ಹಾವೇರಿ – ಮುಖ್ಯಮಂತ್ರಿಗಳು ಶ್ರೀ ಬಸವರಾಜ ಬೊಮ್ಮಾಯಿ ಭಾನುವಾರ ಶಿಗ್ಗಾವದಲ್ಲಿ ವೀರ ರಾಣಿ ಕಿತ್ತೂರು ರಾಣಿ ಚೆನ್ನಮ್ಮ ಪುತ್ತಳಿಯನ್ನು ಹೂ ಮಾಲೆ ಹಾಕುವುದರ ಮೂಲಕ ಲೋಕಾರ್ಪಣೆ ಮಾಡಿದರು. ನಂತರ ಪಂಚಮಸಾಲಿ ಸಮಾಜದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ದೀಪ ಬೇಳಗುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವರುಗಳಾದ ಮುರುಗೇಶ್ ನಿರಾಣಿ, ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರುಗಳು ಬಸವಗೌಡ ಪಾಟೀಲ್ ಯತ್ನಾಳ್, ಪಂಚಮಸಾಲಿ ಹರಿಹರ ಪೀಠದ ವಾಚನಾನಂದ ಸ್ವಾಮೀಜಿ, ಹಾಗೂ …
Read More »Daily Archives: ಡಿಸೆಂಬರ್ 19, 2021
ಬೆಳಗಾವಿ ನಗರ ಹಾಗೂ ಬೆಳಗಾವಿ, ತಾಲೂಕಾ ವ್ಯಾಪ್ತಿಯಲ್ಲಿ ಕಲಂ 144ಡಿಸೆಂಬರ್ 22ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿ
ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣದ ಬೆನ್ನಲ್ಲೇ ಬೆಳಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗೃತಾ ಕ್ರಮವಾಗಿ ಜಾರಿಯಾಲ್ಲಿದ್ದ ನಿಷೇಧಾಜ್ಞೆಯನ್ನು ಡಿಸೆಂಬರ್ 22ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ. ಬೆಂಗಳೂರಿನಲ್ಲಿ ಶಿವಾಜಿ ಮಹಾರಾಜರ ಮೂರ್ತಿಗೆ ಅವಮಾನಪಡಿಸಿದ ಘಟನೆಗೆ ಪ್ರತಿರೋಧವಾಗಿ ಕೆಲವು ಸಂಘಟಣಿಗಳು ಡಿಸೆಂಬರ್ 17ರ ರಾತ್ರಿ ಬೆಳಗಾವಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಹಲವೆಡೆ ಕಡೆ ಕಲ್ಲು ತೂರಾಟ ಹಾಗೂ ಅನಗೋಳದಲ್ಲಿ ಸಂಗೋಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣಗಳು ನಡೆದಿದ್ದವು. ಎಂಇಎಸ್ ಪುಂಡಾಟ, …
Read More »ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯರೇ ಈತನ ಟಾರ್ಗೆಟ್..! ಮಂಚಕ್ಕೆ ಬಾ ಅಂತಿದ್ದ CPI ಕರ್ಮಕಾಂಡದ ವಿಡಿಯೋ ವೈರಲ್
ಹಾವೇರಿ: ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯರಿಗೆ ಮಂಚಕ್ಕೆ ಬಾ ಅಂತಿದ್ನಾ ಸಿ.ಪಿ ಐ? ಹೌದು ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಅವರ ಜೊತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದ..ಇದರಿಂದ ಸಿಪಿಐ ಅಮಾನತು ಕರ್ತವ್ಯ ಲೋಪಅಶಿಸ್ತು ಪ್ರದರ್ಶನ ಮಾಡಿದ, ಹಿನ್ನೆಲೆಯಲ್ಲಿ ಹಾವೇರಿ ಮಹಿಳಾ ಠಾಣೆಯ ಸಿಪಿಐ ಚಿದಾನಂದ ಅವರನ್ನು ಅಮಾನತುಗೊಳಿಸಿ ಪೂರ್ವ ವಲಯದ ಐಜಿಪಿ ಆದೇಶ ಹೊರಡಿಸಿದೆ. ದಾವಣಗೆರೆ ಪೂರ್ವ ವಲಯದ ಐಜಿಪಿ ಅಮಾನತ್ತು ಆದೇಶ ಹೊರಡಿಸಿದ್ದಾರೆ.. ಹಾವೇರಿ ಜಿಲ್ಲೆಯಾದ್ಯಂತ ಸಿ.ಪಿ ಐ …
Read More »ಕನ್ನಡಿಗರದ್ದು ವಿಕೃತ ಮನಸ್ಥಿತಿ ಎಂದ ಮಹಾ ಸಿಎಂ ಉದ್ಧವ್ ಠಾಕ್ರೆ
ಮುಂಬೈ: ಕರ್ನಾಟಕದ ರಾಜಧಾನಿ ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ರಸ್ತೆಯಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿದಿರುವುದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ, ಮಹಾರಾಷ್ಟ್ರ ಏಕೀಕರಣ ಸಮಿತಿಗೆ ತನ್ನ ಬೆಂಬಲವನ್ನು ಮಹಾರಾಷ್ಟ್ರ ಸರ್ಕಾರವು ಪುನರುಚ್ಛರಿಸಿದೆ. ಘಟನೆಯ ನಂತರ ಗಡಿಭಾಗದ ಜಿಲ್ಲೆಗಳಾದ ಕೊಲ್ಹಾಪುರ ಮತ್ತು ಸಾಂಗ್ಲಿಯಲ್ಲಿ ಪ್ರತಿಭಟನೆಗಳು ನಡೆದಿವೆ. ‘ಪ್ರತಿಮೆಗೆ …
Read More »ಶಿವಾಜಿಗೆ ಮಸಿ, ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿದ್ದು ಕಾಂಗ್ರೆಸ್‌ನವರು: ಬಿಜೆಪಿ
ಬೆಂಗಳೂರು: ‘ಮಹಾರಾಷ್ಟ್ರದಲ್ಲಿ ಪುಂಡರೊಂದಿಗೆ ಸೇರಿಕೊಂಡು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರು. ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಮಿತ್ರಪಕ್ಷ ಎಂಇಎಸ್. ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದೂ ಕಾಂಗ್ರೆಸ್ ಕಾರ್ಯಕರ್ತರು. ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಮಿತ್ರಪಕ್ಷ ಎಂಇಎಸ್. ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದೂ ಕಾಂಗ್ರೆಸ್ ಕಾರ್ಯಕರ್ತರು. ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶವಾಗಿದೆ’ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ. ಇಂದು ಈ …
Read More »ರಾಜ್ಯ ಸರ್ಕಾರದಿಂದ ಪಿಡಿಒಗಳಿಗೆ ಭರ್ಜರಿ ಗುಡ್ ನ್ಯೂಸ್
ಬೆಳಗಾವಿ : ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ (PDO) ಸಿಹಿಸುದ್ದಿ ನೀಡಿದ್ದು, ಪಿಡಿಒಗಳಿಗೆ ಕೇಂದ್ರ ಸ್ಥಾನದಲ್ಲೇ ವಸತಿ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯ ಡಾ. ತಳವಾರ ಸಾಬಣ್ಱ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ.ಎಸ್.ಈಶ್ವರಪ್ಪ, ಪಿಡಿಒಗಳ ವಸತಿಗೆ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗುವುದು. ಇಲಾಖೆಯಿಂದ ಹಣ ಹೊಂದಿಸಲು ಆಗದಿದ್ದರೆ ವಿಶೇಷ …
Read More »ನನಗೆ ಗೃಹ ಖಾತೆ ಕೊಟ್ಟು ನೋಡಿ, ಒಬ್ಬನೂ ಕಮಕ್ ಕಿಮಕ್ ಎನ್ನದಂತೆ ಮಾಡುತ್ತೇನೆ: ಯತ್ನಾಳ್
ವಿಜಯಪುರ: ರಾಜ್ಯದಲ್ಲಿ ಕೋಮು ಗಲಭೆಗೆ ಸಂಪೂರ್ಣ ಕಡಿವಾಣ ಹಾಕಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನನಗೆ ಗೃಹ ಖಾತೆ ಕೊಟ್ಟು ನೋಡಲಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಾಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಂಭಾವಿತ ವ್ಯಕ್ತಿ. ಅವರಿಗೆ ಕಂದಾಯ, ಅರಣ್ಯ ಖಾತೆಗಳು ಸೂಕ್ತ ಎಂದರು. ರಾಜ್ಯದಲ್ಲಿ ಪದೇ ಪದೇ ಕೋಮು ಸೌಹಾರ್ಧಕ್ಕೆ ಧಕ್ಕೆ ಉಂಟಾಗುತ್ತಿವೆ. ಮತೀಯ …
Read More »ನಾಲಿಗೆ ಹರಿಬಿಟ್ಟ ಮಹಾ ಸಚಿವ; ಶಿವಸೇನೆಯಿಂದ ಕರ್ನಾಟಕಕ್ಕೆ ತಕ್ಕ ಪಾಠ ಎಂದು ಬೆದರಿಕೆ
ಮುಂಬೈ: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ, ಶಿವಸೇನೆ ಉದ್ಧಟತನದ ಬೆನ್ನಲ್ಲೇ ಇದೀಗ ಮಹಾರಾಷ್ಟ್ರ ಸಚಿವರೊಬ್ಬರು ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಕರ್ನಾಟಕಕ್ಕೆ ಶಿವಸೈನಿಕರು ತಕ್ಕ ಪಾಠ ಕಲಿಸಲಿದ್ದಾರೆ. ಶಿವಸೇನೆ ಕಾನೂನು ಕೈಗೆತ್ತಿಕೊಂಡರೆ ಅದಕ್ಕೆ ಕರ್ನಾಟಕ ಸರ್ಕಾರವೇ ನೇರ ಹೊಣೆಯಾಗಲಿದೆ. ನಮ್ಮ ಕಾರ್ಯಕರ್ತರು ಸುಮ್ಮನಿರುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ಏಕನಾಥ ಶಿಂಧೆ ತಿಳಿಸಿದ್ದಾರೆ. ಬೆಳಗಾವಿ ಹಿಂಸಾಚಾರ ಪ್ರಕರಣದ ಬೆನ್ನಲ್ಲೇ ಮಾತನಾಡಿದ್ದ ಸಿಎಂ ಬಸವರಾಜ್ …
Read More »ಗ್ರಾಮಪಂಚಾಯಿತಿಗಳಿಗೆ ಮಂಜೂರಾಗಿದ್ದ 1.19 ಲಕ್ಷ ಮನೆಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ.
ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು (State Government) ಬಿಗ್ ಶಾಕ್ ನೀಡಿದ್ದು, ಗ್ರಾಮಪಂಚಾಯಿತಿಗಳಿಗೆ ಮಂಜೂರಾಗಿದ್ದ 1.19 ಲಕ್ಷ ಮನೆಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೆ 20 ಮನೆಗಳನ್ನು ಮಂಜೂರು ಮಾಡಿ 2018-19 ನೇ ಸಾಲಿನಲ್ಲಿ ಮೈತ್ರಿ ಸರ್ಕಾರ ಘೋಷಣೆ ಹೊರಡಿಸಿತ್ತು. ಆದರೆ ಇದೀಗ ರಾಜ್ಯ ಬಿಜೆಪಿ ಸರ್ಕಾರ ಯೋಜನೆಯನ್ನೇ ರದ್ದು ಮಾಡಿದೆ ಈ ಮೂಲಕ ಮನೆ ನಿರೀಕ್ಷೆಯಲ್ಲಿದ್ದ ವಸತಿ ರಹಿತರಿಗೆ ಬಿಗ್ …
Read More »ಡಿ. 24 ರಿಂದ ಜ. 1 ರವರೆಗೆ ಚಳಿಗಾಲದ ರಜೆ ಘೋಷಣೆ: ಹೈಕೋರ್ಟ್ ಪ್ರಧಾನ ಪೀಠ, ಧಾರವಾಡ, ಕಲಬುರಗಿ ಪೀಠಗಳಿಗೆ ರಜೆ
ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಡಿಸೆಂಬರ್ 24 ರಿಂದ ಜನವರಿ 1 ರ ವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಆದೇಶದ ಅನುಸಾರ ನ್ಯಾಯಾಂಗ ರಿಜಿಸ್ಟ್ರಾರ್ ಕೆ.ಎಸ್. ಭರತ್ ಕುಮಾರ್ ನೋಟಿಫಿಕೇಶನ್ ಹೊರಡಿಸಿದ್ದಾರೆ. ಡಿಸೆಂಬರ್ 24 ರಿಂದ ಜನವರಿ 1 ರ ವರೆಗೆ ಹೈಕೋರ್ಟ್ ನ ಬೆಂಗಳೂರು ಪ್ರಧಾನ ಪೀಠ, ಕಲಬುರ್ಗಿ ಮತ್ತು ಧಾರವಾಡ ಪೀಠಗಳಿಗೆ ಚಳಿಗಾಲದ ರಜೆ ಇರುತ್ತದೆ. ರಜೆ ಅವಧಿಯಲ್ಲಿ ದೈನಂದಿನ ಕಲಾಪಗಳು ನಡೆಯುವುದಿಲ್ಲ. …
Read More »