಾಡಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದೆ. ಬಳಿಕ ಸೂರಜ್​ಗೆ ರಾಡ್​ನಿಂದ ಹೊಡೆದು ಹತ್ಯೆಗೈದಿರುವ ದುಷ್ಕರ್ಮಿಗಳು, ರಸ್ತೆ ಪಕ್ಕ ಶವ ಎಸೆದು …

Read More »

ಹಮ್ ದೋ ಹಮಾರೆ ದೋ’ ಅಂದುಕೊಂಡು ದೇಶದ ಆಸ್ತಿಯನ್ನ ಅಂಬಾನಿ, ಅದಾನಿಗೆ ಮಾರೊದೊಂದೆ ಬಿಜೆಪಿಯ ಉದ್ಯೋಗ: ಲಕ್ಷ್ಮಿ ಹೆಬ್ಬಾಳ್ಕರ್

ಚಿಕ್ಕೋಡಿ: ಬಿಜೆಪಿ ಪಕ್ಷ ಏಳು ವರ್ಷದಲ್ಲಿ ಎಷ್ಟು ಕಡಿದುಕಟ್ಟೆ ಹಾಕಿದ್ದಾರೆ ಅನ್ನೋದನ್ನ ನೋಡಿದ್ದೇವೆ. ಕಾಂಗ್ರೆಸ್ ಪಕ್ಷ ಮಾಡಿಟ್ಟ ಆಸ್ತಿ ಮಾರೋದೇ ಬಿಜೆಪಿ ಅಭಿವೃದ್ಧಿ ಕಾರ್ಯವಾಗಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ತಾಲೂಕಿನ ಯಕ್ಸಂಬಾದಲ್ಲಿ ಆಯೋಜಿಸಲಾಗಿದ್ದ ವಿಧಾನ ಪರಿಷತ್​​ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸಮಯದ ಕೊರತೆ, ಅಭಾವದಿಂದಾಗಿ ಮನೆ‌ಮನೆಗೆ ಬಂದುಪ್ರಚಾರ ಮಾಡಲು ಆಗುತ್ತಿಲ್ಲ. ಹೀಗಾಗಿ ನಿಮ್ಮ ವಿನಂತಿಗೆ ಚಿಕ್ಕೋಡಿಗೆ ಬಂದಿದ್ದೇನೆ. ಚುನಾಯಿತ ಎಲ್ಲ ಪ್ರತಿನಿಧಿಗಳು ನಮಗೆ ಬೆಂಬಲಿಸಬೇಕು. ಕಳೆದ ಇಪ್ಪತ್ತು …

Read More »

ಒಮಿಕ್ರಾನ್ ಭೀತಿ.. ಮುಂಜಾಗ್ರತಾ ಕ್ರಮ, ಚಟುವಟಿಕೆ ನಿರ್ಬಂಧ ಕುರಿತು ಇಂದು ನಿರ್ಧಾರ- ಸಚಿವ ಸುಧಾಕರ್​

ಬೆಂಗಳೂರು: ಹೊಸ ಪ್ರಬೇಧದ ಕೊರೊನಾ ವೈರಸ್​ ಭೀತಿ ಹಿನ್ನೆಲೆಯಲ್ಲಿ ಯಾವ ರೀತಿ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಚಟುವಟಿಕೆಗಳ ಮೇಲೆ ನಿರ್ಬಂಧದ ಬಗ್ಗೆ ಇಂದು ನಡೆಯುವ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿವಿಧ ದೇಶಗಳಲ್ಲಿ ಹೊಸ ಪ್ರಬೇಧದ ವೈರಸ್ ಒಮಿಕ್ರೋನ್​ ಪತ್ತೆಯಾಗಿದೆ. ಬೆಂಗಳೂರು, ಮಂಗಳೂರು ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಯಾವೆಲ್ಲಾ ರೀತಿಯ ನಿರ್ಬಂಧ ಹೇರಬೇಕು. ಅಲ್ಲದೇ …

Read More »

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ರಾಜಧಾನಿಯ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಅಕ್ರಮ ಚಟುವಟಿಕೆ ನಡೆಸುತ್ತಿರುವ ಆರೋಪದ ಮೇಲೆ ಮತ್ತು ಮೊಬೈಲ್, ಗಾಂಜಾ, ಇತರೆ ವಸ್ತುಗಳ ಪೂರೈಕೆ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಈ ದಾಳಿ ನಡೆಸಿದ್ದಾರೆ. ಸಿಸಿಬಿ ಪೊಲೀಸರ ದಾಳಿ ಇನ್ನೂ ಮುಂದುವರೆದಿದೆ.

Read More »

ಕಚೇರಿಯಲ್ಲೇ ತಬ್ಕೊಂಡು ಪೀಡಿಸಿದ್ರೂ 9 ಮಹಿಳೆಯರಲ್ಲಿ ಯಾರೊಬ್ಬರೂ ಬಾಯ್ಬಿಟ್ಟಿಲ್ಲ ಏಕೆ?

ಮಂಗಳೂರು: ಆಯುಷ್​ ಇಲಾಖೆ ವೈದ್ಯಾಧಿಕಾರಿ ಡಾ.ರತ್ನಾಕರ್​ನ ಕಾಮಪುರಾಣದ ಅಸಹ್ಯ ಉಟ್ಟಿಸೋ ದೃಶ್ಯಗಳು ವೈರಲ್​ ಆಗಿದ್ದು, ಆರೋಗ್ಯ ಕಚೇರಿಯಲ್ಲೇ ಹಲವು ದಿನದಿಂದ ಚೆಲ್ಲಾಟ ನಡೆಸಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೊಟ್ಟಿದ್ದರೂ ತಡವಾಗಿ ಪ್ರಕರಣ ಬೆಳಕಿಗೆ ಬಂದಿದ್ದೇಕೆ? ಈ ಹಿಂದೆಯೇ ವೈದ್ಯ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿ ಜತೆ ರತ್ನಾಕರ್​ ನಡೆದುಕೊಳ್ಳುತ್ತಿರುವ ರೀತಿಯ ವಿರುದ್ಧ ಅನಾಮಿಕ ಪತ್ರವೊಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಬಂದಿತ್ತು. ಆಗಲೂ ಸಂತ್ರಸ್ತ ಮಹಿಳೆಯರೂ ಬಾಯ್ಬಿಟ್ಟಿರಲಿಲ್ಲ ಏಕೆ? ರತ್ನಾಕರ್​ ಕಂಡರೆ ಸಂತ್ರಸ್ತೆಯರಿಗೆ …

Read More »

ಈಶ್ವರಪ್ಪ ಹೇಳಿದ ಹಾಗೆ ಬೊಮ್ಮಾಯಿ ರಾಜೀನಾಮೆ ಖಚಿತ….ಡಿಕೆಶಿ ವಿಜಯಪುರದಲ್ಲಿ ಹೊಸ ಬಾಂಬ್

ವಿಜಯಪುರ: ರಾಜ್ಯ ಬಿಜೆಪಿ ಸರಕಾರದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಬದಲಾವಣೆ ಖಚಿತ. ಈ ಹಿಂದೆ ಯಡಿಯೂರಪ್ಪ ಮೇಲೆ ವಿಶ್ವಾಸ ಕಳೆದುಕೊಂಡರೆಂದು ರಾಜೀನಾಮೆ ಪಡೆಯಲಾಯಿತು. ಅನಂತರ ಅಧಿಕಾರಕ್ಕೆ ಬಂದ ಬಸವರಾಜ ಬೊಮ್ಮಾಯಿ ಸರಕಾರದ ಮೇಲೂ ಅವರದೇ ಸಚಿವರು ಇದೀಗ ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಬೊಮ್ಮಾಯಿ ಕೂಡ ರಾಜೀನಾಮೆ ಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರದ ಭ್ರಷ್ಟಾಚಾರ, ಆಡಳಿತ ಯಂತ್ರದ ಕುಸಿತದ ಕುರಿತು …

Read More »

ಬೆಳಗಾವಿ ಜಿಲ್ಲೆಯ ದುಷ್ಟ ರಾಜಕಾರಣಕ್ಕೆ ಬಿಜೆಪಿ ನಾಯಕರು ಕೊನೆ ಹಾಡುತ್ತಾರೆ ಎಂದು ತಿಳಿದಿದ್ದೇನೆ

ಬೆಳಗಾವಿ: ರಮೇಶ್, ಲಖನ್​ ಗಾಡಿ ಕಳಿಸಿದ ಅಂದ ತಕ್ಷಣ ಹೋಗಬೇಡಿ. ನಮ್ಮ ಪಕ್ಷದ ಮುಖಂಡರು ಈ ಸಂಸ್ಕೃತಿಯನ್ನು ಬಿಟ್ಟುಬಿಡಬೇಕು. ಅರಭಾವಿ ಕ್ಷೇತ್ರದಲ್ಲಿ ಮತದಾರರಿಗೆ ₹10,000 ಮುಂಗಡ ಪಾವತಿ ಮಾಡಿದ್ದಾರೆ ಎಂಬ ಮಾತುಗಳಿವೆ. ಮೂರ್ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಹಾಕುವುದಿಲ್ಲವೆಂಬ ಮಾಹಿತಿ ಬಂದಿದೆ ಎಂದು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆ ಶಿವಕುಮಾರ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಮತದಾರರ ಚೀಟಿ ಪಡೆದು ನಾವೇ ಮತ ಹಾಕುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ. …

Read More »

ಐಪಿಎಲ್ ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ತಂಡವೊಂದರ ಪಾಲಾಗಲಿದ್ದಾರೆ ಕನ್ನಡಿಗ ಕೆಎಲ್ ರಾಹುಲ್..?

15ನೇ ಆವೃತ್ತಿಯ ಐಪಿಎಲ್‌ಗೆ ಆಟಗಾರರ ರಿಟೇನ್ ಪಟ್ಟಿ ಅಂತಿಮ ಹಂತದಲ್ಲಿದೆ. ಹಾಲಿ 8 ತಂಡಗಳಿಗೆ ತಲಾ 4 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಆಟಗಾರರು ಬೇಕಿದ್ದರಷ್ಟೇ ತಮ್ಮ ಫ್ರಾಂಚೈಸಿಗಳೊಂದಿಗೆ ಒಪ್ಪಂದ ಮುಂದುವರಿಸಬಹುದು. ಇಲ್ಲವಾದರೆ ಹರಾಜಿಗೆ ದಾಖಲಿಸಬಹುದು. ಈ ಬಾರಿ ಲಖನೌ ಹಾಗೂ ಅಹಮದಾಬಾದ್ ತಂಡಗಳು ಕೂಡ ಸೇರ್ಪಡೆಗೊಂಡಿದ್ದು, ಸ್ಟಾರ್ ಆಟಗಾರರಿಗೆ ಮತ್ತಷ್ಟು ಡಿಮ್ಯಾಂಡ್ ಹೆಚ್ಚಾಗಿದೆ. ಕಳೆದೆರಡು ಆವೃತ್ತಿಗಳಲ್ಲಿ ಪಂಜಾಬ್ ಕಿಂಗ್ಸ್ ತಂಡ ಮುನ್ನಡೆಸಿದ್ದ ಕನ್ನಡಿಗ ಕೆಎಲ್ ರಾಹುಲ್ ತಂಡದಿಂದ …

Read More »

ಕುಷ್ಟಗಿ: ಪೊಲೀಸರ ಬಲೆಗೆ ಬಿದ್ದ ಟ್ರಾಲಿ ಸ್ಪೆಷಲಿಸ್ಟ್ ಕಳ್ಳರ ಗ್ಯಾಂಗ್

ಕುಷ್ಟಗಿ: ನಿಲ್ಲಿಸಿದ್ದ ರೈತರ ಟ್ರ್ಯಾಕ್ಟರ್ ಟ್ರಾಲಿ ಗಳನ್ನು ಕದ್ದು, ಮಾರುತ್ತಿದ್ದ ಟ್ರಾಲಿ ಸ್ಪೆಷಲಿಸ್ಟ್ ಕಳ್ಳರ ಗ್ಯಾಂಗನ್ನು ಕುಷ್ಟಗಿ ಪೊಲೀಸರು ಬಂಧಿಸಿದ್ದು, ಮೂರು ಟ್ರ್ಯಾಕ್ಟರ್ ಟ್ರಾಲಿ ವಶಪಡಿಸಿಕೊಂಡಿದ್ದಾರೆ. ಕಳೆದ ನ.26ರಂದು ಸಂಗನಾಳ ಗ್ರಾಮದ ಮುದಕನಗೌಡ ಭರಮಗೌಡ ಗೌಡ್ರು ಅವರು, ಗ್ರಾಮದ ನಿರುಪಾದೇಶ್ವರ ಮಠದ ಜಾಗದಲ್ಲಿ ನಿಲ್ಲಿಸಿದ್ದ ಟ್ರಾಲಿ ಕಳುವಾಗಿರುವ ಬಗ್ಗೆ ದೂರು ನೀಡಿದ್ದರು. ತಾವರಗೇರಾ ಪಿಎಸೈ ವೈಶಾಲಿ ಝಳಕಿ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ನ.28ರಂದು ನಾಲ್ವರು ಸ್ಪೆಷಲಿಸ್ಟ್ ಕಳ್ಳರು ಟ್ರಾಲಿ ತೆಗೆದುಕೊಂಡು ಹೋಗುವಾಗ ಪೊಲೀಸರು …

Read More »